quranm◉

Surah Al-Baqarah transliteration

◉ ಸೂರಾ · ∞

2:1

الٓمٓ ﴿1﴾

Transliteration: Aliflammeem

Translation: ಅಲಿಫ್-ಲಾಮ್-ಮೀಮ್.[1]

2:2

ذَٰلِكَ ٱلۡكِتَٰبُ لَا رَيۡبَۛ فِيهِۛ هُدٗى لِّلۡمُتَّقِينَ ﴿2﴾

Transliteration: Thalika alkitabu la rayba feehi hudan lilmuttaqeena

Translation: ಈ ಗ್ರಂಥದಲ್ಲಿ ಯಾವುದೇ ಸಂದೇಹವಿಲ್ಲ; ಇದು ದೇವಭಯವುಳ್ಳವರಿಗೆ ಸನ್ಮಾರ್ಗವನ್ನು ತೋರಿಸುತ್ತದೆ.

2:3

ٱلَّذِينَ يُؤۡمِنُونَ بِٱلۡغَيۡبِ وَيُقِيمُونَ ٱلصَّلَوٰةَ وَمِمَّا رَزَقۡنَٰهُمۡ يُنفِقُونَ ﴿3﴾

Transliteration: Allatheena yuminoona bialghaybi wayuqeemoona alssalata wamimma razaqnahum yunfiqoona

Translation: ಅವರು (ದೇವಭಯವುಳ್ಳವರು) ಯಾರೆಂದರೆ, ಅದೃಶ್ಯ ವಿಷಯಗಳಲ್ಲಿ[1] ವಿಶ್ವಾಸವಿಡುವವರು, ನಮಾಝ್ ಸಂಸ್ಥಾಪಿಸುವವರು ಮತ್ತು ನಾವು ಅವರಿಗೆ ಒದಗಿಸಿದ (ಧನದಿಂದ) ಖರ್ಚು ಮಾಡುವವರು.

2:4

وَٱلَّذِينَ يُؤۡمِنُونَ بِمَآ أُنزِلَ إِلَيۡكَ وَمَآ أُنزِلَ مِن قَبۡلِكَ وَبِٱلۡأٓخِرَةِ هُمۡ يُوقِنُونَ ﴿4﴾

Transliteration: Waallatheena yuminoona bima onzila ilayka wama onzila min qablika wabialakhirati hum yooqinoona

Translation: ನಿಮಗೆ ಅವತೀರ್ಣವಾದ ಗ್ರಂಥದಲ್ಲಿ ಮತ್ತು ನಿಮಗಿಂತ ಮೊದಲು ಅವತೀರ್ಣವಾದ ಗ್ರಂಥಗಳಲ್ಲಿ ಅವರು ವಿಶ್ವಾಸವಿಡುತ್ತಾರೆ. ಪರಲೋಕದಲ್ಲಿ ಅವರು ದೃಢವಾಗಿ ವಿಶ್ವಾಸವಿಡುತ್ತಾರೆ.

2:5

أُوْلَـٰٓئِكَ عَلَىٰ هُدٗى مِّن رَّبِّهِمۡۖ وَأُوْلَـٰٓئِكَ هُمُ ٱلۡمُفۡلِحُونَ ﴿5﴾

Transliteration: Olaika AAala hudan min rabbihim waolaika humu almuflihoona

Translation: ಅವರು ಅವರ ಪರಿಪಾಲಕನ (ಅಲ್ಲಾಹನ) ಕಡೆಯ ಸನ್ಮಾರ್ಗದಲ್ಲಿದ್ದಾರೆ. ಅವರೇ ಯಶಸ್ವಿಯಾದವರು.

2:6

إِنَّ ٱلَّذِينَ كَفَرُواْ سَوَآءٌ عَلَيۡهِمۡ ءَأَنذَرۡتَهُمۡ أَمۡ لَمۡ تُنذِرۡهُمۡ لَا يُؤۡمِنُونَ ﴿6﴾

Transliteration: Inna allatheena kafaroo sawaon AAalayhim aanthartahum am lam tunthirhum la yuminoona

Translation: ನಿಶ್ಚಯವಾಗಿಯೂ ಸತ್ಯನಿಷೇಧಿಗಳು ಯಾರೋ—ಅವರಿಗೆ ನೀವು ಎಚ್ಚರಿಕೆ ನೀಡಿದರೂ, ನೀಡದಿದ್ದರೂ ಅವರಿಗೆ ಅದು ಸಮಾನವಾಗಿದೆ; ಅವರು ವಿಶ್ವಾಸವಿಡುವುದಿಲ್ಲ.

2:7

خَتَمَ ٱللَّهُ عَلَىٰ قُلُوبِهِمۡ وَعَلَىٰ سَمۡعِهِمۡۖ وَعَلَىٰٓ أَبۡصَٰرِهِمۡ غِشَٰوَةٞۖ وَلَهُمۡ عَذَابٌ عَظِيمٞ ﴿7﴾

Transliteration: Khatama Allahu AAala quloobihim waAAala samAAihim waAAala absarihim ghishawatun walahum AAathabun AAatheemun

Translation: ಅಲ್ಲಾಹು ಅವರ ಹೃದಯಗಳಿಗೆ ಮತ್ತು ಅವರ ಶ್ರವಣಗಳಿಗೆ ಮೊಹರು ಹಾಕಿದ್ದಾನೆ. ಅವರ ದೃಷ್ಟಿಗಳ ಮೇಲೆ ಪರದೆಯಿದೆ.[1] ಅವರಿಗೆ ಘೋರ ಶಿಕ್ಷೆಯಿದೆ.

2:8

وَمِنَ ٱلنَّاسِ مَن يَقُولُ ءَامَنَّا بِٱللَّهِ وَبِٱلۡيَوۡمِ ٱلۡأٓخِرِ وَمَا هُم بِمُؤۡمِنِينَ ﴿8﴾

Transliteration: Wamina alnnasi man yaqoolu amanna biAllahi wabialyawmi alakhiri wama hum bimumineena

Translation: “ನಾವು ಅಲ್ಲಾಹನಲ್ಲಿ ಮತ್ತು ಅಂತ್ಯದಿನದಲ್ಲಿ ವಿಶ್ವಾಸವಿಟ್ಟಿದ್ದೇವೆ” ಎಂದು ಹೇಳುವ ಕೆಲವು ಜನರಿದ್ದಾರೆ. ಆದರೆ ವಾಸ್ತವವಾಗಿ ಅವರು ಸತ್ಯವಿಶ್ವಾಸಿಗಳಲ್ಲ.

2:9

يُخَٰدِعُونَ ٱللَّهَ وَٱلَّذِينَ ءَامَنُواْ وَمَا يَخۡدَعُونَ إِلَّآ أَنفُسَهُمۡ وَمَا يَشۡعُرُونَ ﴿9﴾

Transliteration: YukhadiAAoona Allaha waallatheena amanoo wama yakhdaAAoona illa anfusahum wama yashAAuroona

Translation: ಅವರು (ತಮ್ಮ ಡಾಂಭಿಕತೆಯ ಮೂಲಕ) ಅಲ್ಲಾಹನನ್ನು ಮತ್ತು ಸತ್ಯವಿಶ್ವಾಸಿಗಳನ್ನು ಮೋಸಗೊಳಿಸಬಹುದೆಂದು (ಭಾವಿಸುತ್ತಾರೆ). ಆದರೆ, ವಾಸ್ತವವಾಗಿ ಅವರು ಅವರನ್ನೇ ಮೋಸಗೊಳಿಸುತ್ತಿದ್ದಾರೆ. ಆದರೆ, ಅವರು ಅದನ್ನು ಅರ್ಥಮಾಡಿಕೊಳ್ಳುವುದಿಲ್ಲ.

2:10

فِي قُلُوبِهِم مَّرَضٞ فَزَادَهُمُ ٱللَّهُ مَرَضٗاۖ وَلَهُمۡ عَذَابٌ أَلِيمُۢ بِمَا كَانُواْ يَكۡذِبُونَ ﴿10﴾

Transliteration: Fee quloobihim maradun fazadahumu Allahu maradan walahum AAathabun aleemun bima kanoo yakthiboona

Translation: ಅವರ ಹೃದಯಗಳಲ್ಲಿ ರೋಗವಿದೆ. ಅಲ್ಲಾಹು ಅವರಿಗೆ ಆ ರೋಗವನ್ನು ಇನ್ನಷ್ಟು ಉಲ್ಬಣಗೊಳಿಸಿದ್ದಾನೆ.[1] ಅವರು (ನಿರಂತರ) ಸುಳ್ಳು ಹೇಳುವ ಕಾರಣ ಅವರಿಗೆ ಯಾತನಾಮಯ ಶಿಕ್ಷೆಯೂ ಇದೆ.

2:11

وَإِذَا قِيلَ لَهُمۡ لَا تُفۡسِدُواْ فِي ٱلۡأَرۡضِ قَالُوٓاْ إِنَّمَا نَحۡنُ مُصۡلِحُونَ ﴿11﴾

Transliteration: Waitha qeela lahum la tufsidoo fee alardi qaloo innama nahnu muslihoona

Translation: ನೀವು ಭೂಮಿಯಲ್ಲಿ ಕಿಡಿಗೇಡಿತನ ಮಾಡಬೇಡಿ ಎಂದು ಅವರೊಡನೆ ಹೇಳಲಾದರೆ, ಅವರು ಹೇಳುತ್ತಾರೆ: “ನಾವು ಕೇವಲ ಸುಧಾರಣೆ ಮಾಡುವವರು.”

2:12

أَلَآ إِنَّهُمۡ هُمُ ٱلۡمُفۡسِدُونَ وَلَٰكِن لَّا يَشۡعُرُونَ ﴿12﴾

Transliteration: Ala innahum humu almufsidoona walakin la yashAAuroona

Translation: ತಿಳಿಯಿರಿ! ಸತ್ಯವಾಗಿಯೂ ಅವರೇ ಕಿಡಿಗೇಡಿತನ ಮಾಡುವವರು. ಆದರೆ ಅವರು ಅರ್ಥಮಾಡಿಕೊಳ್ಳುವುದಿಲ್ಲ.

2:13

وَإِذَا قِيلَ لَهُمۡ ءَامِنُواْ كَمَآ ءَامَنَ ٱلنَّاسُ قَالُوٓاْ أَنُؤۡمِنُ كَمَآ ءَامَنَ ٱلسُّفَهَآءُۗ أَلَآ إِنَّهُمۡ هُمُ ٱلسُّفَهَآءُ وَلَٰكِن لَّا يَعۡلَمُونَ ﴿13﴾

Transliteration: Waitha qeela lahum aminoo kama amana alnnasu qaloo anuminu kama amana alssufahao ala innahum humu alssufahao walakin la yaAAlamoona

Translation: “ಸಹಾಬಿಗಳು (ಪ್ರವಾದಿಯ ಸಂಗಡಿಗರು) ವಿಶ್ವಾಸವಿಟ್ಟಂತೆ ನೀವೂ ವಿಶ್ವಾಸವಿಡಿ” ಎಂದು ಅವರೊಡನೆ ಹೇಳಲಾದರೆ, ಅವರು ಕೇಳುತ್ತಾರೆ: “ಆ ಅವಿವೇಕಿಗಳು ವಿಶ್ವಾಸವಿಟ್ಟಂತೆ ನಾವು ವಿಶ್ವಾಸವಿಡಬೇಕೇ?” ತಿಳಿಯಿರಿ! ನಿಶ್ಚಯವಾಗಿಯೂ ಅವರೇ ಅವಿವೇಕಿಗಳು. ಆದರೆ ಅವರು ಅದನ್ನು ತಿಳಿಯುವುದಿಲ್ಲ.

2:14

وَإِذَا لَقُواْ ٱلَّذِينَ ءَامَنُواْ قَالُوٓاْ ءَامَنَّا وَإِذَا خَلَوۡاْ إِلَىٰ شَيَٰطِينِهِمۡ قَالُوٓاْ إِنَّا مَعَكُمۡ إِنَّمَا نَحۡنُ مُسۡتَهۡزِءُونَ ﴿14﴾

Transliteration: Waitha laqoo allatheena amanoo qaloo amanna waitha khalaw ila shayateenihim qaloo inna maAAakum innama nahnu mustahzioona

Translation: ಸತ್ಯವಿಶ್ವಾಸಿಗಳನ್ನು ಭೇಟಿಯಾದಾಗ ಅವರು ಹೇಳುತ್ತಾರೆ: “ನಾವು ವಿಶ್ವಾಸವಿಟ್ಟಿದ್ದೇವೆ.” ಆದರೆ, ಅವರು ತಮ್ಮ ಶೈತಾನರ (ಮುಖಂಡರ) ಬಳಿ ಒಂಟಿಯಾಗಿರುವಾಗ ಹೇಳುತ್ತಾರೆ: “ನಿಜವಾಗಿಯೂ ನಾವು ನಿಮ್ಮ ಜೊತೆಯಲ್ಲೇ ಇದ್ದೇವೆ. ನಾವು ಕೇವಲ ತಮಾಷೆ ಮಾಡುತ್ತಿದ್ದೆವು.”

2:15

ٱللَّهُ يَسۡتَهۡزِئُ بِهِمۡ وَيَمُدُّهُمۡ فِي طُغۡيَٰنِهِمۡ يَعۡمَهُونَ ﴿15﴾

Transliteration: Allahu yastahzio bihim wayamudduhum fee tughyanihim yaAAmahoona

Translation: ಅಲ್ಲಾಹು ಕೂಡ ಅವರನ್ನು ತಮಾಷೆ ಮಾಡುತ್ತಾನೆ ಮತ್ತು ಅವರ ಅತಿರೇಕಗಳಲ್ಲಿ ಅಂಧವಾಗಿ ವಿಹರಿಸುವಂತೆ ಅವರನ್ನು ಬಿಟ್ಟುಬಿಡುತ್ತಾನೆ.[1]

2:16

أُوْلَـٰٓئِكَ ٱلَّذِينَ ٱشۡتَرَوُاْ ٱلضَّلَٰلَةَ بِٱلۡهُدَىٰ فَمَا رَبِحَت تِّجَٰرَتُهُمۡ وَمَا كَانُواْ مُهۡتَدِينَ ﴿16﴾

Transliteration: Olaika allatheena ishtarawoo alddalalata bialhuda fama rabihat tijaratuhum wama kanoo muhtadeena

Translation: ಅವರೇ ಸನ್ಮಾರ್ಗದ ಬದಲಿಗೆ ದುರ್ಮಾರ್ಗವನ್ನು ಖರೀದಿಸಿದವರು. ಆದ್ದರಿಂದ, ಅವರ ವ್ಯಾಪಾರವು ಲಾಭಕರವಾಗಲಿಲ್ಲ; ಅವರು ಸನ್ಮಾರ್ಗಿಗಳಾಗಲೂ ಇಲ್ಲ.

2:17

مَثَلُهُمۡ كَمَثَلِ ٱلَّذِي ٱسۡتَوۡقَدَ نَارٗا فَلَمَّآ أَضَآءَتۡ مَا حَوۡلَهُۥ ذَهَبَ ٱللَّهُ بِنُورِهِمۡ وَتَرَكَهُمۡ فِي ظُلُمَٰتٖ لَّا يُبۡصِرُونَ ﴿17﴾

Transliteration: Mathaluhum kamathali allathee istawqada naran falamma adaat ma hawlahu thahaba Allahu binoorihim watarakahum fee thulumatin la yubsiroona

Translation: ಅವರ ಉದಾಹರಣೆಯು ಬೆಂಕಿಯುರಿಸಿದ ಒಬ್ಬ ವ್ಯಕ್ತಿಯಂತೆ. ಅದು ಅವನ ಪರಿಸರವನ್ನು ಬೆಳಗಿದಾಗ, ಅಲ್ಲಾಹು ಅವರ ಬೆಳಕನ್ನು ನಿವಾರಿಸಿ ಏನೂ ಕಾಣದಂತಹ ಅಂಧಕಾರದಲ್ಲಿ ಅವರನ್ನು ಬಿಟ್ಟುಬಿಟ್ಟನು.

2:18

صُمُّۢ بُكۡمٌ عُمۡيٞ فَهُمۡ لَا يَرۡجِعُونَ ﴿18﴾

Transliteration: Summun bukmun AAumyun fahum la yarjiAAoona

Translation: ಅವರು ಕಿವುಡರು, ಮೂಕರು ಮತ್ತು ಕುರುಡರು. ಆದ್ದರಿಂದ ಅವರು (ಸತ್ಯಮಾರ್ಗಕ್ಕೆ) ಮರಳಿ ಬರುವುದಿಲ್ಲ.

2:19

أَوۡ كَصَيِّبٖ مِّنَ ٱلسَّمَآءِ فِيهِ ظُلُمَٰتٞ وَرَعۡدٞ وَبَرۡقٞ يَجۡعَلُونَ أَصَٰبِعَهُمۡ فِيٓ ءَاذَانِهِم مِّنَ ٱلصَّوَٰعِقِ حَذَرَ ٱلۡمَوۡتِۚ وَٱللَّهُ مُحِيطُۢ بِٱلۡكَٰفِرِينَ ﴿19﴾

Transliteration: Aw kasayyibin mina alssamai feehi thulumatun waraAAdun wabarqun yajAAaloona asabiAAahum fee athanihim mina alssawaAAiqi hathara almawti waAllahu muheetun bialkafireena

Translation: ಅಥವಾ (ಅವರ ಉದಾಹರಣೆಯು) ಆಕಾಶದಿಂದ ಸುರಿಯುವ ಜಡಿಮಳೆಯಂತೆ; ಅದರಲ್ಲಿ ಅಂಧಕಾರಗಳು, ಸಿಡಿಲು ಮತ್ತು ಮಿಂಚುಗಳಿವೆ. ಸಿಡಿಲಿನ ಆರ್ಭಟದಿಂದ ಸಾವಿಗೆ ಹೆದರಿ ಅವರು ತಮ್ಮ ಬೆರಳುಗಳನ್ನು ಕಿವಿಗಳಲ್ಲಿಡುತ್ತಾರೆ. ಅಲ್ಲಾಹು ಸತ್ಯನಿಷೇಧಿಗಳನ್ನು ಸುತ್ತುವರಿದಿದ್ದಾನೆ.

2:20

يَكَادُ ٱلۡبَرۡقُ يَخۡطَفُ أَبۡصَٰرَهُمۡۖ كُلَّمَآ أَضَآءَ لَهُم مَّشَوۡاْ فِيهِ وَإِذَآ أَظۡلَمَ عَلَيۡهِمۡ قَامُواْۚ وَلَوۡ شَآءَ ٱللَّهُ لَذَهَبَ بِسَمۡعِهِمۡ وَأَبۡصَٰرِهِمۡۚ إِنَّ ٱللَّهَ عَلَىٰ كُلِّ شَيۡءٖ قَدِيرٞ ﴿20﴾

Transliteration: Yakadu albarqu yakhtafu absarahum kullama adaa lahum mashaw feehi waitha athlama AAalayhim qamoo walaw shaa Allahu lathahaba bisamAAihim waabsarihim inna Allaha AAala kulli shayin qadeerun

Translation: ಮಿಂಚು ಇನ್ನೇನು ಅವರ ದೃಷ್ಟಿಗಳನ್ನು ಕಸಿಯುವುದರಲ್ಲಿದೆ. ಅದು ಅವರಿಗೆ ಬೆಳಕು ನೀಡಿದಾಗಲೆಲ್ಲಾ ಅವರು ಅದರಲ್ಲಿ ನಡೆಯುತ್ತಾರೆ. ಕತ್ತಲೆ ಆವರಿಸಿದಾಗ ಅವರು ನಿಂತುಬಿಡುತ್ತಾರೆ. ಅಲ್ಲಾಹು ಇಚ್ಛಿಸಿದರೆ ಅವರ ಶ್ರವಣ ಮತ್ತು ದೃಷ್ಟಿಯನ್ನು ತೆಗೆದುಬಿಡುತ್ತಿದ್ದನು. ನಿಶ್ಚಯವಾಗಿಯೂ ಅಲ್ಲಾಹು ಎಲ್ಲಾ ವಿಷಯಗಳಲ್ಲೂ ಸಾಮರ್ಥ್ಯವುಳ್ಳವನು.

2:21

يَـٰٓأَيُّهَا ٱلنَّاسُ ٱعۡبُدُواْ رَبَّكُمُ ٱلَّذِي خَلَقَكُمۡ وَٱلَّذِينَ مِن قَبۡلِكُمۡ لَعَلَّكُمۡ تَتَّقُونَ ﴿21﴾

Transliteration: Ya ayyuha alnnasu oAAbudoo rabbakumu allathee khalaqakum waallatheena min qablikum laAAallakum tattaqoona

Translation: ಓ ಮನುಷ್ಯರೇ! ನಿಮ್ಮನ್ನು ಮತ್ತು ನಿಮ್ಮ ಪೂರ್ವಜರನ್ನು ಸೃಷ್ಟಿಸಿದ ನಿಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಆರಾಧಿಸಿರಿ. ನೀವು ದೇವಭಯವುಳ್ಳವರಾಗುವುದಕ್ಕಾಗಿ.

2:22

ٱلَّذِي جَعَلَ لَكُمُ ٱلۡأَرۡضَ فِرَٰشٗا وَٱلسَّمَآءَ بِنَآءٗ وَأَنزَلَ مِنَ ٱلسَّمَآءِ مَآءٗ فَأَخۡرَجَ بِهِۦ مِنَ ٱلثَّمَرَٰتِ رِزۡقٗا لَّكُمۡۖ فَلَا تَجۡعَلُواْ لِلَّهِ أَندَادٗا وَأَنتُمۡ تَعۡلَمُونَ ﴿22﴾

Transliteration: Allathee jaAAala lakumu alarda firashan waalssamaa binaan waanzala mina alssamai maan faakhraja bihi mina alththamarati rizqan lakum fala tajAAaloo lillahi andadan waantum taAAlamoona

Translation: (ಅವನು ಯಾರೆಂದರೆ) ನಿಮಗೋಸ್ಕರ ಭೂಮಿಯನ್ನು ಹಾಸನ್ನಾಗಿ ಮತ್ತು ಆಕಾಶವನ್ನು ಛಾವಣಿಯನ್ನಾಗಿ ಮಾಡಿಕೊಟ್ಟವನು. ಆಕಾಶದಿಂದ ಮಳೆಯನ್ನು ಸುರಿಸಿ ಅದರಿಂದ ನಿಮ್ಮ ಆಹಾರಕ್ಕಾಗಿ ಹಣ್ಣು-ಹಂಪಲುಗಳನ್ನು ಉತ್ಪಾದಿಸಿಕೊಟ್ಟವನು. ಆದ್ದರಿಂದ, ಇವೆಲ್ಲವನ್ನೂ ತಿಳಿದೂ ಸಹ ನೀವು ಅಲ್ಲಾಹನಿಗೆ ಸರಿಸಾಟಿಗಳನ್ನು ನಿಶ್ಚಯಿಸಬೇಡಿ.

2:23

وَإِن كُنتُمۡ فِي رَيۡبٖ مِّمَّا نَزَّلۡنَا عَلَىٰ عَبۡدِنَا فَأۡتُواْ بِسُورَةٖ مِّن مِّثۡلِهِۦ وَٱدۡعُواْ شُهَدَآءَكُم مِّن دُونِ ٱللَّهِ إِن كُنتُمۡ صَٰدِقِينَ ﴿23﴾

Transliteration: Wain kuntum fee raybin mimma nazzalna AAala AAabdina fatoo bisooratin min mithlihi waodAAoo shuhadaakum min dooni Allahi in kuntum sadiqeena

Translation: ನಾವು ನಮ್ಮ ದಾಸನಿಗೆ ಅವತೀರ್ಣಗೊಳಿಸಿದ (ಕುರ್‌ಆನ್) ಬಗ್ಗೆ ನಿಮಗೇನಾದರೂ ಸಂದೇಹವಿದ್ದರೆ, ಅದರಂತಿರುವ ಒಂದು ಸೂರವನ್ನು (ಅಧ್ಯಾಯವನ್ನು) ರಚಿಸಿ ತನ್ನಿರಿ; ಅಲ್ಲಾಹನ ಹೊರತು ನಿಮ್ಮ ಎಲ್ಲಾ ಸಹಾಯಕರನ್ನು ಕರೆಯಿರಿ; ನೀವು ಸತ್ಯವಂತರಾಗಿದ್ದರೆ.

2:24

فَإِن لَّمۡ تَفۡعَلُواْ وَلَن تَفۡعَلُواْ فَٱتَّقُواْ ٱلنَّارَ ٱلَّتِي وَقُودُهَا ٱلنَّاسُ وَٱلۡحِجَارَةُۖ أُعِدَّتۡ لِلۡكَٰفِرِينَ ﴿24﴾

Transliteration: Fain lam tafAAaloo walan tafAAaloo faittaqoo alnnara allatee waqooduha alnnasu waalhijaratu oAAiddat lilkafireena

Translation: ನಿಮಗೆ ಅದನ್ನು ಮಾಡಲು ಸಾಧ್ಯವಾಗದಿದ್ದರೆ—ಅದನ್ನು ಮಾಡಲು ನಿಮಗೆ ಎಂದಿಗೂ ಸಾಧ್ಯವಾಗುವುದಿಲ್ಲ. ಆದ್ದರಿಂದ ನೀವು ಆ ನರಕವನ್ನು ಭಯಪಡಿರಿ; ಅದರ ಇಂಧನವು ಮನುಷ್ಯರು ಮತ್ತು ಕಲ್ಲುಗಳಾಗಿದ್ದಾರೆ. ಅದನ್ನು ಸತ್ಯನಿಷೇಧಿಗಳಿಗಾಗಿ ಸಿದ್ಧಗೊಳಿಸಲಾಗಿದೆ.

2:25

وَبَشِّرِ ٱلَّذِينَ ءَامَنُواْ وَعَمِلُواْ ٱلصَّـٰلِحَٰتِ أَنَّ لَهُمۡ جَنَّـٰتٖ تَجۡرِي مِن تَحۡتِهَا ٱلۡأَنۡهَٰرُۖ كُلَّمَا رُزِقُواْ مِنۡهَا مِن ثَمَرَةٖ رِّزۡقٗا قَالُواْ هَٰذَا ٱلَّذِي رُزِقۡنَا مِن قَبۡلُۖ وَأُتُواْ بِهِۦ مُتَشَٰبِهٗاۖ وَلَهُمۡ فِيهَآ أَزۡوَٰجٞ مُّطَهَّرَةٞۖ وَهُمۡ فِيهَا خَٰلِدُونَ ﴿25﴾

Transliteration: Wabashshiri allatheena amanoo waAAamiloo alssalihati anna lahum jannatin tajree min tahtiha alanharu kullama ruziqoo minha min thamaratin rizqan qaloo hatha allathee ruziqna min qablu waotoo bihi mutashabihan walahum feeha azwajun mutahharatun wahum feeha khalidoona

Translation: ಸತ್ಯವಿಶ್ವಾಸಿಗಳು ಹಾಗೂ ಸತ್ಕರ್ಮವೆಸಗಿದವರಿಗೆ ತಳಭಾಗದಿಂದ ನದಿಗಳು ಹರಿಯುವ ಸ್ವರ್ಗೋದ್ಯಾನಗಳಿವೆಯೆಂಬ ಸುವಾರ್ತೆಯನ್ನು ತಿಳಿಸಿರಿ. ಅವರಿಗೆ ಅದರ ಒಂದೊಂದು ಹಣ್ಣನ್ನು ಆಹಾರವಾಗಿ ನೀಡಲಾಗುವಾಗಲೆಲ್ಲಾ ಅವರು ಹೇಳುವರು: “ಇದು ನಮಗೆ ಮುಂಚೆ ನೀಡಲಾದದ್ದೇ ಅಲ್ಲವೇ!” ವಾಸ್ತವವಾಗಿ, ಅವರಿಗೆ ಅದನ್ನು ಹೋಲಿಕೆಯಿರುವ ರೂಪದಲ್ಲಿ ನೀಡಲಾಗಿದೆ.[1] ಅವರಿಗೆ ಅಲ್ಲಿ ಪರಿಶುದ್ಧ ಸಂಗಾತಿಗಳಿದ್ದಾರೆ; ಅವರು ಅಲ್ಲಿ ಶಾಶ್ವತವಾಗಿ ವಾಸಿಸುವರು.

2:26

إِنَّ ٱللَّهَ لَا يَسۡتَحۡيِۦٓ أَن يَضۡرِبَ مَثَلٗا مَّا بَعُوضَةٗ فَمَا فَوۡقَهَاۚ فَأَمَّا ٱلَّذِينَ ءَامَنُواْ فَيَعۡلَمُونَ أَنَّهُ ٱلۡحَقُّ مِن رَّبِّهِمۡۖ وَأَمَّا ٱلَّذِينَ كَفَرُواْ فَيَقُولُونَ مَاذَآ أَرَادَ ٱللَّهُ بِهَٰذَا مَثَلٗاۘ يُضِلُّ بِهِۦ كَثِيرٗا وَيَهۡدِي بِهِۦ كَثِيرٗاۚ وَمَا يُضِلُّ بِهِۦٓ إِلَّا ٱلۡفَٰسِقِينَ ﴿26﴾

Transliteration: Inna Allaha la yastahyee an yadriba mathalan ma baAAoodatan fama fawqaha faamma allatheena amanoo fayaAAlamoona annahu alhaqqu min rabbihim waamma allatheena kafaroo fayaqooloona matha arada Allahu bihatha mathalan yudillu bihi katheeran wayahdee bihi katheeran wama yudillu bihi illa alfasiqeena

Translation: ನಿಶ್ಚಯವಾಗಿಯೂ ಅಲ್ಲಾಹು ಒಂದು ಸೊಳ್ಳೆಯನ್ನು ಅಥವಾ ಅದಕ್ಕಿಂತ ಕೀಳಾದುದನ್ನು ಉದಾಹರಣೆಯಾಗಿ ತೋರಿಸಲು ಸಂಕೋಚಪಡುವುದಿಲ್ಲ. ಸತ್ಯವಿಶ್ವಾಸಿಗಳು ಅದು ತಮ್ಮ ಪರಿಪಾಲಕನ (ಅಲ್ಲಾಹನ) ಕಡೆಯ ಸತ್ಯವೆಂದು ತಿಳಿಯುತ್ತಾರೆ. ಆದರೆ, ಸತ್ಯನಿಷೇಧಿಗಳು ಕೇಳುತ್ತಾರೆ: “ಈ ಹೋಲಿಕೆಯಿಂದ ಅಲ್ಲಾಹು ಉದ್ದೇಶಿಸುವುದೇನು?” ಇದರ ಮೂಲಕ ಅಲ್ಲಾಹು ಅನೇಕ ಜನರನ್ನು ದಾರಿತಪ್ಪಿಸುತ್ತಾನೆ ಮತ್ತು ಅನೇಕ ಜನರಿಗೆ ಸನ್ಮಾರ್ಗವನ್ನು ತೋರಿಸುತ್ತಾನೆ. ಅವನು ಇದರ ಮೂಲಕ ದುಷ್ಕರ್ಮಿಗಳನ್ನಲ್ಲದೆ ಇನ್ನಾರನ್ನೂ ದಾರಿತಪ್ಪಿಸುವುದಿಲ್ಲ.

2:27

ٱلَّذِينَ يَنقُضُونَ عَهۡدَ ٱللَّهِ مِنۢ بَعۡدِ مِيثَٰقِهِۦ وَيَقۡطَعُونَ مَآ أَمَرَ ٱللَّهُ بِهِۦٓ أَن يُوصَلَ وَيُفۡسِدُونَ فِي ٱلۡأَرۡضِۚ أُوْلَـٰٓئِكَ هُمُ ٱلۡخَٰسِرُونَ ﴿27﴾

Transliteration: Allatheena yanqudoona AAahda Allahi min baAAdi meethaqihi wayaqtaAAoona ma amara Allahu bihi an yoosala wayufsidoona fee alardi olaika humu alkhasiroona

Translation: ಅವರು (ದುಷ್ಕರ್ಮಿಗಳು) ಯಾರೆಂದರೆ, ಅಲ್ಲಾಹನ ಕರಾರನ್ನು—ಅದು ಸದೃಢವಾದ ಬಳಿಕವೂ—ಮುರಿಯುವವರು, ಅಲ್ಲಾಹು ಜೋಡಿಸಲು ಆದೇಶಿಸಿದ್ದನ್ನು ಕಡಿಯುವವರು, ಮತ್ತು ಭೂಮಿಯಲ್ಲಿ ಕಿಡಿಗೇಡಿತನ ಮಾಡುವವರು. ಅವರೇ ನಷ್ಟ ಹೊಂದಿದವರು.

2:28

كَيۡفَ تَكۡفُرُونَ بِٱللَّهِ وَكُنتُمۡ أَمۡوَٰتٗا فَأَحۡيَٰكُمۡۖ ثُمَّ يُمِيتُكُمۡ ثُمَّ يُحۡيِيكُمۡ ثُمَّ إِلَيۡهِ تُرۡجَعُونَ ﴿28﴾

Transliteration: Kayfa takfuroona biAllahi wakuntum amwatan faahyakum thumma yumeetukum thumma yuhyeekum thumma ilayhi turjaAAoona

Translation: ನೀವು ಅಲ್ಲಾಹನನ್ನು ಹೇಗೆ ನಿಷೇಧಿಸುತ್ತೀರಿ? ವಾಸ್ತವವಾಗಿ, ನೀವು ನಿರ್ಜೀವಿಗಳಾಗಿದ್ದಿರಿ ಮತ್ತು ಅವನು ನಿಮಗೆ ಜೀವವನ್ನು ನೀಡಿದನು; ನಂತರ ಅವನು ನಿಮಗೆ ಸಾವನ್ನು ನೀಡುತ್ತಾನೆ. ನಂತರ ಅವನು ನಿಮಗೆ (ಪುನಃ) ಜೀವವನ್ನು ನೀಡುತ್ತಾನೆ. ನಂತರ ನಿಮ್ಮನ್ನು ಅವನ ಬಳಿಗೇ ಮರಳಿಸಲಾಗುತ್ತದೆ.

2:29

هُوَ ٱلَّذِي خَلَقَ لَكُم مَّا فِي ٱلۡأَرۡضِ جَمِيعٗا ثُمَّ ٱسۡتَوَىٰٓ إِلَى ٱلسَّمَآءِ فَسَوَّىٰهُنَّ سَبۡعَ سَمَٰوَٰتٖۚ وَهُوَ بِكُلِّ شَيۡءٍ عَلِيمٞ ﴿29﴾

Transliteration: Huwa allathee khalaqa lakum ma fee alardi jameeAAan thumma istawa ila alssamai fasawwahunna sabAAa samawatin wahuwa bikulli shayin AAaleemun

Translation: ಭೂಮಿಯಲ್ಲಿರುವ ಎಲ್ಲಾ ವಸ್ತುಗಳನ್ನೂ ನಿಮಗಾಗಿ ಸೃಷ್ಟಿಸಿದವನು ಅವನೇ. ನಂತರ ಅವನು ಆಕಾಶಕ್ಕೇರಿ, ಅದನ್ನು ಏಳಾಕಾಶಗಳಾಗಿ ಸರಿಪಡಿಸಿದನು. ಅವನು ಎಲ್ಲಾ ವಿಷಯಗಳನ್ನೂ ತಿಳಿದವನಾಗಿದ್ದಾನೆ.

2:30

وَإِذۡ قَالَ رَبُّكَ لِلۡمَلَـٰٓئِكَةِ إِنِّي جَاعِلٞ فِي ٱلۡأَرۡضِ خَلِيفَةٗۖ قَالُوٓاْ أَتَجۡعَلُ فِيهَا مَن يُفۡسِدُ فِيهَا وَيَسۡفِكُ ٱلدِّمَآءَ وَنَحۡنُ نُسَبِّحُ بِحَمۡدِكَ وَنُقَدِّسُ لَكَۖ قَالَ إِنِّيٓ أَعۡلَمُ مَا لَا تَعۡلَمُونَ ﴿30﴾

Transliteration: Waith qala rabbuka lilmalaikati innee jaAAilun fee alardi khaleefatan qaloo atajAAalu feeha man yufsidu feeha wayasfiku alddimaa wanahnu nusabbihu bihamdika wanuqaddisu laka qala innee aAAlamu ma la taAAlamoona

Translation: ನಿಮ್ಮ ಪರಿಪಾಲಕನು (ಅಲ್ಲಾಹು) ದೇವದೂತರೊಡನೆ, “ನಾನು ಭೂಮಿಯಲ್ಲಿ ಒಬ್ಬ ಉತ್ತರಾಧಿಕಾರಿಯನ್ನು[1] (ಮನುಷ್ಯನನ್ನು) ಮಾಡುತ್ತೇನೆ” ಎಂದು ಹೇಳಿದ ಸಂದರ್ಭ. ಅವರು ಕೇಳಿದರು: “ಅಲ್ಲಿ ಕಿಡಿಗೇಡಿತನ ಮಾಡುವವನನ್ನು ಮತ್ತು ರಕ್ತ ಹರಿಸುವವನನ್ನು ಮಾಡುವೆಯಾ? ನಾವಂತೂ ನಿನ್ನನ್ನು ಸ್ತುತಿಸುತ್ತಾ ನಿನ್ನ ಪರಿಶುದ್ಧಿಯನ್ನು ಕೊಂಡಾಡುತ್ತೇವೆ ಮತ್ತು ನಿನ್ನ ಪವಿತ್ರತೆಯನ್ನು ಹೊಗಳುತ್ತೇವೆ.” ಅಲ್ಲಾಹು ಹೇಳಿದನು: “ನಿಶ್ಚಯವಾಗಿಯೂ, ನಿಮಗೆ ತಿಳಿಯದೇ ಇರುವುದು ನನಗೆ ತಿಳಿದಿದೆ.”

2:31

وَعَلَّمَ ءَادَمَ ٱلۡأَسۡمَآءَ كُلَّهَا ثُمَّ عَرَضَهُمۡ عَلَى ٱلۡمَلَـٰٓئِكَةِ فَقَالَ أَنۢبِـُٔونِي بِأَسۡمَآءِ هَـٰٓؤُلَآءِ إِن كُنتُمۡ صَٰدِقِينَ ﴿31﴾

Transliteration: WaAAallama adama alasmaa kullaha thumma AAaradahum AAala almalaikati faqala anbioonee biasmai haolai in kuntum sadiqeena

Translation: ಅಲ್ಲಾಹು ಆದಮರಿಗೆ ಎಲ್ಲಾ ಹೆಸರುಗಳನ್ನು ಕಲಿಸಿದನು. ನಂತರ ಅವುಗಳನ್ನು ದೇವದೂತರುಗಳಿಗೆ ತೋರಿಸಿ ಹೇಳಿದನು: “ನೀವು ಸತ್ಯವಂತರಾಗಿದ್ದರೆ ಇವುಗಳ ಹೆಸರುಗಳನ್ನು ಹೇಳಿರಿ.”

2:32

قَالُواْ سُبۡحَٰنَكَ لَا عِلۡمَ لَنَآ إِلَّا مَا عَلَّمۡتَنَآۖ إِنَّكَ أَنتَ ٱلۡعَلِيمُ ٱلۡحَكِيمُ ﴿32﴾

Transliteration: Qaloo subhanaka la AAilma lana illa ma AAallamtana innaka anta alAAaleemu alhakeemu

Translation: ಅವರು ಹೇಳಿದರು: “ನಿನ್ನ ಪರಿಶುದ್ಧಿಯನ್ನು ನಾವು ಕೊಂಡಾಡುತ್ತೇವೆ. ನೀನು ನಮಗೆ ಕಲಿಸಿಕೊಟ್ಟದ್ದರ ಹೊರತು ಬೇರೇನೂ ನಮಗೆ ತಿಳಿದಿಲ್ಲ; ನಿಶ್ಚಯವಾಗಿಯೂ ನೀನು ಸರ್ವಜ್ಞನು ಮತ್ತು ವಿವೇಕವಂತನಾಗಿರುವೆ.”

2:33

قَالَ يَـٰٓـَٔادَمُ أَنۢبِئۡهُم بِأَسۡمَآئِهِمۡۖ فَلَمَّآ أَنۢبَأَهُم بِأَسۡمَآئِهِمۡ قَالَ أَلَمۡ أَقُل لَّكُمۡ إِنِّيٓ أَعۡلَمُ غَيۡبَ ٱلسَّمَٰوَٰتِ وَٱلۡأَرۡضِ وَأَعۡلَمُ مَا تُبۡدُونَ وَمَا كُنتُمۡ تَكۡتُمُونَ ﴿33﴾

Transliteration: Qala ya adamu anbihum biasmaihim falamma anbaahum biasmaihim qala alam aqul lakum innee aAAlamu ghayba alssamawati waalardi waaAAlamu ma tubdoona wama kuntum taktumoona

Translation: ಅಲ್ಲಾಹು ಹೇಳಿದನು: “ಓ ಆದಮರೇ! ಅವರಿಗೆ ಅವುಗಳ ಹೆಸರುಗಳನ್ನು ಹೇಳಿಕೊಡಿ.” ಆದಮ್ ಅವರಿಗೆ ಅವುಗಳ ಹೆಸರುಗಳನ್ನು ಹೇಳಿಕೊಟ್ಟಾಗ ಅಲ್ಲಾಹು ಹೇಳಿದನು: “ನಾನು ನಿಮಗೆ ಹೇಳಿರಲಿಲ್ಲವೇ? ನಿಶ್ಚಯವಾಗಿಯೂ, ಭೂಮ್ಯಾಕಾಶಗಳ ಅದೃಶ್ಯ ವಿಷಯಗಳನ್ನು ನಾನು ತಿಳಿದಿದ್ದೇನೆಂದು; ನೀವು ಬಹಿರಂಗಪಡಿಸುವುದನ್ನು ಹಾಗೂ ರಹಸ್ಯವಾಗಿಡುವುದನ್ನು ನಾನು ತಿಳಿದಿದ್ದೇನೆಂದು.”

2:34

وَإِذۡ قُلۡنَا لِلۡمَلَـٰٓئِكَةِ ٱسۡجُدُواْ لِأٓدَمَ فَسَجَدُوٓاْ إِلَّآ إِبۡلِيسَ أَبَىٰ وَٱسۡتَكۡبَرَ وَكَانَ مِنَ ٱلۡكَٰفِرِينَ ﴿34﴾

Transliteration: Waith qulna lilmalaikati osjudoo liadama fasajadoo illa ibleesa aba waistakbara wakana mina alkafireena

Translation: ನಾವು ದೇವದೂತರೊಡನೆ ಹೇಳಿದ ಸಂದರ್ಭ: “ನೀವೆಲ್ಲರೂ ಆದಮರಿಗೆ ಸಾಷ್ಟಾಂಗ ಮಾಡಿರಿ.”[1] ಅವರು ಸಾಷ್ಟಾಂಗ ಮಾಡಿದರು; ಇಬ್ಲೀಸನ ಹೊರತು.[2] ಅವನು (ಸಾಷ್ಟಾಂಗ ಮಾಡಲು) ನಿರಾಕರಿಸಿದನು ಮತ್ತು ಅಹಂಕಾರ ತೋರಿದನು. ಅವನು ಸತ್ಯನಿಷೇಧಿಗಳಲ್ಲಿ ಸೇರಿದವನಾದನು.

2:35

وَقُلۡنَا يَـٰٓـَٔادَمُ ٱسۡكُنۡ أَنتَ وَزَوۡجُكَ ٱلۡجَنَّةَ وَكُلَا مِنۡهَا رَغَدًا حَيۡثُ شِئۡتُمَا وَلَا تَقۡرَبَا هَٰذِهِ ٱلشَّجَرَةَ فَتَكُونَا مِنَ ٱلظَّـٰلِمِينَ ﴿35﴾

Transliteration: Waqulna ya adamu oskun anta wazawjuka aljannata wakula minha raghadan haythu shituma wala taqraba hathihi alshshajarata fatakoona mina alththalimeena

Translation: ನಾವು ಹೇಳಿದೆವು: “ಓ ಆದಮರೇ! ನೀವು ಮತ್ತು ನಿಮ್ಮ ಪತ್ನಿ ಸ್ವರ್ಗದಲ್ಲಿ ವಾಸಿಸಿರಿ; ಅಲ್ಲಿ ನೀವು ಇಚ್ಛಿಸುವ ಎಲ್ಲಾ ಕಡೆಗಳಿಂದ ಯಥೇಷ್ಟವಾಗಿ ತಿನ್ನಿರಿ. ಆದರೆ ಈ ಮರದ ಹತ್ತಿರ ಹೋಗಬೇಡಿ. ಹಾಗೇನಾದರೂ ಹೋದರೆ ನೀವು ಅಕ್ರಮಿಗಳಲ್ಲಿ ಸೇರಿದವರಾಗುವಿರಿ.”

2:36

فَأَزَلَّهُمَا ٱلشَّيۡطَٰنُ عَنۡهَا فَأَخۡرَجَهُمَا مِمَّا كَانَا فِيهِۖ وَقُلۡنَا ٱهۡبِطُواْ بَعۡضُكُمۡ لِبَعۡضٍ عَدُوّٞۖ وَلَكُمۡ فِي ٱلۡأَرۡضِ مُسۡتَقَرّٞ وَمَتَٰعٌ إِلَىٰ حِينٖ ﴿36﴾

Transliteration: Faazallahuma alshshaytanu AAanha faakhrajahuma mimma kana feehi waqulna ihbitoo baAAdukum libaAAdin AAaduwwun walakum fee alardi mustaqarrun wamataAAun ila heenin

Translation: ಆದರೆ ಶೈತಾನನು ಅವರನ್ನು ತಪ್ಪುದಾರಿಗೆಳೆದು, ಅವರಿಬ್ಬರೂ ವಾಸವಾಗಿದ್ದಲ್ಲಿಂದ ಹೊರಹೋಗುವಂತೆ ಮಾಡಿದನು. ನಾವು ಹೇಳಿದೆವು: “ನೀವೆಲ್ಲರೂ ಇಳಿಯಿರಿ. ನೀವು ಪರಸ್ಪರ ವೈರಿಗಳಾಗಿದ್ದೀರಿ. ನಿಮಗೆ ಭೂಮಿಯಲ್ಲಿ ಒಂದು ಅವಧಿಯವರೆಗೆ ವಾಸಸ್ಥಳ ಹಾಗೂ ಜೀವನ ಸವಲತ್ತುಗಳಿವೆ.”

2:37

فَتَلَقَّىٰٓ ءَادَمُ مِن رَّبِّهِۦ كَلِمَٰتٖ فَتَابَ عَلَيۡهِۚ إِنَّهُۥ هُوَ ٱلتَّوَّابُ ٱلرَّحِيمُ ﴿37﴾

Transliteration: Fatalaqqa adamu min rabbihi kalimatin fataba AAalayhi innahu huwa alttawwabu alrraheemu

Translation: ಆದಮ್ ತಮ್ಮ ಪರಿಪಾಲಕನಿಂದ (ಅಲ್ಲಾಹನಿಂದ) ಕೆಲವು ವಚನಗಳನ್ನು ಕಲಿತುಕೊಂಡರು.[1] ಅಲ್ಲಾಹು ಅವರ ಪಶ್ಚಾತ್ತಾಪವನ್ನು ಸ್ವೀಕರಿಸಿದನು. ನಿಶ್ಚಯವಾಗಿಯೂ ಅವನು ಪಶ್ಚಾತ್ತಾಪ ಸ್ವೀಕರಿಸುವವನು ಮತ್ತು ಕರುಣೆ ತೋರುವವನಾಗಿದ್ದಾನೆ.

2:38

قُلۡنَا ٱهۡبِطُواْ مِنۡهَا جَمِيعٗاۖ فَإِمَّا يَأۡتِيَنَّكُم مِّنِّي هُدٗى فَمَن تَبِعَ هُدَايَ فَلَا خَوۡفٌ عَلَيۡهِمۡ وَلَا هُمۡ يَحۡزَنُونَ ﴿38﴾

Transliteration: Qulna ihbitoo minha jameeAAan faimma yatiyannakum minnee hudan faman tabiAAa hudaya fala khawfun AAalayhim wala hum yahzanoona

Translation: ನಾವು ಹೇಳಿದೆವು: “ನೀವೆಲ್ಲರೂ ಇಲ್ಲಿಂದ ಇಳಿಯಿರಿ. ನನ್ನಿಂದ ನಿಮಗೆ ಮಾರ್ಗದರ್ಶನವು ಬರುವಾಗ, ಆ ನನ್ನ ಮಾರ್ಗದರ್ಶನವನ್ನು ಯಾರು ಅನುಸರಿಸುತ್ತಾರೋ ಅವರಿಗೆ ಯಾವುದೇ ಭಯವಿಲ್ಲ; ಅವರು ದುಃಖಿಸುವುದೂ ಇಲ್ಲ.

2:39

وَٱلَّذِينَ كَفَرُواْ وَكَذَّبُواْ بِـَٔايَٰتِنَآ أُوْلَـٰٓئِكَ أَصۡحَٰبُ ٱلنَّارِۖ هُمۡ فِيهَا خَٰلِدُونَ ﴿39﴾

Transliteration: Waallatheena kafaroo wakaththaboo biayatina olaika ashabu alnnari hum feeha khalidoona

Translation: ಸತ್ಯನಿಷೇಧಿಗಳು ಹಾಗೂ ನಮ್ಮ ವಚನಗಳನ್ನು ತಿರಸ್ಕರಿಸಿದವರು ಯಾರೋ—ಅವರೇ ನರಕವಾಸಿಗಳು. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು.”

2:40

يَٰبَنِيٓ إِسۡرَـٰٓءِيلَ ٱذۡكُرُواْ نِعۡمَتِيَ ٱلَّتِيٓ أَنۡعَمۡتُ عَلَيۡكُمۡ وَأَوۡفُواْ بِعَهۡدِيٓ أُوفِ بِعَهۡدِكُمۡ وَإِيَّـٰيَ فَٱرۡهَبُونِ ﴿40﴾

Transliteration: Ya banee israeela othkuroo niAAmatiya allatee anAAamtu AAalaykum waawfoo biAAahdee oofi biAAahdikum waiyyaya fairhabooni

Translation: ಓ ಇಸ್ರಾಯೇಲ್ ಮಕ್ಕಳೇ![1] ನಾನು ನಿಮಗೆ ಅನುಗ್ರಹಿಸಿದ ನನ್ನ ಅನುಗ್ರಹಗಳನ್ನು ಸ್ಮರಿಸಿರಿ ಮತ್ತು ನನ್ನ ಕರಾರನ್ನು ನೆರವೇರಿಸಿರಿ. ನಿಮ್ಮ ಕರಾರನ್ನು ನಾನೂ ನೆರವೇರಿಸುವೆನು. ನೀವು ನನ್ನನ್ನು ಮಾತ್ರ ಭಯಪಡಿರಿ.

2:41

وَءَامِنُواْ بِمَآ أَنزَلۡتُ مُصَدِّقٗا لِّمَا مَعَكُمۡ وَلَا تَكُونُوٓاْ أَوَّلَ كَافِرِۭ بِهِۦۖ وَلَا تَشۡتَرُواْ بِـَٔايَٰتِي ثَمَنٗا قَلِيلٗا وَإِيَّـٰيَ فَٱتَّقُونِ ﴿41﴾

Transliteration: Waaminoo bima anzaltu musaddiqan lima maAAakum wala takoonoo awwala kafirin bihi wala tashtaroo biayatee thamanan qaleelan waiyyaya faittaqooni

Translation: ನಿಮ್ಮ ಬಳಿಯಿರುವ (ಗ್ರಂಥವನ್ನು) ದೃಢೀಕರಿಸುತ್ತಾ ನಾನು ಅವತೀರ್ಣಗೊಳಿಸಿದ (ಕುರ್‌ಆನ್‌ನಲ್ಲಿ) ವಿಶ್ವಾಸವಿಡಿ. ಅದನ್ನು ಮೊಟ್ಟಮೊದಲು ನಿಷೇಧಿಸುವವರು ನೀವಾಗಬೇಡಿ. ನನ್ನ ವಚನಗಳನ್ನು ಅಲ್ಪ ಬೆಲೆಗೆ ಮಾರಾಟ ಮಾಡಬೇಡಿ. ನನ್ನನ್ನು ಮಾತ್ರ ಭಯಪಡಿರಿ.

2:42

وَلَا تَلۡبِسُواْ ٱلۡحَقَّ بِٱلۡبَٰطِلِ وَتَكۡتُمُواْ ٱلۡحَقَّ وَأَنتُمۡ تَعۡلَمُونَ ﴿42﴾

Transliteration: Wala talbisoo alhaqqa bialbatili wataktumoo alhaqqa waantum taAAlamoona

Translation: ಸತ್ಯವನ್ನು ಮಿಥ್ಯದೊಂದಿಗೆ ಬೆರೆಸಬೇಡಿ. ತಿಳಿದವರಾಗಿದ್ದೂ ಸಹ ಸತ್ಯವನ್ನು ಮುಚ್ಚಿಡಬೇಡಿ.

2:43

وَأَقِيمُواْ ٱلصَّلَوٰةَ وَءَاتُواْ ٱلزَّكَوٰةَ وَٱرۡكَعُواْ مَعَ ٱلرَّـٰكِعِينَ ﴿43﴾

Transliteration: Waaqeemoo alssalata waatoo alzzakata wairkaAAoo maAAa alrrakiAAeena

Translation: ನಮಾಝ್ ಸಂಸ್ಥಾಪಿಸಿರಿ ಮತ್ತು ಝಕಾತ್ ನೀಡಿರಿ; (ವಿಧೇಯತೆಯಿಂದ) ತಲೆಬಾಗುವವರೊಡನೆ ನೀವೂ ತಲೆಬಾಗಿರಿ.

2:44

أَتَأۡمُرُونَ ٱلنَّاسَ بِٱلۡبِرِّ وَتَنسَوۡنَ أَنفُسَكُمۡ وَأَنتُمۡ تَتۡلُونَ ٱلۡكِتَٰبَۚ أَفَلَا تَعۡقِلُونَ ﴿44﴾

Transliteration: Atamuroona alnnasa bialbirri watansawna anfusakum waantum tatloona alkitaba afala taAAqiloona

Translation: ನೀವು ಜನರಿಗೆ ಒಳಿತನ್ನು ಆದೇಶಿಸುತ್ತಾ ನಿಮ್ಮನ್ನು ನೀವೇ ಮರೆತು ಬಿಡುತ್ತೀರಾ? ನೀವಾದರೋ ಗ್ರಂಥವನ್ನು ಪಠಿಸುತ್ತಿದ್ದೀರಿ! ನೀವು ಆಲೋಚಿಸುವುದಿಲ್ಲವೇ?

2:45

وَٱسۡتَعِينُواْ بِٱلصَّبۡرِ وَٱلصَّلَوٰةِۚ وَإِنَّهَا لَكَبِيرَةٌ إِلَّا عَلَى ٱلۡخَٰشِعِينَ ﴿45﴾

Transliteration: WaistaAAeenoo bialssabri waalssalati wainnaha lakabeeratun illa AAala alkhashiAAeena

Translation: ತಾಳ್ಮೆ ಮತ್ತು ನಮಾಝಿನ ಮೂಲಕ ಸಹಾಯವನ್ನು ಬೇಡಿರಿ. ವಿನಮ್ರತೆಯಿಲ್ಲದವರಿಗೆ ಖಂಡಿತವಾಗಿಯೂ ಅದು ಬಹಳ ಕಷ್ಟವಾಗಿದೆ.

2:46

ٱلَّذِينَ يَظُنُّونَ أَنَّهُم مُّلَٰقُواْ رَبِّهِمۡ وَأَنَّهُمۡ إِلَيۡهِ رَٰجِعُونَ ﴿46﴾

Transliteration: Allatheena yathunnoona annahum mulaqoo rabbihim waannahum ilayhi rajiAAoona

Translation: ಅವರು (ವಿನಮ್ರತೆಯುಳ್ಳವರು) ಯಾರೆಂದರೆ, ತಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಖಂಡಿತವಾಗಿಯೂ ಭೇಟಿಯಾಗಲಿದ್ದೇವೆ ಮತ್ತು ಅವನ ಬಳಿಗೇ ಮರಳಲಿದ್ದೇವೆ ಎಂದು ದೃಢವಾಗಿ ನಂಬುವವರು.

2:47

يَٰبَنِيٓ إِسۡرَـٰٓءِيلَ ٱذۡكُرُواْ نِعۡمَتِيَ ٱلَّتِيٓ أَنۡعَمۡتُ عَلَيۡكُمۡ وَأَنِّي فَضَّلۡتُكُمۡ عَلَى ٱلۡعَٰلَمِينَ ﴿47﴾

Transliteration: Ya banee israeela othkuroo niAAmatiya allatee anAAamtu AAalaykum waannee faddaltukum AAala alAAalameena

Translation: ಓ ಇಸ್ರಾಯೇಲ್ ಮಕ್ಕಳೇ! ನಾನು ನಿಮಗೆ ಅನುಗ್ರಹಿಸಿದ ನನ್ನ ಅನುಗ್ರಹವನ್ನು, ಮತ್ತು ನಾನು ನಿಮ್ಮನ್ನು ಸರ್ವಲೋಕದವರಿಗಿಂತ (ಎಲ್ಲಾ ಮನುಷ್ಯರಿಗಿಂತ) ಶ್ರೇಷ್ಠಗೊಳಿಸಿದ್ದನ್ನು ಸ್ಮರಿಸಿರಿ.

2:48

وَٱتَّقُواْ يَوۡمٗا لَّا تَجۡزِي نَفۡسٌ عَن نَّفۡسٖ شَيۡـٔٗا وَلَا يُقۡبَلُ مِنۡهَا شَفَٰعَةٞ وَلَا يُؤۡخَذُ مِنۡهَا عَدۡلٞ وَلَا هُمۡ يُنصَرُونَ ﴿48﴾

Transliteration: Waittaqoo yawman la tajzee nafsun AAan nafsin shayan wala yuqbalu minha shafaAAatun wala yukhathu minha AAadlun wala hum yunsaroona

Translation: ಒಬ್ಬ ವ್ಯಕ್ತಿ ಇನ್ನೊಬ್ಬ ವ್ಯಕ್ತಿಗೆ ಯಾವುದೇ ಉಪಕಾರ ಮಾಡದ, ಅವನಿಂದ ಯಾವುದೇ ಶಿಫಾರಸು ಸ್ವೀಕರಿಸದ, ಅವನಿಂದ ಯಾವುದೇ ಪರಿಹಾರವನ್ನು ಪಡೆಯದ ಮತ್ತು ಅವರಿಗೆ ಯಾವುದೇ ಸಹಾಯವು ದೊರೆಯದ ಒಂದು ದಿನವನ್ನು (ಪುನರುತ್ಥಾನ ದಿನವನ್ನು) ಭಯಪಡಿರಿ.

2:49

وَإِذۡ نَجَّيۡنَٰكُم مِّنۡ ءَالِ فِرۡعَوۡنَ يَسُومُونَكُمۡ سُوٓءَ ٱلۡعَذَابِ يُذَبِّحُونَ أَبۡنَآءَكُمۡ وَيَسۡتَحۡيُونَ نِسَآءَكُمۡۚ وَفِي ذَٰلِكُم بَلَآءٞ مِّن رَّبِّكُمۡ عَظِيمٞ ﴿49﴾

Transliteration: Waith najjaynakum min ali firAAawna yasoomoonakum sooa alAAathabi yuthabbihoona abnaakum wayastahyoona nisaakum wafee thalikum balaon min rabbikum AAatheemun

Translation: ನಾವು ನಿಮ್ಮನ್ನು ಫರೋಹನ ಜನರಿಂದ ರಕ್ಷಿಸಿದ ಸಂದರ್ಭ(ವನ್ನು ಸ್ಮರಿಸಿ). ಅವರು ನಿಮಗೆ ಕಠೋರ ಹಿಂಸೆ ನೀಡುತ್ತಿದ್ದರು; ನಿಮ್ಮ ಗಂಡು ಮಕ್ಕಳ ಕತ್ತು ಕೊಯ್ಯುತ್ತಿದ್ದರು ಮತ್ತು ನಿಮ್ಮ ಹೆಣ್ಣು ಮಕ್ಕಳನ್ನು ಜೀವಂತ ಉಳಿಸುತ್ತಿದ್ದರು. ಅದರಲ್ಲಿ (ನಿಮ್ಮನ್ನು ರಕ್ಷಿಸಿದ್ದರಲ್ಲಿ) ನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಯ ಮಹಾ ಪರೀಕ್ಷೆಯಿತ್ತು.

2:50

وَإِذۡ فَرَقۡنَا بِكُمُ ٱلۡبَحۡرَ فَأَنجَيۡنَٰكُمۡ وَأَغۡرَقۡنَآ ءَالَ فِرۡعَوۡنَ وَأَنتُمۡ تَنظُرُونَ ﴿50﴾

Transliteration: Waith faraqna bikumu albahra faanjaynakum waaghraqna ala firAAawna waantum tanthuroona

Translation: ನಾವು ಕಡಲನ್ನು ಸೀಳಿ ನಿಮ್ಮನ್ನು ರಕ್ಷಿಸಿದ, ಮತ್ತು ನೀವು ನೋಡುತ್ತಿದ್ದಂತೆಯೇ ಫರೋಹನ ಜನರನ್ನು ಮುಳುಗಿಸಿದ ಸಂದರ್ಭ(ವನ್ನು ಸ್ಮರಿಸಿ).

2:51

وَإِذۡ وَٰعَدۡنَا مُوسَىٰٓ أَرۡبَعِينَ لَيۡلَةٗ ثُمَّ ٱتَّخَذۡتُمُ ٱلۡعِجۡلَ مِنۢ بَعۡدِهِۦ وَأَنتُمۡ ظَٰلِمُونَ ﴿51﴾

Transliteration: Waith waAAadna moosa arbaAAeena laylatan thumma ittakhathtumu alAAijla min baAAdihi waantum thalimoona

Translation: ನಾವು ಮೂಸಾರಿಗೆ ನಲ್ವತ್ತು ರಾತ್ರಿಗಳನ್ನು ವಾಗ್ದಾನ ಮಾಡಿದ ಸಂದರ್ಭ. ನಂತರ, ಅವರ (ನಿರ್ಗಮನದ) ಬಳಿಕ ನೀವು ಕರುವನ್ನು ದೇವರಾಗಿ ಮಾಡಿಕೊಂಡಿರಿ ಮತ್ತು ಅಕ್ರಮಿಗಳಾಗಿ ಬಿಟ್ಟಿರಿ.[1]

2:52

ثُمَّ عَفَوۡنَا عَنكُم مِّنۢ بَعۡدِ ذَٰلِكَ لَعَلَّكُمۡ تَشۡكُرُونَ ﴿52﴾

Transliteration: Thumma AAafawna AAankum min baAAdi thalika laAAallakum tashkuroona

Translation: ನಂತರ ಅದರ ಬಳಿಕವೂ ನಾವು ನಿಮ್ಮನ್ನು ಕ್ಷಮಿಸಿದೆವು; ನೀವು ಕೃತಜ್ಞರಾಗುವಿರಿ ಎಂದು.

2:53

وَإِذۡ ءَاتَيۡنَا مُوسَى ٱلۡكِتَٰبَ وَٱلۡفُرۡقَانَ لَعَلَّكُمۡ تَهۡتَدُونَ ﴿53﴾

Transliteration: Waith atayna moosa alkitaba waalfurqana laAAallakum tahtadoona

Translation: ನಾವು ಮೂಸಾರಿಗೆ ಗ್ರಂಥವನ್ನು ಹಾಗೂ ಸತ್ಯಾಸತ್ಯ ವಿವೇಚಕವನ್ನು ನೀಡಿದ ಸಂದರ್ಭ. ನೀವು ಸನ್ಮಾರ್ಗ ಪಡೆಯುವುದಕ್ಕಾಗಿ.

2:54

وَإِذۡ قَالَ مُوسَىٰ لِقَوۡمِهِۦ يَٰقَوۡمِ إِنَّكُمۡ ظَلَمۡتُمۡ أَنفُسَكُم بِٱتِّخَاذِكُمُ ٱلۡعِجۡلَ فَتُوبُوٓاْ إِلَىٰ بَارِئِكُمۡ فَٱقۡتُلُوٓاْ أَنفُسَكُمۡ ذَٰلِكُمۡ خَيۡرٞ لَّكُمۡ عِندَ بَارِئِكُمۡ فَتَابَ عَلَيۡكُمۡۚ إِنَّهُۥ هُوَ ٱلتَّوَّابُ ٱلرَّحِيمُ ﴿54﴾

Transliteration: Waith qala moosa liqawmihi ya qawmi innakum thalamtum anfusakum biittikhathikumu alAAijla fatooboo ila bariikum faoqtuloo anfusakum thalikum khayrun lakum AAinda bariikum fataba AAalaykum innahu huwa alttawwabu alrraheemu

Translation: ಮೂಸಾ ತಮ್ಮ ಜನರೊಡನೆ ಹೇಳಿದ ಸಂದರ್ಭ: “ನನ್ನ ಜನರೇ! ಕರುವನ್ನು ದೇವರಾಗಿ ಮಾಡಿಕೊಳ್ಳುವ ಮೂಲಕ ನಿಶ್ಚಯವಾಗಿಯೂ ನೀವು ನಿಮ್ಮ ಮೇಲೆಯೇ ಅಕ್ರಮವೆಸಗಿದ್ದೀರಿ. ಆದ್ದರಿಂದ, ನೀವು ಪಶ್ಚಾತ್ತಾಪಪಟ್ಟು ನಿಮ್ಮ ಸೃಷ್ಟಿಕರ್ತನ ಕಡೆಗೆ ಮರಳಿರಿ; ನಿಮ್ಮನ್ನು ನೀವೇ ಕೊಲ್ಲಿರಿ.[1] ನಿಮ್ಮ ಸೃಷ್ಟಿಕರ್ತನ ದೃಷ್ಟಿಯಲ್ಲಿ ಅದೇ ನಿಮಗೆ ಶ್ರೇಷ್ಠವಾಗಿದೆ.” ಆಗ ಅಲ್ಲಾಹು ನಿಮ್ಮ ಪಶ್ಚಾತ್ತಾಪವನ್ನು ಸ್ವೀಕರಿಸಿದನು. ನಿಶ್ಚಯವಾಗಿಯೂ ಅವನು ಪಶ್ಚಾತ್ತಾಪ ಸ್ವೀಕರಿಸುವವನು ಮತ್ತು ಕರುಣೆ ತೋರುವವನಾಗಿದ್ದಾನೆ.

2:55

وَإِذۡ قُلۡتُمۡ يَٰمُوسَىٰ لَن نُّؤۡمِنَ لَكَ حَتَّىٰ نَرَى ٱللَّهَ جَهۡرَةٗ فَأَخَذَتۡكُمُ ٱلصَّـٰعِقَةُ وَأَنتُمۡ تَنظُرُونَ ﴿55﴾

Transliteration: Waith qultum ya moosa lan numina laka hatta nara Allaha jahratan faakhathatkumu alssaAAiqatu waantum tanthuroona

Translation: “ಓ ಮೂಸಾ! ಅಲ್ಲಾಹನನ್ನು ನೇರವಾಗಿ ನೋಡುವ ತನಕ ನಾವು ನಿಮ್ಮಲ್ಲಿ ವಿಶ್ವಾಸವಿಡುವುದೇ ಇಲ್ಲ” ಎಂದು ನೀವು ಹೇಳಿದ ಸಂದರ್ಭ(ವನ್ನು ಸ್ಮರಿಸಿ). ಆಗ ನೀವು ನೋಡುತ್ತಿದ್ದಂತೆಯೇ ಮಿಂಚು ನಿಮ್ಮ ಮೇಲೆರಗಿ ಬಿಟ್ಟಿತು.

2:56

ثُمَّ بَعَثۡنَٰكُم مِّنۢ بَعۡدِ مَوۡتِكُمۡ لَعَلَّكُمۡ تَشۡكُرُونَ ﴿56﴾

Transliteration: Thumma baAAathnakum min baAAdi mawtikum laAAallakum tashkuroona

Translation: ನಂತರ, ನಿಮ್ಮ ಸಾವಿನ ಬಳಿಕ ನಾವು ನಿಮಗೆ ಜೀವ ನೀಡಿದೆವು. ನೀವು ಕೃತಜ್ಞರಾಗುವುದಕ್ಕಾಗಿ.[1]

2:57

وَظَلَّلۡنَا عَلَيۡكُمُ ٱلۡغَمَامَ وَأَنزَلۡنَا عَلَيۡكُمُ ٱلۡمَنَّ وَٱلسَّلۡوَىٰۖ كُلُواْ مِن طَيِّبَٰتِ مَا رَزَقۡنَٰكُمۡۚ وَمَا ظَلَمُونَا وَلَٰكِن كَانُوٓاْ أَنفُسَهُمۡ يَظۡلِمُونَ ﴿57﴾

Transliteration: Wathallalna AAalaykumu alghamama waanzalna AAalaykumu almanna waalssalwa kuloo min tayyibati ma razaqnakum wama thalamoona walakin kanoo anfusahum yathlimoona

Translation: ನಾವು ನಿಮಗೆ ಮೋಡದ ನೆರಳನ್ನು ನೀಡಿದೆವು ಮತ್ತು ಮನ್ನ ಹಾಗೂ ಸಲ್ವಾವನ್ನು ಇಳಿಸಿಕೊಟ್ಟೆವು.[1] (ನಾವು ಹೇಳಿದೆವು): “ನಾವು ನಿಮಗೆ ಒದಗಿಸಿದ ಶುದ್ಧ ವಸ್ತುಗಳಿಂದ ತಿನ್ನಿರಿ.” ಅವರು ನಮಗೆ ಅನ್ಯಾಯ ಮಾಡಲಿಲ್ಲ; ಬದಲಿಗೆ, ಅವರು ಅವರಿಗೇ ಅನ್ಯಾಯ ಮಾಡುತ್ತಿದ್ದರು.

2:58

وَإِذۡ قُلۡنَا ٱدۡخُلُواْ هَٰذِهِ ٱلۡقَرۡيَةَ فَكُلُواْ مِنۡهَا حَيۡثُ شِئۡتُمۡ رَغَدٗا وَٱدۡخُلُواْ ٱلۡبَابَ سُجَّدٗا وَقُولُواْ حِطَّةٞ نَّغۡفِرۡ لَكُمۡ خَطَٰيَٰكُمۡۚ وَسَنَزِيدُ ٱلۡمُحۡسِنِينَ ﴿58﴾

Transliteration: Waith qulna odkhuloo hathihi alqaryata fakuloo minha haythu shitum raghadan waodkhuloo albaba sujjadan waqooloo hittatun naghfir lakum khatayakum wasanazeedu almuhsineena

Translation: ನಾವು ಹೇಳಿದ ಸಂದರ್ಭ(ವನ್ನು ಸ್ಮರಿಸಿ): “ಈ ಊರನ್ನು ಪ್ರವೇಶಿಸಿರಿ.[1] ಇಲ್ಲಿ ನೀವು ಇಚ್ಛಿಸುವ ಎಲ್ಲಾ ಕಡೆಗಳಿಂದ ಯಥೇಷ್ಟವಾಗಿ ತಿನ್ನಿರಿ. ಸಾಷ್ಟಾಂಗ ಮಾಡುತ್ತಾ[2] ದ್ವಾರವನ್ನು ಪ್ರವೇಶಿಸಿರಿ ಮತ್ತು ‘ಹಿತ್ತ’[3] ಎಂದು ಹೇಳಿರಿ. ನಾವು ನಿಮ್ಮ ಪಾಪಗಳನ್ನು ಕ್ಷಮಿಸುವೆವು ಮತ್ತು ಸತ್ಕರ್ಮವೆಸಗುವವರಿಗೆ ಪ್ರತಿಫಲವನ್ನು ಹೆಚ್ಚಿಸುವೆವು.”

2:59

فَبَدَّلَ ٱلَّذِينَ ظَلَمُواْ قَوۡلًا غَيۡرَ ٱلَّذِي قِيلَ لَهُمۡ فَأَنزَلۡنَا عَلَى ٱلَّذِينَ ظَلَمُواْ رِجۡزٗا مِّنَ ٱلسَّمَآءِ بِمَا كَانُواْ يَفۡسُقُونَ ﴿59﴾

Transliteration: Fabaddala allatheena thalamoo qawlan ghayra allathee qeela lahum faanzalna AAala allatheena thalamoo rijzan mina alssamai bima kanoo yafsuqoona

Translation: ಆದರೆ ಆ ಅಕ್ರಮಿಗಳು ಅವರಿಗೆ ಹೇಳಲಾದ ಮಾತನ್ನು ಬದಲಾಯಿಸಿದರು.[1] ಆದ್ದರಿಂದ, ನಾವು ಆ ಅಕ್ರಮಿಗಳ ಮೇಲೆ—ಅವರು ಮಾಡುತ್ತಿದ್ದ ದುಷ್ಕರ್ಮಗಳ ನಿಮಿತ್ತ—ಆಕಾಶದಿಂದ ಶಿಕ್ಷೆಯನ್ನು ಇಳಿಸಿದೆವು.

2:60

وَإِذِ ٱسۡتَسۡقَىٰ مُوسَىٰ لِقَوۡمِهِۦ فَقُلۡنَا ٱضۡرِب بِّعَصَاكَ ٱلۡحَجَرَۖ فَٱنفَجَرَتۡ مِنۡهُ ٱثۡنَتَا عَشۡرَةَ عَيۡنٗاۖ قَدۡ عَلِمَ كُلُّ أُنَاسٖ مَّشۡرَبَهُمۡۖ كُلُواْ وَٱشۡرَبُواْ مِن رِّزۡقِ ٱللَّهِ وَلَا تَعۡثَوۡاْ فِي ٱلۡأَرۡضِ مُفۡسِدِينَ ﴿60﴾

Transliteration: Waithi istasqa moosa liqawmihi faqulna idrib biAAasaka alhajara fainfajarat minhu ithnata AAashrata AAaynan qad AAalima kullu onasin mashrabahum kuloo waishraboo min rizqi Allahi wala taAAthaw fee alardi mufsideena

Translation: ಮೂಸಾ ತಮ್ಮ ಜನರಿಗಾಗಿ ನೀರನ್ನು ಬೇಡಿದ ಸಂದರ್ಭ. ನಾವು ಹೇಳಿದೆವು: “ನಿಮ್ಮ ಕೈಯಲ್ಲಿರುವ ಕೋಲಿನಿಂದ ಆ ಬಂಡೆಯ ಮೇಲೆ ಹೊಡೆಯಿರಿ.” ಆಗ ಅದರಿಂದ ಹನ್ನೆರಡು ಚಿಲುಮೆಗಳು ಚಿಮ್ಮಿ ಹರಿದವು.[1] ಎಲ್ಲಾ ಜನರೂ (ಗೋತ್ರಗಳೂ) ತಮ್ಮ ನೀರಿನ ಸ್ಥಳವನ್ನು ತಿಳಿದುಕೊಂಡರು. (ನಾವು ಹೇಳಿದೆವು): “ಅಲ್ಲಾಹು ಒದಗಿಸಿದ ಆಹಾರದಿಂದ ತಿನ್ನಿರಿ ಮತ್ತು ಕುಡಿಯಿರಿ; ಭೂಮಿಯಲ್ಲಿ ಕಿಡಿಗೇಡಿತನ ಮಾಡುತ್ತಾ ಅಲೆಯಬೇಡಿ."

2:61

وَإِذۡ قُلۡتُمۡ يَٰمُوسَىٰ لَن نَّصۡبِرَ عَلَىٰ طَعَامٖ وَٰحِدٖ فَٱدۡعُ لَنَا رَبَّكَ يُخۡرِجۡ لَنَا مِمَّا تُنۢبِتُ ٱلۡأَرۡضُ مِنۢ بَقۡلِهَا وَقِثَّآئِهَا وَفُومِهَا وَعَدَسِهَا وَبَصَلِهَاۖ قَالَ أَتَسۡتَبۡدِلُونَ ٱلَّذِي هُوَ أَدۡنَىٰ بِٱلَّذِي هُوَ خَيۡرٌۚ ٱهۡبِطُواْ مِصۡرٗا فَإِنَّ لَكُم مَّا سَأَلۡتُمۡۗ وَضُرِبَتۡ عَلَيۡهِمُ ٱلذِّلَّةُ وَٱلۡمَسۡكَنَةُ وَبَآءُو بِغَضَبٖ مِّنَ ٱللَّهِۚ ذَٰلِكَ بِأَنَّهُمۡ كَانُواْ يَكۡفُرُونَ بِـَٔايَٰتِ ٱللَّهِ وَيَقۡتُلُونَ ٱلنَّبِيِّـۧنَ بِغَيۡرِ ٱلۡحَقِّۚ ذَٰلِكَ بِمَا عَصَواْ وَّكَانُواْ يَعۡتَدُونَ ﴿61﴾

Transliteration: Waith qultum ya moosa lan nasbira AAala taAAamin wahidin faodAAu lana rabbaka yukhrij lana mimma tunbitu alardu min baqliha waqiththaiha wafoomiha waAAadasiha wabasaliha qala atastabdiloona allathee huwa adna biallathee huwa khayrun ihbitoo misran fainna lakum ma saaltum waduribat AAalayhimu alththillatu waalmaskanatu wabaoo bighadabin mina Allahi thalika biannahum kanoo yakfuroona biayati Allahi wayaqtuloona alnnabiyyeena bighayri alhaqqi thalika bima AAasaw wakanoo yaAAtadoona

Translation: ನೀವು ಹೇಳಿದ ಸಂದರ್ಭ(ವನ್ನು ಸ್ಮರಿಸಿ): “ಓ ಮೂಸಾ! ಒಂದೇ ರೀತಿಯ ಆಹಾರವನ್ನು ಸಹಿಸಿಕೊಂಡಿರಲು ನಮಗೆ ಸಾಧ್ಯವೇ ಇಲ್ಲ. ಆದ್ದರಿಂದ ನೀವು ನಿಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಕರೆದು ಪ್ರಾರ್ಥಿಸಿರಿ. ಅವನು ನಮಗೆ ಭೂಮಿಯಲ್ಲಿ ಬೆಳೆಯುವ ಸೊಪ್ಪು, ಸೌತೆ, ಗೋಧಿ, ಮಸೂರ ಮತ್ತು ಈರುಳ್ಳಿಯನ್ನು ಉತ್ಪಾದಿಸಿಕೊಡಲಿ.” ಮೂಸಾ ಹೇಳಿದರು: “ಅತ್ಯುತ್ತಮ ವಸ್ತುವನ್ನು ಬಿಟ್ಟು ಕಳಪೆ ವಸ್ತುವನ್ನು ಏಕೆ ಕೇಳುತ್ತೀರಿ? ನೀವು ಯಾವುದಾದರೂ ನಗರಕ್ಕೆ ಹೋಗಿರಿ. ಅಲ್ಲಿ ನೀವು ಕೇಳಿದ್ದೆಲ್ಲವೂ ನಿಮಗೆ ಸಿಗುವುದು.” (ಅವರ ದರ್ಪದಿಂದಾಗಿ) ಅವರ ಮೇಲೆ ಅಪಮಾನ ಹಾಗೂ ಬಡತನವನ್ನು ಹೊದಿಸಲಾಯಿತು; ಅವರು ಅಲ್ಲಾಹನ ಕೋಪದೊಂದಿಗೆ ಮರಳಿದರು. ಅದೇಕೆಂದರೆ, ಅವರು ಅಲ್ಲಾಹನ ವಚನಗಳನ್ನು ನಿಷೇಧಿಸುತ್ತಿದ್ದರು ಮತ್ತು ಪ್ರವಾದಿಗಳನ್ನು ಅನ್ಯಾಯವಾಗಿ ಕೊಲ್ಲುತ್ತಿದ್ದರು. ಅದು ಅವರ ಅವಿಧೇಯತೆ ಮತ್ತು ಅತಿರೇಕದ ಫಲಿತಾಂಶವಾಗಿತ್ತು.

2:62

إِنَّ ٱلَّذِينَ ءَامَنُواْ وَٱلَّذِينَ هَادُواْ وَٱلنَّصَٰرَىٰ وَٱلصَّـٰبِـِٔينَ مَنۡ ءَامَنَ بِٱللَّهِ وَٱلۡيَوۡمِ ٱلۡأٓخِرِ وَعَمِلَ صَٰلِحٗا فَلَهُمۡ أَجۡرُهُمۡ عِندَ رَبِّهِمۡ وَلَا خَوۡفٌ عَلَيۡهِمۡ وَلَا هُمۡ يَحۡزَنُونَ ﴿62﴾

Transliteration: Inna allatheena amanoo waallatheena hadoo waalnnasara waalssabieena man amana biAllahi waalyawmi alakhiri waAAamila salihan falahum ajruhum AAinda rabbihim wala khawfun AAalayhim wala hum yahzanoona

Translation: ನಿಶ್ಚಯವಾಗಿಯೂ ಸತ್ಯವಿಶ್ವಾಸಿಗಳು, ಯಹೂದಿಗಳು, ಕ್ರೈಸ್ತರು ಅಥವಾ ಸಾಬಿಗಳು—ಇವರ ಪೈಕಿ ಅಲ್ಲಾಹನಲ್ಲಿ ಮತ್ತು ಅಂತ್ಯದಿನದಲ್ಲಿ ವಿಶ್ವಾಸವಿಟ್ಟವರು ಹಾಗೂ ಸತ್ಕರ್ಮವೆಸಗಿದವರು ಯಾರೋ, ಅವರಿಗೆ ಅವರ ಪ್ರತಿಫಲವು ಅವರ ಪರಿಪಾಲಕನ (ಅಲ್ಲಾಹನ) ಬಳಿಯಿದೆ. ಅವರಿಗೆ ಯಾವುದೇ ಭಯವಿಲ್ಲ; ಅವರು ದುಃಖಿಸುವುದೂ ಇಲ್ಲ.[1]

2:63

وَإِذۡ أَخَذۡنَا مِيثَٰقَكُمۡ وَرَفَعۡنَا فَوۡقَكُمُ ٱلطُّورَ خُذُواْ مَآ ءَاتَيۡنَٰكُم بِقُوَّةٖ وَٱذۡكُرُواْ مَا فِيهِ لَعَلَّكُمۡ تَتَّقُونَ ﴿63﴾

Transliteration: Waith akhathna meethaqakum warafaAAna fawqakumu alttoora khuthoo ma ataynakum biquwwatin waothkuroo ma feehi laAAallakum tattaqoona

Translation: ನಾವು ನಿಮ್ಮಿಂದ ಕರಾರನ್ನು ಪಡೆದುಕೊಂಡ ಮತ್ತು ನಿಮ್ಮ ಮೇಲೆ ತೂರ್ ಪರ್ವತವನ್ನು ಎತ್ತಿಹಿಡಿದ ಸಂದರ್ಭ. (ನಾವು ಹೇಳಿದೆವು): “ನಾವು ನಿಮಗೆ ನೀಡಿದ್ದನ್ನು ಬಿಗಿಯಾಗಿ ಹಿಡಿಯಿರಿ ಮತ್ತು ಅದರಲ್ಲಿರುವುದನ್ನು ನೆನಪಿಟ್ಟುಕೊಳ್ಳಿರಿ; ನೀವು ದೇವಭಯವುಳ್ಳವರಾಗುವುದಕ್ಕಾಗಿ.”

2:64

ثُمَّ تَوَلَّيۡتُم مِّنۢ بَعۡدِ ذَٰلِكَۖ فَلَوۡلَا فَضۡلُ ٱللَّهِ عَلَيۡكُمۡ وَرَحۡمَتُهُۥ لَكُنتُم مِّنَ ٱلۡخَٰسِرِينَ ﴿64﴾

Transliteration: Thumma tawallaytum min baAAdi thalika falawla fadlu Allahi AAalaykum warahmatuhu lakuntum mina alkhasireena

Translation: ನಂತರ, ಅದರ ಬಳಿಕವೂ ನೀವು ವಿಮುಖರಾದಿರಿ. ನಿಮ್ಮ ಮೇಲೆ ಅಲ್ಲಾಹನ ಔದಾರ್ಯ ಮತ್ತು ದಯೆಯಿಲ್ಲದಿರುತ್ತಿದ್ದರೆ, ನೀವು ನಷ್ಟ ಹೊಂದಿದವರಲ್ಲಿ ಸೇರುತ್ತಿದ್ದಿರಿ.

2:65

وَلَقَدۡ عَلِمۡتُمُ ٱلَّذِينَ ٱعۡتَدَوۡاْ مِنكُمۡ فِي ٱلسَّبۡتِ فَقُلۡنَا لَهُمۡ كُونُواْ قِرَدَةً خَٰسِـِٔينَ ﴿65﴾

Transliteration: Walaqad AAalimtumu allatheena iAAtadaw minkum fee alssabti faqulna lahum koonoo qiradatan khasieena

Translation: ನಿಮ್ಮ ಪೈಕಿ ಸಬ್ಬತ್‌ನ[1] ವಿಷಯದಲ್ಲಿ ಅತಿರೇಕವೆಸಗಿದವರ ಬಗ್ಗೆ ನಿಮಗೆ ಈಗಾಗಲೇ ತಿಳಿದಿದೆ. ನಾವು ಅವರೊಡನೆ ಹೇಳಿದೆವು: “ನೀವು ಹೊಲಸು ಕಪಿಗಳಾಗಿ ಬಿಡಿ.”

2:66

فَجَعَلۡنَٰهَا نَكَٰلٗا لِّمَا بَيۡنَ يَدَيۡهَا وَمَا خَلۡفَهَا وَمَوۡعِظَةٗ لِّلۡمُتَّقِينَ ﴿66﴾

Transliteration: FajaAAalnaha nakalan lima bayna yadayha wama khalfaha wamawAAithatan lilmuttaqeena

Translation: ನಾವು ಅದನ್ನು ಆ ಕಾಲದವರಿಗೂ, ಅದರ ನಂತರದವರಿಗೂ ಒಂದು ನೀತಿಪಾಠ ಮತ್ತು ದೇವಭಯವುಳ್ಳವರಿಗೆ ಉಪದೇಶವೆಂಬಂತೆ ಮಾಡಿದೆವು.

2:67

وَإِذۡ قَالَ مُوسَىٰ لِقَوۡمِهِۦٓ إِنَّ ٱللَّهَ يَأۡمُرُكُمۡ أَن تَذۡبَحُواْ بَقَرَةٗۖ قَالُوٓاْ أَتَتَّخِذُنَا هُزُوٗاۖ قَالَ أَعُوذُ بِٱللَّهِ أَنۡ أَكُونَ مِنَ ٱلۡجَٰهِلِينَ ﴿67﴾

Transliteration: Waith qala moosa liqawmihi inna Allaha yamurukum an tathbahoo baqaratan qaloo atattakhithuna huzuwan qala aAAoothu biAllahi an akoona mina aljahileena

Translation: ಮೂಸಾ ತಮ್ಮ ಜನರೊಡನೆ ಹೇಳಿದ ಸಂದರ್ಭ: “ಅಲ್ಲಾಹು ನಿಮ್ಮೊಡನೆ ಒಂದು ಹಸುವನ್ನು ಕೊಯ್ಯಲು ಆದೇಶಿಸುತ್ತಿದ್ದಾನೆ.”[1] ಅವರು ಕೇಳಿದರು: “ಏನು ನೀವು ನಮ್ಮನ್ನು ಅಣಕಿಸುತ್ತಿದ್ದೀರಾ?” ಮೂಸಾ ಹೇಳಿದರು: “ಅವಿವೇಕಿಗಳಲ್ಲಿ ಸೇರದಂತೆ ನಾನು ಅಲ್ಲಾಹನಲ್ಲಿ ಅಭಯ ಕೋರುತ್ತೇನೆ.”

2:68

قَالُواْ ٱدۡعُ لَنَا رَبَّكَ يُبَيِّن لَّنَا مَا هِيَۚ قَالَ إِنَّهُۥ يَقُولُ إِنَّهَا بَقَرَةٞ لَّا فَارِضٞ وَلَا بِكۡرٌ عَوَانُۢ بَيۡنَ ذَٰلِكَۖ فَٱفۡعَلُواْ مَا تُؤۡمَرُونَ ﴿68﴾

Transliteration: Qaloo odAAu lana rabbaka yubayyin lana ma hiya qala innahu yaqoolu innaha baqaratun la faridun wala bikrun AAawanun bayna thalika faifAAaloo ma tumaroona

Translation: ಅವರು ಹೇಳಿದರು:”ನೀವು ನಿಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಕರೆದು ಪ್ರಾರ್ಥಿಸಿರಿ; ಅದು (ಹಸು) ಯಾವುದೆಂದು ಅವನು ನಮಗೆ ವಿವರಿಸಿಕೊಡಲಿ.” ಮೂಸಾ ಹೇಳಿದರು: “ಅದು ಮುದಿ ಪ್ರಾಯದ್ದೋ ಅಥವಾ ಎಳೆಯ ಪ್ರಾಯದ್ದೋ ಅಲ್ಲದ ಅದರ ನಡುವಿನ ಪ್ರಾಯದ ಹಸುವಾಗಿದೆಯೆಂದು ಅವನು ಹೇಳುತ್ತಿದ್ದಾನೆ. ಆದ್ದರಿಂದ ನಿಮಗೆ ಆದೇಶಿಸಲಾಗುವಂತೆ ಕಾರ್ಯೋನ್ಮುಖರಾಗಿರಿ.”

2:69

قَالُواْ ٱدۡعُ لَنَا رَبَّكَ يُبَيِّن لَّنَا مَا لَوۡنُهَاۚ قَالَ إِنَّهُۥ يَقُولُ إِنَّهَا بَقَرَةٞ صَفۡرَآءُ فَاقِعٞ لَّوۡنُهَا تَسُرُّ ٱلنَّـٰظِرِينَ ﴿69﴾

Transliteration: Qaloo odAAu lana rabbaka yubayyin lana ma lawnuha qala innahu yaqoolu innaha baqaratun safrao faqiAAun lawnuha tasurru alnnathireena

Translation: ಅವರು ಹೇಳಿದರು: “ನೀವು ನಿಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಕರೆದು ಪ್ರಾರ್ಥಿಸಿರಿ; ಅದರ ಬಣ್ಣ ಯಾವುದೆಂದು ಅವನು ನಮಗೆ ವಿವರಿಸಿಕೊಡಲಿ.” ಮೂಸಾ ಹೇಳಿದರು: “ಅದು ಶುಭ್ರ ಹಳದಿ ಬಣ್ಣದ ಹಸುವಾಗಿದ್ದು ನೋಡುಗರನ್ನು ಮುದಗೊಳಿಸುತ್ತದೆ ಎಂದು ಅವನು (ಅಲ್ಲಾಹು) ಹೇಳುತ್ತಿದ್ದಾನೆ.”

2:70

قَالُواْ ٱدۡعُ لَنَا رَبَّكَ يُبَيِّن لَّنَا مَا هِيَ إِنَّ ٱلۡبَقَرَ تَشَٰبَهَ عَلَيۡنَا وَإِنَّآ إِن شَآءَ ٱللَّهُ لَمُهۡتَدُونَ ﴿70﴾

Transliteration: Qaloo odAAu lana rabbaka yubayyin lana ma hiya inna albaqara tashabaha AAalayna wainna in shaa Allahu lamuhtadoona

Translation: ಅವರು ಹೇಳಿದರು: “ನೀವು ನಿಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಕರೆದು ಪ್ರಾರ್ಥಿಸಿರಿ; ಅದು (ಹಸು) ಯಾವುದೆಂದು ಅವನು ನಮಗೆ ವಿವರಿಸಿಕೊಡಲಿ. ನಿಶ್ಚಯವಾಗಿಯೂ ಹಸುಗಳು ನಮಗೆ ಒಂದೇ ರೀತಿಯಾಗಿ ಕಾಣುತ್ತಿವೆ.[1] ಅಲ್ಲಾಹು ಇಚ್ಛಿಸಿದರೆ ಖಂಡಿವಾಗಿಯೂ ನಾವು ಸನ್ಮಾರ್ಗವನ್ನು ಪಡೆಯುವೆವು.”

2:71

قَالَ إِنَّهُۥ يَقُولُ إِنَّهَا بَقَرَةٞ لَّا ذَلُولٞ تُثِيرُ ٱلۡأَرۡضَ وَلَا تَسۡقِي ٱلۡحَرۡثَ مُسَلَّمَةٞ لَّا شِيَةَ فِيهَاۚ قَالُواْ ٱلۡـَٰٔنَ جِئۡتَ بِٱلۡحَقِّۚ فَذَبَحُوهَا وَمَا كَادُواْ يَفۡعَلُونَ ﴿71﴾

Transliteration: Qala innahu yaqoolu innaha baqaratun la thaloolun tutheeru alarda wala tasqee alhartha musallamatun la shiyata feeha qaloo alana jita bialhaqqi fathabahooha wama kadoo yafAAaloona

Translation: ಮೂಸಾ ಹೇಳಿದರು: “ಅದು ಎಂತಹ ಹಸುವೆಂದರೆ, ಭೂಮಿಯನ್ನು ಉಳಲು ಅಥವಾ ನೀರನ್ನು ಹಾಯಿಸಲು ಅದನ್ನು ಪಳಗಿಸಲಾಗಿಲ್ಲ; ಅದಕ್ಕೆ ಯಾವುದೇ ನ್ಯೂನತೆಗಳಿಲ್ಲ; ಅದರಲ್ಲಿ ಯಾವುದೇ ಕಲೆಗಳೂ ಇಲ್ಲ ಎಂದು ಅಲ್ಲಾಹು ಹೇಳುತ್ತಿದ್ದಾನೆ.” ಅವರು ಹೇಳಿದರು: “ಈಗ ನೀವು ಸತ್ಯವನ್ನು ತಂದಿದ್ದೀರಿ.” ಹೀಗೆ ಅವರು ಅದನ್ನು ಕೊಯ್ದರು. ಆದರೆ ಅದನ್ನು ಮಾಡುವುದು ಅವರಿಗೆ ಅಷ್ಟು ಸುಲಭವಾಗಿರಲಿಲ್ಲ.[1]

2:72

وَإِذۡ قَتَلۡتُمۡ نَفۡسٗا فَٱدَّـٰرَ ٰٔتُمۡ فِيهَاۖ وَٱللَّهُ مُخۡرِجٞ مَّا كُنتُمۡ تَكۡتُمُونَ ﴿72﴾

Transliteration: Waith qataltum nafsan faiddaratum feeha waAllahu mukhrijun ma kuntum taktumoona

Translation: ನೀವು ಒಬ್ಬ ವ್ಯಕ್ತಿಯನ್ನು ಕೊಂದು, ನಂತರ ಪರಸ್ಪರ ದೋಷಾರೋಪ ಹೊರಿಸಿದ ಸಂದರ್ಭ. ನೀವು ಬಚ್ಚಿಡುವುದನ್ನು ಅಲ್ಲಾಹು ಹೊರಗೆ ತರುತ್ತಾನೆ.

2:73

فَقُلۡنَا ٱضۡرِبُوهُ بِبَعۡضِهَاۚ كَذَٰلِكَ يُحۡيِ ٱللَّهُ ٱلۡمَوۡتَىٰ وَيُرِيكُمۡ ءَايَٰتِهِۦ لَعَلَّكُمۡ تَعۡقِلُونَ ﴿73﴾

Transliteration: Faqulna idriboohu bibaAAdiha kathalika yuhyee Allahu almawta wayureekum ayatihi laAAallakum taAAqiloona

Translation: ನಾವು ಹೇಳಿದೆವು: “ಅದರ (ಹಸುವಿನ) ಒಂದು ಭಾಗದಿಂದ ಅವನಿಗೆ (ಅವನ ಕಳೇಬರಕ್ಕೆ) ಹೊಡೆಯಿರಿ. (ಆಗ ಅವನು ಜೀವಂತ ಎದ್ದು ನಿಲ್ಲುವನು).” ಈ ರೀತಿ ಅಲ್ಲಾಹು ಸತ್ತವರಿಗೆ ಜೀವ ನೀಡುತ್ತಾನೆ. ನೀವು ಆಲೋಚಿಸುವುದಕ್ಕಾಗಿ ಅವನು ಅವನ ದೃಷ್ಟಾಂತಗಳನ್ನು ನಿಮಗೆ ತೋರಿಸುತ್ತಾನೆ.

2:74

ثُمَّ قَسَتۡ قُلُوبُكُم مِّنۢ بَعۡدِ ذَٰلِكَ فَهِيَ كَٱلۡحِجَارَةِ أَوۡ أَشَدُّ قَسۡوَةٗۚ وَإِنَّ مِنَ ٱلۡحِجَارَةِ لَمَا يَتَفَجَّرُ مِنۡهُ ٱلۡأَنۡهَٰرُۚ وَإِنَّ مِنۡهَا لَمَا يَشَّقَّقُ فَيَخۡرُجُ مِنۡهُ ٱلۡمَآءُۚ وَإِنَّ مِنۡهَا لَمَا يَهۡبِطُ مِنۡ خَشۡيَةِ ٱللَّهِۗ وَمَا ٱللَّهُ بِغَٰفِلٍ عَمَّا تَعۡمَلُونَ ﴿74﴾

Transliteration: Thumma qasat quloobukum min baAAdi thalika fahiya kaalhijarati aw ashaddu qaswatan wainna mina alhijarati lama yatafajjaru minhu alanharu wainna minha lama yashshaqqaqu fayakhruju minhu almao wainna minha lama yahbitu min khashyati Allahi wama Allahu bighafilin AAamma taAAmaloona

Translation: ನಂತರ, ಅದರ ಬಳಿಕವೂ ನಿಮ್ಮ ಹೃದಯಗಳು ಕಠೋರವಾದವು. ಅವು ಬಂಡೆಯಂತೆ ಅಥವಾ ಅದಕ್ಕಿಂತಲೂ ಹೆಚ್ಚು ಕಠೋರವಾದವು. ನಿಶ್ಚಯವಾಗಿಯೂ, ಕೆಲವು ಬಂಡೆಗಳಿಂದ ನದಿಗಳು ಚಿಮ್ಮಿ ಹರಿಯುತ್ತವೆ; ಕೆಲವು ಬಂಡೆಗಳು ಒಡೆದು ನೀರು ಹೊರಬರುತ್ತದೆ; ಕೆಲವು ಬಂಡೆಗಳು ಅಲ್ಲಾಹನ ಭಯದಿಂದ ಉರುಳಿ ಬೀಳುತ್ತವೆ. ನೀವು ಮಾಡುತ್ತಿರುವ ಕರ್ಮಗಳ ಕುರಿತು ಅಲ್ಲಾಹು ತಿಳಿಯದವನಲ್ಲ.

2:75

أَفَتَطۡمَعُونَ أَن يُؤۡمِنُواْ لَكُمۡ وَقَدۡ كَانَ فَرِيقٞ مِّنۡهُمۡ يَسۡمَعُونَ كَلَٰمَ ٱللَّهِ ثُمَّ يُحَرِّفُونَهُۥ مِنۢ بَعۡدِ مَا عَقَلُوهُ وَهُمۡ يَعۡلَمُونَ ﴿75﴾

Transliteration: AfatatmaAAoona an yuminoo lakum waqad kana fareequn minhum yasmaAAoona kalama Allahi thumma yuharrifoonahu min baAAdi ma AAaqaloohu wahum yaAAlamoona

Translation: (ಸತ್ಯವಿಶ್ವಾಸಿಗಳೇ!), ಅವರು ವಿಶ್ವಾಸವಿಡುವರೆಂದು ನೀವು ಹಾರೈಸುತ್ತೀರಾ? ವಾಸ್ತವದಲ್ಲಿ, ಅವರಲ್ಲೊಂದು ಗುಂಪು ಅಲ್ಲಾಹನ ವಚನಗಳಿಗೆ ಕಿವಿಗೊಡುತ್ತಾರೆ; ನಂತರ, ಅದನ್ನು ಸರಿಯಾಗಿ ಅರ್ಥಮಾಡಿಕೊಂಡ ಬಳಿಕ, ತಿಳುವಳಿಕೆಯುಳ್ಳವರಾಗಿದ್ದೂ ಸಹ ಅವರು ಅದನ್ನು ವಿರೂಪಗೊಳಿಸುತ್ತಾರೆ.

2:76

وَإِذَا لَقُواْ ٱلَّذِينَ ءَامَنُواْ قَالُوٓاْ ءَامَنَّا وَإِذَا خَلَا بَعۡضُهُمۡ إِلَىٰ بَعۡضٖ قَالُوٓاْ أَتُحَدِّثُونَهُم بِمَا فَتَحَ ٱللَّهُ عَلَيۡكُمۡ لِيُحَآجُّوكُم بِهِۦ عِندَ رَبِّكُمۡۚ أَفَلَا تَعۡقِلُونَ ﴿76﴾

Transliteration: Waitha laqoo allatheena amanoo qaloo amanna waitha khala baAAduhum ila baAAdin qaloo atuhaddithoonahum bima fataha Allahu AAalaykum liyuhajjookum bihi AAinda rabbikum afala taAAqiloona

Translation: ಸತ್ಯವಿಶ್ವಾಸಿಗಳನ್ನು ಭೇಟಿ ಮಾಡಿದರೆ ಅವರು ಹೇಳುತ್ತಾರೆ: “ನಾವು ವಿಶ್ವಾಸವಿಟ್ಟಿದ್ದೇವೆ.” ಆದರೆ ಅವರು ಪರಸ್ಪರ ಏಕಾಂತದಲ್ಲಿರುವಾಗ ಹೇಳುತ್ತಾರೆ: “ಅಲ್ಲಾಹು ನಿಮಗೆ ತಿಳಿಸಿಕೊಟ್ಟ ವಿಷಯಗಳನ್ನು ನೀವೇಕೆ ಅವರಿಗೆ ತಿಳಿಸುತ್ತೀರಿ? ಅವರು ಅದನ್ನು ಹಿಡಿದು ನಿಮ್ಮ ಪರಿಪಾಲಕನ (ಅಲ್ಲಾಹನ) ಮುಂದೆ ನಿಮ್ಮೊಡನೆ ತರ್ಕಿಸುವುದಕ್ಕೋ? ನೀವು ಆಲೋಚಿಸುವುದಿಲ್ಲವೇ?”

2:77

أَوَلَا يَعۡلَمُونَ أَنَّ ٱللَّهَ يَعۡلَمُ مَا يُسِرُّونَ وَمَا يُعۡلِنُونَ ﴿77﴾

Transliteration: Awala yaAAlamoona anna Allaha yaAAlamu ma yusirroona wama yuAAlinoona

Translation: ಆದರೆ ಅವರು ಮುಚ್ಚಿಡುವುದನ್ನು ಮತ್ತು ಬಹಿರಂಗಪಡಿಸುವುದನ್ನು ಅಲ್ಲಾಹು ತಿಳಿಯುತ್ತಾನೆಂದು ಅವರಿಗೆ ತಿಳಿದಿಲ್ಲವೇ?

2:78

وَمِنۡهُمۡ أُمِّيُّونَ لَا يَعۡلَمُونَ ٱلۡكِتَٰبَ إِلَّآ أَمَانِيَّ وَإِنۡ هُمۡ إِلَّا يَظُنُّونَ ﴿78﴾

Transliteration: Waminhum ommiyyoona la yaAAlamoona alkitaba illa amaniyya wain hum illa yathunnoona

Translation: ಅವರಲ್ಲಿ ಕೆಲವು ಅನಕ್ಷರಸ್ಥರಿದ್ದಾರೆ; ಅವರಿಗೆ ಗ್ರಂಥದಲ್ಲಿ ಏನಿದೆಯೆಂದೇ ತಿಳಿದಿಲ್ಲ. ಅವರು ಕೆಲವು ಗುಮಾನಿಗಳನ್ನಷ್ಟೇ ಹೊಂದಿದ್ದಾರೆ. ಅವರು ಕೇವಲ ಊಹಿಸುವುದನ್ನಷ್ಟೇ ಮಾಡುತ್ತಾರೆ.

2:79

فَوَيۡلٞ لِّلَّذِينَ يَكۡتُبُونَ ٱلۡكِتَٰبَ بِأَيۡدِيهِمۡ ثُمَّ يَقُولُونَ هَٰذَا مِنۡ عِندِ ٱللَّهِ لِيَشۡتَرُواْ بِهِۦ ثَمَنٗا قَلِيلٗاۖ فَوَيۡلٞ لَّهُم مِّمَّا كَتَبَتۡ أَيۡدِيهِمۡ وَوَيۡلٞ لَّهُم مِّمَّا يَكۡسِبُونَ ﴿79﴾

Transliteration: Fawaylun lillatheena yaktuboona alkitaba biaydeehim thumma yaqooloona hatha min AAindi Allahi liyashtaroo bihi thamanan qaleelan fawaylun lahum mimma katabat aydeehim wawaylun lahum mimma yaksiboona

Translation: ಆದ್ದರಿಂದ, ತಮ್ಮ ಕೈಗಳಿಂದ ಗ್ರಂಥವನ್ನು ಬರೆದು, ನಂತರ ಅದರ ಮೂಲಕ ತುಚ್ಛ ಬೆಲೆಯನ್ನು ಪಡೆಯಲು “ಇದು ಅಲ್ಲಾಹನಿಂದ ಬಂದಿದೆ” ಎಂದು ಹೇಳುವವರಿಗೆ ವಿನಾಶ ಕಾದಿದೆ. ಅವರ ಕೈಗಳು ಬರೆದಿರುವುದಕ್ಕೆ ಅವರಿಗೆ ವಿನಾಶವಿದೆ; ಅವರು ಸಂಪಾದಿಸಿರುವುದಕ್ಕೂ ಅವರಿಗೆ ವಿನಾಶವಿದೆ.

2:80

وَقَالُواْ لَن تَمَسَّنَا ٱلنَّارُ إِلَّآ أَيَّامٗا مَّعۡدُودَةٗۚ قُلۡ أَتَّخَذۡتُمۡ عِندَ ٱللَّهِ عَهۡدٗا فَلَن يُخۡلِفَ ٱللَّهُ عَهۡدَهُۥٓۖ أَمۡ تَقُولُونَ عَلَى ٱللَّهِ مَا لَا تَعۡلَمُونَ ﴿80﴾

Transliteration: Waqaloo lan tamassana alnnaru illa ayyaman maAAdoodatan qul attakhathtum AAinda Allahi AAahdan falan yukhlifa Allahu AAahdahu am taqooloona AAala Allahi ma la taAAlamoona

Translation: ಅವರು ಹೇಳಿದರು: “ಬೆರಳೆಣಿಕೆಯ ಕೆಲವು ದಿನಗಳು ಮಾತ್ರ ನರಕಾಗ್ನಿಯು ನಮ್ಮನ್ನು ಸ್ಪರ್ಶಿಸುತ್ತದೆ.”[1] ಹೇಳಿರಿ: “ನೀವೇನಾದರೂ ಅಲ್ಲಾಹನಿಂದ ಕರಾರು ಪಡೆದಿದ್ದೀರಾ? ಹಾಗಿದ್ದರೆ ಅಲ್ಲಾಹು ಅವನ ಕರಾರನ್ನು ಎಂದಿಗೂ ಉಲ್ಲಂಘಿಸುವುದಿಲ್ಲ. ಅಥವಾ ನೀವು ಅಲ್ಲಾಹನ ಬಗ್ಗೆ ನಿಮಗೆ ಗೊತ್ತಿಲ್ಲದ್ದನ್ನು ಹೇಳುತ್ತಿದ್ದೀರಾ?”

2:81

بَلَىٰۚ مَن كَسَبَ سَيِّئَةٗ وَأَحَٰطَتۡ بِهِۦ خَطِيٓـَٔتُهُۥ فَأُوْلَـٰٓئِكَ أَصۡحَٰبُ ٱلنَّارِۖ هُمۡ فِيهَا خَٰلِدُونَ ﴿81﴾

Transliteration: Bala man kasaba sayyiatan waahatat bihi khateeatuhu faolaika ashabu alnnari hum feeha khalidoona

Translation: ಹೌದು! ಯಾರು ಕೆಡುಕು ಮಾಡುತ್ತಾನೋ ಮತ್ತು ಯಾರನ್ನು ಅವನ ಪಾಪವು ಸುತ್ತುವರಿದಿದೆಯೋ—ಅವರೇ ನರಕವಾಸಿಗಳು. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು.

2:82

وَٱلَّذِينَ ءَامَنُواْ وَعَمِلُواْ ٱلصَّـٰلِحَٰتِ أُوْلَـٰٓئِكَ أَصۡحَٰبُ ٱلۡجَنَّةِۖ هُمۡ فِيهَا خَٰلِدُونَ ﴿82﴾

Transliteration: Waallatheena amanoo waAAamiloo alssalihati olaika ashabu aljannati hum feeha khalidoona

Translation: ಸತ್ಯವಿಶ್ವಾಸಿಗಳು ಮತ್ತು ಸತ್ಕರ್ಮವೆಸಗಿದವರು ಯಾರೋ—ಅವರೇ ಸ್ವರ್ಗವಾಸಿಗಳು. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು.

2:83

وَإِذۡ أَخَذۡنَا مِيثَٰقَ بَنِيٓ إِسۡرَـٰٓءِيلَ لَا تَعۡبُدُونَ إِلَّا ٱللَّهَ وَبِٱلۡوَٰلِدَيۡنِ إِحۡسَانٗا وَذِي ٱلۡقُرۡبَىٰ وَٱلۡيَتَٰمَىٰ وَٱلۡمَسَٰكِينِ وَقُولُواْ لِلنَّاسِ حُسۡنٗا وَأَقِيمُواْ ٱلصَّلَوٰةَ وَءَاتُواْ ٱلزَّكَوٰةَ ثُمَّ تَوَلَّيۡتُمۡ إِلَّا قَلِيلٗا مِّنكُمۡ وَأَنتُم مُّعۡرِضُونَ ﴿83﴾

Transliteration: Waith akhathna meethaqa banee israeela la taAAbudoona illa Allaha wabialwalidayni ihsanan wathee alqurba waalyatama waalmasakeeni waqooloo lilnnasi husnan waaqeemoo alssalata waatoo alzzakata thumma tawallaytum illa qaleelan minkum waantum muAAridoona

Translation: “ಅಲ್ಲಾಹನನ್ನು ಬಿಟ್ಟು ಬೇರೆ ಯಾರನ್ನೂ ಆರಾಧಿಸಬೇಡಿ, ಮಾತಾಪಿತರಿಗೆ, ಸಂಬಂಧಿಕರಿಗೆ, ಅನಾಥರಿಗೆ ಹಾಗೂ ಬಡವರಿಗೆ ಒಳಿತು ಮಾಡಿರಿ; ಜನರೊಡನೆ ಒಳ್ಳೆಯ ಮಾತನ್ನು ಆಡಿರಿ; ನಮಾಝ್ ಸಂಸ್ಥಾಪಿಸಿರಿ ಮತ್ತು ಝಕಾತ್ ನೀಡಿರಿ" ಎಂದು (ಆದೇಶಿಸುತ್ತಾ) ನಾವು ಇಸ್ರಾಯೇಲ್ ಮಕ್ಕಳಿಂದ ಕರಾರು ಪಡೆದ ಸಂದರ್ಭ. ನಂತರ, ನಿಮ್ಮಲ್ಲಿ ಕೆಲವರ ಹೊರತು ಉಳಿದವರೆಲ್ಲವರೂ ನಿರ್ಲಕ್ಷಿಸುತ್ತಾ ವಿಮುಖರಾದಿರಿ.

2:84

وَإِذۡ أَخَذۡنَا مِيثَٰقَكُمۡ لَا تَسۡفِكُونَ دِمَآءَكُمۡ وَلَا تُخۡرِجُونَ أَنفُسَكُم مِّن دِيَٰرِكُمۡ ثُمَّ أَقۡرَرۡتُمۡ وَأَنتُمۡ تَشۡهَدُونَ ﴿84﴾

Transliteration: Waith akhathna meethaqakum la tasfikoona dimaakum wala tukhrijoona anfusakum min diyarikum thumma aqrartum waantum tashhadoona

Translation: “ನೀವು ನಿಮ್ಮವರ ರಕ್ತ ಹರಿಸಬೇಡಿ ಮತ್ತು ನಿಮ್ಮ ಮನೆಗಳಿಂದ ನಿಮ್ಮವರನ್ನು ಹೊರಹಾಕಬೇಡಿ" ಎಂದು (ಆದೇಶಿಸುತ್ತಾ) ನಾವು ನಿಮ್ಮಿಂದ ಕರಾರು ಪಡೆದ ಸಂದರ್ಭ. ನಂತರ ನೀವು ಸಾಕ್ಷಿ ವಹಿಸುತ್ತಾ ಅದನ್ನು ಒಪ್ಪಿಕೊಂಡಿರಿ.

2:85

ثُمَّ أَنتُمۡ هَـٰٓؤُلَآءِ تَقۡتُلُونَ أَنفُسَكُمۡ وَتُخۡرِجُونَ فَرِيقٗا مِّنكُم مِّن دِيَٰرِهِمۡ تَظَٰهَرُونَ عَلَيۡهِم بِٱلۡإِثۡمِ وَٱلۡعُدۡوَٰنِ وَإِن يَأۡتُوكُمۡ أُسَٰرَىٰ تُفَٰدُوهُمۡ وَهُوَ مُحَرَّمٌ عَلَيۡكُمۡ إِخۡرَاجُهُمۡۚ أَفَتُؤۡمِنُونَ بِبَعۡضِ ٱلۡكِتَٰبِ وَتَكۡفُرُونَ بِبَعۡضٖۚ فَمَا جَزَآءُ مَن يَفۡعَلُ ذَٰلِكَ مِنكُمۡ إِلَّا خِزۡيٞ فِي ٱلۡحَيَوٰةِ ٱلدُّنۡيَاۖ وَيَوۡمَ ٱلۡقِيَٰمَةِ يُرَدُّونَ إِلَىٰٓ أَشَدِّ ٱلۡعَذَابِۗ وَمَا ٱللَّهُ بِغَٰفِلٍ عَمَّا تَعۡمَلُونَ ﴿85﴾

Transliteration: Thumma antum haolai taqtuloona anfusakum watukhrijoona fareeqan minkum min diyarihim tathaharoona AAalayhim bialithmi waalAAudwani wain yatookum osara tufadoohum wahuwa muharramun AAalaykum ikhrajuhum afatuminoona bibaAAdi alkitabi watakfuroona bibaAAdin fama jazao man yafAAalu thalika minkum illa khizyun fee alhayati alddunya wayawma alqiyamati yuraddoona ila ashaddi alAAathabi wama Allahu bighafilin AAamma taAAmaloona

Translation: ನಂತರ, ನೀವು ನಿಮ್ಮವರನ್ನೇ ಕೊಲ್ಲುತ್ತೀರಿ, ನಿಮ್ಮವರ ಒಂದು ಗುಂಪನ್ನು ಅವರ ಮನೆಗಳಿಂದ ಹೊರಹಾಕುತ್ತೀರಿ; ಪಾಪ ಮತ್ತು ಅತಿರೇಕದಲ್ಲಿ ಅವರ ವಿರುದ್ಧ ಪರಸ್ಪರ ಸಹಕರಿಸುತ್ತೀರಿ; ಅವರು ನಿಮ್ಮ ಬಳಿಗೆ ಸೆರೆಯಾಳುಗಳಾಗಿ ಬಂದರೆ ಅವರಿಗೆ ಪರಿಹಾರವನ್ನು ನೀಡುತ್ತೀರಿ. ವಾಸ್ತವದಲ್ಲಿ, ಅವರನ್ನು ಹೊರಹಾಕುವುದನ್ನು ನಿಮಗೆ ನಿಷೇಧಿಸಲಾಗಿದ್ದರೂ (ನೀವು ಅದರ ಬಗ್ಗೆ ಯೋಚಿಸುವುದೇ ಇಲ್ಲ). ಹಾಗಾದರೆ, ನೀವು ಗ್ರಂಥದ ಕೆಲವು ಭಾಗಗಳಲ್ಲಿ ನಂಬಿಕೆಯಿಟ್ಟು ಕೆಲವು ಭಾಗಗಳನ್ನು ನಿಷೇಧಿಸುತ್ತೀರಾ? ನಿಮ್ಮ ಪೈಕಿ ಹೀಗೆ ಮಾಡುವವರಿಗೆ ಇಹಲೋಕದಲ್ಲಿ ಅವಮಾನವಲ್ಲದೆ ಇನ್ನೇನು ಪ್ರತಿಫಲವಿರಲು ಸಾಧ್ಯ? ಪುನರುತ್ಥಾನ ದಿನ ಅವರನ್ನು ಅತಿಕಠೋರ ಶಿಕ್ಷೆಗೆ ಮರಳಿಸಲಾಗುವುದು. ನೀವು ಮಾಡುತ್ತಿರುವ ಕರ್ಮಗಳ ಕುರಿತು ಅಲ್ಲಾಹು ತಿಳಿಯದವನಲ್ಲ.[1]

2:86

أُوْلَـٰٓئِكَ ٱلَّذِينَ ٱشۡتَرَوُاْ ٱلۡحَيَوٰةَ ٱلدُّنۡيَا بِٱلۡأٓخِرَةِۖ فَلَا يُخَفَّفُ عَنۡهُمُ ٱلۡعَذَابُ وَلَا هُمۡ يُنصَرُونَ ﴿86﴾

Transliteration: Olaika allatheena ishtarawoo alhayata alddunya bialakhirati fala yukhaffafu AAanhumu alAAathabu wala hum yunsaroona

Translation: ಅವರೇ ಪರಲೋಕಕ್ಕೆ ಬದಲಿಯಾಗಿ ಇಹಲೋಕವನ್ನು ಖರೀದಿಸಿದವರು. ಆದ್ದರಿಂದ, ಅವರಿಗೆ ಶಿಕ್ಷೆಯಲ್ಲಿ ರಿಯಾಯಿತಿಯಿಲ್ಲ. ಅವರಿಗೆ ಯಾವುದೇ ಸಹಾಯವೂ ದೊರೆಯುವುದಿಲ್ಲ.

2:87

وَلَقَدۡ ءَاتَيۡنَا مُوسَى ٱلۡكِتَٰبَ وَقَفَّيۡنَا مِنۢ بَعۡدِهِۦ بِٱلرُّسُلِۖ وَءَاتَيۡنَا عِيسَى ٱبۡنَ مَرۡيَمَ ٱلۡبَيِّنَٰتِ وَأَيَّدۡنَٰهُ بِرُوحِ ٱلۡقُدُسِۗ أَفَكُلَّمَا جَآءَكُمۡ رَسُولُۢ بِمَا لَا تَهۡوَىٰٓ أَنفُسُكُمُ ٱسۡتَكۡبَرۡتُمۡ فَفَرِيقٗا كَذَّبۡتُمۡ وَفَرِيقٗا تَقۡتُلُونَ ﴿87﴾

Transliteration: Walaqad atayna moosa alkitaba waqaffayna min baAAdihi bialrrusuli waatayna AAeesa ibna maryama albayyinati waayyadnahu biroohi alqudusi afakullama jaakum rasoolun bima la tahwa anfusukumu istakbartum fafareeqan kaththabtum wafareeqan taqtuloona

Translation: ನಿಶ್ಚಯವಾಗಿಯೂ ನಾವು ಮೂಸಾರಿಗೆ ಗ್ರಂಥವನ್ನು ನೀಡಿದೆವು. ಅವರ ಹಿಂದೆಯೇ ಹಲವಾರು ಸಂದೇಶವಾಹಕರುಗಳನ್ನು ಕಳುಹಿಸಿದೆವು. ಮರ್ಯಮರ ಮಗ ಈಸಾರಿಗೆ ನಾವು ಸ್ಪಷ್ಟ ಸಾಕ್ಷ್ಯಾಧಾರಗಳನ್ನು ನೀಡಿದೆವು ಮತ್ತು ಪವಿತ್ರಾತ್ಮನ ಮೂಲಕ ಅವರನ್ನು ಬೆಂಬಲಿಸಿದೆವು. ಆದರೆ ನಿಮಗೆ ಇಷ್ಟವಿಲ್ಲದ ವಿಷಯಗಳೊಂದಿಗೆ ಸಂದೇಶವಾಹಕರುಗಳು ನಿಮ್ಮ ಬಳಿಗೆ ಬಂದಾಗಲೆಲ್ಲಾ, ನೀವು ಅಹಂಕಾರ ತೋರಿದಿರಿ. ಅವರಲ್ಲಿ ಕೆಲವರನ್ನು ನೀವು ನಿಷೇಧಿಸಿದಿರಿ ಮತ್ತು ಕೆಲವರನ್ನು ಹತ್ಯೆ ಮಾಡಿದಿರಿ.

2:88

وَقَالُواْ قُلُوبُنَا غُلۡفُۢۚ بَل لَّعَنَهُمُ ٱللَّهُ بِكُفۡرِهِمۡ فَقَلِيلٗا مَّا يُؤۡمِنُونَ ﴿88﴾

Transliteration: Waqaloo quloobuna ghulfun bal laAAanahumu Allahu bikufrihim faqaleelan ma yuminoona

Translation: ಅವರು ಹೇಳಿದರು: “ನಮ್ಮ ಹೃದಯಗಳು ಮುಚ್ಚಿಕೊಂಡಿವೆ.” ಅಲ್ಲ; ವಾಸ್ತವವಾಗಿ ಅವರ ನಿಷೇಧದಿಂದಾಗಿ ಅಲ್ಲಾಹು ಅವರನ್ನು ಶಪಿಸಿದ್ದಾನೆ. ಆದ್ದರಿಂದ ಅವರು ಸ್ವಲ್ಪ ಮಾತ್ರ ವಿಶ್ವಾಸವಿಡುತ್ತಾರೆ.

2:89

وَلَمَّا جَآءَهُمۡ كِتَٰبٞ مِّنۡ عِندِ ٱللَّهِ مُصَدِّقٞ لِّمَا مَعَهُمۡ وَكَانُواْ مِن قَبۡلُ يَسۡتَفۡتِحُونَ عَلَى ٱلَّذِينَ كَفَرُواْ فَلَمَّا جَآءَهُم مَّا عَرَفُواْ كَفَرُواْ بِهِۦۚ فَلَعۡنَةُ ٱللَّهِ عَلَى ٱلۡكَٰفِرِينَ ﴿89﴾

Transliteration: Walamma jaahum kitabun min AAindi Allahi musaddiqun lima maAAahum wakanoo min qablu yastaftihoona AAala allatheena kafaroo falamma jaahum ma AAarafoo kafaroo bihi falaAAnatu Allahi AAala alkafireena

Translation: ಅವರಲ್ಲಿರುವ (ಗ್ರಂಥವನ್ನು) ದೃಢೀಕರಿಸುವ ಒಂದು ಗ್ರಂಥವು (ಕುರ್‌ಆನ್) ಅಲ್ಲಾಹನ ಬಳಿಯಿಂದ ಅವರಿಗೆ ಬಂದಾಗ—ವಾಸ್ತವವಾಗಿ, ಇದಕ್ಕೆ ಮೊದಲು ಅವರು (ಅಂತಹ ಒಂದು ಗ್ರಂಥದ ಮೂಲಕ) ಸತ್ಯನಿಷೇಧಿಗಳ ವಿರುದ್ಧ ಗೆಲುವಿಗಾಗಿ ಪ್ರಾರ್ಥಿಸುತ್ತಿದ್ದರೂ ಸಹ—ಅವರಿಗೆ ಪರಿಚಿತವಾದ ಆ ಸಂದೇಶವು ಅವರ ಬಳಿಗೆ ಬಂದಾಗ ಅವರು ಅದನ್ನು ನಿಷೇಧಿಸಿದರು.[1] ಆದ್ದರಿಂದ ಸತ್ಯನಿಷೇಧಿಗಳ ಮೇಲೆ ಅಲ್ಲಾಹನ ಶಾಪವಿರಲಿ.

2:90

بِئۡسَمَا ٱشۡتَرَوۡاْ بِهِۦٓ أَنفُسَهُمۡ أَن يَكۡفُرُواْ بِمَآ أَنزَلَ ٱللَّهُ بَغۡيًا أَن يُنَزِّلَ ٱللَّهُ مِن فَضۡلِهِۦ عَلَىٰ مَن يَشَآءُ مِنۡ عِبَادِهِۦۖ فَبَآءُو بِغَضَبٍ عَلَىٰ غَضَبٖۚ وَلِلۡكَٰفِرِينَ عَذَابٞ مُّهِينٞ ﴿90﴾

Transliteration: Bisama ishtaraw bihi anfusahum an yakfuroo bima anzala Allahu baghyan an yunazzila Allahu min fadlihi AAala man yashao min AAibadihi fabaoo bighadabin AAala ghadabin walilkafireena AAathabun muheenun

Translation: ಅಲ್ಲಾಹು ಅವನ ದಾಸರಲ್ಲಿ ಅವನು ಇಚ್ಛಿಸುವವರಿಗೆ ಅವನ ಔದಾರ್ಯವನ್ನು ಇಳಿಸಿಕೊಡುತ್ತಾನೆ ಎಂಬ ಅಸೂಯೆಯಿಂದ, ಅಲ್ಲಾಹು ಅವತೀರ್ಣಗೊಳಿಸಿದ ಸಂದೇಶವನ್ನು ನಿಷೇಧಿಸುವ ರೀತಿಯಲ್ಲಿ ಅವರು ತಮ್ಮನ್ನು ತಾವೇ ಮಾರಿಕೊಂಡದ್ದು ಬಹಳ ನಿಕೃಷ್ಟವಾಗಿದೆ.[1] ಇದರಿಂದ ಅವರು ಕೋಪದ ಮೇಲೆ ಕೋಪಕ್ಕೆ ಪಾತ್ರರಾದರು. ಆ ಸತ್ಯನಿಷೇಧಿಗಳಿಗೆ ಅಪಮಾನಕರ ಶಿಕ್ಷೆಯಿದೆ.

2:91

وَإِذَا قِيلَ لَهُمۡ ءَامِنُواْ بِمَآ أَنزَلَ ٱللَّهُ قَالُواْ نُؤۡمِنُ بِمَآ أُنزِلَ عَلَيۡنَا وَيَكۡفُرُونَ بِمَا وَرَآءَهُۥ وَهُوَ ٱلۡحَقُّ مُصَدِّقٗا لِّمَا مَعَهُمۡۗ قُلۡ فَلِمَ تَقۡتُلُونَ أَنۢبِيَآءَ ٱللَّهِ مِن قَبۡلُ إِن كُنتُم مُّؤۡمِنِينَ ﴿91﴾

Transliteration: Waitha qeela lahum aminoo bima anzala Allahu qaloo numinu bima onzila AAalayna wayakfuroona bima waraahu wahuwa alhaqqu musaddiqan lima maAAahum qul falima taqtuloona anbiyaa Allahi min qablu in kuntum mumineena

Translation: “ಅಲ್ಲಾಹು ಅವತೀರ್ಣಗೊಳಿಸಿದ ಗ್ರಂಥದಲ್ಲಿ (ಕುರ್‌ಆನ್‍ನಲ್ಲಿ) ವಿಶ್ವಾಸವಿಡಿ” ಎಂದು ಅವರೊಡನೆ ಹೇಳಲಾದರೆ, ಅವರು ಹೇಳುತ್ತಾರೆ: “ನಮಗೆ ಅವತೀರ್ಣವಾದ ಗ್ರಂಥದಲ್ಲಿ ನಾವು ವಿಶ್ವಾಸವಿಡುತ್ತೇವೆ.” ವಾಸ್ತವವಾಗಿ, ಅದರ ನಂತರದ ಗ್ರಂಥವು (ಕುರ್‌ಆನ್) ಅವರ ಬಳಿಯಿರುವ ಗ್ರಂಥವನ್ನು ದೃಡೀಕರಿಸುವ ಸತ್ಯವಾಗಿದ್ದೂ ಸಹ ಅವರು ಅದನ್ನು ನಿಷೇಧಿಸುತ್ತಾರೆ. ಹೇಳಿರಿ: “ನೀವು ಸತ್ಯವನ್ನೇ ಹೇಳುವವರಾಗಿದ್ದರೆ, ಮೊದಲು ಬಂದ ಅಲ್ಲಾಹನ ಪ್ರವಾದಿಗಳನ್ನು ನೀವೇಕೆ ಕೊಲೆ ಮಾಡಿದಿರಿ?”[1]

2:92

وَلَقَدۡ جَآءَكُم مُّوسَىٰ بِٱلۡبَيِّنَٰتِ ثُمَّ ٱتَّخَذۡتُمُ ٱلۡعِجۡلَ مِنۢ بَعۡدِهِۦ وَأَنتُمۡ ظَٰلِمُونَ ﴿92﴾

Transliteration: Walaqad jaakum moosa bialbayyinati thumma ittakhathtumu alAAijla min baAAdihi waantum thalimoona

Translation: ನಿಶ್ಚಯವಾಗಿಯೂ, ಮೂಸಾ ಸ್ಪಷ್ಟ ಸಾಕ್ಷ್ಯಾಧಾರಗಳೊಂದಿಗೆ ನಿಮ್ಮ ಬಳಿಗೆ ಬಂದಿದ್ದರು. ನಂತರ, ಅವರ (ನಿರ್ಗಮನದ) ಬಳಿಕ ನೀವು ಕರುವನ್ನು (ದೇವರಾಗಿ) ಮಾಡಿಕೊಂಡು ಅಕ್ರಮಿಗಳಾಗಿ ಬಿಟ್ಟಿರಿ.

2:93

وَإِذۡ أَخَذۡنَا مِيثَٰقَكُمۡ وَرَفَعۡنَا فَوۡقَكُمُ ٱلطُّورَ خُذُواْ مَآ ءَاتَيۡنَٰكُم بِقُوَّةٖ وَٱسۡمَعُواْۖ قَالُواْ سَمِعۡنَا وَعَصَيۡنَا وَأُشۡرِبُواْ فِي قُلُوبِهِمُ ٱلۡعِجۡلَ بِكُفۡرِهِمۡۚ قُلۡ بِئۡسَمَا يَأۡمُرُكُم بِهِۦٓ إِيمَٰنُكُمۡ إِن كُنتُم مُّؤۡمِنِينَ ﴿93﴾

Transliteration: Waith akhathna meethaqakum warafaAAna fawqakumu alttoora khuthoo ma ataynakum biquwwatin waismaAAoo qaloo samiAAna waAAasayna waoshriboo fee quloobihimu alAAijla bikufrihim qul bisama yamurukum bihi eemanukum in kuntum mumineena

Translation: ನಾವು ನಿಮ್ಮಿಂದ ಕರಾರನ್ನು ಪಡೆದ ಮತ್ತು ನಿಮ್ಮ ಮೇಲೆ ತೂರ್ ಪರ್ವತವನ್ನು ಎತ್ತಿಹಿಡಿದ ಸಂದರ್ಭ. (ನಾವು ಹೇಳಿದೆವು): “ನಾವು ನಿಮಗೆ ನೀಡಿದ್ದನ್ನು ಬಿಗಿಯಾಗಿ ಹಿಡಿಯಿರಿ ಮತ್ತು ಕಿವಿಗೊಟ್ಟು ಕೇಳಿರಿ.” ಅವರು ಹೇಳಿದರು: “ನಾವು ಕೇಳಿದ್ದೇವೆ ಮತ್ತು ಅವಿಧೇಯತೆ ತೋರಿದ್ದೇವೆ.” ಅವರ ಸತ್ಯನಿಷೇಧದಿಂದಾಗಿ ಅವರ ಹೃದಯಗಳಲ್ಲಿ ಕರುವಿನ ಪ್ರೀತಿಯು ಲೀನವಾಗಿಬಿಟ್ಟಿತ್ತು. ಹೇಳಿರಿ: “ನೀವು ಸತ್ಯವಿಶ್ವಾಸಿಗಳಾಗಿದ್ದರೆ ನಿಮ್ಮ ವಿಶ್ವಾಸವು ನಿಮಗೆ ಏನು ಆದೇಶಿಸುತ್ತಿದೆಯೋ ಅದು ಬಹಳ ನಿಕೃಷ್ಟವಾಗಿದೆ.”

2:94

قُلۡ إِن كَانَتۡ لَكُمُ ٱلدَّارُ ٱلۡأٓخِرَةُ عِندَ ٱللَّهِ خَالِصَةٗ مِّن دُونِ ٱلنَّاسِ فَتَمَنَّوُاْ ٱلۡمَوۡتَ إِن كُنتُمۡ صَٰدِقِينَ ﴿94﴾

Transliteration: Qul in kanat lakumu alddaru alakhiratu AAinda Allahi khalisatan min dooni alnnasi fatamannawoo almawta in kuntum sadiqeena

Translation: ಹೇಳಿರಿ: “ಅಲ್ಲಾಹನ ಬಳಿ ಪರಲೋಕ ಭವನವು ಇತರ ಜನರಿಗೆ ದೊರೆಯದೆ ಕೇವಲ ನಿಮಗೆ ಮಾತ್ರ ಇರುವುದಾದರೆ ನೀವು ಸಾವನ್ನು ಬಯಸಿರಿ. ನೀವು ಸತ್ಯವಂತರಾಗಿದ್ದರೆ!”

2:95

وَلَن يَتَمَنَّوۡهُ أَبَدَۢا بِمَا قَدَّمَتۡ أَيۡدِيهِمۡۚ وَٱللَّهُ عَلِيمُۢ بِٱلظَّـٰلِمِينَ ﴿95﴾

Transliteration: Walan yatamannawhu abadan bima qaddamat aydeehim waAllahu AAaleemun bialththalimeena

Translation: ಆದರೆ ಅವರ ಕೈಗಳು ಮಾಡಿಟ್ಟಿರುವ (ದುಷ್ಕರ್ಮಗಳ) ನಿಮಿತ್ತ ಅವರೆಂದೂ ಸಾವನ್ನು ಬಯಸುವುದಿಲ್ಲ. ಅಲ್ಲಾಹು ಅಕ್ರಮಿಗಳ ಬಗ್ಗೆ ಬಹಳ ಚೆನ್ನಾಗಿ ತಿಳಿದಿದ್ದಾನೆ.

2:96

وَلَتَجِدَنَّهُمۡ أَحۡرَصَ ٱلنَّاسِ عَلَىٰ حَيَوٰةٖ وَمِنَ ٱلَّذِينَ أَشۡرَكُواْۚ يَوَدُّ أَحَدُهُمۡ لَوۡ يُعَمَّرُ أَلۡفَ سَنَةٖ وَمَا هُوَ بِمُزَحۡزِحِهِۦ مِنَ ٱلۡعَذَابِ أَن يُعَمَّرَۗ وَٱللَّهُ بَصِيرُۢ بِمَا يَعۡمَلُونَ ﴿96﴾

Transliteration: Walatajidannahum ahrasa alnnasi AAala hayatin wamina allatheena ashrakoo yawaddu ahaduhum law yuAAammaru alfa sanatin wama huwa bimuzahzihihi mina alAAathabi an yuAAammara waAllahu baseerun bima yaAAmaloona

Translation: ಅವರಿಗೆ ಬದುಕಲು ಆತ್ಯಧಿಕ ಆಸಕ್ತಿಯಿರುವುದನ್ನು—ಬಹುದೇವವಿಶ್ವಾಸಿಗಳಿಗಿಂತಲೂ ಹೆಚ್ಚು ಆಸಕ್ತಿಯಿರುವುದನ್ನು—ನೀವು ಕಾಣುವಿರಿ. ಅವರಲ್ಲಿ ಪ್ರತಿಯೊಬ್ಬನೂ ಸಾವಿರ ವರ್ಷ ಆಯುಷ್ಯ ದೊರೆಯಬೇಕೆಂದು ಬಯಸುತ್ತಾನೆ. ಆದರೆ ದೀರ್ಘಾಯುಷ್ಯ ಸಿಗುವುದರಿಂದ ಅವನಿಗೆ ಶಿಕ್ಷೆಯಿಂದ ಮುಕ್ತಿ ಸಿಗುವುದಿಲ್ಲ. ಅವರು ಮಾಡುತ್ತಿರುವ ಕರ್ಮಗಳನ್ನು ಅಲ್ಲಾಹು ನೋಡುತ್ತಿದ್ದಾನೆ.

2:97

قُلۡ مَن كَانَ عَدُوّٗا لِّـجِبۡرِيلَ فَإِنَّهُۥ نَزَّلَهُۥ عَلَىٰ قَلۡبِكَ بِإِذۡنِ ٱللَّهِ مُصَدِّقٗا لِّمَا بَيۡنَ يَدَيۡهِ وَهُدٗى وَبُشۡرَىٰ لِلۡمُؤۡمِنِينَ ﴿97﴾

Transliteration: Qul man kana AAaduwwan lijibreela fainnahu nazzalahu AAala qalbika biithni Allahi musaddiqan lima bayna yadayhi wahudan wabushra lilmumineena

Translation: ಹೇಳಿರಿ: “ಯಾರು ಜಿಬ್ರೀಲರಿಗೆ ವೈರಿಯೋ (ಅವನು ಅಲ್ಲಾಹನಿಗೂ ವೈರಿಯಾಗಿದ್ದಾನೆ).”[1] (ಏಕೆಂದರೆ) ನಿಶ್ಚಯವಾಗಿಯೂ ಜಿಬ್ರೀಲ್ ಅದನ್ನು (ಕುರ್‌ಆನನ್ನು) ನಿಮ್ಮ ಹೃದಯದಲ್ಲಿ ಅವತೀರ್ಣಗೊಳಿಸಿದ್ದು ಅಲ್ಲಾಹನ ಆದೇಶದಂತೆ ಮಾತ್ರ. ಅದು ಪೂರ್ವಗ್ರಂಥಗಳನ್ನು ದೃಢೀಕರಿಸುತ್ತದೆ ಮತ್ತು ಸತ್ಯವಿಶ್ವಾಸಿಗಳಿಗೆ ಸನ್ಮಾರ್ಗ ಹಾಗೂ ಸುವಾರ್ತೆಯಾಗಿದೆ.

2:98

مَن كَانَ عَدُوّٗا لِّلَّهِ وَمَلَـٰٓئِكَتِهِۦ وَرُسُلِهِۦ وَجِبۡرِيلَ وَمِيكَىٰلَ فَإِنَّ ٱللَّهَ عَدُوّٞ لِّلۡكَٰفِرِينَ ﴿98﴾

Transliteration: Man kana AAaduwwan lillahi wamalaikatihi warusulihi wajibreela wameekala fainna Allaha AAaduwwun lilkafireena

Translation: ಯಾರು ಅಲ್ಲಾಹನಿಗೆ, ಅವನ ದೇವದೂತರುಗಳಿಗೆ, ಅವನ ಸಂದೇಶವಾಹಕರುಗಳಿಗೆ, ಜಿಬ್ರೀಲರಿಗೆ ಮತ್ತು ಮೀಕಾಯೀಲರಿಗೆ ವೈರಿಯೋ—ನಿಶ್ಚಯವಾಗಿಯೂ ಅಲ್ಲಾಹು ಆ ಸತ್ಯನಿಷೇಧಿಗಳಿಗೂ ವೈರಿಯಾಗಿದ್ದಾನೆ.

2:99

وَلَقَدۡ أَنزَلۡنَآ إِلَيۡكَ ءَايَٰتِۭ بَيِّنَٰتٖۖ وَمَا يَكۡفُرُ بِهَآ إِلَّا ٱلۡفَٰسِقُونَ ﴿99﴾

Transliteration: Walaqad anzalna ilayka ayatin bayyinatin wama yakfuru biha illa alfasiqoona

Translation: ನಿಶ್ಚಯವಾಗಿಯೂ ನಾವು ನಿಮಗೆ ಸ್ಪಷ್ಟ ವಚನಗಳನ್ನು ಅವತೀರ್ಣಗೊಳಿಸಿದ್ದೇವೆ. ದುಷ್ಕರ್ಮಿಗಳ ಹೊರತು ಇನ್ನಾರೂ ಅದನ್ನು ನಿಷೇಧಿಸುವುದಿಲ್ಲ.

2:100

أَوَكُلَّمَا عَٰهَدُواْ عَهۡدٗا نَّبَذَهُۥ فَرِيقٞ مِّنۡهُمۚ بَلۡ أَكۡثَرُهُمۡ لَا يُؤۡمِنُونَ ﴿100﴾

Transliteration: Awakullama AAahadoo AAahdan nabathahu fareequn minhum bal aktharuhum la yuminoona

Translation: ಅವರು ಯಾವುದೇ ಕರಾರು ಮಾಡಿದಾಗಲೂ ಅವರಲ್ಲೊಂದು ಗುಂಪು ಅದನ್ನು ಎಸೆದು ಬಿಡುತ್ತಿತ್ತು. ಅಷ್ಟೇ ಅಲ್ಲ, ಅವರಲ್ಲಿ ಹೆಚ್ಚಿನವರಿಗೆ ವಿಶ್ವಾಸವೇ ಇರಲಿಲ್ಲ.

2:101

وَلَمَّا جَآءَهُمۡ رَسُولٞ مِّنۡ عِندِ ٱللَّهِ مُصَدِّقٞ لِّمَا مَعَهُمۡ نَبَذَ فَرِيقٞ مِّنَ ٱلَّذِينَ أُوتُواْ ٱلۡكِتَٰبَ كِتَٰبَ ٱللَّهِ وَرَآءَ ظُهُورِهِمۡ كَأَنَّهُمۡ لَا يَعۡلَمُونَ ﴿101﴾

Transliteration: Walamma jaahum rasoolun min AAindi Allahi musaddiqun lima maAAahum nabatha fareequn mina allatheena ootoo alkitaba kitaba Allahi waraa thuhoorihim kaannahum la yaAAlamoona

Translation: ಅವರಲ್ಲಿರುವ ಗ್ರಂಥವನ್ನು ದೃಢೀಕರಿಸುತ್ತಾ ಅಲ್ಲಾಹನ ಕಡೆಯಿಂದ ಒಬ್ಬ ಸಂದೇಶವಾಹಕರು ಅವರ ಬಳಿಗೆ ಬಂದಾಗ, ಗ್ರಂಥ ನೀಡಲಾದವರಲ್ಲಿ ಸೇರಿದ ಒಂದು ಗುಂಪು ಅಲ್ಲಾಹನ ಗ್ರಂಥವನ್ನು, ಅದರ ಬಗ್ಗೆ ಏನೂ ತಿಳಿಯದವರಂತೆ ತಮ್ಮ ಬೆನ್ನ ಹಿಂಭಾಗಕ್ಕೆ ಎಸೆದು ಬಿಟ್ಟರು.

2:102

وَٱتَّبَعُواْ مَا تَتۡلُواْ ٱلشَّيَٰطِينُ عَلَىٰ مُلۡكِ سُلَيۡمَٰنَۖ وَمَا كَفَرَ سُلَيۡمَٰنُ وَلَٰكِنَّ ٱلشَّيَٰطِينَ كَفَرُواْ يُعَلِّمُونَ ٱلنَّاسَ ٱلسِّحۡرَ وَمَآ أُنزِلَ عَلَى ٱلۡمَلَكَيۡنِ بِبَابِلَ هَٰرُوتَ وَمَٰرُوتَۚ وَمَا يُعَلِّمَانِ مِنۡ أَحَدٍ حَتَّىٰ يَقُولَآ إِنَّمَا نَحۡنُ فِتۡنَةٞ فَلَا تَكۡفُرۡۖ فَيَتَعَلَّمُونَ مِنۡهُمَا مَا يُفَرِّقُونَ بِهِۦ بَيۡنَ ٱلۡمَرۡءِ وَزَوۡجِهِۦۚ وَمَا هُم بِضَآرِّينَ بِهِۦ مِنۡ أَحَدٍ إِلَّا بِإِذۡنِ ٱللَّهِۚ وَيَتَعَلَّمُونَ مَا يَضُرُّهُمۡ وَلَا يَنفَعُهُمۡۚ وَلَقَدۡ عَلِمُواْ لَمَنِ ٱشۡتَرَىٰهُ مَا لَهُۥ فِي ٱلۡأٓخِرَةِ مِنۡ خَلَٰقٖۚ وَلَبِئۡسَ مَا شَرَوۡاْ بِهِۦٓ أَنفُسَهُمۡۚ لَوۡ كَانُواْ يَعۡلَمُونَ ﴿102﴾

Transliteration: WaittabaAAoo ma tatloo alshshayateenu AAala mulki sulaymana wama kafara sulaymanu walakinna alshshayateena kafaroo yuAAallimoona alnnasa alssihra wama onzila AAala almalakayni bibabila haroota wamaroota wama yuAAallimani min ahadin hatta yaqoola innama nahnu fitnatun fala takfur fayataAAallamoona minhuma ma yufarriqoona bihi bayna almari wazawjihi wama hum bidarreena bihi min ahadin illa biithni Allahi wayataAAallamoona ma yadurruhum wala yanfaAAuhum walaqad AAalimoo lamani ishtarahu ma lahu fee alakhirati min khalaqin walabisa ma sharaw bihi anfusahum law kanoo yaAAlamoona

Translation: ಶೈತಾನರು ಸುಲೈಮಾನರ ಆಡಳಿತಕಾಲದಲ್ಲಿ ಪಠಿಸುತ್ತಿದ್ದ ವಿಷಯಗಳನ್ನು ಅವರು ಹಿಂಬಾಲಿಸಿದರು. ಸುಲೈಮಾನ್ ಸತ್ಯನಿಷೇಧಿಯಾಗಿರಲಿಲ್ಲ. ಆದರೆ ಶೈತಾನರು ಸತ್ಯನಿಷೇಧಿಗಳಾಗಿದ್ದರು.[1] ಅವರು ಜನರಿಗೆ ಮಾಟಗಾರಿಕೆಯನ್ನು ಮತ್ತು ಬ್ಯಾಬಿಲೋನಿಯಾದಲ್ಲಿ ಹಾರೂತ್ ಮತ್ತು ಮಾರೂತ್ ಎಂಬ ಎರಡು ದೇವದೂತರಿಗೆ ಅವತೀರ್ಣವಾಗುತ್ತಿದ್ದ ವಿಷಯಗಳನ್ನು ಕಲಿಸುತ್ತಿದ್ದರು. ಆದರೆ, “ನಾವೊಂದು ಪರೀಕ್ಷೆಯಾಗಿದ್ದೇವೆ; ಆದ್ದರಿಂದ ನೀವು ಸತ್ಯನಿಷೇಧಿಗಳಾಗಬೇಡಿ” ಎಂದು ಹೇಳದೆ ಅವರಿಬ್ಬರು (ಹಾರೂತ್ ಮತ್ತು ಮಾರೂತ್) ಯಾರಿಗೂ ಕಲಿಸಿಕೊಡುತ್ತಿರಲಿಲ್ಲ. ಹೀಗೆ ಜನರು ಅವರಿಬ್ಬರಿಂದ ಗಂಡ-ಹೆಂಡತಿಯ ನಡುವೆ ಒಡಕು ಮೂಡಿಸುವ ತಂತ್ರಗಳನ್ನು ಕಲಿಯುತ್ತಿದ್ದರು. ಆದರೆ ಅಲ್ಲಾಹನ ಅಪ್ಪಣೆಯಿಲ್ಲದೆ ಯಾರಿಗೂ ಯಾವುದೇ ತೊಂದರೆ ಮಾಡಲು ಅವರಿಗೆ ಸಾಧ್ಯವಿಲ್ಲ. ಸ್ವತಃ ಅವರಿಗೆ ತೊಂದರೆಯಾಗುವ ಮತ್ತು ಅವರಿಗೆ ಯಾವುದೇ ಪ್ರಯೋಜನ ನೀಡದ ವಿಷಯಗಳನ್ನು ಅವರು ಕಲಿಯುತ್ತಿದ್ದರು. ಅದನ್ನು ಪಡೆದವರಿಗೆ ಪರಲೋಕದಲ್ಲಿ ಯಾವುದೇ ಪಾಲಿಲ್ಲವೆಂದು ಅವರು ದೃಢವಾಗಿ ತಿಳಿದಿದ್ದರು. ಅವರು ಯಾವುದಕ್ಕೆ ತಮ್ಮ ಆತ್ಮಗಳನ್ನು ಮಾರಿಕೊಂಡರೋ ಅದು ಬಹಳ ನಿಕೃಷ್ಟವಾಗಿದೆ. ಅವರು ಅದನ್ನು ತಿಳಿದಿದ್ದರೆ (ಎಷ್ಟು ಚೆನ್ನಾಗಿತ್ತು)!

2:103

وَلَوۡ أَنَّهُمۡ ءَامَنُواْ وَٱتَّقَوۡاْ لَمَثُوبَةٞ مِّنۡ عِندِ ٱللَّهِ خَيۡرٞۚ لَّوۡ كَانُواْ يَعۡلَمُونَ ﴿103﴾

Transliteration: Walaw annahum amanoo waittaqaw lamathoobatun min AAindi Allahi khayrun law kanoo yaAAlamoona

Translation: ಅವರು ವಿಶ್ವಾಸವಿಟ್ಟವರು ಮತ್ತು ದೇವಭಯವುಳ್ಳವರಾಗಿದ್ದರೆ, ಅವರಿಗೆ ಅಲ್ಲಾಹನಿಂದ ಉತ್ತಮ ಪ್ರತಿಫಲವು ದೊರೆಯುತ್ತಿತ್ತು. ಅವರು ಅದನ್ನು ತಿಳಿದಿದ್ದರೆ (ಎಷ್ಟು ಚೆನ್ನಾಗಿತ್ತು)!

2:104

يَـٰٓأَيُّهَا ٱلَّذِينَ ءَامَنُواْ لَا تَقُولُواْ رَٰعِنَا وَقُولُواْ ٱنظُرۡنَا وَٱسۡمَعُواْۗ وَلِلۡكَٰفِرِينَ عَذَابٌ أَلِيمٞ ﴿104﴾

Transliteration: Ya ayyuha allatheena amanoo la taqooloo raAAina waqooloo onthurna waismaAAoo walilkafireena AAathabun aleemun

Translation: ಓ ಸತ್ಯವಿಶ್ವಾಸಿಗಳೇ! ನೀವು (ಪ್ರವಾದಿಯೊಡನೆ) ‘ರಾಇನಾ’ ಎಂದು ಹೇಳಬೇಡಿ.[1] ಬದಲಿಗೆ, ‘ಉನ್‍ಝುರ್‌ನಾ’ ಎಂದು ಹೇಳಿರಿ ಮತ್ತು ಕಿವಿಗೊಟ್ಟು ಕೇಳಿರಿ. ಸತ್ಯನಿಷೇಧಿಗಳಿಗೆ ಯಾತನಾಮಯ ಶಿಕ್ಷೆಯಿದೆ.

2:105

مَّا يَوَدُّ ٱلَّذِينَ كَفَرُواْ مِنۡ أَهۡلِ ٱلۡكِتَٰبِ وَلَا ٱلۡمُشۡرِكِينَ أَن يُنَزَّلَ عَلَيۡكُم مِّنۡ خَيۡرٖ مِّن رَّبِّكُمۡۚ وَٱللَّهُ يَخۡتَصُّ بِرَحۡمَتِهِۦ مَن يَشَآءُۚ وَٱللَّهُ ذُو ٱلۡفَضۡلِ ٱلۡعَظِيمِ ﴿105﴾

Transliteration: Ma yawaddu allatheena kafaroo min ahli alkitabi wala almushrikeena an yunazzala AAalaykum min khayrin min rabbikum waAllahu yakhtassu birahmatihi man yashao waAllahu thoo alfadli alAAatheemi

Translation: ನಿಮಗೆ ನಿಮ್ಮ ಪರಿಪಾಲಕನಿಂದ (ಅಲ್ಲಾಹನಿಂದ) ಏನಾದರೂ ಒಳಿತು ಅವತೀರ್ಣವಾಗುವುದು ಗ್ರಂಥದವರಲ್ಲಿ ಮತ್ತು ಬಹುದೇವಾರಾಧಕರಲ್ಲಿ ಸೇರಿದ ಸತ್ಯನಿಷೇಧಿಗಳಿಗೆ ಸ್ವಲ್ಪವೂ ಇಷ್ಟವಿಲ್ಲ. ಅಲ್ಲಾಹು ಅವನು ಇಚ್ಛಿಸುವವರಿಗೆ ಅವನ ದಯೆಯಿಂದ ವಿಶೇಷವಾಗಿ ಕರುಣಿಸುತ್ತಾನೆ. ಅಲ್ಲಾಹು ಮಹಾ ಔದಾರ್ಯದ ಒಡೆಯನಾಗಿದ್ದಾನೆ.

2:106

مَا نَنسَخۡ مِنۡ ءَايَةٍ أَوۡ نُنسِهَا نَأۡتِ بِخَيۡرٖ مِّنۡهَآ أَوۡ مِثۡلِهَآۗ أَلَمۡ تَعۡلَمۡ أَنَّ ٱللَّهَ عَلَىٰ كُلِّ شَيۡءٖ قَدِيرٌ ﴿106﴾

Transliteration: Ma nansakh min ayatin aw nunsiha nati bikhayrin minha aw mithliha alam taAAlam anna Allaha AAala kulli shayin qadeerun

Translation: ನಾವು ಯಾವುದಾದರೂ ವಚನವನ್ನು ರದ್ದುಗೊಳಿಸಿದರೆ, ಅಥವಾ ಮರೆಯುವಂತೆ ಮಾಡಿದರೆ, ಅದಕ್ಕಿಂತಲೂ ಉತ್ತಮವಾದುದನ್ನು ಅಥವಾ ಅದಕ್ಕೆ ಸಮಾನವಾದುದನ್ನು ತರುವೆವು. ನಿಶ್ಚಯವಾಗಿಯೂ ಅಲ್ಲಾಹು ಎಲ್ಲಾ ವಿಷಯಗಳಲ್ಲೂ ಸಾಮರ್ಥ್ಯವುಳ್ಳವನೆಂದು ನಿಮಗೆ ತಿಳಿದಿಲ್ಲವೇ?

2:107

أَلَمۡ تَعۡلَمۡ أَنَّ ٱللَّهَ لَهُۥ مُلۡكُ ٱلسَّمَٰوَٰتِ وَٱلۡأَرۡضِۗ وَمَا لَكُم مِّن دُونِ ٱللَّهِ مِن وَلِيّٖ وَلَا نَصِيرٍ ﴿107﴾

Transliteration: Alam taAAlam anna Allaha lahu mulku alssamawati waalardi wama lakum min dooni Allahi min waliyyin wala naseerin

Translation: ಭೂಮ್ಯಾಕಾಶಗಳ ಸಾರ್ವಭೌಮತ್ವವು ಅಲ್ಲಾಹನಿಗೆ ಮಾತ್ರ ಸೇರಿದ್ದೆಂದು ಮತ್ತು ಅಲ್ಲಾಹನ ಹೊರತು ನಿಮಗೆ ಯಾವುದೇ ರಕ್ಷಕನೋ, ಸಹಾಯಕನೋ ಇಲ್ಲವೆಂದು ನಿಮಗೆ ತಿಳಿದಿಲ್ಲವೇ?

2:108

أَمۡ تُرِيدُونَ أَن تَسۡـَٔلُواْ رَسُولَكُمۡ كَمَا سُئِلَ مُوسَىٰ مِن قَبۡلُۗ وَمَن يَتَبَدَّلِ ٱلۡكُفۡرَ بِٱلۡإِيمَٰنِ فَقَدۡ ضَلَّ سَوَآءَ ٱلسَّبِيلِ ﴿108﴾

Transliteration: Am tureedoona an tasaloo rasoolakum kama suila moosa min qablu waman yatabaddali alkufra bialeemani faqad dalla sawaa alssabeeli

Translation: ಹಿಂದೆ ಮೂಸಾರೊಡನೆ ಅವರ ಅನುಯಾಯಿಗಳು ಕೇಳಿದಂತೆ ನಿಮ್ಮ ಸಂದೇಶವಾಹಕರೊಡನೆ ಕೇಳಲು ನೀವು ಬಯಸುತ್ತೀರಾ? ಯಾರು ಸತ್ಯವಿಶ್ವಾಸವನ್ನು ಸತ್ಯನಿಷೇಧಕ್ಕೆ ಬದಲಾಯಿಸುತ್ತಾನೋ ಅವನು ನೇರ ಮಾರ್ಗದಿಂದ ತಪ್ಪಿ ಹೋಗುತ್ತಾನೆ.

2:109

وَدَّ كَثِيرٞ مِّنۡ أَهۡلِ ٱلۡكِتَٰبِ لَوۡ يَرُدُّونَكُم مِّنۢ بَعۡدِ إِيمَٰنِكُمۡ كُفَّارًا حَسَدٗا مِّنۡ عِندِ أَنفُسِهِم مِّنۢ بَعۡدِ مَا تَبَيَّنَ لَهُمُ ٱلۡحَقُّۖ فَٱعۡفُواْ وَٱصۡفَحُواْ حَتَّىٰ يَأۡتِيَ ٱللَّهُ بِأَمۡرِهِۦٓۗ إِنَّ ٱللَّهَ عَلَىٰ كُلِّ شَيۡءٖ قَدِيرٞ ﴿109﴾

Transliteration: Wadda katheerun min ahli alkitabi law yaruddoonakum min baAAdi eemanikum kuffaran hasadan min AAindi anfusihim min baAAdi ma tabayyana lahumu alhaqqu faoAAfoo waisfahoo hatta yatiya Allahu biamrihi inna Allaha AAala kulli shayin qadeerun

Translation: ಗ್ರಂಥದವರಲ್ಲಿ ಹೆಚ್ಚಿನವರು ಅವರಿಗೆ ಸತ್ಯವೇನೆಂದು ಸ್ಪಷ್ಟವಾದ ಬಳಿಕವೂ ಕೇವಲ ಅಸೂಯೆ ಮತ್ತು ದ್ವೇಷದಿಂದ ನಿಮ್ಮನ್ನು ಸತ್ಯವಿಶ್ವಾಸದಿಂದ ತಪ್ಪಿಸಿ ಸತ್ಯನಿಷೇಧಿಗಳಾಗಿ ಮಾಡಲು ಬಯಸುತ್ತಾರೆ. ಅಲ್ಲಾಹು ತನ್ನ ಆಜ್ಞೆಯನ್ನು ತರುವವರೆಗೆ ನೀವು ಅವರನ್ನು ಕ್ಷಮಿಸಿರಿ ಮತ್ತು ನಿರ್ಲಕ್ಷಿಸಿರಿ. ನಿಶ್ಚಯವಾಗಿಯೂ ಅಲ್ಲಾಹು ಎಲ್ಲಾ ವಿಷಯಗಳಲ್ಲೂ ಸಾಮರ್ಥ್ಯವುಳ್ಳವನಾಗಿದ್ದಾನೆ.

2:110

وَأَقِيمُواْ ٱلصَّلَوٰةَ وَءَاتُواْ ٱلزَّكَوٰةَۚ وَمَا تُقَدِّمُواْ لِأَنفُسِكُم مِّنۡ خَيۡرٖ تَجِدُوهُ عِندَ ٱللَّهِۗ إِنَّ ٱللَّهَ بِمَا تَعۡمَلُونَ بَصِيرٞ ﴿110﴾

Transliteration: Waaqeemoo alssalata waatoo alzzakata wama tuqaddimoo lianfusikum min khayrin tajidoohu AAinda Allahi inna Allaha bima taAAmaloona baseerun

Translation: ನೀವು ನಮಾಝ್ ಸಂಸ್ಥಾಪಿಸಿರಿ ಮತ್ತು ಝಕಾತ್ ನೀಡಿರಿ. ನೀವು ನಿಮಗಾಗಿ ಯಾವೆಲ್ಲಾ ಸತ್ಕಾರ್ಯಗಳನ್ನು ಮುಂದಕ್ಕೆ ಕಳುಹಿಸುತ್ತೀರೋ ಅವೆಲ್ಲವನ್ನೂ ನೀವು ಅಲ್ಲಾಹನ ಬಳಿ ಕಾಣುವಿರಿ. ನಿಶ್ಚಯವಾಗಿಯೂ ಅಲ್ಲಾಹು ನೀವು ಮಾಡುವ ಕರ್ಮಗಳನ್ನು ನೋಡುತ್ತಿದ್ದಾನೆ.

2:111

وَقَالُواْ لَن يَدۡخُلَ ٱلۡجَنَّةَ إِلَّا مَن كَانَ هُودًا أَوۡ نَصَٰرَىٰۗ تِلۡكَ أَمَانِيُّهُمۡۗ قُلۡ هَاتُواْ بُرۡهَٰنَكُمۡ إِن كُنتُمۡ صَٰدِقِينَ ﴿111﴾

Transliteration: Waqaloo lan yadkhula aljannata illa man kana hoodan aw nasara tilka amaniyyuhum qul hatoo burhanakum in kuntum sadiqeena

Translation: ಅವರು ಹೇಳುತ್ತಾರೆ: “ಯಹೂದಿ ಅಥವಾ ಕ್ರೈಸ್ತರ ಹೊರತು ಇನ್ನಾರೂ ಸ್ವರ್ಗಕ್ಕೆ ಹೋಗುವುದಿಲ್ಲ.” ಅವೆಲ್ಲವೂ ಅವರ ಗುಮಾನಿಗಳಾಗಿವೆ. ಹೇಳಿರಿ: “ನೀವು ಸತ್ಯವಂತರಾಗಿದ್ದರೆ ನಿಮ್ಮ ಪುರಾವೆಯನ್ನು ತನ್ನಿರಿ.”

2:112

بَلَىٰۚ مَنۡ أَسۡلَمَ وَجۡهَهُۥ لِلَّهِ وَهُوَ مُحۡسِنٞ فَلَهُۥٓ أَجۡرُهُۥ عِندَ رَبِّهِۦ وَلَا خَوۡفٌ عَلَيۡهِمۡ وَلَا هُمۡ يَحۡزَنُونَ ﴿112﴾

Transliteration: Bala man aslama wajhahu lillahi wahuwa muhsinun falahu ajruhu AAinda rabbihi wala khawfun AAalayhim wala hum yahzanoona

Translation: ಹೌದು! ಯಾರು ನಿಷ್ಕಳಂಕತೆಯಿಂದ ತನ್ನನ್ನು ತಾನೇ ಅಲ್ಲಾಹನಿಗೆ ಶರಣಾಗಿಸುತ್ತಾನೋ ಅವನಿಗೆ ಅವನ ಪ್ರತಿಫಲವು ಅವನ ಪರಿಪಾಲಕನ (ಅಲ್ಲಾಹನ) ಬಳಿಯಿದೆ. ಅವರಿಗೆ ಯಾವುದೇ ಭಯವಿಲ್ಲ; ಅವರು ದುಃಖಿಸುವುದೂ ಇಲ್ಲ.

2:113

وَقَالَتِ ٱلۡيَهُودُ لَيۡسَتِ ٱلنَّصَٰرَىٰ عَلَىٰ شَيۡءٖ وَقَالَتِ ٱلنَّصَٰرَىٰ لَيۡسَتِ ٱلۡيَهُودُ عَلَىٰ شَيۡءٖ وَهُمۡ يَتۡلُونَ ٱلۡكِتَٰبَۗ كَذَٰلِكَ قَالَ ٱلَّذِينَ لَا يَعۡلَمُونَ مِثۡلَ قَوۡلِهِمۡۚ فَٱللَّهُ يَحۡكُمُ بَيۡنَهُمۡ يَوۡمَ ٱلۡقِيَٰمَةِ فِيمَا كَانُواْ فِيهِ يَخۡتَلِفُونَ ﴿113﴾

Transliteration: Waqalati alyahoodu laysati alnnasara AAala shayin waqalati alnnasara laysati alyahoodu AAala shayin wahum yatloona alkitaba kathalika qala allatheena la yaAAlamoona mithla qawlihim faAllahu yahkumu baynahum yawma alqiyamati feema kanoo feehi yakhtalifoona

Translation: ಕ್ರೈಸ್ತರು ಸತ್ಯದಲ್ಲಿಲ್ಲ ಎಂದು ಯಹೂದಿಗಳು ಹೇಳುತ್ತಾರೆ. ಯಹೂದಿಗಳು ಸತ್ಯದಲ್ಲಿಲ್ಲ ಎಂದು ಕ್ರೈಸ್ತರು ಹೇಳುತ್ತಾರೆ. ವಾಸ್ತವವಾಗಿ, ಅವರೆಲ್ಲರೂ ಗ್ರಂಥವನ್ನು (ತೋರಾ) ಪಠಿಸುತ್ತಾರೆ. ತಿಳುವಳಿಕೆಯಿಲ್ಲದ ಜನರು ಕೂಡ ಅವರು ಹೇಳಿದಂತೆಯೇ ಹೇಳುತ್ತಾರೆ. ಅವರು ಯಾವ ವಿಷಯದಲ್ಲಿ ಭಿನ್ನಮತ ತಳೆದರೋ ಅದರ ಬಗ್ಗೆ ಪುನರುತ್ಥಾನ ದಿನದಂದು ಅಲ್ಲಾಹು ಅವರ ನಡುವೆ ತೀರ್ಪು ನೀಡುವನು.

2:114

وَمَنۡ أَظۡلَمُ مِمَّن مَّنَعَ مَسَٰجِدَ ٱللَّهِ أَن يُذۡكَرَ فِيهَا ٱسۡمُهُۥ وَسَعَىٰ فِي خَرَابِهَآۚ أُوْلَـٰٓئِكَ مَا كَانَ لَهُمۡ أَن يَدۡخُلُوهَآ إِلَّا خَآئِفِينَۚ لَهُمۡ فِي ٱلدُّنۡيَا خِزۡيٞ وَلَهُمۡ فِي ٱلۡأٓخِرَةِ عَذَابٌ عَظِيمٞ ﴿114﴾

Transliteration: Waman athlamu mimman manaAAa masajida Allahi an yuthkara feeha ismuhu wasaAAa fee kharabiha olaika ma kana lahum an yadkhulooha illa khaifeena lahum fee alddunya khizyun walahum fee alakhirati AAathabun AAatheemun

Translation: ಅಲ್ಲಾಹನ ಮಸೀದಿಗಳಲ್ಲಿ ಅವನ ಹೆಸರನ್ನು ಸ್ಮರಿಸುವುದನ್ನು ತಡೆಯುವವನಿಗಿಂತ ಮತ್ತು ಅವುಗಳ (ಮಸೀದಿಗಳ) ನಾಶಕ್ಕಾಗಿ ಪರಿಶ್ರಮಿಸುವವನಿಗಿಂತ ದೊಡ್ಡ ಅಕ್ರಮಿ ಯಾರು? ಅವರು ಭಯಪಡುವವರಾಗಿಯೇ ಹೊರತು ಅವುಗಳನ್ನು ಪ್ರವೇಶಿಸಬಾರದಿತ್ತು. ಅವರಿಗೆ ಇಹಲೋಕದಲ್ಲಿ ಅಪಮಾನವಿದೆ ಮತ್ತು ಪರಲೋಕದಲ್ಲಿ ಕಠೋರ ಶಿಕ್ಷೆಯಿದೆ.

2:115

وَلِلَّهِ ٱلۡمَشۡرِقُ وَٱلۡمَغۡرِبُۚ فَأَيۡنَمَا تُوَلُّواْ فَثَمَّ وَجۡهُ ٱللَّهِۚ إِنَّ ٱللَّهَ وَٰسِعٌ عَلِيمٞ ﴿115﴾

Transliteration: Walillahi almashriqu waalmaghribu faaynama tuwalloo fathamma wajhu Allahi inna Allaha wasiAAun AAaleemun

Translation: ಪೂರ್ವ ಮತ್ತು ಪಶ್ಚಿಮವು ಅಲ್ಲಾಹನಿಗೆ ಸೇರಿದ್ದು. ನೀವು ಯಾವ ದಿಕ್ಕಿಗೆ ತಿರುಗಿದರೂ ಅಲ್ಲಿ ಅಲ್ಲಾಹನ ಮುಖವಿದೆ. ನಿಶ್ಚಯವಾಗಿಯೂ ಅಲ್ಲಾಹು ಅತ್ಯಂತ ವಿಶಾಲನು ಮತ್ತು ಸರ್ವಜ್ಞನಾಗಿದ್ದಾನೆ.

2:116

وَقَالُواْ ٱتَّخَذَ ٱللَّهُ وَلَدٗاۗ سُبۡحَٰنَهُۥۖ بَل لَّهُۥ مَا فِي ٱلسَّمَٰوَٰتِ وَٱلۡأَرۡضِۖ كُلّٞ لَّهُۥ قَٰنِتُونَ ﴿116﴾

Transliteration: Waqaloo itakhatha Allahu waladan subhanahu bal lahu ma fee alssamawati waalardi kullun lahu qanitoona

Translation: ಅಲ್ಲಾಹನಿಗೆ ಮಕ್ಕಳಿದ್ದಾರೆ ಎಂದು ಅವರು ಹೇಳುತ್ತಾರೆ. (ಇಲ್ಲ, ಬದಲಿಗೆ) ಅವನು ಪರಿಶುದ್ಧನು! ಭೂಮ್ಯಾಕಾಶಗಳಲ್ಲಿರುವ ಎಲ್ಲಾ ಸೃಷ್ಟಿಗಳೂ ಅವನಿಗೆ ಸೇರಿದ್ದು. ಎಲ್ಲವೂ ಅವನಿಗೆ ವಿಧೇಯವಾಗಿವೆ.

2:117

بَدِيعُ ٱلسَّمَٰوَٰتِ وَٱلۡأَرۡضِۖ وَإِذَا قَضَىٰٓ أَمۡرٗا فَإِنَّمَا يَقُولُ لَهُۥ كُن فَيَكُونُ ﴿117﴾

Transliteration: BadeeAAu alssamawati waalardi waitha qada amran fainnama yaqoolu lahu kun fayakoonu

Translation: ಅವನು ಯಾವುದೇ ಪೂರ್ವ ಮಾದರಿಯಿಲ್ಲದೆ ಭೂಮ್ಯಾಕಾಶಗಳನ್ನು ಸೃಷ್ಟಿಸಿದವನು. ಅವನು ಒಂದು ವಿಷಯವನ್ನು ತೀರ್ಮಾನಿಸಿದರೆ, ಅದಕ್ಕೆ ಉಂಟಾಗು ಎಂದು ಹೇಳುವನು; ಆಗ ಅದು ಉಂಟಾಗುವುದು.

2:118

وَقَالَ ٱلَّذِينَ لَا يَعۡلَمُونَ لَوۡلَا يُكَلِّمُنَا ٱللَّهُ أَوۡ تَأۡتِينَآ ءَايَةٞۗ كَذَٰلِكَ قَالَ ٱلَّذِينَ مِن قَبۡلِهِم مِّثۡلَ قَوۡلِهِمۡۘ تَشَٰبَهَتۡ قُلُوبُهُمۡۗ قَدۡ بَيَّنَّا ٱلۡأٓيَٰتِ لِقَوۡمٖ يُوقِنُونَ ﴿118﴾

Transliteration: Waqala allatheena la yaAAlamoona lawla yukallimuna Allahu aw tateena ayatun kathalika qala allatheena min qablihim mithla qawlihim tashabahat quloobuhum qad bayyanna alayati liqawmin yooqinoona

Translation: ಜ್ಞಾನವಿಲ್ಲದವರು ಹೇಳುತ್ತಾರೆ: “ಅಲ್ಲಾಹನೇಕೆ ನಮ್ಮೊಡನೆ ಮಾತನಾಡುವುದಿಲ್ಲ? ಅಥವಾ ನಮ್ಮ ಬಳಿಗೆ ಒಂದು ದೃಷ್ಟಾಂತವೇಕೆ ಬರುವುದಿಲ್ಲ?” ಇವರು ಹೇಳಿದಂತೆಯೇ ಇವರಿಗಿಂತ ಮೊದಲಿನವರೂ ಹೇಳಿದ್ದರು. ಇವರ ಮತ್ತು ಅವರ ಹೃದಯಗಳು ಸಮಾನವಾಗಿವೆ. ದೃಢವಿಶ್ವಾಸವಿಡುವ ಜನರಿಗೆ ನಾವು ದೃಷ್ಟಾಂತಗಳನ್ನು ವಿವರಿಸಿಕೊಟ್ಟಿದ್ದೇವೆ.

2:119

إِنَّآ أَرۡسَلۡنَٰكَ بِٱلۡحَقِّ بَشِيرٗا وَنَذِيرٗاۖ وَلَا تُسۡـَٔلُ عَنۡ أَصۡحَٰبِ ٱلۡجَحِيمِ ﴿119﴾

Transliteration: Inna arsalnaka bialhaqqi basheeran wanatheeran wala tusalu Aaan ashabi aljaheemi

Translation: ನಿಶ್ಚಯವಾಗಿಯೂ ನಾವು ನಿಮ್ಮನ್ನು ಸುವಾರ್ತೆ ನೀಡುವವರಾಗಿ ಮತ್ತು ಮುನ್ನೆಚ್ಚರಿಕೆ ನೀಡುವವರಾಗಿ ಸತ್ಯದೊಂದಿಗೆ ಕಳುಹಿಸಿದ್ದೇವೆ. ನರಕವಾಸಿಗಳ ಕುರಿತು ನಿಮ್ಮೊಂದಿಗೆ ಪ್ರಶ್ನಿಸಲಾಗುವುದಿಲ್ಲ.

2:120

وَلَن تَرۡضَىٰ عَنكَ ٱلۡيَهُودُ وَلَا ٱلنَّصَٰرَىٰ حَتَّىٰ تَتَّبِعَ مِلَّتَهُمۡۗ قُلۡ إِنَّ هُدَى ٱللَّهِ هُوَ ٱلۡهُدَىٰۗ وَلَئِنِ ٱتَّبَعۡتَ أَهۡوَآءَهُم بَعۡدَ ٱلَّذِي جَآءَكَ مِنَ ٱلۡعِلۡمِ مَا لَكَ مِنَ ٱللَّهِ مِن وَلِيّٖ وَلَا نَصِيرٍ ﴿120﴾

Transliteration: Walan tarda AAanka alyahoodu wala alnnasara hatta tattabiAAa millatahum qul inna huda Allahi huwa alhuda walaini ittabaAAta ahwaahum baAAda allathee jaaka mina alAAilmi ma laka mina Allahi min waliyyin wala naseerin

Translation: ನೀವು ಅವರ ಮಾರ್ಗವನ್ನು ಅನುಸರಿಸುವ ತನಕ ಯಹೂದಿಗಳು ಮತ್ತು ಕ್ರೈಸ್ತರು ನಿಮ್ಮ ಬಗ್ಗೆ ಸಂಪ್ರೀತರಾಗುವುದೇ ಇಲ್ಲ. ಹೇಳಿರಿ: “ಅಲ್ಲಾಹನ ಮಾರ್ಗದರ್ಶನವೇ ನಿಜವಾದ ಮಾರ್ಗದರ್ಶನ.” ನಿಮ್ಮ ಬಳಿಗೆ ಜ್ಞಾನವು ಬಂದ ಬಳಿಕವೂ ನೀವು ಅವರ ಸ್ವೇಚ್ಛೆಗಳನ್ನು ಹಿಂಬಾಲಿಸಿದರೆ, ಅಲ್ಲಾಹನಿಂದ ನಿಮ್ಮನ್ನು ರಕ್ಷಿಸುವ ಯಾವುದೇ ರಕ್ಷಕರು ಅಥವಾ ಸಹಾಯಕರು ಇರಲಾರರು.

2:121

ٱلَّذِينَ ءَاتَيۡنَٰهُمُ ٱلۡكِتَٰبَ يَتۡلُونَهُۥ حَقَّ تِلَاوَتِهِۦٓ أُوْلَـٰٓئِكَ يُؤۡمِنُونَ بِهِۦۗ وَمَن يَكۡفُرۡ بِهِۦ فَأُوْلَـٰٓئِكَ هُمُ ٱلۡخَٰسِرُونَ ﴿121﴾

Transliteration: Allatheena ataynahumu alkitaba yatloonahu haqqa tilawatihi olaika yuminoona bihi waman yakfur bihi faolaika humu alkhasiroona

Translation: ನಾವು ಯಾರಿಗೆ ಗ್ರಂಥವನ್ನು ನೀಡಿದ್ದೇವೆಯೋ ಅವರು ಅದನ್ನು ಪಠಿಸಬೇಕಾದ ರೀತಿಯಲ್ಲೇ ಪಠಿಸುತ್ತಾರೆ. ಅವರು ಅದರಲ್ಲಿ ವಿಶ್ವಾಸವಿಡುತ್ತಾರೆ. ಯಾರು ಅದರಲ್ಲಿ ವಿಶ್ವಾಸವಿಡುವುದಿಲ್ಲವೋ ಅವರೇ ನಷ್ಟ ಹೊಂದಿದವರು.

2:122

يَٰبَنِيٓ إِسۡرَـٰٓءِيلَ ٱذۡكُرُواْ نِعۡمَتِيَ ٱلَّتِيٓ أَنۡعَمۡتُ عَلَيۡكُمۡ وَأَنِّي فَضَّلۡتُكُمۡ عَلَى ٱلۡعَٰلَمِينَ ﴿122﴾

Transliteration: Ya banee israeela othkuroo niAAmatiya allatee anAAamtu AAalaykum waannee faddaltukum AAala alAAalameena

Translation: ಓ ಇಸ್ರಾಯೇಲ್ ಮಕ್ಕಳೇ! ನಾನು ನಿಮಗೆ ಅನುಗ್ರಹಿಸಿದ ನನ್ನ ಅನುಗ್ರಹವನ್ನು ಮತ್ತು ನಾನು ನಿಮ್ಮನ್ನು ಸರ್ವಲೋಕದವರಿಗಿಂತ (ಎಲ್ಲಾ ಮನುಷ್ಯರಿಗಿಂತ) ಶ್ರೇಷ್ಠಗೊಳಿಸಿರುವುದನ್ನು ಸ್ಮರಿಸಿರಿ.

2:123

وَٱتَّقُواْ يَوۡمٗا لَّا تَجۡزِي نَفۡسٌ عَن نَّفۡسٖ شَيۡـٔٗا وَلَا يُقۡبَلُ مِنۡهَا عَدۡلٞ وَلَا تَنفَعُهَا شَفَٰعَةٞ وَلَا هُمۡ يُنصَرُونَ ﴿123﴾

Transliteration: Waittaqoo yawman la tajzee nafsun AAan nafsin shayan wala yuqbalu minha AAadlun wala tanfaAAuha shafaAAatun wala hum yunsaroona

Translation: ಒಬ್ಬ ವ್ಯಕ್ತಿ ಇನ್ನೊಬ್ಬ ವ್ಯಕ್ತಿಗೆ ಯಾವುದೇ ಉಪಕಾರ ಮಾಡದ, ಅವನಿಂದ ಯಾವುದೇ ದಂಡ ಸ್ವೀಕರಿಸದ, ಅವನಿಗೆ ಯಾವುದೇ ಶಿಫಾರಸು ಪ್ರಯೋಜನಪಡದ ಮತ್ತು ಅವರಿಗೆ ಯಾವುದೇ ಸಹಾಯವು ದೊರೆಯದ ಒಂದು ದಿನವನ್ನು ಭಯಪಡಿರಿ.

2:124

وَإِذِ ٱبۡتَلَىٰٓ إِبۡرَٰهِـۧمَ رَبُّهُۥ بِكَلِمَٰتٖ فَأَتَمَّهُنَّۖ قَالَ إِنِّي جَاعِلُكَ لِلنَّاسِ إِمَامٗاۖ قَالَ وَمِن ذُرِّيَّتِيۖ قَالَ لَا يَنَالُ عَهۡدِي ٱلظَّـٰلِمِينَ ﴿124﴾

Transliteration: Waithi ibtala ibraheema rabbuhu bikalimatin faatammahunna qala innee jaAAiluka lilnnasi imaman qala wamin thurriyyatee qala la yanalu AAahdee alththalimeena

Translation: ಇಬ್ರಾಹೀಮರನ್ನು ಅವರ ಪರಿಪಾಲಕನು (ಅಲ್ಲಾಹು) ಕೆಲವು ವಚನಗಳ ಮೂಲಕ ಪರೀಕ್ಷಿಸಿದ ಸಂದರ್ಭ(ವನ್ನು ಸ್ಮರಿಸಿ). ಅವರು ಅವೆಲ್ಲವನ್ನೂ ಪೂರ್ಣಗೊಳಿಸಿದರು. ಅಲ್ಲಾಹು ಹೇಳಿದನು: “ನಾನು ನಿಮ್ಮನ್ನು ಜನರಿಗೆ ಮುಖಂಡನನ್ನಾಗಿ ಮಾಡುತ್ತೇನೆ.” ಅವರು ಹೇಳಿದರು: “ನನ್ನ ಸಂತಾನದಲ್ಲಿಯೂ ಮಾಡು.” ಅಲ್ಲಾಹು ಹೇಳಿದನು: “ನನ್ನ ವಾಗ್ದಾನವು ಅಕ್ರಮಿಗಳಿಗೆ ಅನ್ವಯವಾಗುವುದಿಲ್ಲ.”

2:125

وَإِذۡ جَعَلۡنَا ٱلۡبَيۡتَ مَثَابَةٗ لِّلنَّاسِ وَأَمۡنٗا وَٱتَّخِذُواْ مِن مَّقَامِ إِبۡرَٰهِـۧمَ مُصَلّٗىۖ وَعَهِدۡنَآ إِلَىٰٓ إِبۡرَٰهِـۧمَ وَإِسۡمَٰعِيلَ أَن طَهِّرَا بَيۡتِيَ لِلطَّآئِفِينَ وَٱلۡعَٰكِفِينَ وَٱلرُّكَّعِ ٱلسُّجُودِ ﴿125﴾

Transliteration: Waith jaAAalna albayta mathabatan lilnnasi waamnan waittakhithoo min maqami ibraheema musallan waAAahidna ila ibraheema waismaAAeela an tahhira baytiya lilttaifeena waalAAakifeena waalrrukkaAAi alssujoodi

Translation: ನಾವು ಆ ಭವನವನ್ನು (ಕಅ‌ಬಾಲಯವನ್ನು) ಜನರಿಗೆ ಪುಣ್ಯಸ್ಥಳವಾಗಿ ಮತ್ತು ನಿರ್ಭಯ ಸ್ಥಳವಾಗಿ ಮಾಡಿದ ಸಂದರ್ಭ. ಇಬ್ರಾಹೀಮರು ನಿಂತ ಸ್ಥಳವನ್ನು ನಮಾಝಿನ ಸ್ಥಳವಾಗಿ ಮಾಡಿಕೊಳ್ಳಿರಿ. “ಪ್ರದಕ್ಷಿಣೆ ಮಾಡುವವರಿಗೆ, ಧ್ಯಾನ ಮಗ್ನರಾಗಿ ಕೂರುವವರಿಗೆ, ತಲೆಬಾಗುವವರಿಗೆ ಮತ್ತು ಸಾಷ್ಟಾಂಗ ಮಾಡುವವರಿಗೆ ನನ್ನ ಭವನವನ್ನು ಶುದ್ಧೀಕರಿಸಿರಿ” ಎಂದು ನಾವು ಇಬ್ರಾಹೀಮ್ ಮತ್ತು ಇಸ್ಮಾಈಲರಿಗೆ ಆದೇಶಿಸಿದೆವು.

2:126

وَإِذۡ قَالَ إِبۡرَٰهِـۧمُ رَبِّ ٱجۡعَلۡ هَٰذَا بَلَدًا ءَامِنٗا وَٱرۡزُقۡ أَهۡلَهُۥ مِنَ ٱلثَّمَرَٰتِ مَنۡ ءَامَنَ مِنۡهُم بِٱللَّهِ وَٱلۡيَوۡمِ ٱلۡأٓخِرِۚ قَالَ وَمَن كَفَرَ فَأُمَتِّعُهُۥ قَلِيلٗا ثُمَّ أَضۡطَرُّهُۥٓ إِلَىٰ عَذَابِ ٱلنَّارِۖ وَبِئۡسَ ٱلۡمَصِيرُ ﴿126﴾

Transliteration: Waith qala ibraheemu rabbi ijAAal hatha baladan aminan waorzuq ahlahu mina alththamarati man amana minhum biAllahi waalyawmi alakhiri qala waman kafara faomattiAAuhu qaleelan thumma adtarruhu ila AAathabi alnnari wabisa almaseeru

Translation: ಇಬ್ರಾಹೀಮ್ ಹೇಳಿದ ಸಂದರ್ಭ(ವನ್ನು ಸ್ಮರಿಸಿ): “ಓ ನನ್ನ ಪರಿಪಾಲಕನೇ! ನೀನು ಇದನ್ನು ಸುರಕ್ಷಿತ ನಗರವನ್ನಾಗಿ ಮಾಡು ಮತ್ತು ಇದರ ನಿವಾಸಿಗಳಿಗೆ—ಅವರ ಪೈಕಿ ಅಲ್ಲಾಹನಲ್ಲಿ ಮತ್ತು ಅಂತ್ಯ ದಿನದಲ್ಲಿ ವಿಶ್ವಾಸವಿಡುವವರಿಗೆ—ಹಣ್ಣು-ಹಂಪಲುಗಳ ಆಹಾರವನ್ನು ನೀಡು.” ಅಲ್ಲಾಹು ಹೇಳಿದನು: “ನಾನು ಸತ್ಯನಿಷೇಧಿಗಳಿಗೂ ಅಲ್ಪಕಾಲದ ಸವಲತ್ತುಗಳನ್ನು ನೀಡುವೆನು. ನಂತರ ನರಕ ಶಿಕ್ಷೆಗೆ ಅವರನ್ನು ನಿರ್ಬಂಧಿಸುವೆನು.” ಆ ಗಮ್ಯಸ್ಥಾನವು ಬಹಳ ನಿಕೃಷ್ಟವಾಗಿದೆ.

2:127

وَإِذۡ يَرۡفَعُ إِبۡرَٰهِـۧمُ ٱلۡقَوَاعِدَ مِنَ ٱلۡبَيۡتِ وَإِسۡمَٰعِيلُ رَبَّنَا تَقَبَّلۡ مِنَّآۖ إِنَّكَ أَنتَ ٱلسَّمِيعُ ٱلۡعَلِيمُ ﴿127﴾

Transliteration: Waith yarfaAAu ibraheemu alqawaAAida mina albayti waismaAAeelu rabbana taqabbal minna innaka anta alssameeAAu alAAaleemu

Translation: ಇಬ್ರಾಹೀಮ್ ಮತ್ತು ಇಸ್ಮಾಈಲರು ಕಅಬಾಲಯದ ಅಡಿಪಾಯ ಮತ್ತು ಗೋಡೆಗಳನ್ನು ಎತ್ತರಿಸುತ್ತಿದ್ದ ಸಂದರ್ಭ. (ಅವರು ಹೇಳಿದರು): “ಓ ನಮ್ಮ ಪರಿಪಾಲಕನೇ! ನಮ್ಮಿಂದ ಇದನ್ನು ಸ್ವೀಕರಿಸು. ನಿಶ್ಚಯವಾಗಿಯೂ ನೀನು ಎಲ್ಲವನ್ನೂ ಕೇಳುವವನು ಮತ್ತು ಎಲ್ಲವನ್ನೂ ತಿಳಿದವನಾಗಿರುವೆ.

2:128

رَبَّنَا وَٱجۡعَلۡنَا مُسۡلِمَيۡنِ لَكَ وَمِن ذُرِّيَّتِنَآ أُمَّةٗ مُّسۡلِمَةٗ لَّكَ وَأَرِنَا مَنَاسِكَنَا وَتُبۡ عَلَيۡنَآۖ إِنَّكَ أَنتَ ٱلتَّوَّابُ ٱلرَّحِيمُ ﴿128﴾

Transliteration: Rabbana waijAAalna muslimayni laka wamin thurriyyatina ommatan muslimatan laka waarina manasikana watub AAalayna innaka anta alttawwabu alrraheemu

Translation: ಓ ನಮ್ಮ ಪರಿಪಾಲಕನೇ! ನಮ್ಮಿಬ್ಬರನ್ನೂ ನಿನ್ನ ಆಜ್ಞಾಪಾಲಕರನ್ನಾಗಿ ಮಾಡು ಮತ್ತು ನಮ್ಮ ಸಂತಾನದಿಂದಲೂ ನಿನಗೆ ಶರಣಾದ ಒಂದು ಸಮುದಾಯವನ್ನು ಉಂಟುಮಾಡು. ನಮಗೆ ನಮ್ಮ ಆರಾಧನಾ ಕ್ರಮಗಳನ್ನು ಕಲಿಸಿಕೊಡು ಮತ್ತು ನಮ್ಮ ಪಶ್ಚಾತ್ತಾಪವನ್ನು ಸ್ವೀಕರಿಸು. ನಿಶ್ಚಯವಾಗಿಯೂ ನೀನು ಪಶ್ಚಾತ್ತಾಪ ಸ್ವೀಕರಿಸುವವನು ಮತ್ತು ಕರುಣೆ ತೋರುವವನಾಗಿರುವೆ.

2:129

رَبَّنَا وَٱبۡعَثۡ فِيهِمۡ رَسُولٗا مِّنۡهُمۡ يَتۡلُواْ عَلَيۡهِمۡ ءَايَٰتِكَ وَيُعَلِّمُهُمُ ٱلۡكِتَٰبَ وَٱلۡحِكۡمَةَ وَيُزَكِّيهِمۡۖ إِنَّكَ أَنتَ ٱلۡعَزِيزُ ٱلۡحَكِيمُ ﴿129﴾

Transliteration: Rabbana waibAAath feehim rasoolan minhum yatloo AAalayhim ayatika wayuAAallimuhumu alkitaba waalhikmata wayuzakkeehim innaka anta alAAazeezu alhakeemu

Translation: ಓ ನಮ್ಮ ಪರಿಪಾಲಕನೇ! ನಿನ್ನ ದೃಷ್ಟಾಂತಗಳನ್ನು ಪಠಿಸುವ, ಗ್ರಂಥವನ್ನು ಹಾಗೂ ವಿವೇಕವನ್ನು ಕಲಿಸಿಕೊಡುವ ಮತ್ತು ಅವರನ್ನು ಶುದ್ಧೀಕರಿಸುವ ಒಬ್ಬ ಸಂದೇಶವಾಹಕರನ್ನು ಅವರಿಂದಲೇ ಅವರಿಗೆ ಕಳುಹಿಸು.[1] ನಿಶ್ಚಯವಾಗಿಯೂ ನೀನು ಪ್ರಬಲನು ಮತ್ತು ವಿವೇಕಪೂರ್ಣನಾಗಿರುವೆ.”

2:130

وَمَن يَرۡغَبُ عَن مِّلَّةِ إِبۡرَٰهِـۧمَ إِلَّا مَن سَفِهَ نَفۡسَهُۥۚ وَلَقَدِ ٱصۡطَفَيۡنَٰهُ فِي ٱلدُّنۡيَاۖ وَإِنَّهُۥ فِي ٱلۡأٓخِرَةِ لَمِنَ ٱلصَّـٰلِحِينَ ﴿130﴾

Transliteration: Waman yarghabu AAan millati ibraheema illa man safiha nafsahu walaqadi istafaynahu fee alddunya wainnahu fee alakhirati lamina alssaliheena

Translation: ಸ್ವಯಂ ಅವಿವೇಕಿಯಾಗಿರುವವನ ಹೊರತು ಇನ್ನಾರೂ ಇಬ್ರಾಹೀಮರ ಮಾರ್ಗದಿಂದ ವಿಮುಖರಾಗುವುದಿಲ್ಲ. ಇಹಲೋಕದಲ್ಲಿ ನಾವು ಅವರನ್ನು (ಇಬ್ರಾಹೀಮರನ್ನು) ವಿಶೇಷವಾಗಿ ಆರಿಸಿದ್ದೇವೆ. ಪರಲೋಕದಲ್ಲಿ ಅವರು ನೀತಿವಂತರಲ್ಲಿ ಸೇರಿರುತ್ತಾರೆ.

2:131

إِذۡ قَالَ لَهُۥ رَبُّهُۥٓ أَسۡلِمۡۖ قَالَ أَسۡلَمۡتُ لِرَبِّ ٱلۡعَٰلَمِينَ ﴿131﴾

Transliteration: Ith qala lahu rabbuhu aslim qala aslamtu lirabbi alAAalameena

Translation: ಅವರೊಡನೆ ಅವರ ಪರಿಪಾಲಕನು (ಅಲ್ಲಾಹು) “ಶರಣಾಗು” ಎಂದಾಗ, ಅವರು ಹೇಳಿದರು: “ಸರ್ವಲೋಕಗಳ ಪರಿಪಾಲಕನಿಗೆ (ಅಲ್ಲಾಹನಿಗೆ) ನಾನು ಸಂಪೂರ್ಣ ಶರಣಾಗಿದ್ದೇನೆ.”

2:132

وَوَصَّىٰ بِهَآ إِبۡرَٰهِـۧمُ بَنِيهِ وَيَعۡقُوبُ يَٰبَنِيَّ إِنَّ ٱللَّهَ ٱصۡطَفَىٰ لَكُمُ ٱلدِّينَ فَلَا تَمُوتُنَّ إِلَّا وَأَنتُم مُّسۡلِمُونَ ﴿132﴾

Transliteration: Wawassa biha ibraheemu baneehi wayaAAqoobu ya baniyya inna Allaha istafa lakumu alddeena fala tamootunna illa waantum muslimoona

Translation: ಇಬ್ರಾಹೀಮ್ ಮತ್ತು ಯಾಕೂಬರು ತಮ್ಮ ಸಂತಾನಕ್ಕೆ ಅದನ್ನೇ ಉಪದೇಶಿಸುತ್ತಾ ಹೇಳಿದರು: “ಓ ನನ್ನ ಮಕ್ಕಳೇ! ನಿಶ್ಚಯವಾಗಿಯೂ ಅಲ್ಲಾಹು ಈ ಧರ್ಮವನ್ನು ನಿಮಗೆ ವಿಶೇಷವಾಗಿ ಆರಿಸಿದ್ದಾನೆ. ಆದ್ದರಿಂದ ನೀವು ಮುಸ್ಲಿಮರಾಗಿಯೇ ಹೊರತು ಇಹಲೋಕ ತ್ಯಜಿಸಬೇಡಿ.”

2:133

أَمۡ كُنتُمۡ شُهَدَآءَ إِذۡ حَضَرَ يَعۡقُوبَ ٱلۡمَوۡتُ إِذۡ قَالَ لِبَنِيهِ مَا تَعۡبُدُونَ مِنۢ بَعۡدِيۖ قَالُواْ نَعۡبُدُ إِلَٰهَكَ وَإِلَٰهَ ءَابَآئِكَ إِبۡرَٰهِـۧمَ وَإِسۡمَٰعِيلَ وَإِسۡحَٰقَ إِلَٰهٗا وَٰحِدٗا وَنَحۡنُ لَهُۥ مُسۡلِمُونَ ﴿133﴾

Transliteration: Am kuntum shuhadaa ith hadara yaAAqooba almawtu ith qala libaneehi ma taAAbudoona min baAAdee qaloo naAAbudu ilahaka wailaha abaika ibraheema waismaAAeela waishaqa ilahan wahidan wanahnu lahu muslimoona

Translation: ಯಾಕೂಬರ ಮರಣದ ಸಮಯದಲ್ಲಿ ನೀವು ಅಲ್ಲಿ ಉಪಸ್ಥಿತರಿದ್ದಿರಾ? ಅವರು ತಮ್ಮ ಮಕ್ಕಳೊಡನೆ, “ನನ್ನ ಬಳಿಕ ನೀವು ಯಾರನ್ನು ಆರಾಧಿಸುತ್ತೀರಿ?” ಎಂದು ಕೇಳಿದ ಸಂದರ್ಭ. ಮಕ್ಕಳು ಹೇಳಿದರು: “ನಾವು ನಿಮ್ಮ ದೇವನು ಮತ್ತು ನಿಮ್ಮ ಪೂರ್ವಜರಾದ ಇಬ್ರಾಹೀಮ್, ಇಸ್ಮಾಈಲ್ ಹಾಗೂ ಇಸ್‍ಹಾಕರ ದೇವನಾದ ಏಕೈಕ ದೇವನನ್ನು ಆರಾಧಿಸುತ್ತೇವೆ. ನಾವು ಅವನಿಗೆ ಶರಣಾಗಿ ಬದುಕುತ್ತೇವೆ.”

2:134

تِلۡكَ أُمَّةٞ قَدۡ خَلَتۡۖ لَهَا مَا كَسَبَتۡ وَلَكُم مَّا كَسَبۡتُمۡۖ وَلَا تُسۡـَٔلُونَ عَمَّا كَانُواْ يَعۡمَلُونَ ﴿134﴾

Transliteration: Tilka ommatun qad khalat laha ma kasabat walakum ma kasabtum wala tusaloona AAamma kano yaAAmaloona

Translation: ಆ ಸಮುದಾಯವು ಕಳೆದುಹೋಗಿದೆ. ಅವರು ಮಾಡಿದ್ದು ಅವರಿಗೆ ಮತ್ತು ನೀವು ಮಾಡಿದ್ದು ನಿಮಗೆ. ಅವರು ಮಾಡಿದ ಕರ್ಮಗಳ ಬಗ್ಗೆ ನಿಮ್ಮೊಂದಿಗೆ ಪ್ರಶ್ನಿಸಲಾಗುವುದಿಲ್ಲ.

2:135

وَقَالُواْ كُونُواْ هُودًا أَوۡ نَصَٰرَىٰ تَهۡتَدُواْۗ قُلۡ بَلۡ مِلَّةَ إِبۡرَٰهِـۧمَ حَنِيفٗاۖ وَمَا كَانَ مِنَ ٱلۡمُشۡرِكِينَ ﴿135﴾

Transliteration: Waqaloo koonoo hoodan aw nasara tahtadoo qul bal millata ibraheema haneefan wama kana mina almushrikeena

Translation: ಅವರು ಹೇಳಿದರು: “ನೀವು ಯಹೂದಿಗಳು ಅಥವಾ ಕ್ರೈಸ್ತರಾಗಿರಿ; ನೀವು ಸನ್ಮಾರ್ಗ ಪಡೆಯುವಿರಿ.” ಹೇಳಿರಿ: “ಅಲ್ಲ; (ವಾಸ್ತವವಾಗಿ ಸನ್ಮಾರ್ಗದಲ್ಲಿರುವವರು) ಇಬ್ರಾಹೀಮರ ಮಾರ್ಗವನ್ನು ಹಿಂಬಾಲಿಸುವವರು. ಅವರು (ಇಬ್ರಾಹೀಮ್) ಏಕನಿಷ್ಠರಾಗಿದ್ದರು.[1] ಅವರು ಬಹುದೇವಾರಾಧಕರಲ್ಲಿ ಸೇರಿದವರಾಗಿರಲಿಲ್ಲ.”

2:136

قُولُوٓاْ ءَامَنَّا بِٱللَّهِ وَمَآ أُنزِلَ إِلَيۡنَا وَمَآ أُنزِلَ إِلَىٰٓ إِبۡرَٰهِـۧمَ وَإِسۡمَٰعِيلَ وَإِسۡحَٰقَ وَيَعۡقُوبَ وَٱلۡأَسۡبَاطِ وَمَآ أُوتِيَ مُوسَىٰ وَعِيسَىٰ وَمَآ أُوتِيَ ٱلنَّبِيُّونَ مِن رَّبِّهِمۡ لَا نُفَرِّقُ بَيۡنَ أَحَدٖ مِّنۡهُمۡ وَنَحۡنُ لَهُۥ مُسۡلِمُونَ ﴿136﴾

Transliteration: Qooloo amanna biAllahi wama onzila ilayna wama onzila ila ibraheema waismaAAeela waishaqa wayaAAqooba waalasbati wama ootiya moosa waAAeesa wama ootiya alnnabiyyoona min rabbihim la nufarriqu bayna ahadin minhum wanahnu lahu muslimoona

Translation: ಹೇಳಿರಿ: “ನಾವು ಅಲ್ಲಾಹನಲ್ಲಿ, ನಮಗೆ ಅವತೀರ್ಣವಾಗಿರುವುದರಲ್ಲಿ, ಇಬ್ರಾಹೀಮರಿಗೆ, ಇಸ್ಮಾಈಲರಿಗೆ, ಇಸ್‍ಹಾಕರಿಗೆ, ಯಾಕೂಬರಿಗೆ ಮತ್ತು ಯಾಕೂಬರ ಸಂತಾನಕ್ಕೆ ಅವತೀರ್ಣವಾಗಿರುವುದರಲ್ಲಿ, ಮೂಸಾ ಮತ್ತು ಈಸಾರಿಗೆ ನೀಡಲಾಗಿರುವುದರಲ್ಲಿ, ಎಲ್ಲಾ ಪ್ರವಾದಿಗಳಿಗೂ ಅವರ ಪರಿಪಾಲಕನ (ಅಲ್ಲಾಹನ) ಕಡೆಯಿಂದ ನೀಡಲಾಗಿರುವುದರಲ್ಲಿ ವಿಶ್ವಾಸವಿಟ್ಟಿದ್ದೇವೆ. ಅವರಲ್ಲಿ ಯಾರ ನಡುವೆಯೂ ನಾವು ಬೇಧ ಮಾಡುವುದಿಲ್ಲ. ನಾವು ಅವನಿಗೆ ಶರಣಾಗಿ ಬದುಕುತ್ತೇವೆ.”

2:137

فَإِنۡ ءَامَنُواْ بِمِثۡلِ مَآ ءَامَنتُم بِهِۦ فَقَدِ ٱهۡتَدَواْۖ وَّإِن تَوَلَّوۡاْ فَإِنَّمَا هُمۡ فِي شِقَاقٖۖ فَسَيَكۡفِيكَهُمُ ٱللَّهُۚ وَهُوَ ٱلسَّمِيعُ ٱلۡعَلِيمُ ﴿137﴾

Transliteration: Fain amanoo bimithli ma amantum bihi faqadi ihtadaw wain tawallaw fainnama hum fee shiqaqin fasayakfeekahumu Allahu wahuwa alssameeAAu alAAaleemu

Translation: ನೀವು ವಿಶ್ವಾಸವಿಟ್ಟಂತೆಯೇ ಅವರೂ ವಿಶ್ವಾಸವಿಟ್ಟರೆ ಅವರು ಸನ್ಮಾರ್ಗ ಪಡೆಯುವರು. ಆದರೆ ಅವರು ವಿಮುಖರಾಗುವುದಾದರೆ ಅವರು ಸ್ಪಷ್ಟ ಭಿನ್ನಮತದಲ್ಲಿದ್ದಾರೆ. ಅವರ ವಿರುದ್ಧ ನಿಮಗೆ ಅಲ್ಲಾಹು ಸಾಕಾಗುವನು. ಅವನು ಎಲ್ಲವನ್ನು ಕೇಳುವವನು ಮತ್ತು ತಿಳಿದವನಾಗಿದ್ದಾನೆ.[1]

2:138

صِبۡغَةَ ٱللَّهِ وَمَنۡ أَحۡسَنُ مِنَ ٱللَّهِ صِبۡغَةٗۖ وَنَحۡنُ لَهُۥ عَٰبِدُونَ ﴿138﴾

Transliteration: Sibghata Allahi waman ahsanu mina Allahi sibghatan wanahnu lahu AAabidoona

Translation: ಅಲ್ಲಾಹನ ಬಣ್ಣವನ್ನು ಸ್ವೀಕರಿಸಿರಿ.[1] ಅಲ್ಲಾಹನಿಗಿಂತಲೂ ಉತ್ತಮ ಬಣ್ಣವನ್ನು ನೀಡುವವನು ಯಾರು? ನಾವಂತೂ ಅವನನ್ನು ಮಾತ್ರ ಆರಾಧಿಸುತ್ತೇವೆ.

2:139

قُلۡ أَتُحَآجُّونَنَا فِي ٱللَّهِ وَهُوَ رَبُّنَا وَرَبُّكُمۡ وَلَنَآ أَعۡمَٰلُنَا وَلَكُمۡ أَعۡمَٰلُكُمۡ وَنَحۡنُ لَهُۥ مُخۡلِصُونَ ﴿139﴾

Transliteration: Qul atuhajjoonana fee Allahi wahuwa rabbuna warabbukum walana aAAmaluna walakum aAAmalukum wanahnu lahu mukhlisoona

Translation: (ಓ ಪ್ರವಾದಿಯವರೇ!) ಹೇಳಿರಿ: “ನೀವು ನಮ್ಮ ಮತ್ತು ನಿಮ್ಮ ಪರಿಪಾಲಕನಾದ ಅಲ್ಲಾಹನ ವಿಷಯದಲ್ಲಿ ನಮ್ಮೊಡನೆ ತರ್ಕಿಸುತ್ತೀರಾ? ನಮ್ಮ ಕರ್ಮಗಳು ನಮಗೆ ಮತ್ತು ನಿಮ್ಮ ಕರ್ಮಗಳು ನಿಮಗೆ. ನಾವಂತೂ ಅವನಿಗೆ ಸಂಪೂರ್ಣ ನಿಷ್ಕಳಂಕರಾಗಿದ್ದೇವೆ.”

2:140

أَمۡ تَقُولُونَ إِنَّ إِبۡرَٰهِـۧمَ وَإِسۡمَٰعِيلَ وَإِسۡحَٰقَ وَيَعۡقُوبَ وَٱلۡأَسۡبَاطَ كَانُواْ هُودًا أَوۡ نَصَٰرَىٰۗ قُلۡ ءَأَنتُمۡ أَعۡلَمُ أَمِ ٱللَّهُۗ وَمَنۡ أَظۡلَمُ مِمَّن كَتَمَ شَهَٰدَةً عِندَهُۥ مِنَ ٱللَّهِۗ وَمَا ٱللَّهُ بِغَٰفِلٍ عَمَّا تَعۡمَلُونَ ﴿140﴾

Transliteration: Am taqooloona inna ibraheema waismaAAeela waishaqa wayaAAqooba waalasbata kanoo hoodan aw nasara qul aantum aAAlamu ami Allahu waman athlamu mimman katama shahadatan AAindahu mina Allahi wama Allahu bighafilin AAamma taAAmaloona

Translation: ಇಬ್ರಾಹೀಮ್, ಇಸ್ಮಾಈಲ್, ಇಸ್‍ಹಾಕ್, ಯಾಕೂಬ್ ಮತ್ತು ಯಾಕೂಬರ ಸಂತಾನಗಳು ಯಹೂದಿಗಳು ಅಥವಾ ಕ್ರೈಸ್ತರಾಗಿದ್ದರೆಂದು ನೀವು ಹೇಳುತ್ತೀರಾ? ಹೇಳಿರಿ: “ಹೆಚ್ಚು ತಿಳಿದವರು ನೀವೋ ಅಥವಾ ಅಲ್ಲಾಹನೋ?” ಅಲ್ಲಾಹನ ಬಳಿ ಸಾಕ್ಷಿಯನ್ನು ಅಡಗಿಸುವವನಿಗಿಂತಲೂ ದೊಡ್ಡ ಅಕ್ರಮಿ ಯಾರು? ನೀವು ಮಾಡುತ್ತಿರುವ ಕರ್ಮಗಳ ಕುರಿತು ಅಲ್ಲಾಹು ತಿಳಿಯದವನಲ್ಲ.

2:141

تِلۡكَ أُمَّةٞ قَدۡ خَلَتۡۖ لَهَا مَا كَسَبَتۡ وَلَكُم مَّا كَسَبۡتُمۡۖ وَلَا تُسۡـَٔلُونَ عَمَّا كَانُواْ يَعۡمَلُونَ ﴿141﴾

Transliteration: Tilka ommatun qad khalat laha ma kasabat walakum ma kasabtum wala tusaloona AAamma kanoo yaAAmaloona

Translation: ಆ ಸಮುದಾಯವು ಕಳೆದುಹೋಗಿದೆ. ಅವರು ಮಾಡಿದ್ದು ಅವರಿಗೆ ಮತ್ತು ನೀವು ಮಾಡಿದ್ದು ನಿಮಗೆ. ಅವರು ಮಾಡಿದ ಕರ್ಮಗಳ ಬಗ್ಗೆ ನಿಮ್ಮೊಂದಿಗೆ ಪ್ರಶ್ನಿಸಲಾಗುವುದಿಲ್ಲ.

2:142

سَيَقُولُ ٱلسُّفَهَآءُ مِنَ ٱلنَّاسِ مَا وَلَّىٰهُمۡ عَن قِبۡلَتِهِمُ ٱلَّتِي كَانُواْ عَلَيۡهَاۚ قُل لِّلَّهِ ٱلۡمَشۡرِقُ وَٱلۡمَغۡرِبُۚ يَهۡدِي مَن يَشَآءُ إِلَىٰ صِرَٰطٖ مُّسۡتَقِيمٖ ﴿142﴾

Transliteration: Sayaqoolu alssufahao mina alnnasi ma wallahum AAan qiblatihimu allatee kanoo AAalayha qul lillahi almashriqu waalmaghribu yahdee man yashao ila siratin mustaqeemin

Translation: “ಇವರು ಇದುವರೆಗೆ ಯಾವ ಕಿಬ್ಲದಲ್ಲಿದ್ದರೋ ಅದರಿಂದ ಇವರನ್ನು ತಿರುಗಿಸಿದ್ದೇನು?” ಎಂದು ಸದ್ಯವೇ ಜನರಲ್ಲಿರುವ ಕೆಲವು ತಿಳಿಗೇಡಿಗಳು ಕೇಳುವರು. ಹೇಳಿರಿ: “ಪೂರ್ವ ಮತ್ತು ಪಶ್ಚಿಮಗಳು ಅಲ್ಲಾಹನಿಗೆ ಸೇರಿದ್ದು. ಅವನು ಇಚ್ಛಿಸುವವರಿಗೆ ಅವನು ನೇರ ಮಾರ್ಗವನ್ನು ತೋರಿಸುತ್ತಾನೆ.”

2:143

وَكَذَٰلِكَ جَعَلۡنَٰكُمۡ أُمَّةٗ وَسَطٗا لِّتَكُونُواْ شُهَدَآءَ عَلَى ٱلنَّاسِ وَيَكُونَ ٱلرَّسُولُ عَلَيۡكُمۡ شَهِيدٗاۗ وَمَا جَعَلۡنَا ٱلۡقِبۡلَةَ ٱلَّتِي كُنتَ عَلَيۡهَآ إِلَّا لِنَعۡلَمَ مَن يَتَّبِعُ ٱلرَّسُولَ مِمَّن يَنقَلِبُ عَلَىٰ عَقِبَيۡهِۚ وَإِن كَانَتۡ لَكَبِيرَةً إِلَّا عَلَى ٱلَّذِينَ هَدَى ٱللَّهُۗ وَمَا كَانَ ٱللَّهُ لِيُضِيعَ إِيمَٰنَكُمۡۚ إِنَّ ٱللَّهَ بِٱلنَّاسِ لَرَءُوفٞ رَّحِيمٞ ﴿143﴾

Transliteration: Wakathalika jaAAalnakum ommatan wasatan litakoonoo shuhadaa AAala alnnasi wayakoona alrrasoolu AAalaykum shaheedan wama jaAAalna alqiblata allatee kunta AAalayha illa linaAAlama man yattabiAAu alrrasoola mimman yanqalibu AAala AAaqibayhi wain kanat lakabeeratan illa AAala allatheena hada Allahu wama kana Allahu liyudeeAAa eemanakum inna Allaha bialnnasi laraoofun raheemun

Translation: ಈ ರೀತಿ ನಾವು ನಿಮ್ಮನ್ನು ಒಂದು ಮಧ್ಯಮ ಸಮುದಾಯವನ್ನಾಗಿ ಮಾಡಿದೆವು; ನೀವು ಜನರಿಗೆ ಸಾಕ್ಷಿಗಳಾಗಲು ಮತ್ತು ಸಂದೇಶವಾಹಕರು ನಿಮಗೆ ಸಾಕ್ಷಿಯಾಗಲು. ನೀವು (ಮೊದಲು) ಯಾವ ಕಿಬ್ಲದಲ್ಲಿದ್ದಿರೋ ಅದನ್ನು ನಾವು ನಿಶ್ಚಯಿಸಿದ್ದು, ಸಂದೇಶವಾಹಕರನ್ನು ಹಿಂಬಾಲಿಸುವವರು ಯಾರು ಮತ್ತು ತಮ್ಮ ಹಿಮ್ಮಡಿಗಳಲ್ಲಿ ತಿರುಗಿ ನಡೆಯುವವರು ಯಾರು ಎಂದು ತಿಳಿಯುವುದಕ್ಕಾಗಿ ಮಾತ್ರ. ಅಲ್ಲಾಹು ಸನ್ಮಾರ್ಗದಲ್ಲಿ ಸೇರಿಸಿದವರ ಹೊರತು ಇತರೆಲ್ಲರಿಗೂ ಅದು ಬಹಳ ಕಷ್ಟದ ಕೆಲಸವಾಗಿದೆ. ಅಲ್ಲಾಹು ನಿಮ್ಮ ವಿಶ್ವಾಸವನ್ನು ವ್ಯರ್ಥಗೊಳಿಸುವುದಿಲ್ಲ. ನಿಶ್ಚಯವಾಗಿಯೂ ಅಲ್ಲಾಹು ಮನುಷ್ಯರೊಂದಿಗೆ ಅನುಕಂಪವುಳ್ಳವನು ಮತ್ತು ಕರುಣೆಯುಳ್ಳವನಾಗಿದ್ದಾನೆ.

2:144

قَدۡ نَرَىٰ تَقَلُّبَ وَجۡهِكَ فِي ٱلسَّمَآءِۖ فَلَنُوَلِّيَنَّكَ قِبۡلَةٗ تَرۡضَىٰهَاۚ فَوَلِّ وَجۡهَكَ شَطۡرَ ٱلۡمَسۡجِدِ ٱلۡحَرَامِۚ وَحَيۡثُ مَا كُنتُمۡ فَوَلُّواْ وُجُوهَكُمۡ شَطۡرَهُۥۗ وَإِنَّ ٱلَّذِينَ أُوتُواْ ٱلۡكِتَٰبَ لَيَعۡلَمُونَ أَنَّهُ ٱلۡحَقُّ مِن رَّبِّهِمۡۗ وَمَا ٱللَّهُ بِغَٰفِلٍ عَمَّا يَعۡمَلُونَ ﴿144﴾

Transliteration: Qad nara taqalluba wajhika fee alssamai falanuwalliyannaka qiblatan tardaha fawalli wajhaka shatra almasjidi alharami wahaythu ma kuntum fawalloo wujoohakum shatrahu wainna allatheena ootoo alkitaba layaAAlamoona annahu alhaqqu min rabbihim wama Allahu bighafilin AAamma yaAAmaloona

Translation: ನಿಮ್ಮ ಮುಖವು ಪದೇ ಪದೇ ಆಕಾಶದ ಕಡೆಗೆ ತಿರುಗುವುದನ್ನು ನಾವು ನೋಡುತ್ತಿದ್ದೇವೆ. ಆದ್ದರಿಂದ ಈಗ ನಾವು ನಿಮ್ಮನ್ನು ನೀವು ಇಷ್ಟಪಡುವ ಕಿಬ್ಲದ ಕಡೆಗೆ ತಿರುಗಿಸುತ್ತೇವೆ.[1] ನೀವು ನಿಮ್ಮ ಮುಖವನ್ನು ಮಸ್ಜಿದುಲ್ ಹರಾಮ್‍ನ ಕಡೆಗೆ ತಿರುಗಿಸಿರಿ; ಮತ್ತು ನೀವು (ಮುಸ್ಲಿಮರು) ಎಲ್ಲೇ ಇದ್ದರೂ ನಿಮ್ಮ ಮುಖಗಳನ್ನು ಕೂಡ ಅದರ ಕಡೆಗೆ ತಿರುಗಿಸಿರಿ. ನಿಶ್ಚಯವಾಗಿಯೂ, ಇದು ನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಯ ಸತ್ಯವೆಂದು ಗ್ರಂಥ ನೀಡಲಾದವರಿಗೆ ಚೆನ್ನಾಗಿ ತಿಳಿದಿದೆ.[2] ಅವರು ಮಾಡುತ್ತಿರುವ ಕರ್ಮಗಳ ಕುರಿತು ಅಲ್ಲಾಹು ತಿಳಿಯದವನಲ್ಲ.

2:145

وَلَئِنۡ أَتَيۡتَ ٱلَّذِينَ أُوتُواْ ٱلۡكِتَٰبَ بِكُلِّ ءَايَةٖ مَّا تَبِعُواْ قِبۡلَتَكَۚ وَمَآ أَنتَ بِتَابِعٖ قِبۡلَتَهُمۡۚ وَمَا بَعۡضُهُم بِتَابِعٖ قِبۡلَةَ بَعۡضٖۚ وَلَئِنِ ٱتَّبَعۡتَ أَهۡوَآءَهُم مِّنۢ بَعۡدِ مَا جَآءَكَ مِنَ ٱلۡعِلۡمِ إِنَّكَ إِذٗا لَّمِنَ ٱلظَّـٰلِمِينَ ﴿145﴾

Transliteration: Walain atayta allatheena ootoo alkitaba bikulli ayatin ma tabiAAoo qiblataka wama anta bitabiAAin qiblatahum wama baAAduhum bitabiAAin qiblata baAAdin walaini ittabaAAta ahwaahum min baAAdi ma jaaka mina alAAilmi innaka ithan lamina alththalimeena

Translation: ಗ್ರಂಥ ನೀಡಲಾದವರಿಗೆ ನೀವು ಎಲ್ಲಾ ರೀತಿಯ ಪುರಾವೆಗಳನ್ನು ತಂದು ತೋರಿಸಿದರೂ ಅವರು ನಿಮ್ಮ ಕಿಬ್ಲವನ್ನು ಹಿಂಬಾಲಿಸುವುದಿಲ್ಲ. ನೀವು ಕೂಡ ಅವರ ಕಿಬ್ಲವನ್ನು ಅಂಗೀಕರಿಸುವುದಿಲ್ಲ. ಅವರಲ್ಲಿ ಒಬ್ಬರು ಇನ್ನೊಬ್ಬರ ಕಿಬ್ಲವನ್ನು ಅಂಗೀಕರಿಸುವುದಿಲ್ಲ. ನಿಮಗೆ ಜ್ಞಾನವು ಬಂದ ಬಳಿಕ ನೀವೇನಾದರೂ ಅವರ ಸ್ವೇಚ್ಛೆಗಳನ್ನು ಹಿಂಬಾಲಿಸಿದರೆ, ನಿಶ್ಚಯವಾಗಿಯೂ ನೀವು ಅಕ್ರಮಿಗಳಲ್ಲಿ ಸೇರುವಿರಿ.

2:146

ٱلَّذِينَ ءَاتَيۡنَٰهُمُ ٱلۡكِتَٰبَ يَعۡرِفُونَهُۥ كَمَا يَعۡرِفُونَ أَبۡنَآءَهُمۡۖ وَإِنَّ فَرِيقٗا مِّنۡهُمۡ لَيَكۡتُمُونَ ٱلۡحَقَّ وَهُمۡ يَعۡلَمُونَ ﴿146﴾

Transliteration: Allatheena ataynahumu alkitaba yaAArifoonahu kama yaAArifoona abnaahum wainna fareeqan minhum layaktumoona alhaqqa wahum yaAAlamoona

Translation: ನಾವು ಯಾರಿಗೆ ಗ್ರಂಥವನ್ನು ನೀಡಿದ್ದೇವೆಯೋ ಅವರು ತಮ್ಮ ಮಕ್ಕಳನ್ನು ಗುರುತಿಸುವಂತೆಯೇ ಅವರನ್ನು (ಪ್ರವಾದಿಯನ್ನು) ಗುರುತಿಸುತ್ತಾರೆ. ನಿಶ್ಚಯವಾಗಿಯೂ ಅವರಲ್ಲೊಂದು ಗುಂಪು ಸತ್ಯವನ್ನು ತಿಳಿದೂ ಸಹ ಅದನ್ನು ಮುಚ್ಚಿಡುತ್ತಾರೆ.

2:147

ٱلۡحَقُّ مِن رَّبِّكَ فَلَا تَكُونَنَّ مِنَ ٱلۡمُمۡتَرِينَ ﴿147﴾

Transliteration: Alhaqqu min rabbika fala takoonanna mina almumtareena

Translation: ಇದು ನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಯ ಸತ್ಯವಾಗಿದೆ. ಆದ್ದರಿಂದ ನೀವು ಸಂಶಯಪಡುವವರಲ್ಲಿ ಸೇರಲೇಬೇಡಿ.

2:148

وَلِكُلّٖ وِجۡهَةٌ هُوَ مُوَلِّيهَاۖ فَٱسۡتَبِقُواْ ٱلۡخَيۡرَٰتِۚ أَيۡنَ مَا تَكُونُواْ يَأۡتِ بِكُمُ ٱللَّهُ جَمِيعًاۚ إِنَّ ٱللَّهَ عَلَىٰ كُلِّ شَيۡءٖ قَدِيرٞ ﴿148﴾

Transliteration: Walikullin wijhatun huwa muwalleeha faistabiqoo alkhayrati ayna ma takoonoo yati bikumu Allahu jameeAAan inna Allaha AAala kulli shayin qadeerun

Translation: ಪ್ರತಿಯೊಬ್ಬರೂ (ಪ್ರಾರ್ಥನೆಯ ವೇಳೆ) ಒಂದಲ್ಲ ಒಂದು ಕಡೆಗೆ ತಿರುಗುತ್ತಾರೆ. ನೀವು ಸತ್ಕರ್ಮಗಳನ್ನು ಮಾಡಲು ಧಾವಿಸಿರಿ. ನೀವೆಲ್ಲೇ ಇದ್ದರೂ ಅಲ್ಲಾಹು ನಿಮ್ಮೆಲ್ಲರನ್ನೂ ತರುವನು. ನಿಶ್ಚಯವಾಗಿಯೂ ಅಲ್ಲಾಹು ಎಲ್ಲಾ ವಿಷಯಗಳಲ್ಲೂ ಸಾಮರ್ಥ್ಯವುಳ್ಳವನಾಗಿದ್ದಾನೆ.

2:149

وَمِنۡ حَيۡثُ خَرَجۡتَ فَوَلِّ وَجۡهَكَ شَطۡرَ ٱلۡمَسۡجِدِ ٱلۡحَرَامِۖ وَإِنَّهُۥ لَلۡحَقُّ مِن رَّبِّكَۗ وَمَا ٱللَّهُ بِغَٰفِلٍ عَمَّا تَعۡمَلُونَ ﴿149﴾

Transliteration: Wamin haythu kharajta fawalli wajhaka shatra almasjidi alharami wainnahu lalhaqqu min rabbika wama Allahu bighafilin AAamma taAAmaloona

Translation: ನೀವು ಎಲ್ಲಿಂದ ಹೊರಟರೂ ನಿಮ್ಮ ಮುಖವನ್ನು ಮಸ್ಜಿದುಲ್ ಹರಾಮ್‍ನ ಕಡೆಗೆ ತಿರುಗಿಸಿರಿ. ನಿಶ್ಚಯವಾಗಿಯೂ ಇದು ನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಯ ಸತ್ಯವಾಗಿದೆ. ನೀವು ಮಾಡುತ್ತಿರುವ ಕರ್ಮಗಳ ಕುರಿತು ಅಲ್ಲಾಹು ತಿಳಿಯದವನಲ್ಲ.

2:150

وَمِنۡ حَيۡثُ خَرَجۡتَ فَوَلِّ وَجۡهَكَ شَطۡرَ ٱلۡمَسۡجِدِ ٱلۡحَرَامِۚ وَحَيۡثُ مَا كُنتُمۡ فَوَلُّواْ وُجُوهَكُمۡ شَطۡرَهُۥ لِئَلَّا يَكُونَ لِلنَّاسِ عَلَيۡكُمۡ حُجَّةٌ إِلَّا ٱلَّذِينَ ظَلَمُواْ مِنۡهُمۡ فَلَا تَخۡشَوۡهُمۡ وَٱخۡشَوۡنِي وَلِأُتِمَّ نِعۡمَتِي عَلَيۡكُمۡ وَلَعَلَّكُمۡ تَهۡتَدُونَ ﴿150﴾

Transliteration: Wamin haythu kharajta fawalli wajhaka shatra almasjidi alharami wahaythu ma kuntum fawalloo wujoohakum shatrahu lialla yakoona lilnnasi AAalaykum hujjatun illa allatheena thalamoo minhum fala takhshawhum waikhshawnee waliotimma niAAmatee AAalaykum walaAAallakum tahtadoona

Translation: ನೀವು ಎಲ್ಲಿಂದ ಹೊರಟರೂ ನಿಮ್ಮ ಮುಖವನ್ನು ಮಸ್ಜಿದುಲ್ ಹರಾಮ್‍ನ ಕಡೆಗೆ ತಿರುಗಿಸಿರಿ. ನೀವು (ಮುಸ್ಲಿಮರು) ಎಲ್ಲೇ ಇದ್ದರೂ ನಿಮ್ಮ ಮುಖಗಳನ್ನು ಅದರ ಕಡೆಗೆ ತಿರುಗಿಸಿರಿ. ನಿಮ್ಮ ವಿರುದ್ಧ ಜನರಿಗೆ ಯಾವುದೇ ಸಾಕ್ಷ್ಯಾಧಾರ ಇಲ್ಲದಿರುವುದಕ್ಕಾಗಿ; ಆದರೆ ಅವರ ಪೈಕಿ ಅಕ್ರಮವೆಸಗಿದವರ ಹೊರತು. ನೀವು ಅವರನ್ನು ಭಯಪಡಬೇಡಿ; ನನ್ನನ್ನು ಭಯಪಡಿರಿ. ನಾನು ನನ್ನ ಅನುಗ್ರಹವನ್ನು ನಿಮಗೆ ಪೂರ್ಣಗೊಳಿಸುವುದಕ್ಕಾಗಿ ಮತ್ತು ನೀವು ಸನ್ಮಾರ್ಗ ಪಡೆಯುವುದಕ್ಕಾಗಿ.

2:151

كَمَآ أَرۡسَلۡنَا فِيكُمۡ رَسُولٗا مِّنكُمۡ يَتۡلُواْ عَلَيۡكُمۡ ءَايَٰتِنَا وَيُزَكِّيكُمۡ وَيُعَلِّمُكُمُ ٱلۡكِتَٰبَ وَٱلۡحِكۡمَةَ وَيُعَلِّمُكُم مَّا لَمۡ تَكُونُواْ تَعۡلَمُونَ ﴿151﴾

Transliteration: Kama arsalna feekum rasoolan minkum yatloo AAalaykum ayatina wayuzakkeekum wayuAAallimukumu alkitaba waalhikmata wayuAAallimukum ma lam takoonoo taAAlamoona

Translation: ನಾವು ನಿಮ್ಮಿಂದಲೇ ನಿಮಗೆ ಒಬ್ಬ ಸಂದೇಶವಾಹಕರನ್ನು ಕಳುಹಿಸಿದಂತೆ. ಅವರು ನಮ್ಮ ವಚನಗಳನ್ನು ನಿಮಗೆ ಓದಿಕೊಡುತ್ತಾರೆ, ನಿಮ್ಮನ್ನು ಶುದ್ಧೀಕರಿಸುತ್ತಾರೆ, ನಿಮಗೆ ಗ್ರಂಥವನ್ನು ಮತ್ತು ವಿವೇಕವನ್ನು ಕಲಿಸಿಕೊಡುತ್ತಾರೆ ಮತ್ತು ನಿಮಗೆ ತಿಳಿದಿರದ ವಿಷಯಗಳನ್ನು ಕಲಿಸಿಕೊಡುತ್ತಾರೆ.

2:152

فَٱذۡكُرُونِيٓ أَذۡكُرۡكُمۡ وَٱشۡكُرُواْ لِي وَلَا تَكۡفُرُونِ ﴿152﴾

Transliteration: Faothkuroonee athkurkum waoshkuroo lee wala takfurooni

Translation: ಆದ್ದರಿಂದ ನೀವು ನನ್ನನ್ನು ಸ್ಮರಿಸಿರಿ; ನಾನು ನಿಮ್ಮನ್ನು ಸ್ಮರಿಸುತ್ತೇನೆ. ನನಗೆ ಕೃತಜ್ಞರಾಗಿರಿ; ನನಗೆ ಕೃತಘ್ನರಾಗಬೇಡಿ.

2:153

يَـٰٓأَيُّهَا ٱلَّذِينَ ءَامَنُواْ ٱسۡتَعِينُواْ بِٱلصَّبۡرِ وَٱلصَّلَوٰةِۚ إِنَّ ٱللَّهَ مَعَ ٱلصَّـٰبِرِينَ ﴿153﴾

Transliteration: Ya ayyuha allatheena amanoo istaAAeenoo bialssabri waalssalati inna Allaha maAAa alssabireena

Translation: ಓ ಸತ್ಯವಿಶ್ವಾಸಿಗಳೇ! ತಾಳ್ಮೆ ಮತ್ತು ನಮಾಝಿನ ಮೂಲಕ (ಅಲ್ಲಾಹನಲ್ಲಿ) ಸಹಾಯ ಬೇಡಿರಿ. ನಿಶ್ಚಯವಾಗಿಯೂ ಅಲ್ಲಾಹು ತಾಳ್ಮೆಯುಳ್ಳವರ ಜೊತೆಗಿದ್ದಾನೆ.

2:154

وَلَا تَقُولُواْ لِمَن يُقۡتَلُ فِي سَبِيلِ ٱللَّهِ أَمۡوَٰتُۢۚ بَلۡ أَحۡيَآءٞ وَلَٰكِن لَّا تَشۡعُرُونَ ﴿154﴾

Transliteration: Wala taqooloo liman yuqtalu fee sabeeli Allahi amwatun bal ahyaon walakin la tashAAuroona

Translation: ಅಲ್ಲಾಹನ ಮಾರ್ಗದಲ್ಲಿ ಹುತಾತ್ಮರಾದವರನ್ನು ‘ಸತ್ತವರು’ ಎಂದು ಹೇಳಬೇಡಿ. ಅವರು ಜೀವಂತವಾಗಿದ್ದಾರೆ; ಆದರೆ ನಿಮಗೆ ಅದರ ಜ್ಞಾನವಿಲ್ಲ.

2:155

وَلَنَبۡلُوَنَّكُم بِشَيۡءٖ مِّنَ ٱلۡخَوۡفِ وَٱلۡجُوعِ وَنَقۡصٖ مِّنَ ٱلۡأَمۡوَٰلِ وَٱلۡأَنفُسِ وَٱلثَّمَرَٰتِۗ وَبَشِّرِ ٱلصَّـٰبِرِينَ ﴿155﴾

Transliteration: Walanabluwannakum bishayin mina alkhawfi waaljooAAi wanaqsin mina alamwali waalanfusi waalththamarati wabashshiri alssabireena

Translation: ನಿಶ್ಚಯವಾಗಿಯೂ ನಾವು ನಿಮ್ಮನ್ನು ಶತ್ರುಗಳ ಭಯದಿಂದ, ಹಸಿವಿನಿಂದ, ಆಸ್ತಿ, ಜೀವ ಅಥವಾ ಹಣ್ಣುಗಳ ನಷ್ಟದಿಂದ, ಹೀಗೆ ಒಂದಲ್ಲ ಒಂದು ವಿಧದಲ್ಲಿ ಪರೀಕ್ಷಿಸುತ್ತೇವೆ; ತಾಳ್ಮೆ ವಹಿಸುವವರಿಗೆ ಸುವಾರ್ತೆ ನೀಡಿರಿ.

2:156

ٱلَّذِينَ إِذَآ أَصَٰبَتۡهُم مُّصِيبَةٞ قَالُوٓاْ إِنَّا لِلَّهِ وَإِنَّآ إِلَيۡهِ رَٰجِعُونَ ﴿156﴾

Transliteration: Allatheena itha asabathum museebatun qaloo inna lillahi wainna ilayhi rajiAAoona

Translation: ಅವರು ಯಾರೆಂದರೆ, ಅವರಿಗೆ ಏನಾದರೂ ಅನಾಹುತ ಸಂಭವಿಸುವಾಗ ಅವರು ಹೇಳುತ್ತಾರೆ: “ನಿಶ್ಚಯವಾಗಿಯೂ ನಾವು ಅಲ್ಲಾಹನಿಗೆ ಸೇರಿದವರು; ಮತ್ತು ನಾವು ಅವನ ಕಡೆಗೇ ಮರಳುವವರು.”

2:157

أُوْلَـٰٓئِكَ عَلَيۡهِمۡ صَلَوَٰتٞ مِّن رَّبِّهِمۡ وَرَحۡمَةٞۖ وَأُوْلَـٰٓئِكَ هُمُ ٱلۡمُهۡتَدُونَ ﴿157﴾

Transliteration: Olaika AAalayhim salawatun min rabbihim warahmatun waolaika humu almuhtadoona

Translation: ಅವರ ಮೇಲೆ ಅವರ ಪರಿಪಾಲಕನ (ಅಲ್ಲಾಹನ) ಕಡೆಯ ಅನುಗ್ರಹಗಳು ಮತ್ತು ದಯೆಯಿದೆ. ಅವರೇ ಸನ್ಮಾರ್ಗದಲ್ಲಿರುವವರು.

2:158

إِنَّ ٱلصَّفَا وَٱلۡمَرۡوَةَ مِن شَعَآئِرِ ٱللَّهِۖ فَمَنۡ حَجَّ ٱلۡبَيۡتَ أَوِ ٱعۡتَمَرَ فَلَا جُنَاحَ عَلَيۡهِ أَن يَطَّوَّفَ بِهِمَاۚ وَمَن تَطَوَّعَ خَيۡرٗا فَإِنَّ ٱللَّهَ شَاكِرٌ عَلِيمٌ ﴿158﴾

Transliteration: Inna alssafa waalmarwata min shaAAairi Allahi faman hajja albayta awi iAAtamara fala junaha AAalayhi an yattawwafa bihima waman tatawwaAAa khayran fainna Allaha shakirun AAaleemun

Translation: ನಿಶ್ಚಯವಾಗಿಯೂ ಸಫಾ ಮತ್ತು ಮರ್ವಾ ಅಲ್ಲಾಹನ ಚಿಹ್ನೆಗಳಲ್ಲಿ ಒಳಪಟ್ಟದ್ದಾಗಿವೆ. ಆದ್ದರಿಂದ ಅಲ್ಲಾಹನ ಭವನಕ್ಕೆ ಹಜ್ ಅಥವಾ ಉಮ್ರಾ ಮಾಡುವವರು ಇವುಗಳಿಗೆ ಪ್ರದಕ್ಷಿಣೆ ಮಾಡುವುದರಲ್ಲಿ ಯಾವುದೇ ದೋಷವಿಲ್ಲ.[1] ಸ್ವಯಂಪ್ರೇರಿತವಾಗಿ ಒಳಿತು ಮಾಡುವವರನ್ನು ಅಲ್ಲಾಹು ಮೆಚ್ಚುತ್ತಾನೆ ಮತ್ತು ಅವರ ಬಗ್ಗೆ ಅವನು ಚೆನ್ನಾಗಿ ತಿಳಿದಿದ್ದಾನೆ.

2:159

إِنَّ ٱلَّذِينَ يَكۡتُمُونَ مَآ أَنزَلۡنَا مِنَ ٱلۡبَيِّنَٰتِ وَٱلۡهُدَىٰ مِنۢ بَعۡدِ مَا بَيَّنَّـٰهُ لِلنَّاسِ فِي ٱلۡكِتَٰبِ أُوْلَـٰٓئِكَ يَلۡعَنُهُمُ ٱللَّهُ وَيَلۡعَنُهُمُ ٱللَّـٰعِنُونَ ﴿159﴾

Transliteration: Inna allatheena yaktumoona ma anzalna mina albayyinati waalhuda min baAAdi ma bayyannahu lilnnasi fee alkitabi olaika yalAAanuhumu Allahu wayalAAanuhumu allaAAinoona

Translation: ನಾವು ಅವತೀರ್ಣಗೊಳಿಸಿದ ಸಾಕ್ಷ್ಯಾಧಾರಗಳನ್ನು ಮತ್ತು ಸನ್ಮಾರ್ಗವನ್ನು—ಅದನ್ನು ನಾವು ಗ್ರಂಥದಲ್ಲಿ ಜನರಿಗೆ ವಿವರಿಸಿಕೊಟ್ಟ ಬಳಿಕವೂ—ಬಚ್ಚಿಡುವವರು ಯಾರೋ ಅವರ ಮೇಲೆ ಅಲ್ಲಾಹನ ಶಾಪವಿದೆ; ಶಪಿಸುವವರೆಲ್ಲರ ಶಾಪವೂ ಇದೆ.

2:160

إِلَّا ٱلَّذِينَ تَابُواْ وَأَصۡلَحُواْ وَبَيَّنُواْ فَأُوْلَـٰٓئِكَ أَتُوبُ عَلَيۡهِمۡ وَأَنَا ٱلتَّوَّابُ ٱلرَّحِيمُ ﴿160﴾

Transliteration: Illa allatheena taboo waaslahoo wabayyanoo faolaika atoobu AAalayhim waana alttawwabu alrraheemu

Translation: ಆದರೆ ಪಶ್ಚಾತ್ತಾಪಪಡುವವರು, ಸರಿಪಡಿಸುವವರು ಮತ್ತು ವಿವರಿಸಿಕೊಡುವವರು ಯಾರೋ (ಅವರು ಇದಕ್ಕೆ ಹೊರತಾಗಿದ್ದಾರೆ). ಅವರ ಪಶ್ಚಾತ್ತಾಪವನ್ನು ನಾನು ಸ್ವೀಕರಿಸುತ್ತೇನೆ. ನಾನು ಪಶ್ಚಾತ್ತಾಪ ಸ್ವೀಕರಿಸುವವನು ಮತ್ತು ಕರುಣೆ ತೋರುವವನಾಗಿದ್ದೇನೆ.

2:161

إِنَّ ٱلَّذِينَ كَفَرُواْ وَمَاتُواْ وَهُمۡ كُفَّارٌ أُوْلَـٰٓئِكَ عَلَيۡهِمۡ لَعۡنَةُ ٱللَّهِ وَٱلۡمَلَـٰٓئِكَةِ وَٱلنَّاسِ أَجۡمَعِينَ ﴿161﴾

Transliteration: Inna allatheena kafaroo wamatoo wahum kuffarun olaika AAalayhim laAAnatu Allahi waalmalaikati waalnnasi ajmaAAeena

Translation: ನಿಶ್ಚಯವಾಗಿಯೂ ಸತ್ಯನಿಷೇಧಿಗಳು ಮತ್ತು ಸತ್ಯನಿಷೇಧಿಗಳಾಗಿಯೇ ಸಾಯುವವರು ಯಾರೋ ಅವರ ಮೇಲೆ ಅಲ್ಲಾಹನ, ದೇವದೂತರುಗಳ ಮತ್ತು ಮನುಷ್ಯರೆಲ್ಲರ ಶಾಪವಿದೆ.

2:162

خَٰلِدِينَ فِيهَا لَا يُخَفَّفُ عَنۡهُمُ ٱلۡعَذَابُ وَلَا هُمۡ يُنظَرُونَ ﴿162﴾

Transliteration: Khalideena feeha la yukhaffafu AAanhumu alAAathabu wala hum yuntharoona

Translation: ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು. ಅವರಿಗೆ ಶಿಕ್ಷೆಯಲ್ಲಿ ರಿಯಾಯಿತಿಯಿಲ್ಲ ಮತ್ತು ಅವರಿಗೆ ವಿರಾಮವನ್ನೂ ನೀಡಲಾಗುವುದಿಲ್ಲ.

2:163

وَإِلَٰهُكُمۡ إِلَٰهٞ وَٰحِدٞۖ لَّآ إِلَٰهَ إِلَّا هُوَ ٱلرَّحۡمَٰنُ ٱلرَّحِيمُ ﴿163﴾

Transliteration: Wailahukum ilahun wahidun la ilaha illa huwa alrrahmanu alrraheemu

Translation: ನಿಮ್ಮ ದೇವನು ಏಕೈಕ ದೇವನು. ಅವನ ಹೊರತು ಆರಾಧನೆಗೆ ಅರ್ಹರಾದ ಅನ್ಯ ದೇವರಿಲ್ಲ. ಅವನು ಪರಮ ದಯಾಳು ಮತ್ತು ಕರುಣಾನಿಧಿಯಾಗಿದ್ದಾನೆ.

2:164

إِنَّ فِي خَلۡقِ ٱلسَّمَٰوَٰتِ وَٱلۡأَرۡضِ وَٱخۡتِلَٰفِ ٱلَّيۡلِ وَٱلنَّهَارِ وَٱلۡفُلۡكِ ٱلَّتِي تَجۡرِي فِي ٱلۡبَحۡرِ بِمَا يَنفَعُ ٱلنَّاسَ وَمَآ أَنزَلَ ٱللَّهُ مِنَ ٱلسَّمَآءِ مِن مَّآءٖ فَأَحۡيَا بِهِ ٱلۡأَرۡضَ بَعۡدَ مَوۡتِهَا وَبَثَّ فِيهَا مِن كُلِّ دَآبَّةٖ وَتَصۡرِيفِ ٱلرِّيَٰحِ وَٱلسَّحَابِ ٱلۡمُسَخَّرِ بَيۡنَ ٱلسَّمَآءِ وَٱلۡأَرۡضِ لَأٓيَٰتٖ لِّقَوۡمٖ يَعۡقِلُونَ ﴿164﴾

Transliteration: Inna fee khalqi alssamawati waalardi waikhtilafi allayli waalnnahari waalfulki allatee tajree fee albahri bima yanfaAAu alnnasa wama anzala Allahu mina alssamai min main faahya bihi alarda baAAda mawtiha wabaththa feeha min kulli dabbatin watasreefi alrriyahi waalssahabi almusakhkhari bayna alssamai waalardi laayatin liqawmin yaAAqiloona

Translation: ನಿಶ್ಚಯವಾಗಿಯೂ ಭೂಮ್ಯಾಕಾಶಗಳ ಸೃಷ್ಟಿಯಲ್ಲಿ, ರಾತ್ರಿ-ಹಗಲುಗಳ ಬದಲಾವಣೆಯಲ್ಲಿ, ಜನರಿಗೆ ಉಪಕರಿಸುವ ವಸ್ತುಗಳೊಂದಿಗೆ ಸಮುದ್ರದಲ್ಲಿ ಚಲಿಸುವ ನಾವೆಗಳಲ್ಲಿ, ಅಲ್ಲಾಹು ಆಕಾಶದಿಂದ ಮಳೆಯನ್ನು ಸುರಿಸಿ ಅದರ ಮೂಲಕ ನಿರ್ಜೀವ ಭೂಮಿಗೆ ಜೀವ ನೀಡುವುದರಲ್ಲಿ, ಭೂಮಿಯಲ್ಲಿ ಎಲ್ಲಾ ರೀತಿಯ ಜೀವಿಗಳನ್ನು ಹಬ್ಬಿಸಿರುವುದರಲ್ಲಿ, ಗಾಳಿಯು ದಿಕ್ಕನ್ನು ಬದಲಿಸುವುದರಲ್ಲಿ ಮತ್ತು ಭೂಮ್ಯಾಕಾಶಗಳ ನಡುವೆ ನಿಯಂತ್ರಿಸಲಾಗುವ ಮೋಡಗಳಲ್ಲಿ ಆಲೋಚಿಸುವ ಜನರಿಗೆ ಹಲವಾರು ದೃಷ್ಟಾಂತಗಳಿವೆ.

2:165

وَمِنَ ٱلنَّاسِ مَن يَتَّخِذُ مِن دُونِ ٱللَّهِ أَندَادٗا يُحِبُّونَهُمۡ كَحُبِّ ٱللَّهِۖ وَٱلَّذِينَ ءَامَنُوٓاْ أَشَدُّ حُبّٗا لِّلَّهِۗ وَلَوۡ يَرَى ٱلَّذِينَ ظَلَمُوٓاْ إِذۡ يَرَوۡنَ ٱلۡعَذَابَ أَنَّ ٱلۡقُوَّةَ لِلَّهِ جَمِيعٗا وَأَنَّ ٱللَّهَ شَدِيدُ ٱلۡعَذَابِ ﴿165﴾

Transliteration: Wamina alnnasi man yattakhithu min dooni Allahi andadan yuhibboonahum kahubbi Allahi waallatheena amanoo ashaddu hubban lillahi walaw yara allatheena thalamoo ith yarawna alAAathaba anna alquwwata lillahi jameeAAan waanna Allaha shadeedu alAAathabi

Translation: ಅಲ್ಲಾಹನಿಗೆ ಇತರರನ್ನು ಸರಿಸಾಟಿಯಾಗಿ ಮಾಡುವ ಕೆಲವರಿದ್ದಾರೆ. ಅಲ್ಲಾಹನನ್ನು ಪ್ರೀತಿಸುವಂತೆಯೇ ಅವರು ಅವರನ್ನೂ ಪ್ರೀತಿಸುತ್ತಾರೆ. ಆದರೆ ಸತ್ಯವಿಶ್ವಾಸಿಗಳು ಅಲ್ಲಾಹನನ್ನು (ಎಲ್ಲಕ್ಕಿಂತಲೂ) ಗಾಢವಾಗಿ ಪ್ರೀತಿಸುತ್ತಾರೆ.[1] ಅಕ್ರಮಿಗಳು (ಅಲ್ಲಾಹನ) ಶಿಕ್ಷೆಯನ್ನು ನೇರವಾಗಿ ನೋಡುವಾಗ, ಶಕ್ತಿ-ಸಾಮರ್ಥ್ಯವಿರುವುದು ಸಂಪೂರ್ಣವಾಗಿ ಅಲ್ಲಾಹನಿಗೆ ಮಾತ್ರ; ಮತ್ತು ಅಲ್ಲಾಹು ಅತಿಕಠೋರವಾಗಿ ಶಿಕ್ಷಿಸುತ್ತಾನೆಂದು ತಿಳಿಯುತ್ತಿದ್ದರೆ (ಎಷ್ಟು ಚೆನ್ನಾಗಿತ್ತು)!

2:166

إِذۡ تَبَرَّأَ ٱلَّذِينَ ٱتُّبِعُواْ مِنَ ٱلَّذِينَ ٱتَّبَعُواْ وَرَأَوُاْ ٱلۡعَذَابَ وَتَقَطَّعَتۡ بِهِمُ ٱلۡأَسۡبَابُ ﴿166﴾

Transliteration: Ith tabarraa allatheena ittubiAAoo mina allatheena ittabaAAoo waraawoo alAAathaba wataqattaAAat bihimu alasbabu

Translation: ಮುಖಂಡರು ತಮ್ಮ ಹಿಂಬಾಲಕರಿಂದ ದೂರ ಸರಿಯುವಾಗ, ಅವರೆಲ್ಲರೂ ಶಿಕ್ಷೆಯನ್ನು ನೇರವಾಗಿ ನೋಡುವಾಗ ಮತ್ತು ಅವರ ನಡುವಿನ ಸಂಬಂಧಗಳು ಕಳಚಿ ಬೀಳುವಾಗ!

2:167

وَقَالَ ٱلَّذِينَ ٱتَّبَعُواْ لَوۡ أَنَّ لَنَا كَرَّةٗ فَنَتَبَرَّأَ مِنۡهُمۡ كَمَا تَبَرَّءُواْ مِنَّاۗ كَذَٰلِكَ يُرِيهِمُ ٱللَّهُ أَعۡمَٰلَهُمۡ حَسَرَٰتٍ عَلَيۡهِمۡۖ وَمَا هُم بِخَٰرِجِينَ مِنَ ٱلنَّارِ ﴿167﴾

Transliteration: Waqala allatheena ittabaAAoo law anna lana karratan fanatabarraa minhum kama tabarraoo minna kathalika yureehimu Allahu aAAmalahum hasaratin AAalayhim wama hum bikharijeena mina alnnari

Translation: ಹಿಂಬಾಲಕರು ಹೇಳುವರು: “ನಮಗೆ (ಇಹಲೋಕಕ್ಕೆ) ಮರಳುವ ಇನ್ನೊಂದು ಅವಕಾಶವು ಸಿಗುತ್ತಿದ್ದರೆ, ಅವರು ನಮ್ಮಿಂದ ದೂರವಾದಂತೆ ನಾವೂ ಅವರಿಂದ ದೂರವಾಗುವೆವು.” ಈ ರೀತಿ ಅಲ್ಲಾಹು ಅವರ ಕರ್ಮಗಳನ್ನು ಅವರಿಗೆ ವಿಷಾದವಾಗುವ ರೀತಿಯಲ್ಲಿ ತೋರಿಸುವನು. ಅವರು ನರಕಾಗ್ನಿಯಿಂದ ಹೊರಹೋಗುವುದೇ ಇಲ್ಲ.

2:168

يَـٰٓأَيُّهَا ٱلنَّاسُ كُلُواْ مِمَّا فِي ٱلۡأَرۡضِ حَلَٰلٗا طَيِّبٗا وَلَا تَتَّبِعُواْ خُطُوَٰتِ ٱلشَّيۡطَٰنِۚ إِنَّهُۥ لَكُمۡ عَدُوّٞ مُّبِينٌ ﴿168﴾

Transliteration: Ya ayyuha alnnasu kuloo mimma fee alardi halalan tayyiban wala tattabiAAoo khutuwati alshshaytani innahu lakum AAaduwwun mubeenun

Translation: ಓ ಜನರೇ! ಭೂಮಿಯಲ್ಲಿರುವ ಧರ್ಮಸಮ್ಮತವಾದ ಮತ್ತು ಶುದ್ಧವಾದ ಆಹಾರವನ್ನು ತಿನ್ನಿರಿ. ಶೈತಾನನ ಹೆಜ್ಜೆಗಳನ್ನು ಹಿಂಬಾಲಿಸಬೇಡಿ. ನಿಶ್ಚಯವಾಗಿಯೂ ಅವನು ನಿಮ್ಮ ಪ್ರತ್ಯಕ್ಷ ವೈರಿಯಾಗಿದ್ದಾನೆ.

2:169

إِنَّمَا يَأۡمُرُكُم بِٱلسُّوٓءِ وَٱلۡفَحۡشَآءِ وَأَن تَقُولُواْ عَلَى ٱللَّهِ مَا لَا تَعۡلَمُونَ ﴿169﴾

Transliteration: Innama yamurukum bialssooi waalfahshai waan taqooloo AAala Allahi ma la taAAlamoona

Translation: ಅವನು ನಿಮಗೆ ಕೆಡುಕು ಮತ್ತು ಅಶ್ಲೀಲತೆಗಳನ್ನು ಮಾಡಲು ಹಾಗೂ ಅಲ್ಲಾಹನ ವಿಷಯದಲ್ಲಿ ನಿಮಗೆ ಗೊತ್ತಿಲ್ಲದ್ದನ್ನು ಹೇಳಲು ಆದೇಶಿಸುತ್ತಾನೆ.

2:170

وَإِذَا قِيلَ لَهُمُ ٱتَّبِعُواْ مَآ أَنزَلَ ٱللَّهُ قَالُواْ بَلۡ نَتَّبِعُ مَآ أَلۡفَيۡنَا عَلَيۡهِ ءَابَآءَنَآۚ أَوَلَوۡ كَانَ ءَابَآؤُهُمۡ لَا يَعۡقِلُونَ شَيۡـٔٗا وَلَا يَهۡتَدُونَ ﴿170﴾

Transliteration: Waitha qeela lahumu ittabiAAoo ma anzala Allahu qaloo bal nattabiAAu ma alfayna AAalayhi abaana awalaw kana abaohum la yaAAqiloona shayan wala yahtadoona

Translation: “ಅಲ್ಲಾಹು ಅವತೀರ್ಣಗೊಳಿಸಿದ್ದನ್ನು ಅನುಸರಿಸಿರಿ” ಎಂದು ಅವರೊಡನೆ ಹೇಳಲಾದರೆ, ಅವರು ಹೇಳುತ್ತಾರೆ: “ಇಲ್ಲ, ನಮ್ಮ ಪೂರ್ವಜರು ಯಾವ ಮಾರ್ಗದಲ್ಲಿರುವುದನ್ನು ನಾವು ಕಂಡೆವೋ ಅದನ್ನೇ ನಾವು ಅನುಸರಿಸುತ್ತೇವೆ.”[1] ಅವರ ಪೂರ್ವಜರು ಏನೂ ತಿಳಿಯದವರು ಮತ್ತು ಸನ್ಮಾರ್ಗ ಪಡೆಯದವರಾಗಿದ್ದರೂ ಸಹ.

2:171

وَمَثَلُ ٱلَّذِينَ كَفَرُواْ كَمَثَلِ ٱلَّذِي يَنۡعِقُ بِمَا لَا يَسۡمَعُ إِلَّا دُعَآءٗ وَنِدَآءٗۚ صُمُّۢ بُكۡمٌ عُمۡيٞ فَهُمۡ لَا يَعۡقِلُونَ ﴿171﴾

Transliteration: Wamathalu allatheena kafaroo kamathali allathee yanAAiqu bima la yasmaAAu illa duAAaan wanidaan summun bukmun AAumyun fahum la yaAAqiloona

Translation: ಸತ್ಯನಿಷೇಧಿಗಳ ಉದಾಹರಣೆಯು ಕರೆ ಮತ್ತು ಕೂಗನ್ನು ಮಾತ್ರ ಕೇಳುವ ಜಾನುವಾರುಗಳ ಮುಂದೆ ಕಿರಿಚುವ ವ್ಯಕ್ತಿಯಂತೆ. ಅವರು ಕಿವುಡರು, ಮೂಕರು ಮತ್ತು ಕುರುಡರು. ಆದ್ದರಿಂದ ಅವರು ಅರ್ಥಮಾಡಿಕೊಳ್ಳುವುದಿಲ್ಲ.

2:172

يَـٰٓأَيُّهَا ٱلَّذِينَ ءَامَنُواْ كُلُواْ مِن طَيِّبَٰتِ مَا رَزَقۡنَٰكُمۡ وَٱشۡكُرُواْ لِلَّهِ إِن كُنتُمۡ إِيَّاهُ تَعۡبُدُونَ ﴿172﴾

Transliteration: Ya ayyuha allatheena amanoo kuloo min tayyibati ma razaqnakum waoshkuroo lillahi in kuntum iyyahu taAAbudoona

Translation: ಓ ಸತ್ಯವಿಶ್ವಾಸಿಗಳೇ! ನಾವು ನಿಮಗೆ ನೀಡಿದ ಶುದ್ಧ ವಸ್ತುಗಳಿಂದ ತಿನ್ನಿರಿ ಮತ್ತು ಅಲ್ಲಾಹನಿಗೆ ಕೃತಜ್ಞರಾಗಿರಿ; ನೀವು ಅವನನ್ನು ಮಾತ್ರ ಆರಾಧಿಸುವವರಾಗಿದ್ದರೆ.

2:173

إِنَّمَا حَرَّمَ عَلَيۡكُمُ ٱلۡمَيۡتَةَ وَٱلدَّمَ وَلَحۡمَ ٱلۡخِنزِيرِ وَمَآ أُهِلَّ بِهِۦ لِغَيۡرِ ٱللَّهِۖ فَمَنِ ٱضۡطُرَّ غَيۡرَ بَاغٖ وَلَا عَادٖ فَلَآ إِثۡمَ عَلَيۡهِۚ إِنَّ ٱللَّهَ غَفُورٞ رَّحِيمٌ ﴿173﴾

Transliteration: Innama harrama AAalaykumu almaytata waalddama walahma alkhinzeeri wama ohilla bihi lighayri Allahi famani idturra ghayra baghin wala AAadin fala ithma AAalayhi inna Allaha ghafoorun raheemun

Translation: ಅವನು ನಿಮಗೆ ಶವ, ರಕ್ತ, ಹಂದಿ ಮಾಂಸ ಮತ್ತು ಅಲ್ಲಾಹೇತರರ ಹೆಸರನ್ನು ಘೋಷಿಸಲಾದ ವಸ್ತುಗಳನ್ನು ಮಾತ್ರ ನಿಷೇಧಿಸಿದ್ದಾನೆ.[1] ಆದರೆ ಯಾರಾದರೂ (ಇವುಗಳನ್ನು ಸೇವಿಸಲು) ನಿರ್ಬಂಧಿತನಾದರೆ ಅವನ ಮೇಲೆ ದೋಷವಿಲ್ಲ. ಆದರೆ ಅವನು ಅಗತ್ಯಕ್ಕಿಂತ ಹೆಚ್ಚು ಸೇವಿಸಬಾರದು ಮತ್ತು (ಅಲ್ಲಾಹು ಅನುಮತಿಸಿದ) ಎಲ್ಲೆಯನ್ನು ಮೀರಬಾರದು. ನಿಶ್ಚಯವಾಗಿಯೂ ಅಲ್ಲಾಹು ಕ್ಷಮಿಸುವವನು ಮತ್ತು ಕರುಣೆ ತೋರುವವನಾಗಿದ್ದಾನೆ.

2:174

إِنَّ ٱلَّذِينَ يَكۡتُمُونَ مَآ أَنزَلَ ٱللَّهُ مِنَ ٱلۡكِتَٰبِ وَيَشۡتَرُونَ بِهِۦ ثَمَنٗا قَلِيلًا أُوْلَـٰٓئِكَ مَا يَأۡكُلُونَ فِي بُطُونِهِمۡ إِلَّا ٱلنَّارَ وَلَا يُكَلِّمُهُمُ ٱللَّهُ يَوۡمَ ٱلۡقِيَٰمَةِ وَلَا يُزَكِّيهِمۡ وَلَهُمۡ عَذَابٌ أَلِيمٌ ﴿174﴾

Transliteration: Inna allatheena yaktumoona ma anzala Allahu mina alkitabi wayashtaroona bihi thamanan qaleelan olaika ma yakuloona fee butoonihim illa alnnara wala yukallimuhumu Allahu yawma alqiyamati wala yuzakkeehim walahum AAathabun aleemun

Translation: ನಿಶ್ಚಯವಾಗಿಯೂ ಅಲ್ಲಾಹು ಅವತೀರ್ಣಗೊಳಿಸಿದ ಗ್ರಂಥವನ್ನು ಬಚ್ಚಿಡುವವರು ಮತ್ತು ಅದನ್ನು ಅಲ್ಪ ಬೆಲೆಗೆ ಮಾರುವವರು ಯಾರೋ—ಅವರು ತಮ್ಮ ಉದರಗಳಲ್ಲಿ ಅಗ್ನಿಯನ್ನಲ್ಲದೆ ಬೇರೇನನ್ನೂ ತುಂಬಿಸುವುದಿಲ್ಲ. ಪುನರುತ್ಥಾನ ದಿನದಂದು ಅಲ್ಲಾಹು ಅವರೊಡನೆ ಮಾತನಾಡುವುದಿಲ್ಲ ಮತ್ತು ಅವರನ್ನು ಶುದ್ಧೀಕರಿಸುವುದಿಲ್ಲ. ಅವರಿಗೆ ಯಾತನಾಮಯ ಶಿಕ್ಷೆಯಿದೆ.

2:175

أُوْلَـٰٓئِكَ ٱلَّذِينَ ٱشۡتَرَوُاْ ٱلضَّلَٰلَةَ بِٱلۡهُدَىٰ وَٱلۡعَذَابَ بِٱلۡمَغۡفِرَةِۚ فَمَآ أَصۡبَرَهُمۡ عَلَى ٱلنَّارِ ﴿175﴾

Transliteration: Olaika allatheena ishtarawoo alddalalata bialhuda waalAAathaba bialmaghfirati fama asbarahum AAala alnnari

Translation: ಅವರೇ ಸನ್ಮಾರ್ಗದ ಬದಲಿಗೆ ದುರ್ಮಾರ್ಗವನ್ನು ಮತ್ತು ಕ್ಷಮೆಯ ಬದಲಿಗೆ ಶಿಕ್ಷೆಯನ್ನು ಖರೀದಿಸಿದವರು. ಅವರು ನರಕ ಶಿಕ್ಷೆಯನ್ನು ಎಷ್ಟರಮಟ್ಟಿಗೆ ಸಹಿಸಿಕೊಳ್ಳುವರು!

2:176

ذَٰلِكَ بِأَنَّ ٱللَّهَ نَزَّلَ ٱلۡكِتَٰبَ بِٱلۡحَقِّۗ وَإِنَّ ٱلَّذِينَ ٱخۡتَلَفُواْ فِي ٱلۡكِتَٰبِ لَفِي شِقَاقِۭ بَعِيدٖ ﴿176﴾

Transliteration: Thalika bianna Allaha nazzala alkitaba bialhaqqi wainna allatheena ikhtalafoo fee alkitabi lafee shiqaqin baAAeedin

Translation: ಅದೇಕೆಂದರೆ, ಅಲ್ಲಾಹು ಗ್ರಂಥವನ್ನು ಸತ್ಯ ಸಮೇತ ಅವತೀರ್ಣಗೊಳಿಸಿದ್ದನು. ಗ್ರಂಥದ ವಿಷಯದಲ್ಲಿ ಭಿನ್ನಮತದಲ್ಲಿರುವವರು ವಿದೂರ ಮನಸ್ತಾಪದಲ್ಲಿದ್ದಾರೆ.

2:177

لَّيۡسَ ٱلۡبِرَّ أَن تُوَلُّواْ وُجُوهَكُمۡ قِبَلَ ٱلۡمَشۡرِقِ وَٱلۡمَغۡرِبِ وَلَٰكِنَّ ٱلۡبِرَّ مَنۡ ءَامَنَ بِٱللَّهِ وَٱلۡيَوۡمِ ٱلۡأٓخِرِ وَٱلۡمَلَـٰٓئِكَةِ وَٱلۡكِتَٰبِ وَٱلنَّبِيِّـۧنَ وَءَاتَى ٱلۡمَالَ عَلَىٰ حُبِّهِۦ ذَوِي ٱلۡقُرۡبَىٰ وَٱلۡيَتَٰمَىٰ وَٱلۡمَسَٰكِينَ وَٱبۡنَ ٱلسَّبِيلِ وَٱلسَّآئِلِينَ وَفِي ٱلرِّقَابِ وَأَقَامَ ٱلصَّلَوٰةَ وَءَاتَى ٱلزَّكَوٰةَ وَٱلۡمُوفُونَ بِعَهۡدِهِمۡ إِذَا عَٰهَدُواْۖ وَٱلصَّـٰبِرِينَ فِي ٱلۡبَأۡسَآءِ وَٱلضَّرَّآءِ وَحِينَ ٱلۡبَأۡسِۗ أُوْلَـٰٓئِكَ ٱلَّذِينَ صَدَقُواْۖ وَأُوْلَـٰٓئِكَ هُمُ ٱلۡمُتَّقُونَ ﴿177﴾

Transliteration: Laysa albirra an tuwalloo wujoohakum qibala almashriqi waalmaghribi walakinna albirra man amana biAllahi waalyawmi alakhiri waalmalaikati waalkitabi waalnnabiyyeena waata almala AAala hubbihi thawee alqurba waalyatama waalmasakeena waibna alssabeeli waalssaileena wafee alrriqabi waaqama alssalata waata alzzakata waalmoofoona biAAahdihim itha AAahadoo waalssabireena fee albasai waalddarrai waheena albasi olaika allatheena sadaqoo waolaika humu almuttaqoona

Translation: ಒಳಿತು ಎಂದರೆ ನೀವು ನಿಮ್ಮ ಮುಖಗಳನ್ನು ಪೂರ್ವಕ್ಕೆ ಅಥವಾ ಪಶ್ಚಿಮಕ್ಕೆ ತಿರುಗಿಸುವುದಲ್ಲ. ಬದಲಿಗೆ, ಒಳಿತಿನಲ್ಲಿರುವವನು ಯಾರೆಂದರೆ ಅಲ್ಲಾಹನಲ್ಲಿ, ಅಂತ್ಯದಿನದಲ್ಲಿ, ದೇವದೂತರುಗಳಲ್ಲಿ, ಗ್ರಂಥದಲ್ಲಿ ಮತ್ತು ಪ್ರವಾದಿಗಳಲ್ಲಿ ವಿಶ್ವಾಸವಿಡುವವನು, ಧನದ ಮೇಲೆ ಪ್ರೀತಿಯಿದ್ದೂ ಸಹ ಅದನ್ನು ಸಂಬಂಧಿಕರಿಗೆ, ಅನಾಥರಿಗೆ, ನಿರ್ಗತಿಕರಿಗೆ, ದಾರಿಹೋಕನಿಗೆ, ಬೇಡುವವರಿಗೆ ಮತ್ತು ಗುಲಾಮ ವಿಮೋಚನೆಗೆ ಖರ್ಚು ಮಾಡುವವನು, ನಮಾಝನ್ನು ಸಂಸ್ಥಾಪಿಸುವವನು, ಝಕಾತ್ ನೀಡುವವನು, ಕರಾರು ಮಾಡಿದರೆ ಅದನ್ನು ನೆರವೇರಿಸುವವನು ಮತ್ತು ಬಡತನ, ಸಂಕಷ್ಟ ಹಾಗೂ ಯುದ್ಧಗಳ ಸಂದರ್ಭಗಳಲ್ಲಿ ತಾಳ್ಮೆಯಿಂದಿರುವವರು. ಅವರೇ (ನಿಜವಾದ) ಸತ್ಯವಂತರು ಮತ್ತು ಅವರೇ ದೇವಭಯವುಳ್ಳವರು.

2:178

يَـٰٓأَيُّهَا ٱلَّذِينَ ءَامَنُواْ كُتِبَ عَلَيۡكُمُ ٱلۡقِصَاصُ فِي ٱلۡقَتۡلَىۖ ٱلۡحُرُّ بِٱلۡحُرِّ وَٱلۡعَبۡدُ بِٱلۡعَبۡدِ وَٱلۡأُنثَىٰ بِٱلۡأُنثَىٰۚ فَمَنۡ عُفِيَ لَهُۥ مِنۡ أَخِيهِ شَيۡءٞ فَٱتِّبَاعُۢ بِٱلۡمَعۡرُوفِ وَأَدَآءٌ إِلَيۡهِ بِإِحۡسَٰنٖۗ ذَٰلِكَ تَخۡفِيفٞ مِّن رَّبِّكُمۡ وَرَحۡمَةٞۗ فَمَنِ ٱعۡتَدَىٰ بَعۡدَ ذَٰلِكَ فَلَهُۥ عَذَابٌ أَلِيمٞ ﴿178﴾

Transliteration: Ya ayyuha allatheena amanoo kutiba AAalaykumu alqisasu fee alqatla alhurru bialhurri waalAAabdu bialAAabdi waalontha bialontha faman AAufiya lahu min akheehi shayon faittibaAAun bialmaAAroofi waadaon ilayhi biihsanin thalika takhfeefun min rabbikum warahmatun famani iAAtada baAAda thalika falahu AAathabun aleemun

Translation: ಓ ಸತ್ಯವಿಶ್ವಾಸಿಗಳೇ! ಕೊಲೆಯಾದವರ ವಿಷಯದಲ್ಲಿ ಪ್ರತೀಕಾರ ಪಡೆಯುವುದನ್ನು ನಿಮಗೆ ಕಡ್ಡಾಯಗೊಳಿಸಲಾಗಿದೆ. ಸ್ವತಂತ್ರನ ಬದಲಿಗೆ ಸ್ವತಂತ್ರ, ಗುಲಾಮನ ಬದಲಿಗೆ ಗುಲಾಮ ಮತ್ತು ಹೆಣ್ಣಿನ ಬದಲಿಗೆ ಹೆಣ್ಣು. ಯಾರಿಗಾದರೂ ಅವನ ಸಹೋದರನ (ಕೊಲೆಯಾದವನ) ಕಡೆಯಿಂದ ಮಾಫಿ ನೀಡಲಾದರೆ, ಅವನು ಸ್ವೀಕಾರಾರ್ಹ ರೀತಿಯನ್ನು ಅನುಸರಿಸಲಿ ಮತ್ತು ಒಳ್ಳೆಯ ರೀತಿಯಲ್ಲಿ ಪರಿಹಾರವನ್ನು ನೀಡಲಿ. ಅದು ನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಯ ರಿಯಾಯಿತಿ ಮತ್ತು ದಯೆಯಾಗಿದೆ. ಅದರ ನಂತರವೂ ಯಾರಾದರೂ ಅತಿರೇಕವೆಸಗಿದರೆ ಅವನಿಗೆ ವೇದನಾಭರಿತ ಶಿಕ್ಷೆಯಿದೆ.

2:179

وَلَكُمۡ فِي ٱلۡقِصَاصِ حَيَوٰةٞ يَـٰٓأُوْلِي ٱلۡأَلۡبَٰبِ لَعَلَّكُمۡ تَتَّقُونَ ﴿179﴾

Transliteration: Walakum fee alqisasi hayatun ya olee alalbabi laAAallakum tattaqoona

Translation: ಓ ಬುದ್ಧಿವಂತರೇ! ಪ್ರತೀಕಾರ ಪಡೆಯುವುದರಲ್ಲಿ ನಿಮಗೆ ಜೀವನವಿದೆ. ನೀವು ದೇವಭಯವುಳ್ಳವರಾಗುವುದಕ್ಕಾಗಿ.[1]

2:180

كُتِبَ عَلَيۡكُمۡ إِذَا حَضَرَ أَحَدَكُمُ ٱلۡمَوۡتُ إِن تَرَكَ خَيۡرًا ٱلۡوَصِيَّةُ لِلۡوَٰلِدَيۡنِ وَٱلۡأَقۡرَبِينَ بِٱلۡمَعۡرُوفِۖ حَقًّا عَلَى ٱلۡمُتَّقِينَ ﴿180﴾

Transliteration: Kutiba AAalaykum itha hadara ahadakumu almawtu in taraka khayran alwasiyyatu lilwalidayni waalaqrabeena bialmaAAroofi haqqan AAala almuttaqeena

Translation: ನಿಮ್ಮಲ್ಲೊಬ್ಬರಿಗೆ ಮರಣವು ಆಸನ್ನವಾಗಿ ಅವನು ಆಸ್ತಿಯನ್ನು ಬಿಟ್ಟು ಹೋಗುವುದಾದರೆ, ತಂದೆ-ತಾಯಿಗೆ ಮತ್ತು ನಿಕಟ ಸಂಬಂಧಿಕರಿಗೆ ಸ್ವೀಕಾರಾರ್ಹ ರೀತಿಯಲ್ಲಿ ಉಯಿಲು ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ.[1] ಇದು ದೇವಭಯವುಳ್ಳವರ ಕರ್ತವ್ಯವಾಗಿದೆ.

2:181

فَمَنۢ بَدَّلَهُۥ بَعۡدَ مَا سَمِعَهُۥ فَإِنَّمَآ إِثۡمُهُۥ عَلَى ٱلَّذِينَ يُبَدِّلُونَهُۥٓۚ إِنَّ ٱللَّهَ سَمِيعٌ عَلِيمٞ ﴿181﴾

Transliteration: Faman baddalahu baAAdama samiAAahu fainnama ithmuhu AAala allatheena yubaddiloonahu inna Allaha sameeAAun AAaleemun

Translation: ಆದರೆ, ಅದನ್ನು (ಉಯಿಲನ್ನು) ಕೇಳಿದ ಬಳಿಕವೂ ಯಾರಾದರೂ ಅದನ್ನು ಬದಲಾಯಿಸಿದರೆ, ಆ ಪಾಪವು ಬದಲಾಯಿಸುವವರಿಗೆ ಮಾತ್ರವಾಗಿದೆ. ನಿಶ್ಚಯವಾಗಿಯೂ ಅಲ್ಲಾಹು ಎಲ್ಲವನ್ನೂ ಕೇಳುವವನು ಮತ್ತು ತಿಳಿದವನಾಗಿದ್ದಾನೆ.

2:182

فَمَنۡ خَافَ مِن مُّوصٖ جَنَفًا أَوۡ إِثۡمٗا فَأَصۡلَحَ بَيۡنَهُمۡ فَلَآ إِثۡمَ عَلَيۡهِۚ إِنَّ ٱللَّهَ غَفُورٞ رَّحِيمٞ ﴿182﴾

Transliteration: Faman khafa min moosin janafan aw ithman faaslaha baynahum fala ithma AAalayhi inna Allaha ghafoorun raheemun

Translation: ಆದರೆ, ಉಯಿಲು ಮಾಡಿದವನಿಂದ ಏನಾದರೂ ತಪ್ಪು ಅಥವಾ ಪಾಪವು ಸಂಭವಿಸಿದೆಯೆಂದು ಹೆದರಿ, ಯಾರಾದರೂ ಸಂಬಂಧಿತ ಕಕ್ಷಿಗಳ ಮಧ್ಯೆ ಸಂಧಾನ ಮಾಡಿದರೆ ಅದರಲ್ಲಿ ಅವರಿಗೆ ದೋಷವಿಲ್ಲ. ನಿಶ್ಚಯವಾಗಿಯೂ ಅಲ್ಲಾಹು ಕ್ಷಮಿಸುವವನು ಮತ್ತು ಕರುಣೆ ತೋರುವವನಾಗಿದ್ದಾನೆ.

2:183

يَـٰٓأَيُّهَا ٱلَّذِينَ ءَامَنُواْ كُتِبَ عَلَيۡكُمُ ٱلصِّيَامُ كَمَا كُتِبَ عَلَى ٱلَّذِينَ مِن قَبۡلِكُمۡ لَعَلَّكُمۡ تَتَّقُونَ ﴿183﴾

Transliteration: Ya ayyuha allatheena amanoo kutiba AAalaykumu alssiyamu kama kutiba AAala allatheena min qablikum laAAallakum tattaqoona

Translation: ಓ ಸತ್ಯವಿಶ್ವಾಸಿಗಳೇ! ನಿಮಗಿಂತ ಮುಂಚಿನವರಿಗೆ ಕಡ್ಡಾಯಗೊಳಿಸಲಾದಂತೆ ನಿಮಗೂ ಉಪವಾಸವನ್ನು ಕಡ್ಡಾಯಗೊಳಿಸಲಾಗಿದೆ. ನೀವು ದೇವಭಯವುಳ್ಳವರಾಗುವುದಕ್ಕಾಗಿ.

2:184

أَيَّامٗا مَّعۡدُودَٰتٖۚ فَمَن كَانَ مِنكُم مَّرِيضًا أَوۡ عَلَىٰ سَفَرٖ فَعِدَّةٞ مِّنۡ أَيَّامٍ أُخَرَۚ وَعَلَى ٱلَّذِينَ يُطِيقُونَهُۥ فِدۡيَةٞ طَعَامُ مِسۡكِينٖۖ فَمَن تَطَوَّعَ خَيۡرٗا فَهُوَ خَيۡرٞ لَّهُۥۚ وَأَن تَصُومُواْ خَيۡرٞ لَّكُمۡ إِن كُنتُمۡ تَعۡلَمُونَ ﴿184﴾

Transliteration: Ayyaman maAAdoodatin faman kana minkum mareedan aw AAala safarin faAAiddatun min ayyamin okhara waAAala allatheena yuteeqoonahu fidyatun taAAamu miskeenin faman tatawwaAAa khayran fahuwa khayrun lahu waan tasoomoo khayrun lakum in kuntum taAAlamoona

Translation: ಬೆರಳೆಣಿಕೆಯ ಕೆಲವು ದಿನಗಳು ಮಾತ್ರ. ನಿಮ್ಮಲ್ಲಿ ಯಾರಾದರೂ ಅನಾರೋಗ್ಯದಲ್ಲಿದ್ದರೆ ಅಥವಾ ಪ್ರಯಾಣದಲ್ಲಿದ್ದರೆ ಅವನು ಇತರ ದಿನಗಳಲ್ಲಿ ಆ ಎಣಿಕೆಯನ್ನು ಪೂರ್ತಿ ಮಾಡಲಿ.[1] (ಉಪವಾಸ ಆಚರಿಸಲು) ಸಾಧ್ಯವಾಗುವವರು[2] (ಅದರ ಬದಲಿಗೆ) ಪ್ರಾಯಶ್ಚಿತ್ತವಾಗಿ ಒಬ್ಬ ಬಡವನಿಗೆ ಆಹಾರವನ್ನು ನೀಡಲಿ. ಯಾರಾದರೂ ಸ್ವಯಂ ಪ್ರೇರಣೆಯಿಂದ ಒಳಿತು ಮಾಡಿದರೆ ಅದು ಅವನಿಗೆ ಒಳಿತಾಗಿದೆ. ಆದರೆ ಉಪವಾಸ ಆಚರಿಸುವುದೇ ನಿಮಗೆ ಒಳ್ಳೆಯದು.[3] ನೀವು ತಿಳಿದವರಾಗಿದ್ದರೆ.

2:185

شَهۡرُ رَمَضَانَ ٱلَّذِيٓ أُنزِلَ فِيهِ ٱلۡقُرۡءَانُ هُدٗى لِّلنَّاسِ وَبَيِّنَٰتٖ مِّنَ ٱلۡهُدَىٰ وَٱلۡفُرۡقَانِۚ فَمَن شَهِدَ مِنكُمُ ٱلشَّهۡرَ فَلۡيَصُمۡهُۖ وَمَن كَانَ مَرِيضًا أَوۡ عَلَىٰ سَفَرٖ فَعِدَّةٞ مِّنۡ أَيَّامٍ أُخَرَۗ يُرِيدُ ٱللَّهُ بِكُمُ ٱلۡيُسۡرَ وَلَا يُرِيدُ بِكُمُ ٱلۡعُسۡرَ وَلِتُكۡمِلُواْ ٱلۡعِدَّةَ وَلِتُكَبِّرُواْ ٱللَّهَ عَلَىٰ مَا هَدَىٰكُمۡ وَلَعَلَّكُمۡ تَشۡكُرُونَ ﴿185﴾

Transliteration: Shahru ramadana allathee onzila feehi alquranu hudan lilnnasi wabayyinatin mina alhuda waalfurqani faman shahida minkumu alshshahra falyasumhu waman kana mareedan aw AAala safarin faAAiddatun min ayyamin okhara yureedu Allahu bikumu alyusra wala yureedu bikumu alAAusra walitukmiloo alAAiddata walitukabbiroo Allaha AAala ma hadakum walaAAallakum tashkuroona

Translation: ರಮದಾನ್ ಎಂದರೆ ಜನರಿಗೆ ಸನ್ಮಾರ್ಗವನ್ನು ತೋರಿಸಿಕೊಡುವ ಮತ್ತು ಸನ್ಮಾರ್ಗ ಹಾಗೂ ಸತ್ಯಾಸತ್ಯತೆಗಳನ್ನು ಬೇರ್ಪಡಿಸುವ ಪುರಾವೆಗಳನ್ನು ಹೊಂದಿರುವ ಪವಿತ್ರ ಕುರ್‌ಆನ್ ಅವತೀರ್ಣವಾದ ತಿಂಗಳು. ಆದ್ದರಿಂದ ನಿಮ್ಮಲ್ಲಿ ಯಾರಾದರೂ ಆ ತಿಂಗಳಿಗೆ ಸಾಕ್ಷಿಯಾದರೆ ಅವನು ಉಪವಾಸವನ್ನು ಆಚರಿಸಲಿ. ಯಾರಾದರೂ ಅನಾರೋಗ್ಯದಲ್ಲಿದ್ದರೆ ಅಥವಾ ಪ್ರಯಾಣದಲ್ಲಿದ್ದರೆ ಅವನು ಇತರ ದಿನಗಳಲ್ಲಿ ಆ ಎಣಿಕೆಯನ್ನು ಪೂರ್ತಿ ಮಾಡಲಿ. ಅಲ್ಲಾಹು ನಿಮಗೆ ಸುಲಭ ಮಾಡಲು ಬಯಸುತ್ತಾನೆ; ಅವನು ನಿಮಗೆ ಕಷ್ಟ ಕೊಡಲು ಬಯಸುವುದಿಲ್ಲ. ನೀವು ಆ ಎಣಿಕೆಯನ್ನು ಪೂರ್ತಿ ಮಾಡಲು, ಅಲ್ಲಾಹು ನಿಮಗೆ ಸನ್ಮಾರ್ಗವನ್ನು ತೋರಿಸಿದ್ದಕ್ಕಾಗಿ ಅವನ ಮಹಾತ್ಮೆಯನ್ನು ಕೊಂಡಾಡಲು ಮತ್ತು ಅವನಿಗೆ ಕೃತಜ್ಞರಾಗಿ ಬದುಕಲು (ಅವನು ಬಯಸುತ್ತಾನೆ).

2:186

وَإِذَا سَأَلَكَ عِبَادِي عَنِّي فَإِنِّي قَرِيبٌۖ أُجِيبُ دَعۡوَةَ ٱلدَّاعِ إِذَا دَعَانِۖ فَلۡيَسۡتَجِيبُواْ لِي وَلۡيُؤۡمِنُواْ بِي لَعَلَّهُمۡ يَرۡشُدُونَ ﴿186﴾

Transliteration: Waitha saalaka AAibadee AAannee fainnee qareebun ojeebu daAAwata alddaAAi itha daAAani falyastajeeboo lee walyuminoo bee laAAallahum yarshudoona

Translation: ನನ್ನ ದಾಸರು ನಿಮ್ಮೊಂದಿಗೆ ನನ್ನ ಬಗ್ಗೆ ಕೇಳಿದರೆ ನಾನು ಬಹಳ ಹತ್ತಿರದಲ್ಲಿದ್ದೇನೆ (ಎಂದು ಹೇಳಿರಿ). ಪ್ರಾರ್ಥಿಸುವವನು ನನ್ನನ್ನು ಕರೆದು ಪ್ರಾರ್ಥಿಸಿದರೆ ನಾನು ಅವನ ಪ್ರಾರ್ಥನೆಗೆ ಉತ್ತರ ನೀಡುತ್ತೇನೆ. ಆದ್ದರಿಂದ ಅವರು ನನಗೆ ವಿಧೇಯರಾಗಲಿ ಮತ್ತು ನನ್ನಲ್ಲಿ ವಿಶ್ವಾಸವಿಡಲಿ. ಅವರು ಸನ್ಮಾರ್ಗ ಪಡೆಯುವುದಕ್ಕಾಗಿ.

2:187

أُحِلَّ لَكُمۡ لَيۡلَةَ ٱلصِّيَامِ ٱلرَّفَثُ إِلَىٰ نِسَآئِكُمۡۚ هُنَّ لِبَاسٞ لَّكُمۡ وَأَنتُمۡ لِبَاسٞ لَّهُنَّۗ عَلِمَ ٱللَّهُ أَنَّكُمۡ كُنتُمۡ تَخۡتَانُونَ أَنفُسَكُمۡ فَتَابَ عَلَيۡكُمۡ وَعَفَا عَنكُمۡۖ فَٱلۡـَٰٔنَ بَٰشِرُوهُنَّ وَٱبۡتَغُواْ مَا كَتَبَ ٱللَّهُ لَكُمۡۚ وَكُلُواْ وَٱشۡرَبُواْ حَتَّىٰ يَتَبَيَّنَ لَكُمُ ٱلۡخَيۡطُ ٱلۡأَبۡيَضُ مِنَ ٱلۡخَيۡطِ ٱلۡأَسۡوَدِ مِنَ ٱلۡفَجۡرِۖ ثُمَّ أَتِمُّواْ ٱلصِّيَامَ إِلَى ٱلَّيۡلِۚ وَلَا تُبَٰشِرُوهُنَّ وَأَنتُمۡ عَٰكِفُونَ فِي ٱلۡمَسَٰجِدِۗ تِلۡكَ حُدُودُ ٱللَّهِ فَلَا تَقۡرَبُوهَاۗ كَذَٰلِكَ يُبَيِّنُ ٱللَّهُ ءَايَٰتِهِۦ لِلنَّاسِ لَعَلَّهُمۡ يَتَّقُونَ ﴿187﴾

Transliteration: Ohilla lakum laylata alssiyami alrrafathu ila nisaikum hunna libasun lakum waantum libasun lahunna AAalima Allahu annakum kuntum takhtanoona anfusakum fataba AAalaykum waAAafa AAankum faalana bashiroohunna waibtaghoo ma kataba Allahu lakum wakuloo waishraboo hatta yatabayyana lakumu alkhaytu alabyadu mina alkhayti alaswadi mina alfajri thumma atimmoo alssiyama ila allayli wala tubashiroohunna waantum AAakifoona fee almasajidi tilka hudoodu Allahi fala taqrabooha kathalika yubayyinu Allahu ayatihi lilnnasi laAAallahum yattaqoona

Translation: ಉಪವಾಸದ ರಾತ್ರಿಯಲ್ಲಿ ನಿಮ್ಮ ಪತ್ನಿಯರೊಂದಿಗೆ ಲೈಂಗಿಕ ಸಂಪರ್ಕ ಮಾಡುವುದನ್ನು ನಿಮಗೆ ಅನುಮತಿಸಲಾಗಿದೆ. ಅವರು ನಿಮ್ಮ ಉಡುಪಾಗಿದ್ದಾರೆ ಮತ್ತು ನೀವು ಅವರ ಉಡುಪಾಗಿದ್ದೀರಿ. ನೀವು ನಿಮ್ಮ ಆತ್ಮಗಳನ್ನು ವಂಚಿಸುತ್ತಿದ್ದೀರಿ ಎಂದು ಅಲ್ಲಾಹನಿಗೆ ತಿಳಿದಿದೆ. ಆದ್ದರಿಂದ, ಅವನು ನಿಮ್ಮ ಪಶ್ಚಾತ್ತಾಪವನ್ನು ಸ್ವೀಕರಿಸಿದ್ದಾನೆ ಮತ್ತು ನಿಮ್ಮನ್ನು ಕ್ಷಮಿಸಿದ್ದಾನೆ. ಈಗ ನೀವು ಅವರೊಂದಿಗೆ ಲೈಂಗಿಕ ಸಂಪರ್ಕವನ್ನು ಮಾಡಬಹುದು ಮತ್ತು ಅಲ್ಲಾಹು ನಿಮಗೆ ವಿಧಿಸಿದ್ದನ್ನು (ಮಕ್ಕಳನ್ನು) ಅರಸಬಹುದು. ಪ್ರಭಾತದ ಬಿಳಿಯ ನೂಲು ಕಪ್ಪು ನೂಲಿನಿಂದ ಸ್ಪಷ್ಟವಾಗಿ ಗೋಚರಿಸುವವರೆಗೆ ತಿನ್ನಿರಿ ಮತ್ತು ಕುಡಿಯಿರಿ. ನಂತರ ರಾತ್ರಿಯ ತನಕ ಉಪವಾಸವನ್ನು ಪೂರ್ತಿಗೊಳಿಸಿರಿ. ಆದರೆ ನೀವು ಮಸೀದಿಗಳಲ್ಲಿ ಧ್ಯಾನ (ಈತಿಕಾಫ್) ನಿರತರಾಗಿರುವಾಗ ಅವರೊಂದಿಗೆ ಲೈಂಗಿಕ ಸಂಪರ್ಕ ಮಾಡಬೇಡಿ. ಇವು ಅಲ್ಲಾಹನ ಎಲ್ಲೆಗಳಾಗಿವೆ. ನೀವು ಅವುಗಳ ಸಮೀಪಕ್ಕೂ ಹೋಗಬೇಡಿ. ಹೀಗೆ ಅಲ್ಲಾಹು ಜನರಿಗೆ ತನ್ನ ನಿಯಮಗಳನ್ನು ವಿವರಿಸಿಕೊಡುತ್ತಿದ್ದಾನೆ. ಅವರು ದೇವಭಯವುಳ್ಳವರಾಗುವುದಕ್ಕಾಗಿ.[1]

2:188

وَلَا تَأۡكُلُوٓاْ أَمۡوَٰلَكُم بَيۡنَكُم بِٱلۡبَٰطِلِ وَتُدۡلُواْ بِهَآ إِلَى ٱلۡحُكَّامِ لِتَأۡكُلُواْ فَرِيقٗا مِّنۡ أَمۡوَٰلِ ٱلنَّاسِ بِٱلۡإِثۡمِ وَأَنتُمۡ تَعۡلَمُونَ ﴿188﴾

Transliteration: Wala takuloo amwalakum baynakum bialbatili watudloo biha ila alhukkami litakuloo fareeqan min amwali alnnasi bialithmi waantum taAAlamoona

Translation: ನೀವು ಒಬ್ಬರು ಇನ್ನೊಬ್ಬರ ಆಸ್ತಿಯನ್ನು ಅನ್ಯಾಯವಾಗಿ ತಿನ್ನಬೇಡಿ. ಜನರ ಆಸ್ತಿಯಿಂದ ಏನನ್ನಾದರೂ ಅನ್ಯಾಯವಾಗಿ ಕಬಳಿಸಲು ಆಡಳಿತಗಾರರಿಗೆ ಲಂಚ ತಲುಪಿಸುವುದನ್ನೂ ಮಾಡಬೇಡಿ. (ಅದು ಸರಿಯಲ್ಲವೆಂದು) ನೀವು ತಿಳಿದವರಾಗಿದ್ದೂ ಸಹ.[1]

2:189

يَسۡـَٔلُونَكَ عَنِ ٱلۡأَهِلَّةِۖ قُلۡ هِيَ مَوَٰقِيتُ لِلنَّاسِ وَٱلۡحَجِّۗ وَلَيۡسَ ٱلۡبِرُّ بِأَن تَأۡتُواْ ٱلۡبُيُوتَ مِن ظُهُورِهَا وَلَٰكِنَّ ٱلۡبِرَّ مَنِ ٱتَّقَىٰۗ وَأۡتُواْ ٱلۡبُيُوتَ مِنۡ أَبۡوَٰبِهَاۚ وَٱتَّقُواْ ٱللَّهَ لَعَلَّكُمۡ تُفۡلِحُونَ ﴿189﴾

Transliteration: Yasaloonaka AAani alahillati qul hiya mawaqeetu lilnnasi waalhajji walaysa albirru bian tatoo albuyoota min thuhooriha walakinna albirra mani ittaqa watoo albuyoota min abwabiha waittaqoo Allaha laAAallakum tuflihoona

Translation: ಅವರು ತಮ್ಮೊಂದಿಗೆ ಚಂದ್ರನ ಬಗ್ಗೆ ಕೇಳುತ್ತಾರೆ. ಹೇಳಿರಿ: “ಅದು ಜನರಿಗೆ (ಅವರ ಆರಾಧನಾ ಸಮಯಗಳನ್ನು ತಿಳಿಯುವ) ಮತ್ತು ಹಜ್ಜ್‌ನ ಸಮಯವನ್ನು ತಿಳಿಯುವ ಸಾಧನವಾಗಿದೆ.” ನೀವು ಮನೆಗಳನ್ನು ಹಿಂಭಾಗದಿಂದ ಪ್ರವೇಶಿಸುವುದರಲ್ಲಿ ಒಳಿತಿಲ್ಲ.[1] ಬದಲಿಗೆ, ದೇವಭಯವುಳ್ಳವನೇ ಒಳಿತಿನಲ್ಲಿರುವವನು. ನೀವು ಮನೆಗಳನ್ನು ಅವುಗಳ ಬಾಗಿಲುಗಳಿಂದ ಪ್ರವೇಶಿಸಿ. ಅಲ್ಲಾಹನನ್ನು ಭಯಪಡಿರಿ. ನೀವು ಯಶಸ್ವಿಯಾಗುವುದಕ್ಕಾಗಿ.

2:190

وَقَٰتِلُواْ فِي سَبِيلِ ٱللَّهِ ٱلَّذِينَ يُقَٰتِلُونَكُمۡ وَلَا تَعۡتَدُوٓاْۚ إِنَّ ٱللَّهَ لَا يُحِبُّ ٱلۡمُعۡتَدِينَ ﴿190﴾

Transliteration: Waqatiloo fee sabeeli Allahi allatheena yuqatiloonakum wala taAAtadoo inna Allaha la yuhibbu almuAAtadeena

Translation: ನಿಮ್ಮ ವಿರುದ್ಧ ಯುದ್ಧ ಮಾಡುವವರೊಡನೆ ಅಲ್ಲಾಹನ ಮಾರ್ಗದಲ್ಲಿ ನೀವು ಕೂಡ ಯುದ್ಧ ಮಾಡಿರಿ. ಆದರೆ ಎಲ್ಲೆ ಮೀರಬೇಡಿ. ನಿಶ್ಚಯವಾಗಿಯೂ ಎಲ್ಲೆ ಮೀರುವವರನ್ನು ಅಲ್ಲಾಹು ಇಷ್ಟಪಡುವುದಿಲ್ಲ.[1]

2:191

وَٱقۡتُلُوهُمۡ حَيۡثُ ثَقِفۡتُمُوهُمۡ وَأَخۡرِجُوهُم مِّنۡ حَيۡثُ أَخۡرَجُوكُمۡۚ وَٱلۡفِتۡنَةُ أَشَدُّ مِنَ ٱلۡقَتۡلِۚ وَلَا تُقَٰتِلُوهُمۡ عِندَ ٱلۡمَسۡجِدِ ٱلۡحَرَامِ حَتَّىٰ يُقَٰتِلُوكُمۡ فِيهِۖ فَإِن قَٰتَلُوكُمۡ فَٱقۡتُلُوهُمۡۗ كَذَٰلِكَ جَزَآءُ ٱلۡكَٰفِرِينَ ﴿191﴾

Transliteration: Waoqtuloohum haythu thaqiftumoohum waakhrijoohum min haythu akhrajookum waalfitnatu ashaddu mina alqatli wala tuqatiloohum AAinda almasjidi alharami hatta yuqatilookum feehi fain qatalookum faoqtuloohum kathalika jazao alkafireena

Translation: ನೀವು ಅವರನ್ನು ಕಂಡಲ್ಲಿ ಕೊಲ್ಲಿರಿ ಮತ್ತು ಅವರು ನಿಮ್ಮನ್ನು ಹೊರಹಾಕಿದ ಸ್ಥಳದಿಂದ ಅವರನ್ನೂ ಹೊರಹಾಕಿರಿ. ಕ್ಷೋಭೆಯು ಕೊಲೆಗಿಂತಲೂ ಘೋರವಾಗಿದೆ. ಮಸ್ಜಿದುಲ್ ಹರಾಮ್‍ನ ಬಳಿ ಅವರು ನಿಮ್ಮೊಂದಿಗೆ ಯುದ್ಧ ಮಾಡುವ ತನಕ ನೀವು ಅವರೊಂದಿಗೆ ಅಲ್ಲಿ ಯುದ್ಧ ಮಾಡಬೇಡಿ. ಅವರು ನಿಮ್ಮೊಂದಿಗೆ ಯುದ್ಧ ಮಾಡಿದರೆ ಅವರನ್ನು ಕೊಲ್ಲಿರಿ. ಈ ರೀತಿ ಸತ್ಯನಿಷೇಧಿಗಳಿಗೆ ಪ್ರತಿಫಲ ನೀಡಲಾಗುತ್ತದೆ.

2:192

فَإِنِ ٱنتَهَوۡاْ فَإِنَّ ٱللَّهَ غَفُورٞ رَّحِيمٞ ﴿192﴾

Transliteration: Faini intahaw fainna Allaha ghafoorun raheemun

Translation: ಆದರೆ ಅವರೇನಾದರೂ ನಿಲ್ಲಿಸಿದರೆ ನಿಶ್ಚಯವಾಗಿಯೂ ಅಲ್ಲಾಹು ಕ್ಷಮಿಸುವವನು ಮತ್ತು ಕರುಣೆ ತೋರುವವನಾಗಿದ್ದಾನೆ.

2:193

وَقَٰتِلُوهُمۡ حَتَّىٰ لَا تَكُونَ فِتۡنَةٞ وَيَكُونَ ٱلدِّينُ لِلَّهِۖ فَإِنِ ٱنتَهَوۡاْ فَلَا عُدۡوَٰنَ إِلَّا عَلَى ٱلظَّـٰلِمِينَ ﴿193﴾

Transliteration: Waqatiloohum hatta la takoona fitnatun wayakoona alddeenu lillahi faini intahaw fala AAudwana illa AAala alththalimeena

Translation: ಕ್ಷೋಭೆ ನಿವಾರಣೆಯಾಗುವ ತನಕ ಮತ್ತು ಧರ್ಮವು ಅಲ್ಲಾಹನಿಗಾಗುವ ತನಕ ಅವರೊಂದಿಗೆ ಯುದ್ಧ ಮಾಡಿರಿ. ಆದರೆ ಅವರೇನಾದರೂ ನಿಲ್ಲಿಸಿದರೆ, ಮತ್ತೆ ಅಕ್ರಮವೆಸಗಿದವರ ಮೇಲೆಯೇ ಹೊರತು ಇನ್ನಾರ ಮೇಲೂ ಅತಿರೇಕವೆಸಗಬೇಡಿ.

2:194

ٱلشَّهۡرُ ٱلۡحَرَامُ بِٱلشَّهۡرِ ٱلۡحَرَامِ وَٱلۡحُرُمَٰتُ قِصَاصٞۚ فَمَنِ ٱعۡتَدَىٰ عَلَيۡكُمۡ فَٱعۡتَدُواْ عَلَيۡهِ بِمِثۡلِ مَا ٱعۡتَدَىٰ عَلَيۡكُمۡۚ وَٱتَّقُواْ ٱللَّهَ وَٱعۡلَمُوٓاْ أَنَّ ٱللَّهَ مَعَ ٱلۡمُتَّقِينَ ﴿194﴾

Transliteration: Alshshahru alharamu bialshshahri alharami waalhurumatu qisasun famani iAAtada AAalaykum faiAAtadoo AAalayhi bimithli ma iAAtada AAalaykum waittaqoo Allaha waiAAlamoo anna Allaha maAAa almuttaqeena

Translation: ಪವಿತ್ರ ತಿಂಗಳ ಬದಲಿಗೆ ಪವಿತ್ರ ತಿಂಗಳು. ಪವಿತ್ರವಾದ ಎಲ್ಲವೂ ಅದಲಿ ಬದಲಿಯಾಗಿ ಇರುವುದಾಗಿವೆ. ನಿಮ್ಮ ಮೇಲೆ ಯಾರಾದರೂ ಅತಿರೇಕವೆಸಗಿದರೆ, ಅವನು ನಿಮ್ಮ ಮೇಲೆ ಅತಿರೇಕವೆಸಗಿದಂತೆಯೇ ನೀವು ಅವನ ಮೇಲೆ ಅತಿರೇಕವೆಸಗಿರಿ. ಅಲ್ಲಾಹನನ್ನು ಭಯಪಡಿರಿ. ತಿಳಿಯಿರಿ! ಅಲ್ಲಾಹು ಅವನನ್ನು ಭಯಪಡುವವರ ಜೊತೆಗಿದ್ದಾನೆ.

2:195

وَأَنفِقُواْ فِي سَبِيلِ ٱللَّهِ وَلَا تُلۡقُواْ بِأَيۡدِيكُمۡ إِلَى ٱلتَّهۡلُكَةِ وَأَحۡسِنُوٓاْۚ إِنَّ ٱللَّهَ يُحِبُّ ٱلۡمُحۡسِنِينَ ﴿195﴾

Transliteration: Waanfiqoo fee sabeeli Allahi wala tulqoo biaydeekum ila alttahlukati waahsinoo inna Allaha yuhibbu almuhsineena

Translation: ಅಲ್ಲಾಹನ ಮಾರ್ಗದಲ್ಲಿ ಖರ್ಚು ಮಾಡಿರಿ. ನಿಮ್ಮ ಕೈಗಳನ್ನು ನೀವೇ ವಿನಾಶಕ್ಕೆ ತಳ್ಳಬೇಡಿ. ಒಳಿತು ಮಾಡಿರಿ. ನಿಶ್ಚಯವಾಗಿಯೂ ಒಳಿತು ಮಾಡುವವರನ್ನು ಅಲ್ಲಾಹು ಪ್ರೀತಿಸುತ್ತಾನೆ.

2:196

وَأَتِمُّواْ ٱلۡحَجَّ وَٱلۡعُمۡرَةَ لِلَّهِۚ فَإِنۡ أُحۡصِرۡتُمۡ فَمَا ٱسۡتَيۡسَرَ مِنَ ٱلۡهَدۡيِۖ وَلَا تَحۡلِقُواْ رُءُوسَكُمۡ حَتَّىٰ يَبۡلُغَ ٱلۡهَدۡيُ مَحِلَّهُۥۚ فَمَن كَانَ مِنكُم مَّرِيضًا أَوۡ بِهِۦٓ أَذٗى مِّن رَّأۡسِهِۦ فَفِدۡيَةٞ مِّن صِيَامٍ أَوۡ صَدَقَةٍ أَوۡ نُسُكٖۚ فَإِذَآ أَمِنتُمۡ فَمَن تَمَتَّعَ بِٱلۡعُمۡرَةِ إِلَى ٱلۡحَجِّ فَمَا ٱسۡتَيۡسَرَ مِنَ ٱلۡهَدۡيِۚ فَمَن لَّمۡ يَجِدۡ فَصِيَامُ ثَلَٰثَةِ أَيَّامٖ فِي ٱلۡحَجِّ وَسَبۡعَةٍ إِذَا رَجَعۡتُمۡۗ تِلۡكَ عَشَرَةٞ كَامِلَةٞۗ ذَٰلِكَ لِمَن لَّمۡ يَكُنۡ أَهۡلُهُۥ حَاضِرِي ٱلۡمَسۡجِدِ ٱلۡحَرَامِۚ وَٱتَّقُواْ ٱللَّهَ وَٱعۡلَمُوٓاْ أَنَّ ٱللَّهَ شَدِيدُ ٱلۡعِقَابِ ﴿196﴾

Transliteration: Waatimmoo alhajja waalAAumrata lillahi fain ohsirtum fama istaysara mina alhadyi wala tahliqoo ruoosakum hatta yablugha alhadyu mahillahu faman kana minkum mareedan aw bihi athan min rasihi fafidyatun min siyamin aw sadaqatin aw nusukin faitha amintum faman tamattaAAa bialAAumrati ila alhajji fama istaysara mina alhadyi faman lam yajid fasiyamu thalathati ayyamin fee alhajji wasabAAatin itha rajaAAtum tilka AAasharatun kamilatun thalika liman lam yakun ahluhu hadiree almasjidi alharami waittaqoo Allaha waiAAlamoo anna Allaha shadeedu alAAiqabi

Translation: ಅಲ್ಲಾಹನಿಗಾಗಿ ಹಜ್ಜ್ ಮತ್ತು ಉಮ್ರಗಳನ್ನು ಪೂರ್ತಿಗೊಳಿಸಿರಿ. ನಿಮ್ಮನ್ನು (ದಾರಿ ಮಧ್ಯೆ) ತಡೆಯಲಾದರೆ ನಿಮಗೆ ಸುಲಭವಾಗಿರುವ ಒಂದು ಪ್ರಾಣಿಯನ್ನು ಬಲಿ ನೀಡಿರಿ.[1] ಬಲಿಮೃಗವು ಅದರ ಸ್ಥಳವನ್ನು ತಲುಪುವ ತನಕ ಕೇಶಮುಂಡನ ಮಾಡಬೇಡಿ. ನಿಮ್ಮಲ್ಲಿ ಯಾರಾದರೂ ಅನಾರೋಗ್ಯದಲ್ಲಿದ್ದು ಅಥವಾ ತಲೆಯಲ್ಲಿ ಏನಾದರೂ ತೊಂದರೆಯಿದ್ದು, (ಕೇಶ ಮುಂಡನ ಮಾಡಿದ್ದರೆ) ಅದಕ್ಕೆ ಪರಿಹಾರವಾಗಿ ಉಪವಾಸ ಅಥವಾ ದಾನಧರ್ಮ ಅಥವಾ ಬಲಿಕರ್ಮ ನಿರ್ವಹಿಸಲಿ. ಆದರೆ ನೀವು ನಿರ್ಭಯ ಸ್ಥಿತಿಯಲ್ಲಿದ್ದು, ನಿಮ್ಮಲ್ಲಿ ಯಾರಾದರೂ ಉಮ್ರಾ ನಿರ್ವಹಿಸಿ ಹಜ್ಜ್ ತನಕ ವಿಶ್ರಾಂತಿ ಪಡೆದರೆ, ಅವನು ಸುಲಭವಾಗಿರುವ ಒಂದು ಪ್ರಾಣಿಯನ್ನು ಬಲಿ ನೀಡಲಿ. ಯಾರಿಗೆ ಬಲಿಮೃಗ ಸಿಗುವುದಿಲ್ಲವೋ ಅವನು ಹಜ್ಜ್‌ನ ಸಮಯದಲ್ಲಿ ಮೂರು ದಿನ ಮತ್ತು (ಊರಿಗೆ) ಮರಳಿದ ಬಳಿಕ ಏಳು ದಿನ; ಒಟ್ಟು ಹತ್ತು ದಿನ ಉಪವಾಸ ಆಚರಿಸಲಿ. ಈ ನಿಯಮವಿರುವುದು ಮಸ್ಜಿದುಲ್ ಹರಾಮ್‍ನ ನಿವಾಸಿಗಳಲ್ಲದವರಿಗೆ ಮಾತ್ರ. ಅಲ್ಲಾಹನನ್ನು ಭಯಪಡಿರಿ. ತಿಳಿಯಿರಿ! ಅಲ್ಲಾಹು ಅತಿ ಕಠೋರವಾಗಿ ಶಿಕ್ಷಿಸುವವನಾಗಿದ್ದಾನೆ.

2:197

ٱلۡحَجُّ أَشۡهُرٞ مَّعۡلُومَٰتٞۚ فَمَن فَرَضَ فِيهِنَّ ٱلۡحَجَّ فَلَا رَفَثَ وَلَا فُسُوقَ وَلَا جِدَالَ فِي ٱلۡحَجِّۗ وَمَا تَفۡعَلُواْ مِنۡ خَيۡرٖ يَعۡلَمۡهُ ٱللَّهُۗ وَتَزَوَّدُواْ فَإِنَّ خَيۡرَ ٱلزَّادِ ٱلتَّقۡوَىٰۖ وَٱتَّقُونِ يَـٰٓأُوْلِي ٱلۡأَلۡبَٰبِ ﴿197﴾

Transliteration: Alhajju ashhurun maAAloomatun faman farada feehinna alhajja fala rafatha wala fusooqa wala jidala fee alhajji wama tafAAaloo min khayrin yaAAlamhu Allahu watazawwadoo fainna khayra alzzadi alttaqwa waittaqooni ya olee alalbabi

Translation: ಹಜ್ಜ್‌ ಪರಿಚಿತ ತಿಂಗಳುಗಳಲ್ಲಾಗಿದೆ.[1] ಆದ್ದರಿಂದ ಯಾರಾದರೂ ಆ ತಿಂಗಳುಗಳಲ್ಲಿ (ಇಹ್ರಾಮ್ ಧರಿಸಿ) ಹಜ್ಜ್ ನಿರ್ವಹಿಸುವುದನ್ನು ಕಡ್ಡಾಯಗೊಳಿಸಿದರೆ, ಅವನು ಹಜ್ಜ್‌ನ ಸಮಯದಲ್ಲಿ ಲೈಂಗಿಕ ಸಂಪರ್ಕ, ದುಷ್ಕರ್ಮ ಮತ್ತು ತರ್ಕ ಮಾಡಬಾರದು. ನೀವು ಏನೇ ಸತ್ಕರ್ಮ ಮಾಡಿದರೂ ಅಲ್ಲಾಹು ಅದನ್ನು ತಿಳಿಯುತ್ತಾನೆ. ನೀವು (ಹಜ್ಜ್‌ ಯಾತ್ರೆಗಾಗಿ) ಸಿದ್ಧತೆ ಮಾಡಿಕೊಳ್ಳಿರಿ. ನಿಶ್ಚಯವಾಗಿಯೂ ನೀವು ಮಾಡಿಕೊಳ್ಳುವ ಸಿದ್ಧತೆಗಳಲ್ಲಿ ದೇವಭಯವು ಅತಿಶ್ರೇಷ್ಠವಾಗಿದೆ. ಓ ಬುದ್ಧಿವಂತರೇ! ನೀವು ನನ್ನನ್ನು ಭಯಪಡಿರಿ.

2:198

لَيۡسَ عَلَيۡكُمۡ جُنَاحٌ أَن تَبۡتَغُواْ فَضۡلٗا مِّن رَّبِّكُمۡۚ فَإِذَآ أَفَضۡتُم مِّنۡ عَرَفَٰتٖ فَٱذۡكُرُواْ ٱللَّهَ عِندَ ٱلۡمَشۡعَرِ ٱلۡحَرَامِۖ وَٱذۡكُرُوهُ كَمَا هَدَىٰكُمۡ وَإِن كُنتُم مِّن قَبۡلِهِۦ لَمِنَ ٱلضَّآلِّينَ ﴿198﴾

Transliteration: Laysa AAalaykum junahun an tabtaghoo fadlan min rabbikum faitha afadtum min AAarafatin faothkuroo Allaha AAinda almashAAari alharami waothkuroohu kama hadakum wain kuntum min qablihi lamina alddalleena

Translation: ನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಯ ಯಾವುದೇ ಔದಾರ್ಯವನ್ನು ಅರಸುವುದರಲ್ಲಿ ನಿಮಗೆ ದೋಷವಿಲ್ಲ. ನೀವು ಅರಫಾತ್‍ನಿಂದ ತೆರಳಿದರೆ ಮಶ್‍ಅರುಲ್ ಹರಾಮ್‍ನ ಬಳಿ ಅಲ್ಲಾಹನನ್ನು ಸ್ಮರಿಸಿರಿ. ಅವನು ನಿಮಗೆ ಸನ್ಮಾರ್ಗ ತೋರಿಸಿದಂತೆಯೇ ನೀವು ಅವನನ್ನು ಸ್ಮರಿಸಿರಿ. ವಾಸ್ತವವಾಗಿ, ಇದಕ್ಕೆ ಮುಂಚೆ ನೀವು ದಾರಿ ತಪ್ಪಿದವರಾಗಿದ್ದಿರಿ.

2:199

ثُمَّ أَفِيضُواْ مِنۡ حَيۡثُ أَفَاضَ ٱلنَّاسُ وَٱسۡتَغۡفِرُواْ ٱللَّهَۚ إِنَّ ٱللَّهَ غَفُورٞ رَّحِيمٞ ﴿199﴾

Transliteration: Thumma afeedoo min haythu afada alnnasu waistaghfiroo Allaha inna Allaha ghafoorun raheemun

Translation: ನಂತರ ಜನರು ಎಲ್ಲಿಂದ ಹೊರಡುತ್ತಾರೋ ಅಲ್ಲಿಂದ ನೀವೂ ಹೊರಡಿರಿ. ಅಲ್ಲಾಹನಲ್ಲಿ ಕ್ಷಮೆಯಾಚಿಸಿರಿ. ನಿಶ್ಚಯವಾಗಿಯೂ ಅಲ್ಲಾಹು ಕ್ಷಮಿಸುವವನು ಮತ್ತು ಕರುಣೆ ತೋರುವವನಾಗಿದ್ದಾನೆ.

2:200

فَإِذَا قَضَيۡتُم مَّنَٰسِكَكُمۡ فَٱذۡكُرُواْ ٱللَّهَ كَذِكۡرِكُمۡ ءَابَآءَكُمۡ أَوۡ أَشَدَّ ذِكۡرٗاۗ فَمِنَ ٱلنَّاسِ مَن يَقُولُ رَبَّنَآ ءَاتِنَا فِي ٱلدُّنۡيَا وَمَا لَهُۥ فِي ٱلۡأٓخِرَةِ مِنۡ خَلَٰقٖ ﴿200﴾

Transliteration: Faitha qadaytum manasikakum faothkuroo Allaha kathikrikum abaakum aw ashadda thikran famina alnnasi man yaqoolu rabbana atina fee alddunya wama lahu fee alakhirati min khalaqin

Translation: ನೀವು ಹಜ್ಜ್ ಕರ್ಮಗಳನ್ನು ಪೂರೈಸಿದರೆ, ನಿಮ್ಮ ಪೂರ್ವಜರನ್ನು ಸ್ಮರಿಸುವಂತೆಯೇ ಅಥವಾ ಅದಕ್ಕಿಂತಲೂ ತೀವ್ರವಾಗಿ ಅಲ್ಲಾಹನನ್ನು ಸ್ಮರಿಸಿರಿ. ಜನರಲ್ಲಿ ಕೆಲವರು ಹೇಳುತ್ತಾರೆ: “ಓ ನಮ್ಮ ಪರಿಪಾಲಕನೇ! ನಮಗೆ ಇಹಲೋಕದಲ್ಲಿ ದಯಪಾಲಿಸು.” ಅಂತಹವರಿಗೆ ಪರಲೋಕದಲ್ಲಿ ಯಾವುದೇ ಪಾಲಿಲ್ಲ.

2:201

وَمِنۡهُم مَّن يَقُولُ رَبَّنَآ ءَاتِنَا فِي ٱلدُّنۡيَا حَسَنَةٗ وَفِي ٱلۡأٓخِرَةِ حَسَنَةٗ وَقِنَا عَذَابَ ٱلنَّارِ ﴿201﴾

Transliteration: Waminhum man yaqoolu rabbana atina fee alddunya hasanatan wafee alakhirati hasanatan waqina AAathaba alnnari

Translation: ಇತರ ಕೆಲವರು ಹೇಳುತ್ತಾರೆ: “ಓ ನಮ್ಮ ಪರಿಪಾಲಕನೇ! ನಮಗೆ ಇಹಲೋಕದಲ್ಲಿ ಒಳಿತನ್ನು ದಯಪಾಲಿಸು ಮತ್ತು ಪರಲೋಕದಲ್ಲೂ ಒಳಿತನ್ನು ದಯಪಾಲಿಸು ಮತ್ತು ನಮ್ಮನ್ನು ನರಕ ಶಿಕ್ಷೆಯಿಂದ ಪಾರು ಮಾಡು.”

2:202

أُوْلَـٰٓئِكَ لَهُمۡ نَصِيبٞ مِّمَّا كَسَبُواْۚ وَٱللَّهُ سَرِيعُ ٱلۡحِسَابِ ﴿202﴾

Transliteration: Olaika lahum naseebun mimma kasaboo waAllahu sareeAAu alhisabi

Translation: ಅವರಿಗೆ ಅವರು ಮಾಡಿದ ಕರ್ಮಗಳ ಪಾಲಿದೆ. ಅಲ್ಲಾಹು ಶೀಘ್ರವಾಗಿ ವಿಚಾರಣೆ ಮಾಡುವವನಾಗಿದ್ದಾನೆ.

2:203

وَٱذۡكُرُواْ ٱللَّهَ فِيٓ أَيَّامٖ مَّعۡدُودَٰتٖۚ فَمَن تَعَجَّلَ فِي يَوۡمَيۡنِ فَلَآ إِثۡمَ عَلَيۡهِ وَمَن تَأَخَّرَ فَلَآ إِثۡمَ عَلَيۡهِۖ لِمَنِ ٱتَّقَىٰۗ وَٱتَّقُواْ ٱللَّهَ وَٱعۡلَمُوٓاْ أَنَّكُمۡ إِلَيۡهِ تُحۡشَرُونَ ﴿203﴾

Transliteration: Waothkuroo Allaha fee ayyamin maAAdoodatin faman taAAajjala fee yawmayni fala ithma AAalayhi waman taakhkhara fala ithma AAalayhi limani ittaqa waittaqoo Allaha waiAAlamoo annakum ilayhi tuhsharoona

Translation: ಬೆರಳೆಣಿಕೆಯ ಕೆಲವು ದಿನಗಳಲ್ಲಿ[1] ಅಲ್ಲಾಹನನ್ನು ಸ್ಮರಿಸಿರಿ. ಯಾರಾದರೂ ಎರಡೇ ದಿನಗಳಲ್ಲಿ ತರಾತುರಿಯಿಂದ ಹೊರಟರೆ ಅವರಿಗೆ ದೋಷವಿಲ್ಲ.[2] ಯಾರಾದರೂ ವಿಳಂಬ ಮಾಡಿದರೆ ಅವರಿಗೂ ದೋಷವಿಲ್ಲ. ಇದು ದೇವಭಯವುಳ್ಳವರಿಗಾಗಿದೆ. ಅಲ್ಲಾಹನನ್ನು ಭಯಪಡಿರಿ. ತಿಳಿಯಿರಿ! ನಿಮ್ಮೆಲ್ಲರನ್ನೂ ಅವನ ಬಳಿಗೇ ಒಟ್ಟುಗೂಡಿಸಲಾಗುತ್ತದೆ.

2:204

وَمِنَ ٱلنَّاسِ مَن يُعۡجِبُكَ قَوۡلُهُۥ فِي ٱلۡحَيَوٰةِ ٱلدُّنۡيَا وَيُشۡهِدُ ٱللَّهَ عَلَىٰ مَا فِي قَلۡبِهِۦ وَهُوَ أَلَدُّ ٱلۡخِصَامِ ﴿204﴾

Transliteration: Wamina alnnasi man yuAAjibuka qawluhu fee alhayati alddunya wayushhidu Allaha AAala ma fee qalbihi wahuwa aladdu alkhisami

Translation: ಜನರಲ್ಲಿ ಕೆಲವರಿದ್ದಾರೆ. ಅವರಲ್ಲೊಬ್ಬನು ಇಹಲೋಕದ ಕುರಿತು ಹೇಳುವ ಮಾತುಗಳು ನಿಮ್ಮನ್ನು ಆಶ್ಚರ್ಯಗೊಳಿಸಬಹುದು. ಅವನು ತನ್ನ ಹೃದಯದಲ್ಲಿರುವುದಕ್ಕೆ ಅಲ್ಲಾಹನನ್ನು ಸಾಕ್ಷಿಯಾಗಿ ಮಾಡುತ್ತಾನೆ. ವಾಸ್ತವವಾಗಿ, ಅವನ ಮಹಾ ಜಗಳಗಂಟಿಯಾಗಿದ್ದಾನೆ.

2:205

وَإِذَا تَوَلَّىٰ سَعَىٰ فِي ٱلۡأَرۡضِ لِيُفۡسِدَ فِيهَا وَيُهۡلِكَ ٱلۡحَرۡثَ وَٱلنَّسۡلَۚ وَٱللَّهُ لَا يُحِبُّ ٱلۡفَسَادَ ﴿205﴾

Transliteration: Waitha tawalla saAAa fee alardi liyufsida feeha wayuhlika alhartha waalnnasla waAllahu la yuhibbu alfasada

Translation: ಅವನು ಮರಳಿ ಹೋಗುವಾಗ, ಭೂಮಿಯಲ್ಲಿ ಕಿಡಿಗೇಡಿತನ ಮಾಡಲು ಮತ್ತು ಹೊಲಗಳನ್ನು ಹಾಗೂ ವಂಶಗಳನ್ನು ನಾಶ ಮಾಡಲು ಶ್ರಮಿಸುತ್ತಾನೆ. ಅಲ್ಲಾಹು ಕಿಡಿಗೇಡಿತನವನ್ನು ಇಷ್ಟಪಡುವುದಿಲ್ಲ.

2:206

وَإِذَا قِيلَ لَهُ ٱتَّقِ ٱللَّهَ أَخَذَتۡهُ ٱلۡعِزَّةُ بِٱلۡإِثۡمِۚ فَحَسۡبُهُۥ جَهَنَّمُۖ وَلَبِئۡسَ ٱلۡمِهَادُ ﴿206﴾

Transliteration: Waitha qeela lahu ittaqi Allaha akhathathu alAAizzatu bialithmi fahasbuhu jahannamu walabisa almihadu

Translation: “ಅಲ್ಲಾಹನನ್ನು ಭಯಪಡು” ಎಂದು ಅವನೊಡನೆ ಹೇಳಲಾದರೆ, ಪ್ರತಿಷ್ಠೆಯು ಅವನನ್ನು ಪಾಪಕ್ಕೆ ಎಳೆಯುತ್ತದೆ. ಅವನಿಗೆ ನರಕವೇ ಸಾಕು. ಆ ವಾಸಸ್ಥಳವು ಬಹಳ ನಿಕೃಷ್ಟವಾಗಿದೆ.

2:207

وَمِنَ ٱلنَّاسِ مَن يَشۡرِي نَفۡسَهُ ٱبۡتِغَآءَ مَرۡضَاتِ ٱللَّهِۚ وَٱللَّهُ رَءُوفُۢ بِٱلۡعِبَادِ ﴿207﴾

Transliteration: Wamina alnnasi man yashree nafsahu ibtighaa mardati Allahi waAllahu raoofun bialAAibadi

Translation: ಅಲ್ಲಾಹನ ಸಂಪ್ರೀತಿಯನ್ನು ಅರಸುತ್ತಾ ತಮ್ಮ ದೇಹವನ್ನೇ ಮಾರುವ ಜನರೂ ಇದ್ದಾರೆ. ಅಲ್ಲಾಹು ತನ್ನ ದಾಸರೊಂದಿಗೆ ದಯೆಯುಳ್ಳವನಾಗಿದ್ದಾನೆ.

2:208

يَـٰٓأَيُّهَا ٱلَّذِينَ ءَامَنُواْ ٱدۡخُلُواْ فِي ٱلسِّلۡمِ كَآفَّةٗ وَلَا تَتَّبِعُواْ خُطُوَٰتِ ٱلشَّيۡطَٰنِۚ إِنَّهُۥ لَكُمۡ عَدُوّٞ مُّبِينٞ ﴿208﴾

Transliteration: Ya ayyuha allatheena amanoo odkhuloo fee alssilmi kaffatan wala tattabiAAoo khutuwati alshshaytani innahu lakum AAaduwwun mubeenun

Translation: ಓ ಸತ್ಯವಿಶ್ವಾಸಿಗಳೇ! ನೀವು ಇಸ್ಲಾಂ ಧರ್ಮದಲ್ಲಿ ಪೂರ್ಣವಾಗಿ ಪ್ರವೇಶಿಸಿರಿ. ಶೈತಾನನ ಹೆಜ್ಜೆಗಳನ್ನು ಹಿಂಬಾಲಿಸಬೇಡಿ. ನಿಶ್ಚಯವಾಗಿಯೂ ಅವನು ನಿಮ್ಮ ಪ್ರತ್ಯಕ್ಷ ವೈರಿಯಾಗಿದ್ದಾನೆ.

2:209

فَإِن زَلَلۡتُم مِّنۢ بَعۡدِ مَا جَآءَتۡكُمُ ٱلۡبَيِّنَٰتُ فَٱعۡلَمُوٓاْ أَنَّ ٱللَّهَ عَزِيزٌ حَكِيمٌ ﴿209﴾

Transliteration: Fain zalaltum min baAAdi ma jaatkumu albayyinatu faiAAlamoo anna Allaha AAazeezun hakeemun

Translation: ನಿಮಗೆ ಸ್ಪಷ್ಟ ಸಾಕ್ಷ್ಯಾಧಾರಗಳು ತಲುಪಿದ ಬಳಿಕವೂ ನೀವು ತಪ್ಪಿ ನಡೆದರೆ, ತಿಳಿಯಿರಿ! ನಿಶ್ಚಯವಾಗಿಯೂ ಅಲ್ಲಾಹು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ.

2:210

هَلۡ يَنظُرُونَ إِلَّآ أَن يَأۡتِيَهُمُ ٱللَّهُ فِي ظُلَلٖ مِّنَ ٱلۡغَمَامِ وَٱلۡمَلَـٰٓئِكَةُ وَقُضِيَ ٱلۡأَمۡرُۚ وَإِلَى ٱللَّهِ تُرۡجَعُ ٱلۡأُمُورُ ﴿210﴾

Transliteration: Hal yanthuroona illa an yatiyahumu Allahu fee thulalin mina alghamami waalmalaikatu waqudiya alamru waila Allahi turjaAAu alomooru

Translation: ಅಲ್ಲಾಹು ಮತ್ತು ದೇವದೂತರು ಮೋಡಗಳ ನೆರಳುಗಳಲ್ಲಿ ಅವರ ಬಳಿಗೆ ಬರುವುದನ್ನು ಮತ್ತು ವಿಷಯವು ತೀರ್ಮಾನಿಸಿ ಬಿಡಲಾಗುವುದನ್ನು ಅವರು ಕಾಯುತ್ತಿದ್ದಾರೆಯೇ? ವಿಷಯಗಳೆಲ್ಲವೂ ಅಲ್ಲಾಹನ ಬಳಿಗೇ ಮರಳುತ್ತವೆ.

2:211

سَلۡ بَنِيٓ إِسۡرَـٰٓءِيلَ كَمۡ ءَاتَيۡنَٰهُم مِّنۡ ءَايَةِۭ بَيِّنَةٖۗ وَمَن يُبَدِّلۡ نِعۡمَةَ ٱللَّهِ مِنۢ بَعۡدِ مَا جَآءَتۡهُ فَإِنَّ ٱللَّهَ شَدِيدُ ٱلۡعِقَابِ ﴿211﴾

Transliteration: Sal banee israeela kam ataynahum min ayatin bayyinatin waman yubaddil niAAmata Allahi min baAAdi ma jaathu fainna Allaha shadeedu alAAiqabi

Translation: ಇಸ್ರಾಯೇಲ್ ಮಕ್ಕಳೊಡನೆ ನಾವು ಅವರಿಗೆ ಎಷ್ಟೆಷ್ಟು ಸ್ಪಷ್ಟ ದೃಷ್ಟಾಂತಗಳನ್ನು ನೀಡಿದ್ದೇವೆಂದು ಕೇಳಿರಿ. ಅಲ್ಲಾಹನ ಅನುಗ್ರಹವು ತನ್ನ ಬಳಿಗೆ ಬಂದ ಬಳಿಕವೂ ಅದನ್ನು ಬದಲಾಯಿಸುವವನು ಯಾರೋ—ನಿಶ್ಚಯವಾಗಿಯೂ ಅಲ್ಲಾಹು ಅತಿಕಠೋರವಾಗಿ ಶಿಕ್ಷಿಸುವವನೆಂದು (ಅವನು ತಿಳಿದುಕೊಳ್ಳಲಿ).

2:212

زُيِّنَ لِلَّذِينَ كَفَرُواْ ٱلۡحَيَوٰةُ ٱلدُّنۡيَا وَيَسۡخَرُونَ مِنَ ٱلَّذِينَ ءَامَنُواْۘ وَٱلَّذِينَ ٱتَّقَوۡاْ فَوۡقَهُمۡ يَوۡمَ ٱلۡقِيَٰمَةِۗ وَٱللَّهُ يَرۡزُقُ مَن يَشَآءُ بِغَيۡرِ حِسَابٖ ﴿212﴾

Transliteration: Zuyyina lillatheena kafaroo alhayatu alddunya wayaskharoona mina allatheena amanoo waallatheena ittaqaw fawqahum yawma alqiyamati waAllahu yarzuqu man yashao bighayri hisabin

Translation: ಸತ್ಯನಿಷೇಧಿಗಳಿಗೆ ಇಹಲೋಕ ಜೀವನವನ್ನು ಅಲಂಕರಿಸಿಕೊಡಲಾಗಿದೆ. ಅವರು ಸತ್ಯವಿಶ್ವಾಸಿಗಳನ್ನು ತಮಾಷೆ ಮಾಡುತ್ತಾರೆ. ಆದರೆ, ಪುನರುತ್ಥಾನ ದಿನದಂದು ದೇವಭಯವುಳ್ಳವರು ಅವರಿಗಿಂತ ಮೇಲಿರುತ್ತಾರೆ. ಅಲ್ಲಾಹು ಅವನು ಇಚ್ಛಿಸಿದವರಿಗೆ ಲೆಕ್ಕವಿಲ್ಲದೆ ನೀಡುತ್ತಾನೆ.

2:213

كَانَ ٱلنَّاسُ أُمَّةٗ وَٰحِدَةٗ فَبَعَثَ ٱللَّهُ ٱلنَّبِيِّـۧنَ مُبَشِّرِينَ وَمُنذِرِينَ وَأَنزَلَ مَعَهُمُ ٱلۡكِتَٰبَ بِٱلۡحَقِّ لِيَحۡكُمَ بَيۡنَ ٱلنَّاسِ فِيمَا ٱخۡتَلَفُواْ فِيهِۚ وَمَا ٱخۡتَلَفَ فِيهِ إِلَّا ٱلَّذِينَ أُوتُوهُ مِنۢ بَعۡدِ مَا جَآءَتۡهُمُ ٱلۡبَيِّنَٰتُ بَغۡيَۢا بَيۡنَهُمۡۖ فَهَدَى ٱللَّهُ ٱلَّذِينَ ءَامَنُواْ لِمَا ٱخۡتَلَفُواْ فِيهِ مِنَ ٱلۡحَقِّ بِإِذۡنِهِۦۗ وَٱللَّهُ يَهۡدِي مَن يَشَآءُ إِلَىٰ صِرَٰطٖ مُّسۡتَقِيمٍ ﴿213﴾

Transliteration: Kana alnnasu ommatan wahidatan fabaAAatha Allahu alnnabiyyeena mubashshireena wamunthireena waanzala maAAahumu alkitaba bialhaqqi liyahkuma bayna alnnasi feema ikhtalafoo feehi wama ikhtalafa feehi illa allatheena ootoohu min baAAdi ma jaathumu albayyinatu baghyan baynahum fahada Allahu allatheena amanoo lima ikhtalafoo feehi mina alhaqqi biithnihi waAllahu yahdee man yashao ila siratin mustaqeemin

Translation: ಮಾನವರೆಲ್ಲರೂ ಒಂದೇ ಸಮುದಾಯವಾಗಿದ್ದರು. ನಂತರ ಅಲ್ಲಾಹು ಸುವಾರ್ತೆ ತಿಳಿಸಲು ಮತ್ತು ಎಚ್ಚರಿಕೆ ನೀಡಲು ಪ್ರವಾದಿಗಳನ್ನು ಕಳುಹಿಸಿದನು. ಜನರು ಭಿನ್ನಾಭಿಪ್ರಾಯ ತಳೆದ ವಿಷಯದಲ್ಲಿ ತೀರ್ಪು ನೀಡುವುದಕ್ಕಾಗಿ ಅವರ ಜೊತೆಗೆ ಗ್ರಂಥವನ್ನು ಸತ್ಯ ಸಮೇತ ಅವತೀರ್ಣಗೊಳಿಸಿದನು. ಆದರೆ ಗ್ರಂಥ ನೀಡಲಾದ ಅದೇ ಜನರು ಸ್ಪಷ್ಟ ಸಾಕ್ಷ್ಯಾಧಾರಗಳು ತಮಗೆ ತಲುಪಿದ ಬಳಿಕವೂ ತಮ್ಮೊಳಗಿನ ವಿದ್ವೇಷದ ನಿಮಿತ್ತ ಅದರ (ಗ್ರಂಥದ) ವಿಷಯದಲ್ಲಿ ಭಿನ್ನಮತ ತಳೆದರು. ಆದ್ದರಿಂದ ಅಲ್ಲಾಹು ತನ್ನ ಅಪ್ಪಣೆ ಪ್ರಕಾರ ಅವರು ಭಿನ್ನಮತೀಯರಾದ ಆ ಸತ್ಯಕ್ಕೆ ಸತ್ಯವಿಶ್ವಾಸಿಗಳನ್ನು ಮುನ್ನಡೆಸಿದನು. ಅಲ್ಲಾಹು ಅವನು ಇಚ್ಛಿಸಿದವರನ್ನು ನೇರಮಾರ್ಗಕ್ಕೆ ಮುನ್ನಡೆಸುತ್ತಾನೆ.

2:214

أَمۡ حَسِبۡتُمۡ أَن تَدۡخُلُواْ ٱلۡجَنَّةَ وَلَمَّا يَأۡتِكُم مَّثَلُ ٱلَّذِينَ خَلَوۡاْ مِن قَبۡلِكُمۖ مَّسَّتۡهُمُ ٱلۡبَأۡسَآءُ وَٱلضَّرَّآءُ وَزُلۡزِلُواْ حَتَّىٰ يَقُولَ ٱلرَّسُولُ وَٱلَّذِينَ ءَامَنُواْ مَعَهُۥ مَتَىٰ نَصۡرُ ٱللَّهِۗ أَلَآ إِنَّ نَصۡرَ ٱللَّهِ قَرِيبٞ ﴿214﴾

Transliteration: Am hasibtum an tadkhuloo aljannata walamma yatikum mathalu allatheena khalaw min qablikum massathumu albasao waalddarrao wazulziloo hatta yaqoola alrrasoolu waallatheena amanoo maAAahu mata nasru Allahi ala inna nasra Allahi qareebun

Translation: ನಿಮಗಿಂತ ಮೊದಲಿನವರಿಗೆ ಬಂದಂತಹ ಪರೀಕ್ಷೆಗಳು ನಿಮಗೂ ಬಾರದೆ ನಿರಾಯಾಸವಾಗಿ ಸ್ವರ್ಗವನ್ನು ಪ್ರವೇಶಿಸಿ ಬಿಡಬಹುದೆಂದು ನೀವು ಭಾವಿಸಿದ್ದೀರಾ? ಅವರಿಗೆ ಬಡತನ ಮತ್ತು ಕಷ್ಟಗಳು ಎರಗಿದ್ದವು. ಅಲ್ಲಾಹನ ಸಹಾಯ ಬರುವುದು ಯಾವಾಗ ಎಂದು ಸಂದೇಶವಾಹಕರು ಮತ್ತು ಅವರ ಜೊತೆಯಲ್ಲಿದ್ದ ಸತ್ಯವಿಶ್ವಾಸಿಗಳು ಕೇಳುವವರೆಗೆ ಅವರನ್ನು ನಡುಗಿಸಲಾಯಿತು. ತಿಳಿಯಿರಿ! ಅಲ್ಲಾಹನ ಸಹಾಯವು ಹತ್ತಿರದಲ್ಲೇ ಇದೆ.

2:215

يَسۡـَٔلُونَكَ مَاذَا يُنفِقُونَۖ قُلۡ مَآ أَنفَقۡتُم مِّنۡ خَيۡرٖ فَلِلۡوَٰلِدَيۡنِ وَٱلۡأَقۡرَبِينَ وَٱلۡيَتَٰمَىٰ وَٱلۡمَسَٰكِينِ وَٱبۡنِ ٱلسَّبِيلِۗ وَمَا تَفۡعَلُواْ مِنۡ خَيۡرٖ فَإِنَّ ٱللَّهَ بِهِۦ عَلِيمٞ ﴿215﴾

Transliteration: Yasaloonaka matha yunfiqoona qul ma anfaqtum min khayrin falilwalidayni waalaqrabeena waalyatama waalmasakeeni waibni alssabeeli wama tafAAaloo min khayrin fainna Allaha bihi AAaleemun

Translation: ಅವರು ಏನು ಖರ್ಚು ಮಾಡಬೇಕೆಂದು ಅವರು ನಿಮ್ಮೊಡನೆ ಕೇಳುತ್ತಾರೆ. ಹೇಳಿರಿ: “ನೀವು ಒಳಿತಾಗಿರುವ ಏನು ಖರ್ಚು ಮಾಡುವುದಾದರೂ ಅದು ಮಾತಾಪಿತರಿಗೆ, ಹತ್ತಿರದ ಸಂಬಂಧಿಕರಿಗೆ, ಅನಾಥರಿಗೆ, ನಿರ್ಗತಿಕರಿಗೆ ಮತ್ತು ದಾರಿಹೋಕರಿಗೆ ಖರ್ಚು ಮಾಡಿರಿ. ನೀವು ಏನೇ ಒಳಿತು ಮಾಡಿದರೂ ನಿಶ್ಚಯವಾಗಿಯೂ ಅಲ್ಲಾಹು ಅದನ್ನು ತಿಳಿಯುತ್ತಾನೆ.”

2:216

كُتِبَ عَلَيۡكُمُ ٱلۡقِتَالُ وَهُوَ كُرۡهٞ لَّكُمۡۖ وَعَسَىٰٓ أَن تَكۡرَهُواْ شَيۡـٔٗا وَهُوَ خَيۡرٞ لَّكُمۡۖ وَعَسَىٰٓ أَن تُحِبُّواْ شَيۡـٔٗا وَهُوَ شَرّٞ لَّكُمۡۚ وَٱللَّهُ يَعۡلَمُ وَأَنتُمۡ لَا تَعۡلَمُونَ ﴿216﴾

Transliteration: Kutiba AAalaykumu alqitalu wahuwa kurhun lakum waAAasa an takrahoo shayan wahuwa khayrun lakum waAAasa an tuhibboo shayan wahuwa sharrun lakum waAllahu yaAAlamu waantum la taAAlamoona

Translation: ನಿಮಗೆ ಅಸಹ್ಯವೆನಿಸಿದರೂ ಸಹ ನಿಮ್ಮ ಮೇಲೆ ಯುದ್ಧವನ್ನು ಕಡ್ಡಾಯಗೊಳಿಸಲಾಗಿದೆ. ಬಹುಶಃ ನಿಮಗೊಂದು ವಿಷಯವು ಅಸಹ್ಯವೆನಿಸಿದರೂ ಅದು ನಿಮಗೆ ಒಳಿತಾಗಿರಬಹುದು. ಹಾಗೆಯೇ, ನಿಮಗೊಂದು ವಿಷಯವು ಇಷ್ಟವಾಗಿದ್ದರೂ ಅದು ನಿಮಗೆ ಕೆಡುಕಾಗಿರಬಹುದು. ಅಲ್ಲಾಹು ತಿಳಿದಿದ್ದಾನೆ; ಆದರೆ ನೀವು ತಿಳಿದಿಲ್ಲ.

2:217

يَسۡـَٔلُونَكَ عَنِ ٱلشَّهۡرِ ٱلۡحَرَامِ قِتَالٖ فِيهِۖ قُلۡ قِتَالٞ فِيهِ كَبِيرٞۚ وَصَدٌّ عَن سَبِيلِ ٱللَّهِ وَكُفۡرُۢ بِهِۦ وَٱلۡمَسۡجِدِ ٱلۡحَرَامِ وَإِخۡرَاجُ أَهۡلِهِۦ مِنۡهُ أَكۡبَرُ عِندَ ٱللَّهِۚ وَٱلۡفِتۡنَةُ أَكۡبَرُ مِنَ ٱلۡقَتۡلِۗ وَلَا يَزَالُونَ يُقَٰتِلُونَكُمۡ حَتَّىٰ يَرُدُّوكُمۡ عَن دِينِكُمۡ إِنِ ٱسۡتَطَٰعُواْۚ وَمَن يَرۡتَدِدۡ مِنكُمۡ عَن دِينِهِۦ فَيَمُتۡ وَهُوَ كَافِرٞ فَأُوْلَـٰٓئِكَ حَبِطَتۡ أَعۡمَٰلُهُمۡ فِي ٱلدُّنۡيَا وَٱلۡأٓخِرَةِۖ وَأُوْلَـٰٓئِكَ أَصۡحَٰبُ ٱلنَّارِۖ هُمۡ فِيهَا خَٰلِدُونَ ﴿217﴾

Transliteration: Yasaloonaka AAani alshshahri alharami qitalin feehi qul qitalun feehi kabeerun wasaddun AAan sabeeli Allahi wakufrun bihi waalmasjidi alharami waikhraju ahlihi minhu akbaru AAinda Allahi waalfitnatu akbaru mina alqatli wala yazaloona yuqatiloonakum hatta yaruddookum AAan deenikum ini istataAAoo waman yartadid minkum AAan deenihi fayamut wahuwa kafirun faolaika habitat aAAmaluhum fee alddunya waalakhirati waolaika ashabu alnnari hum feeha khalidoona

Translation: ನಿಷೇಧಿತ ತಿಂಗಳಲ್ಲಿ ಯುದ್ಧ ಮಾಡುವುದರ ಕುರಿತು ಅವರು ನಿಮ್ಮಲ್ಲಿ ವಿಚಾರಿಸುತ್ತಾರೆ. ಹೇಳಿರಿ: “ಅದರಲ್ಲಿ ಯುದ್ಧ ಮಾಡುವುದು ಮಹಾ ಅಪರಾಧವಾಗಿದೆ.” ಆದರೆ ಅಲ್ಲಾಹನ ಮಾರ್ಗದಿಂದ (ಜನರನ್ನು) ತಡೆಯುವುದು, ಅವನನ್ನು ನಿಷೇಧಿಸುವುದು, ಮಸ್ಜಿದುಲ್ ಹರಾಮ್‍ನಿಂದ (ಜನರನ್ನು) ತಡೆಯುವುದು ಮತ್ತು ಅದರ ನಿವಾಸಿಗಳನ್ನು ಅಲ್ಲಿಂದ ಹೊರಹಾಕುವುದು ಅಲ್ಲಾಹನ ದೃಷ್ಟಿಯಲ್ಲಿ ಅದಕ್ಕಿಂತಲೂ ಗಂಭೀರ ಅಪರಾಧಗಳಾಗಿವೆ. ಕ್ಷೋಭೆಯು ಕೊಲೆಗಿಂತಲೂ ಘೋರವಾಗಿದೆ. ಅವರಿಗೆ ಸಾಧ್ಯವಾಗುವುದಾದರೆ ಅವರು ನಿಮ್ಮನ್ನು ನಿಮ್ಮ ಧರ್ಮದಿಂದ ಹಿಂದಿರುಗುವಂತೆ ಮಾಡುವವರೆಗೂ ನಿಮ್ಮೊಂದಿಗೆ ಯುದ್ಧ ಮಾಡುತ್ತಲೇ ಇರುವರು. ನಿಮ್ಮಲ್ಲಿ ಯಾರಾದರೂ ತನ್ನ ಧರ್ಮವನ್ನು ತ್ಯಜಿಸಿ, ನಂತರ ಸತ್ಯನಿಷೇಧಿಯಾಗಿ ಸಾಯುವುದಾದರೆ, ಅವರ ಕರ್ಮಗಳು ಇಹಲೋಕದಲ್ಲೂ ಪರಲೋಕದಲ್ಲೂ ನಿಷ್ಫಲವಾಗುತ್ತವೆ. ಅವರೇ ನರಕವಾಸಿಗಳು. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು.

2:218

إِنَّ ٱلَّذِينَ ءَامَنُواْ وَٱلَّذِينَ هَاجَرُواْ وَجَٰهَدُواْ فِي سَبِيلِ ٱللَّهِ أُوْلَـٰٓئِكَ يَرۡجُونَ رَحۡمَتَ ٱللَّهِۚ وَٱللَّهُ غَفُورٞ رَّحِيمٞ ﴿218﴾

Transliteration: Inna allatheena amanoo waallatheena hajaroo wajahadoo fee sabeeli Allahi olaika yarjoona rahmata Allahi waAllahu ghafoorun raheemun

Translation: ನಿಶ್ಚಯವಾಗಿಯೂ ಸತ್ಯವಿಶ್ವಾಸಿಗಳು, ಹಿಜ್ರ (ವಲಸೆ) ಹೋದವರು ಮತ್ತು ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡಿದವರು ಯಾರೋ—ಅವರು ಅಲ್ಲಾಹನ ದಯೆಯನ್ನು ನಿರೀಕ್ಷಿಸುತ್ತಾರೆ. ಅಲ್ಲಾಹು ಕ್ಷಮಿಸುವವನು ಮತ್ತು ಕರುಣೆ ತೋರುವವನಾಗಿದ್ದಾನೆ.

2:219

يَسۡـَٔلُونَكَ عَنِ ٱلۡخَمۡرِ وَٱلۡمَيۡسِرِۖ قُلۡ فِيهِمَآ إِثۡمٞ كَبِيرٞ وَمَنَٰفِعُ لِلنَّاسِ وَإِثۡمُهُمَآ أَكۡبَرُ مِن نَّفۡعِهِمَاۗ وَيَسۡـَٔلُونَكَ مَاذَا يُنفِقُونَۖ قُلِ ٱلۡعَفۡوَۗ كَذَٰلِكَ يُبَيِّنُ ٱللَّهُ لَكُمُ ٱلۡأٓيَٰتِ لَعَلَّكُمۡ تَتَفَكَّرُونَ ﴿219﴾

Transliteration: Yasaloonaka AAani alkhamri waalmaysiri qul feehima ithmun kabeerun wamanafiAAu lilnnasi waithmuhuma akbaru min nafAAihima wayasaloonaka matha yunfiqoona quli alAAafwa kathalika yubayyinu Allahu lakumu alayati laAAallakum tatafakkaroona

Translation: ಅವರು ನಿಮ್ಮೊಂದಿಗೆ ಮದ್ಯ ಮತ್ತು ಜೂಜಿನ ಬಗ್ಗೆ ವಿಚಾರಿಸುತ್ತಾರೆ. ಹೇಳಿರಿ: “ಅವೆರಡರಲ್ಲೂ ಬಹುದೊಡ್ಡ ಪಾಪವಿದೆ ಮತ್ತು ಜನರಿಗೆ ಕೆಲವು ಪ್ರಯೋಜನಗಳೂ ಇವೆ.[1] ಆದರೆ ಅವುಗಳ ಪಾಪವು ಪ್ರಯೋಜನಕ್ಕಿಂತಲೂ ದೊಡ್ಡದು.” ಅವರು ಏನು ಖರ್ಚು ಮಾಡಬೇಕೆಂದು ಅವರು ನಿಮ್ಮೊಡನೆ ಕೇಳುತ್ತಾರೆ. ಹೇಳಿರಿ: “ಅಗತ್ಯಕ್ಕಿಂತ ಮಿಕ್ಕಿದ್ದು.” ಈ ರೀತಿ ಅಲ್ಲಾಹು ತನ್ನ ನಿಯಮಗಳನ್ನು ನಿಮಗೆ ಸ್ಪಷ್ಟವಾಗಿ ವಿವರಿಸಿಕೊಡುತ್ತಾನೆ. ನೀವು ಆಲೋಚಿಸುವುದಕ್ಕಾಗಿ.

2:220

فِي ٱلدُّنۡيَا وَٱلۡأٓخِرَةِۗ وَيَسۡـَٔلُونَكَ عَنِ ٱلۡيَتَٰمَىٰۖ قُلۡ إِصۡلَاحٞ لَّهُمۡ خَيۡرٞۖ وَإِن تُخَالِطُوهُمۡ فَإِخۡوَٰنُكُمۡۚ وَٱللَّهُ يَعۡلَمُ ٱلۡمُفۡسِدَ مِنَ ٱلۡمُصۡلِحِۚ وَلَوۡ شَآءَ ٱللَّهُ لَأَعۡنَتَكُمۡۚ إِنَّ ٱللَّهَ عَزِيزٌ حَكِيمٞ ﴿220﴾

Transliteration: Fee alddunya waalakhirati wayasaloonaka AAani alyatama qul islahun lahum khayrun wain tukhalitoohum faikhwanukum waAllahu yaAAlamu almufsida mina almuslihi walaw shaa Allahu laaAAnatakum inna Allaha AAazeezun hakeemun

Translation: ಇಹಲೋಕ ಮತ್ತು ಪರಲೋಕದ ಕುರಿತು. ಅವರು ನಿಮ್ಮೊಂದಿಗೆ ಅನಾಥರ ಕುರಿತು ವಿಚಾರಿಸುತ್ತಾರೆ. ಹೇಳಿರಿ: “ಅವರ ಯೋಗಕ್ಷೇಮ ನೋಡಿಕೊಳ್ಳುವುದು ಒಳ್ಳೆಯದೇ ಆಗಿದೆ. ನೀವು ಅವರ ಆಸ್ತಿಯನ್ನು ನಿಮ್ಮ ಆಸ್ತಿಯೊಂದಿಗೆ ಸೇರಿಸಿದರೂ (ತಪ್ಪಿಲ್ಲ); ಅವರು ನಿಮ್ಮ ಸಹೋದರರಾಗಿದ್ದಾರೆ. ಯಾರಿಗೆ ಕೆಟ್ಟ ಉದ್ದೇಶವಿದೆ ಮತ್ತು ಯಾರಿಗೆ ಒಳ್ಳೆಯ ಉದ್ದೇಶವಿದೆಯೆಂದು ಅಲ್ಲಾಹು ತಿಳಿದಿದ್ದಾನೆ. ಅಲ್ಲಾಹು ಇಚ್ಛಿಸಿದರೆ ನಿಮಗೆ ಕಷ್ಟ ಕೊಡುತ್ತಿದ್ದನು. ನಿಶ್ಚಯವಾಗಿಯೂ ಅಲ್ಲಾಹು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ.”

2:221

وَلَا تَنكِحُواْ ٱلۡمُشۡرِكَٰتِ حَتَّىٰ يُؤۡمِنَّۚ وَلَأَمَةٞ مُّؤۡمِنَةٌ خَيۡرٞ مِّن مُّشۡرِكَةٖ وَلَوۡ أَعۡجَبَتۡكُمۡۗ وَلَا تُنكِحُواْ ٱلۡمُشۡرِكِينَ حَتَّىٰ يُؤۡمِنُواْۚ وَلَعَبۡدٞ مُّؤۡمِنٌ خَيۡرٞ مِّن مُّشۡرِكٖ وَلَوۡ أَعۡجَبَكُمۡۗ أُوْلَـٰٓئِكَ يَدۡعُونَ إِلَى ٱلنَّارِۖ وَٱللَّهُ يَدۡعُوٓاْ إِلَى ٱلۡجَنَّةِ وَٱلۡمَغۡفِرَةِ بِإِذۡنِهِۦۖ وَيُبَيِّنُ ءَايَٰتِهِۦ لِلنَّاسِ لَعَلَّهُمۡ يَتَذَكَّرُونَ ﴿221﴾

Transliteration: Wala tankihoo almushrikati hatta yuminna walaamatun muminatun khayrun min mushrikatin walaw aAAjabatkum wala tunkihoo almushrikeena hatta yuminoo walaAAabdun muminun khayrun min mushrikin walaw aAAjabakum olaika yadAAoona ila alnnari waAllahu yadAAoo ila aljannati waalmaghfirati biithnihi wayubayyinu ayatihi lilnnasi laAAallahum yatathakkaroona

Translation: ಬಹುದೇವವಿಶ್ವಾಸಿ ಮಹಿಳೆಯರನ್ನು ಅವರು ಸತ್ಯವಿಶ್ವಾಸಿಗಳಾಗುವ ತನಕ ವಿವಾಹವಾಗಬೇಡಿ. ಸತ್ಯವಿಶ್ವಾಸಿಯಾದ ಗುಲಾಮಸ್ತ್ರೀ ಸ್ವತಂತ್ರಳಾದ ಬಹುದೇವವಿಶ್ವಾಸಿ ಮಹಿಳೆಗಿಂತ ಶ್ರೇಷ್ಠಳು. ಅವಳು (ಬಹುದೇವವಿಶ್ವಾಸಿ) ನಿಮಗೆ ಆಕರ್ಷಕವಾಗಿ ಕಂಡರೂ ಸಹ. ಬಹುದೇವವಿಶ್ವಾಸಿ ಪುರುಷರಿಗೆ ಅವರು ಸತ್ಯವಿಶ್ವಾಸಿಗಳಾಗುವ ತನಕ ನಿಮ್ಮ ಮಹಿಳೆಯರನ್ನು ವಿವಾಹ ಮಾಡಿಕೊಡಬೇಡಿ. ಸತ್ಯವಿಶ್ವಾಸಿಯಾದ ಗುಲಾಮ ಸ್ವತಂತ್ರನಾದ ಬಹುದೇವವಿಶ್ವಾಸಿಗಿಂತ ಶ್ರೇಷ್ಠನು. ಅವನು (ಬಹುದೇವವಿಶ್ವಾಸಿ) ನಿಮಗೆ ಆಕರ್ಷಕವಾಗಿ ಕಂಡರೂ ಸಹ. ಅವರು ನಿಮ್ಮನ್ನು ನರಕಕ್ಕೆ ಕರೆಯುತ್ತಿದ್ದಾರೆ. ಅಲ್ಲಾಹು ತನ್ನ ಅಪ್ಪಣೆಯಿಂದ ನಿಮ್ಮನ್ನು ಸ್ವರ್ಗಕ್ಕೆ ಮತ್ತು ಕ್ಷಮೆಗೆ ಕರೆಯುತ್ತಿದ್ದಾನೆ. ಅವನು ಜನರಿಗೆ ತನ್ನ ನಿಯಮಗಳನ್ನು ವಿವರಿಸಿಕೊಡುತ್ತಾನೆ. ಅವರು ಉಪದೇಶ ಪಡೆಯುವುದಕ್ಕಾಗಿ.

2:222

وَيَسۡـَٔلُونَكَ عَنِ ٱلۡمَحِيضِۖ قُلۡ هُوَ أَذٗى فَٱعۡتَزِلُواْ ٱلنِّسَآءَ فِي ٱلۡمَحِيضِ وَلَا تَقۡرَبُوهُنَّ حَتَّىٰ يَطۡهُرۡنَۖ فَإِذَا تَطَهَّرۡنَ فَأۡتُوهُنَّ مِنۡ حَيۡثُ أَمَرَكُمُ ٱللَّهُۚ إِنَّ ٱللَّهَ يُحِبُّ ٱلتَّوَّـٰبِينَ وَيُحِبُّ ٱلۡمُتَطَهِّرِينَ ﴿222﴾

Transliteration: Wayasaloonaka AAani almaheedi qul huwa athan faiAAtaziloo alnnisaa fee almaheedi wala taqraboohunna hatta yathurna faitha tatahharna fatoohunna min haythu amarakumu Allahu inna Allaha yuhibbu alttawwabeena wayuhibbu almutatahhireena

Translation: ಅವರು ನಿಮ್ಮೊಂದಿಗೆ ಋತುಸ್ರಾವದ ಕುರಿತು ವಿಚಾರಿಸುತ್ತಾರೆ. ಹೇಳಿರಿ: “ಅದು ಹೊಲಸು. ಆದ್ದರಿಂದ ಋತುಸ್ರಾವದ ಅವಧಿಯಲ್ಲಿ ಮಹಿಳೆಯರಿಂದ ದೂರವಿರಿ. ಅವರು ಶುದ್ಧವಾಗುವ ತನಕ ಅವರ ಬಳಿಗೆ ಹೋಗಬೇಡಿ. ಅವರು ಶುದ್ಧವಾದರೆ ಅಲ್ಲಾಹು ನಿಮಗೆ ಆಜ್ಞಾಪಿಸಿದ ಕಡೆಯಿಂದ ಅವರ ಬಳಿಗೆ ಹೋಗಿರಿ. ನಿಶ್ಚಯವಾಗಿಯೂ ಅಲ್ಲಾಹು ಪಶ್ಚಾತ್ತಾಪಪಡುವವರನ್ನು ಪ್ರೀತಿಸುತ್ತಾನೆ ಮತ್ತು ಶುದ್ಧವಾಗಿರುವವರನ್ನು ಕೂಡ ಪ್ರೀತಿಸುತ್ತಾನೆ.”

2:223

نِسَآؤُكُمۡ حَرۡثٞ لَّكُمۡ فَأۡتُواْ حَرۡثَكُمۡ أَنَّىٰ شِئۡتُمۡۖ وَقَدِّمُواْ لِأَنفُسِكُمۡۚ وَٱتَّقُواْ ٱللَّهَ وَٱعۡلَمُوٓاْ أَنَّكُم مُّلَٰقُوهُۗ وَبَشِّرِ ٱلۡمُؤۡمِنِينَ ﴿223﴾

Transliteration: Nisaokum harthun lakum fatoo harthakum anna shitum waqaddimoo lianfusikum waittaqoo Allaha waiAAlamoo annakum mulaqoohu wabashshiri almumineena

Translation: ನಿಮ್ಮ ಪತ್ನಿಯರು ನಿಮ್ಮ ಹೊಲದಂತೆ. ನೀವು ಇಚ್ಛಿಸುವಂತೆ ನಿಮ್ಮ ಹೊಲಕ್ಕೆ ಹೋಗಿರಿ ಮತ್ತು ನಿಮಗಾಗಿ (ಸತ್ಕರ್ಮಗಳನ್ನು) ಮುಂದಕ್ಕೆ ಕಳುಹಿಸಿರಿ. ಅಲ್ಲಾಹನನ್ನು ಭಯಪಡಿರಿ. ತಿಳಿಯಿರಿ! ನಿಶ್ಚಯವಾಗಿಯೂ ನೀವು ಅವನನ್ನು ಭೇಟಿಯಾಗಲಿರುವಿರಿ. ಸತ್ಯವಿಶ್ವಾಸಿಗಳಿಗೆ ಸುವಾರ್ತೆಯನ್ನು ತಿಳಿಸಿರಿ.

2:224

وَلَا تَجۡعَلُواْ ٱللَّهَ عُرۡضَةٗ لِّأَيۡمَٰنِكُمۡ أَن تَبَرُّواْ وَتَتَّقُواْ وَتُصۡلِحُواْ بَيۡنَ ٱلنَّاسِۚ وَٱللَّهُ سَمِيعٌ عَلِيمٞ ﴿224﴾

Transliteration: Wala tajAAaloo Allaha AAurdatan liaymanikum an tabarroo watattaqoo watuslihoo bayna alnnasi waAllahu sameeAAun AAaleemun

Translation: ಒಳಿತು ಮಾಡುವುದನ್ನು, ದೇವಭಯದಿಂದ ಜೀವಿಸುವುದನ್ನು ಮತ್ತು ಜನರ ನಡುವೆ ಸುಧಾರಣೆ ಮಾಡುವುದನ್ನು ಬಿಟ್ಟುಬಿಡುವುದಕ್ಕಾಗಿ ನಿಮ್ಮ ಪ್ರತಿಜ್ಞೆಗಳಿಗೆ ಅಲ್ಲಾಹನನ್ನು ಗುರಿಯನ್ನಾಗಿ ಮಾಡಬೇಡಿ.[1] ಅಲ್ಲಾಹು ಎಲ್ಲವನ್ನು ಕೇಳುವವನು ಮತ್ತು ತಿಳಿದವನಾಗಿದ್ದಾನೆ.

2:225

لَّا يُؤَاخِذُكُمُ ٱللَّهُ بِٱللَّغۡوِ فِيٓ أَيۡمَٰنِكُمۡ وَلَٰكِن يُؤَاخِذُكُم بِمَا كَسَبَتۡ قُلُوبُكُمۡۗ وَٱللَّهُ غَفُورٌ حَلِيمٞ ﴿225﴾

Transliteration: La yuakhithukumu Allahu biallaghwi fee aymanikum walakin yuakhithukum bima kasabat quloobukum waAllahu ghafoorun haleemun

Translation: ನೀವು ದೃಢನಿರ್ಧಾರದಿಂದ ಮಾಡದ ಪ್ರತಿಜ್ಞೆಗಳಿಗಾಗಿ ಅಲ್ಲಾಹು ನಿಮ್ಮನ್ನು ಶಿಕ್ಷಿಸುವುದಿಲ್ಲ.[1] ಆದರೆ ನೀವು ನಿಮ್ಮ ಹೃದಯದಲ್ಲಿ ಮಾಡಿದ ಪ್ರತಿಜ್ಞೆಗಳಿಗೆ ಅವನು ನಿಮ್ಮನ್ನು ಶಿಕ್ಷಿಸುತ್ತಾನೆ. ಅಲ್ಲಾಹು ಕ್ಷಮಿಸುವವನು ಮತ್ತು ಸಹಿಷ್ಣುತೆಯುಳ್ಳನಾಗಿದ್ದಾನೆ.

2:226

لِّلَّذِينَ يُؤۡلُونَ مِن نِّسَآئِهِمۡ تَرَبُّصُ أَرۡبَعَةِ أَشۡهُرٖۖ فَإِن فَآءُو فَإِنَّ ٱللَّهَ غَفُورٞ رَّحِيمٞ ﴿226﴾

Transliteration: Lillatheena yuloona min nisaihim tarabbusu arbaAAati ashhurin fain faoo fainna Allaha ghafoorun raheemun

Translation: ತಮ್ಮ ಪತ್ನಿಯರೊಡನೆ (ಲೈಂಗಿಕ ಸಂಪರ್ಕ ಮಾಡುವುದಿಲ್ಲವೆಂದು) ಪ್ರತಿಜ್ಞೆ ಮಾಡುವವರಿಗೆ ನಾಲ್ಕು ತಿಂಗಳ ಕಾಲಾವಕಾಶವಿದೆ. ಅವರೇನಾದರೂ (ದಾಂಪತ್ಯಕ್ಕೆ) ಮರಳಿದರೆ, ನಿಶ್ಚಯವಾಗಿಯೂ ಅಲ್ಲಾಹು ಕ್ಷಮಿಸುವವನು ಮತ್ತು ಕರುಣೆ ತೋರುವವನಾಗಿದ್ದಾನೆ.[1]

2:227

وَإِنۡ عَزَمُواْ ٱلطَّلَٰقَ فَإِنَّ ٱللَّهَ سَمِيعٌ عَلِيمٞ ﴿227﴾

Transliteration: Wain AAazamoo alttalaqa fainna Allaha sameeAAun AAaleemun

Translation: ಆದರೆ, ಅವರು ವಿಚ್ಛೇದನ ಮಾಡಲು ನಿರ್ಧರಿಸಿದರೆ, ನಿಶ್ಚಯವಾಗಿಯೂ ಅಲ್ಲಾಹು ಎಲ್ಲವನ್ನು ಕೇಳುವವನು ಮತ್ತು ತಿಳಿದವನಾಗಿದ್ದಾನೆ.

2:228

وَٱلۡمُطَلَّقَٰتُ يَتَرَبَّصۡنَ بِأَنفُسِهِنَّ ثَلَٰثَةَ قُرُوٓءٖۚ وَلَا يَحِلُّ لَهُنَّ أَن يَكۡتُمۡنَ مَا خَلَقَ ٱللَّهُ فِيٓ أَرۡحَامِهِنَّ إِن كُنَّ يُؤۡمِنَّ بِٱللَّهِ وَٱلۡيَوۡمِ ٱلۡأٓخِرِۚ وَبُعُولَتُهُنَّ أَحَقُّ بِرَدِّهِنَّ فِي ذَٰلِكَ إِنۡ أَرَادُوٓاْ إِصۡلَٰحٗاۚ وَلَهُنَّ مِثۡلُ ٱلَّذِي عَلَيۡهِنَّ بِٱلۡمَعۡرُوفِۚ وَلِلرِّجَالِ عَلَيۡهِنَّ دَرَجَةٞۗ وَٱللَّهُ عَزِيزٌ حَكِيمٌ ﴿228﴾

Transliteration: Waalmutallaqatu yatarabbasna bianfusihinna thalathata qurooin wala yahillu lahunna an yaktumna ma khalaqa Allahu fee arhamihinna in kunna yuminna biAllahi waalyawmi alakhiri wabuAAoolatuhunna ahaqqu biraddihinna fee thalika in aradoo islahan walahunna mithlu allathee AAalayhinna bialmaAAroofi walilrrijali AAalayhinna darajatun waAllahu AAazeezun hakeemun

Translation: ವಿಚ್ಛೇದಿತ ಮಹಿಳೆಯರು ಸ್ವಯಂ ಮೂರು ಋತುಸ್ರಾವಗಳ ತನಕ ಕಾಯಬೇಕು. ಅವರಿಗೆ ಅಲ್ಲಾಹನಲ್ಲಿ ಮತ್ತು ಅಂತ್ಯದಿನದಲ್ಲಿ ವಿಶ್ವಾಸವಿದ್ದರೆ ಅವರ ಗರ್ಭಗಳಲ್ಲಿ ಅಲ್ಲಾಹು ಸೃಷ್ಟಿಸಿರುವುದನ್ನು ಮುಚ್ಚಿಡುವುದು ಅವರಿಗೆ ಧರ್ಮಸಮ್ಮತವಲ್ಲ. ಅವರ ಗಂಡಂದಿರು ಅವರನ್ನು ಆ ಅವಧಿಯೊಳಗೆ ಮರಳಿ ಸ್ವೀಕರಿಸಲು ಪೂರ್ಣ ಹಕ್ಕುಳ್ಳವರಾಗಿದ್ದಾರೆ—ಅವರ (ಗಂಡಂದಿರ) ಉದ್ದೇಶವು ರಾಜಿ ಮಾಡುವುದಾಗಿದ್ದರೆ.[1] ಪುರುಷರಿಗೆ ಮಹಿಳೆಯರ ಮೇಲೆ ಹಕ್ಕುಗಳಿರುವಂತೆ ಮಹಿಳೆಯರಿಗೂ ಪುರುಷರ ಮೇಲೆ ಸ್ವೀಕಾರಾರ್ಹ ರೀತಿಯಲ್ಲಿರುವ ಹಕ್ಕುಗಳಿವೆ. ಆದರೆ ಪುರುಷರಿಗೆ ಮಹಿಳೆಯರಿಗಿಂತ ಹೆಚ್ಚಿನ ಒಂದು ಪದವಿಯಿದೆ. ಅಲ್ಲಾಹು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ.

2:229

ٱلطَّلَٰقُ مَرَّتَانِۖ فَإِمۡسَاكُۢ بِمَعۡرُوفٍ أَوۡ تَسۡرِيحُۢ بِإِحۡسَٰنٖۗ وَلَا يَحِلُّ لَكُمۡ أَن تَأۡخُذُواْ مِمَّآ ءَاتَيۡتُمُوهُنَّ شَيۡـًٔا إِلَّآ أَن يَخَافَآ أَلَّا يُقِيمَا حُدُودَ ٱللَّهِۖ فَإِنۡ خِفۡتُمۡ أَلَّا يُقِيمَا حُدُودَ ٱللَّهِ فَلَا جُنَاحَ عَلَيۡهِمَا فِيمَا ٱفۡتَدَتۡ بِهِۦۗ تِلۡكَ حُدُودُ ٱللَّهِ فَلَا تَعۡتَدُوهَاۚ وَمَن يَتَعَدَّ حُدُودَ ٱللَّهِ فَأُوْلَـٰٓئِكَ هُمُ ٱلظَّـٰلِمُونَ ﴿229﴾

Transliteration: Alttalaqu marratani faimsakun bimaAAroofin aw tasreehun biihsanin wala yahillu lakum an takhuthoo mimma ataytumoohunna shayan illa an yakhafa alla yuqeema hudooda Allahi fain khiftum alla yuqeema hudooda Allahi fala junaha AAalayhima feema iftadat bihi tilka hudoodu Allahi fala taAAtadooha waman yataAAadda hudooda Allahi faolaika humu alththalimoona

Translation: ವಿಚ್ಛೇದನವು ಎರಡು ಬಾರಿ.[1] ನಂತರ ಒಂದೋ ಸ್ವೀಕಾರಾರ್ಹ ರೀತಿಯಲ್ಲಿ ಬಳಿಯಿರಿಸಿಕೊಳ್ಳಬೇಕು ಅಥವಾ ಉತ್ತಮ ರೀತಿಯಲ್ಲಿ ಬಿಟ್ಟು ಬಿಡಬೇಕು. ನೀವು ಅವರಿಗೆ ನೀಡಿದ ಯಾವುದೇ ವಸ್ತುವನ್ನು ಮರಳಿ ಪಡೆಯುವುದು ನಿಮಗೆ ಧರ್ಮಸಮ್ಮತವಲ್ಲ. ಅಲ್ಲಾಹನ ಎಲ್ಲೆಗಳೊಳಗೆ ನಿಲ್ಲಲು ಅವರಿಬ್ಬರಿಗೆ ಸಾಧ್ಯವಾಗಲಾರದು ಎಂದು ಅವರಿಬ್ಬರು ಭಯಪಡುವ ಹೊರತು. ಅಲ್ಲಾಹನ ಎಲ್ಲೆಗಳೊಳಗೆ ನಿಲ್ಲಲು ಅವರಿಬ್ಬರಿಗೆ ಸಾಧ್ಯವಾಗಲಾರದೆಂದು ನೀವು ಭಯಪಡುವುದಾದರೆ, ಪತ್ನಿ ಏನಾದರೂ ಕೊಟ್ಟು ವಿಚ್ಛೇದನ ಪಡೆಯುವುದರಲ್ಲಿ ಅವರಿಬ್ಬರಿಗೂ ದೋಷವಿಲ್ಲ.[2] ಇವು ಅಲ್ಲಾಹನ ಎಲ್ಲೆಗಳಾಗಿವೆ. ನೀವು ಅವುಗಳನ್ನು ಮೀರಿ ಹೋಗಬೇಡಿ. ಯಾರು ಅಲ್ಲಾಹನ ಎಲ್ಲೆಗಳನ್ನು ಮೀರಿ ಹೋಗುತ್ತಾರೋ ಅವರೇ ಅಕ್ರಮಿಗಳು.

2:230

فَإِن طَلَّقَهَا فَلَا تَحِلُّ لَهُۥ مِنۢ بَعۡدُ حَتَّىٰ تَنكِحَ زَوۡجًا غَيۡرَهُۥۗ فَإِن طَلَّقَهَا فَلَا جُنَاحَ عَلَيۡهِمَآ أَن يَتَرَاجَعَآ إِن ظَنَّآ أَن يُقِيمَا حُدُودَ ٱللَّهِۗ وَتِلۡكَ حُدُودُ ٱللَّهِ يُبَيِّنُهَا لِقَوۡمٖ يَعۡلَمُونَ ﴿230﴾

Transliteration: Fain tallaqaha fala tahillu lahu min baAAdu hatta tankiha zawjan ghayrahu fain tallaqaha fala junaha AAalayhima an yatarajaAAa in thanna an yuqeema hudooda Allahi watilka hudoodu Allahi yubayyinuha liqawmin yaAAlamoona

Translation: ಇನ್ನು (ಮೂರನೇ ಬಾರಿ) ಅವನು ಅವಳನ್ನು ವಿಚ್ಛೇದಿಸಿದರೆ, ನಂತರ ಅವಳು ಬೇರೊಬ್ಬನನ್ನು ವಿವಾಹವಾಗುವ ತನಕ ಇವನಿಗೆ ಧರ್ಮಸಮ್ಮತಳಾಗುವುದಿಲ್ಲ. ಆದರೆ ಅವನು ಕೂಡ ಅವಳಿಗೆ ವಿಚ್ಛೇದನ ನೀಡಿದರೆ, ಅಲ್ಲಾಹನ ಎಲ್ಲೆಗಳೊಳಗೆ ನಿಲ್ಲಲು ಸಾಧ್ಯವಾಗುವುದೆಂದು ಇವರಿಬ್ಬರು ಭಾವಿಸುವುದಾದರೆ (ಹಳೆಯ ದಾಂಪತ್ಯಕ್ಕೆ) ಮರಳುವುದರಲ್ಲಿ ಇವರಿಬ್ಬರಿಗೆ ದೋಷವಿಲ್ಲ. ಇವು ಅಲ್ಲಾಹನ ಎಲ್ಲೆಗಳಾಗಿವೆ. ತಿಳುವಳಿಕೆಯಿರುವ ಜನರಿಗಾಗಿ ಅವನು ಅವುಗಳನ್ನು ವಿವರಿಸಿಕೊಡುತ್ತಾನೆ.

2:231

وَإِذَا طَلَّقۡتُمُ ٱلنِّسَآءَ فَبَلَغۡنَ أَجَلَهُنَّ فَأَمۡسِكُوهُنَّ بِمَعۡرُوفٍ أَوۡ سَرِّحُوهُنَّ بِمَعۡرُوفٖۚ وَلَا تُمۡسِكُوهُنَّ ضِرَارٗا لِّتَعۡتَدُواْۚ وَمَن يَفۡعَلۡ ذَٰلِكَ فَقَدۡ ظَلَمَ نَفۡسَهُۥۚ وَلَا تَتَّخِذُوٓاْ ءَايَٰتِ ٱللَّهِ هُزُوٗاۚ وَٱذۡكُرُواْ نِعۡمَتَ ٱللَّهِ عَلَيۡكُمۡ وَمَآ أَنزَلَ عَلَيۡكُم مِّنَ ٱلۡكِتَٰبِ وَٱلۡحِكۡمَةِ يَعِظُكُم بِهِۦۚ وَٱتَّقُواْ ٱللَّهَ وَٱعۡلَمُوٓاْ أَنَّ ٱللَّهَ بِكُلِّ شَيۡءٍ عَلِيمٞ ﴿231﴾

Transliteration: Waitha tallaqtumu alnnisaa fabalaghna ajalahunna faamsikoohunna bimaAAroofin aw sarrihoohunna bimaAAroofin wala tumsikoohunna diraran litaAAtadoo waman yafAAal thalika faqad thalama nafsahu wala tattakhithoo ayati Allahi huzuwan waothkuroo niAAmata Allahi AAalaykum wama anzala AAalaykum mina alkitabi waalhikmati yaAAithukum bihi waittaqoo Allaha waiAAlamoo anna Allaha bikulli shayin AAaleemun

Translation: ನೀವು ನಿಮ್ಮ ಪತ್ನಿಯರಿಗೆ ವಿಚ್ಛೇದನ ನೀಡಿ, ನಂತರ ಅವರು ತಮ್ಮ ಅವಧಿಯನ್ನು ಪೂರ್ಣಗೊಳಿಸಿದರೆ, ಸ್ವೀಕಾರಾರ್ಹ ರೀತಿಯಲ್ಲಿ ಅವರನ್ನು ಬಳಿಯಿಟ್ಟುಕೊಳ್ಳಿ ಅಥವಾ ಸ್ವೀಕಾರಾರ್ಹ ರೀತಿಯಲ್ಲಿ ಅವರನ್ನು ಬಿಟ್ಟು ಬಿಡಿ. ಅವರಿಗೆ ತೊಂದರೆ ಕೊಡುವ ಉದ್ದೇಶದಿಂದ ಅತಿರೇಕವೆಸಗಲು ಅವರನ್ನು ಬಳಿಯಿಟ್ಟುಕೊಳ್ಳಬೇಡಿ. ಯಾರು ಹೀಗೆ ಮಾಡುತ್ತಾನೋ ಅವನು ಅವನ ಮೇಲೆಯೇ ಅಕ್ರಮವೆಸಗಿದ್ದಾನೆ. ಅಲ್ಲಾಹನ ನಿಯಮಗಳನ್ನು ತಮಾಷೆಯಾಗಿ ಸ್ವೀಕರಿಸಬೇಡಿ. ಅಲ್ಲಾಹು ನಿಮಗೆ ದಯಪಾಲಿಸಿದ ಅನುಗ್ರಹಗಳನ್ನು ಮತ್ತು ನಿಮಗೆ ಉಪದೇಶ ನೀಡುತ್ತಾ ಅವನು ಅವತೀರ್ಣಗೊಳಿಸಿದ ಗ್ರಂಥ ಮತ್ತು ವಿವೇಕವನ್ನು ಸ್ಮರಿಸಿರಿ. ಅಲ್ಲಾಹನನ್ನು ಭಯಪಡಿರಿ. ತಿಳಿಯಿರಿ! ಅಲ್ಲಾಹು ಎಲ್ಲಾ ವಿಷಯಗಳನ್ನೂ ತಿಳಿದವನಾಗಿದ್ದಾನೆ.

2:232

وَإِذَا طَلَّقۡتُمُ ٱلنِّسَآءَ فَبَلَغۡنَ أَجَلَهُنَّ فَلَا تَعۡضُلُوهُنَّ أَن يَنكِحۡنَ أَزۡوَٰجَهُنَّ إِذَا تَرَٰضَوۡاْ بَيۡنَهُم بِٱلۡمَعۡرُوفِۗ ذَٰلِكَ يُوعَظُ بِهِۦ مَن كَانَ مِنكُمۡ يُؤۡمِنُ بِٱللَّهِ وَٱلۡيَوۡمِ ٱلۡأٓخِرِۗ ذَٰلِكُمۡ أَزۡكَىٰ لَكُمۡ وَأَطۡهَرُۚ وَٱللَّهُ يَعۡلَمُ وَأَنتُمۡ لَا تَعۡلَمُونَ ﴿232﴾

Transliteration: Waitha tallaqtumu alnnisaa fabalaghna ajalahunna fala taAAduloohunna an yankihna azwajahunna itha taradaw baynahum bialmaAAroofi thalika yooAAathu bihi man kana minkum yuminu biAllahi waalyawmi alakhiri thalikum azka lakum waatharu waAllahu yaAAlamu waantum la taAAlamoona

Translation: ನೀವು ನಿಮ್ಮ ಪತ್ನಿಯರಿಗೆ ವಿಚ್ಛೇದನ ನೀಡಿ, ನಂತರ ಅವರು ತಮ್ಮ ಅವಧಿಯನ್ನು ಪೂರ್ಣಗೊಳಿಸಿದರೆ, ಅವರು ಅವರ ಗಂಡಂದಿರನ್ನು ವಿವಾಹವಾಗುವುದನ್ನು ತಡೆಯಬೇಡಿ—ಸ್ವೀಕಾರಾರ್ಹ ರೀತಿಯಲ್ಲಿ ಅವರು ಪರಸ್ಪರ ಸಂತೃಪ್ತರಾಗಿದ್ದರೆ. ಇದು ನಿಮ್ಮ ಪೈಕಿ ಅಲ್ಲಾಹನಲ್ಲಿ ಮತ್ತು ಅಂತ್ಯದಿನದಲ್ಲಿ ವಿಶ್ವಾಸವಿಡುವವರಿಗೆ ನೀಡುವ ಉಪದೇಶವಾಗಿದೆ. ಅದು ನಿಮಗೆ ಅತಿಶ್ರೇಷ್ಠ ಮತ್ತು ಅತ್ಯಂತ ಪರಿಶುದ್ಧವಾಗಿದೆ. ಅಲ್ಲಾಹು ತಿಳಿದಿದ್ದಾನೆ; ಆದರೆ ನೀವು ತಿಳಿದಿಲ್ಲ.

2:233

وَٱلۡوَٰلِدَٰتُ يُرۡضِعۡنَ أَوۡلَٰدَهُنَّ حَوۡلَيۡنِ كَامِلَيۡنِۖ لِمَنۡ أَرَادَ أَن يُتِمَّ ٱلرَّضَاعَةَۚ وَعَلَى ٱلۡمَوۡلُودِ لَهُۥ رِزۡقُهُنَّ وَكِسۡوَتُهُنَّ بِٱلۡمَعۡرُوفِۚ لَا تُكَلَّفُ نَفۡسٌ إِلَّا وُسۡعَهَاۚ لَا تُضَآرَّ وَٰلِدَةُۢ بِوَلَدِهَا وَلَا مَوۡلُودٞ لَّهُۥ بِوَلَدِهِۦۚ وَعَلَى ٱلۡوَارِثِ مِثۡلُ ذَٰلِكَۗ فَإِنۡ أَرَادَا فِصَالًا عَن تَرَاضٖ مِّنۡهُمَا وَتَشَاوُرٖ فَلَا جُنَاحَ عَلَيۡهِمَاۗ وَإِنۡ أَرَدتُّمۡ أَن تَسۡتَرۡضِعُوٓاْ أَوۡلَٰدَكُمۡ فَلَا جُنَاحَ عَلَيۡكُمۡ إِذَا سَلَّمۡتُم مَّآ ءَاتَيۡتُم بِٱلۡمَعۡرُوفِۗ وَٱتَّقُواْ ٱللَّهَ وَٱعۡلَمُوٓاْ أَنَّ ٱللَّهَ بِمَا تَعۡمَلُونَ بَصِيرٞ ﴿233﴾

Transliteration: Waalwalidatu yurdiAAna awladahunna hawlayni kamilayni liman arada an yutimma alrradaAAata waAAala almawloodi lahu rizquhunna wakiswatuhunna bialmaAAroofi la tukallafu nafsun illa wusAAaha la tudarra walidatun biwaladiha wala mawloodun lahu biwaladihi waAAala alwarithi mithlu thalika fain arada fisalan AAan taradin minhuma watashawurin fala junaha AAalayhima wain aradtum an tastardiAAoo awladakum fala junaha AAalaykum itha sallamtum ma ataytum bialmaAAroofi waittaqoo Allaha waiAAlamoo anna Allaha bima taAAmaloona baseerun

Translation: ತಾಯಂದಿರು ತಮ್ಮ ಮಕ್ಕಳಿಗೆ ಎರಡು ವರ್ಷ ಪೂರ್ಣವಾಗಿ ಸ್ತನಪಾನ ಮಾಡಬೇಕು—ಇದು ಸ್ತನಪಾನದ ಅವಧಿಯನ್ನು ಪೂರ್ಣಗೊಳಿಸಲು ಬಯಸುವವರಿಗೆ. ಸ್ವೀಕಾರಾರ್ಹ ರೀತಿಯಲ್ಲಿ ಅವರಿಗೆ ಆಹಾರ ಮತ್ತು ಬಟ್ಟೆಬರೆಗಳನ್ನು ಒದಗಿಸುವುದು ಮಗುವಿನ ತಂದೆಯ ಕರ್ತವ್ಯವಾಗಿದೆ. ಯಾರ ಮೇಲೂ ಅವನ ಸಾಮರ್ಥ್ಯಕ್ಕಿಂತ ಮಿಗಿಲಾದುದನ್ನು ಹೊರಿಸಲಾಗುವುದಿಲ್ಲ. ಮಗುವಿನ ಕಾರಣದಿಂದ ತಾಯಿಗೆ ತೊಂದರೆಯಾಗಬಾರದು ಮತ್ತು ಮಗುವಿನ ಕಾರಣದಿಂದ ತಂದೆಗೂ ತೊಂದರೆಯಾಗಬಾರದು. ವಾರಿಸುದಾರರಿಗೂ ಇದೇ ರೀತಿಯ ಕರ್ತವ್ಯಗಳಿವೆ. ಅವರಿಬ್ಬರು ಸಂತೃಪ್ತಿಯಿಂದ ಮತ್ತು ಸಮಾಲೋಚನೆಯಿಂದ ಮಗುವಿನ ಸ್ತನಪಾನವನ್ನು ನಿಲ್ಲಿಸಲು ಬಯಸಿದರೆ ಅವರಿಬ್ಬರ ಮೇಲೂ ದೋಷವಿಲ್ಲ. ನಿಮ್ಮ ಮಕ್ಕಳಿಗೆ ಬೇರೊಬ್ಬರಿಂದ ಸ್ತನಪಾನ ಮಾಡಿಸಲು ನೀವು ಬಯಸುವುದಾದರೆ, ಅದರಲ್ಲೂ ನಿಮಗೆ ದೋಷವಿಲ್ಲ—ಸ್ವೀಕಾರಾರ್ಹ ರೀತಿಯಲ್ಲಿ ಅವರಿಗೆ ಅವರ ವೇತನವನ್ನು ಕೊಡುವುದಾದರೆ. ಅಲ್ಲಾಹನನ್ನು ಭಯಪಡಿರಿ. ತಿಳಿಯಿರಿ! ನೀವು ಮಾಡುವ ಕರ್ಮಗಳನ್ನು ಅಲ್ಲಾಹು ನೋಡುತ್ತಿದ್ದಾನೆ.

2:234

وَٱلَّذِينَ يُتَوَفَّوۡنَ مِنكُمۡ وَيَذَرُونَ أَزۡوَٰجٗا يَتَرَبَّصۡنَ بِأَنفُسِهِنَّ أَرۡبَعَةَ أَشۡهُرٖ وَعَشۡرٗاۖ فَإِذَا بَلَغۡنَ أَجَلَهُنَّ فَلَا جُنَاحَ عَلَيۡكُمۡ فِيمَا فَعَلۡنَ فِيٓ أَنفُسِهِنَّ بِٱلۡمَعۡرُوفِۗ وَٱللَّهُ بِمَا تَعۡمَلُونَ خَبِيرٞ ﴿234﴾

Transliteration: Waallatheena yutawaffawna minkum wayatharoona azwajan yatarabbasna bianfusihinna arbaAAata ashhurin waAAashran faitha balaghna ajalahunna fala junaha AAalaykum feema faAAalna fee anfusihinna bialmaAAroofi waAllahu bima taAAmaloona khabeerun

Translation: ನಿಮ್ಮಲ್ಲಿ ಯಾರಾದರೂ ತಮ್ಮ ಪತ್ನಿಯರನ್ನು ಬಿಟ್ಟು ನಿಧನರಾದರೆ, ಅವರು (ಪತ್ನಿಯರು) ಸ್ವಯಂ ನಾಲ್ಕು ತಿಂಗಳು ಮತ್ತು ಹತ್ತು ದಿನ ದೀಕ್ಷಾಕಾಲ (ಇದ್ದ) ಆಚರಿಸಬೇಕು. ನಂತರ ಅವರ (ದೀಕ್ಷಾಕಾಲದ) ಅವಧಿ ಪೂರ್ಣವಾದರೆ, ಸ್ವೀಕಾರಾರ್ಹ ರೀತಿಯಲ್ಲಿ ಅವರೇನು ಮಾಡುತ್ತಾರೋ ಅದರಲ್ಲಿ ನಿಮಗೆ ದೋಷವಿಲ್ಲ. ನೀವು ಮಾಡುವ ಕರ್ಮಗಳನ್ನು ಅಲ್ಲಾಹು ಸೂಕ್ಷ್ಮವಾಗಿ ತಿಳಿಯುತ್ತಿದ್ದಾನೆ.

2:235

وَلَا جُنَاحَ عَلَيۡكُمۡ فِيمَا عَرَّضۡتُم بِهِۦ مِنۡ خِطۡبَةِ ٱلنِّسَآءِ أَوۡ أَكۡنَنتُمۡ فِيٓ أَنفُسِكُمۡۚ عَلِمَ ٱللَّهُ أَنَّكُمۡ سَتَذۡكُرُونَهُنَّ وَلَٰكِن لَّا تُوَاعِدُوهُنَّ سِرًّا إِلَّآ أَن تَقُولُواْ قَوۡلٗا مَّعۡرُوفٗاۚ وَلَا تَعۡزِمُواْ عُقۡدَةَ ٱلنِّكَاحِ حَتَّىٰ يَبۡلُغَ ٱلۡكِتَٰبُ أَجَلَهُۥۚ وَٱعۡلَمُوٓاْ أَنَّ ٱللَّهَ يَعۡلَمُ مَا فِيٓ أَنفُسِكُمۡ فَٱحۡذَرُوهُۚ وَٱعۡلَمُوٓاْ أَنَّ ٱللَّهَ غَفُورٌ حَلِيمٞ ﴿235﴾

Transliteration: Wala junaha AAalaykum feema AAarradtum bihi min khitbati alnnisai aw aknantum fee anfusikum AAalima Allahu annakum satathkuroonahunna walakin la tuwaAAidoohunna sirran illa an taqooloo qawlan maAAroofan wala taAAzimoo AAuqdata alnnikahi hatta yablugha alkitabu ajalahu waiAAlamoo anna Allaha yaAAlamu ma fee anfusikum faihtharoohu waiAAlamoo anna Allaha ghafoorun haleemun

Translation: ನೀವು ಆ ಮಹಿಳೆಯರನ್ನು ವಿವಾಹವಾಗಲು ಬಯಸುತ್ತೀರೆಂದು ಸೂಚ್ಯವಾಗಿ ತಿಳಿಸಿದರೆ ಅಥವಾ ಅದನ್ನು ಮನಸ್ಸಿನೊಳಗೆ ಬಚ್ಚಿಟ್ಟರೆ ಅದರಲ್ಲಿ ನಿಮಗೇನೂ ದೋಷವಿಲ್ಲ.[1] ನೀವು ಅವರ ಬಗ್ಗೆ ಯೋಚಿಸುತ್ತೀರೆಂದು ಅಲ್ಲಾಹನಿಗೆ ತಿಳಿದಿದೆ. ಆದರೆ ರಹಸ್ಯವಾಗಿ ಅವರಿಗೆ ಯಾವುದೇ ಭರವಸೆ ನೀಡಬೇಡಿ. ನೀವು ಅವರೊಡನೆ ಉತ್ತಮ ಮಾತುಗಳನ್ನಾಡಬಹುದು. ಅವರ (ದೀಕ್ಷಾಕಾಲದ) ಅವಧಿ ಪೂರ್ಣವಾಗುವ ತನಕ ವಿವಾಹ ಕರಾರು ಮಾಡಿಕೊಳ್ಳಲು ದೃಢನಿರ್ಧಾರ ತೆಗೆದುಕೊಳ್ಳಬೇಡಿ. ತಿಳಿಯಿರಿ! ನಿಮ್ಮ ಮನಸ್ಸಿನಲ್ಲಿರುವುದನ್ನು ಅಲ್ಲಾಹು ತಿಳಿಯುತ್ತಾನೆ. ಆದ್ದರಿಂದ ಅವನನ್ನು ಭಯಪಡಿರಿ. ತಿಳಿಯಿರಿ! ಅಲ್ಲಾಹು ಕ್ಷಮಿಸುವವನು ಮತ್ತು ಸಹಿಷ್ಣುತೆಯುಳ್ಳವನಾಗಿದ್ದಾನೆ.

2:236

لَّا جُنَاحَ عَلَيۡكُمۡ إِن طَلَّقۡتُمُ ٱلنِّسَآءَ مَا لَمۡ تَمَسُّوهُنَّ أَوۡ تَفۡرِضُواْ لَهُنَّ فَرِيضَةٗۚ وَمَتِّعُوهُنَّ عَلَى ٱلۡمُوسِعِ قَدَرُهُۥ وَعَلَى ٱلۡمُقۡتِرِ قَدَرُهُۥ مَتَٰعَۢا بِٱلۡمَعۡرُوفِۖ حَقًّا عَلَى ٱلۡمُحۡسِنِينَ ﴿236﴾

Transliteration: La junaha AAalaykum in tallaqtumu alnnisaa ma lam tamassoohunna aw tafridoo lahunna fareedatan wamattiAAoohunna AAala almoosiAAi qadaruhu waAAala almuqtiri qadaruhu mataAAan bialmaAAroofi haqqan AAala almuhsineena

Translation: ನೀವು ನಿಮ್ಮ ಪತ್ನಿಯರನ್ನು ಸೇರುವುದಕ್ಕೆ ಮೊದಲು ಅಥವಾ ಅವರಿಗೆ ವಧುದಕ್ಷಿಣೆಯನ್ನು ನಿಶ್ಚಯಿಸುವುದಕ್ಕೆ ಮೊದಲು ವಿಚ್ಛೇದನ ನೀಡಿದರೆ, ಅದರಲ್ಲಿ ನಿಮಗೇನೂ ದೋಷವಿಲ್ಲ. ಆದರೆ ಅವರಿಗೆ ಏನಾದರೂ ಪರಿಹಾರವನ್ನು ನೀಡಿರಿ. ಶ್ರೀಮಂತನು ತನ್ನ ಶಕ್ತಿಗೆ ಅನುಗುಣವಾಗಿ ಮತ್ತು ಬಡವನು ತನ್ನ ಶಕ್ತಿಗೆ ಅನುಗುಣವಾಗಿ ಸ್ವೀಕಾರಾರ್ಹ ರೀತಿಯಲ್ಲಿ ಏನಾದರೂ ನೀಡಲಿ. ಇದು ಒಳಿತು ಮಾಡುವವರ ಕರ್ತವ್ಯವಾಗಿದೆ.

2:237

وَإِن طَلَّقۡتُمُوهُنَّ مِن قَبۡلِ أَن تَمَسُّوهُنَّ وَقَدۡ فَرَضۡتُمۡ لَهُنَّ فَرِيضَةٗ فَنِصۡفُ مَا فَرَضۡتُمۡ إِلَّآ أَن يَعۡفُونَ أَوۡ يَعۡفُوَاْ ٱلَّذِي بِيَدِهِۦ عُقۡدَةُ ٱلنِّكَاحِۚ وَأَن تَعۡفُوٓاْ أَقۡرَبُ لِلتَّقۡوَىٰۚ وَلَا تَنسَوُاْ ٱلۡفَضۡلَ بَيۡنَكُمۡۚ إِنَّ ٱللَّهَ بِمَا تَعۡمَلُونَ بَصِيرٌ ﴿237﴾

Transliteration: Wain tallaqtumoohunna min qabli an tamassoohunna waqad faradtum lahunna fareedatan fanisfu ma faradtum illa an yaAAfoona aw yaAAfuwa allathee biyadihi AAuqdatu alnnikahi waan taAAfoo aqrabu lilttaqwa wala tansawoo alfadla baynakum inna Allaha bima taAAmaloona baseerun

Translation: ನೀವು ನಿಮ್ಮ ಪತ್ನಿಯರನ್ನು ಸೇರುವುದಕ್ಕೆ ಮೊದಲು ಅವರಿಗೆ ವಿಚ್ಛೇದನ ನೀಡಿದರೆ, ಮತ್ತು ಈಗಾಗಲೇ ನೀವು ಅವರಿಗೆ ವಧುದಕ್ಷಿಣೆಯನ್ನು ನಿಶ್ಚಯಿಸಿದ್ದರೆ, ನಿಶ್ಚಯಿಸಿದ ವಧುದಕ್ಷಿಣೆಯ ಅರ್ಧವನ್ನು ಅವರಿಗೆ ಕೊಟ್ಟುಬಿಡಿ. ಆದರೆ, ಅವರು ಮಾಫಿ ಮಾಡಿದರೆ ಹೊರತು.[1] ಅಥವಾ ವಿವಾಹ ಕರಾರು ಯಾರ ಕೈಯಲ್ಲಿದೆಯೋ ಅವನು ಮಾಫಿ ಮಾಡಿದರೆ ಹೊರತು.[2] ನೀವು ಮಾಫಿ ಮಾಡುವುದು ದೇವಭಯಕ್ಕೆ ಹೆಚ್ಚು ನಿಕಟವಾಗಿದೆ. ನೀವು ನಿಮ್ಮ ನಡುವಿನ ಸೌಜನ್ಯವನ್ನು ಮರೆಯಬೇಡಿ. ನಿಶ್ಚಯವಾಗಿಯೂ ಅಲ್ಲಾಹು ನೀವು ಮಾಡುತ್ತಿರುವ ಕರ್ಮಗಳನ್ನು ನೋಡುತ್ತಿದ್ದಾನೆ.

2:238

حَٰفِظُواْ عَلَى ٱلصَّلَوَٰتِ وَٱلصَّلَوٰةِ ٱلۡوُسۡطَىٰ وَقُومُواْ لِلَّهِ قَٰنِتِينَ ﴿238﴾

Transliteration: Hafithoo AAala alssalawati waalssalati alwusta waqoomoo lillahi qaniteena

Translation: ನಮಾಝ್‌ಗಳನ್ನು ಸಂರಕ್ಷಣೆ ಮಾಡಿರಿ. ವಿಶೇಷವಾಗಿ ಮಧ್ಯಮ (ಅಸರ್) ನಮಾಝನ್ನು. ಅಲ್ಲಾಹನ ಮುಂದೆ ವಿಧೇಯತೆಯಿಂದ ನಿಲ್ಲಿರಿ.

2:239

فَإِنۡ خِفۡتُمۡ فَرِجَالًا أَوۡ رُكۡبَانٗاۖ فَإِذَآ أَمِنتُمۡ فَٱذۡكُرُواْ ٱللَّهَ كَمَا عَلَّمَكُم مَّا لَمۡ تَكُونُواْ تَعۡلَمُونَ ﴿239﴾

Transliteration: Fain khiftum farijalan aw rukbanan faitha amintum faothkuroo Allaha kama AAallamakum ma lam takoonoo taAAlamoona

Translation: ನಿಮಗೆ ಭಯವಿದ್ದರೆ ನಡೆಯುತ್ತಾ ಅಥವಾ ಸವಾರಿ ಮಾಡುತ್ತಾ (ನಮಾಝ್ ನಿರ್ವಹಿಸಿರಿ). ನೀವು ಭಯಮುಕ್ತರಾದರೆ ನಿಮಗೆ ತಿಳಿಯದಿರುವುದನ್ನು ಅಲ್ಲಾಹು ನಿಮಗೆ ಕಲಿಸಿಕೊಟ್ಟಂತೆ ಅವನನ್ನು ಸ್ಮರಿಸಿರಿ.

2:240

وَٱلَّذِينَ يُتَوَفَّوۡنَ مِنكُمۡ وَيَذَرُونَ أَزۡوَٰجٗا وَصِيَّةٗ لِّأَزۡوَٰجِهِم مَّتَٰعًا إِلَى ٱلۡحَوۡلِ غَيۡرَ إِخۡرَاجٖۚ فَإِنۡ خَرَجۡنَ فَلَا جُنَاحَ عَلَيۡكُمۡ فِي مَا فَعَلۡنَ فِيٓ أَنفُسِهِنَّ مِن مَّعۡرُوفٖۗ وَٱللَّهُ عَزِيزٌ حَكِيمٞ ﴿240﴾

Transliteration: Waallatheena yutawaffawna minkum wayatharoona azwajan wasiyyatan liazwajihim mataAAan ila alhawli ghayra ikhrajin fain kharajna fala junaha AAalaykum fee ma faAAalna fee anfusihinna min maAAroofin waAllahu AAazeezun hakeemun

Translation: ನಿಮ್ಮಲ್ಲಿ ಯಾರಾದರೂ ತಮ್ಮ ಪತ್ನಿಯರನ್ನು ಬಿಟ್ಟು ನಿಧನರಾದರೆ, ಪತ್ನಿಯರನ್ನು ಒಂದು ವರ್ಷದ ತನಕ ಹೊರ ಕಳುಹಿಸದೆ ಅವರನ್ನು ನೋಡಿಕೊಳ್ಳಲು ಉಯಿಲು ಮಾಡಬೇಕು. ಅವರೇನಾದರೂ (ಸ್ವಯಂ) ಹೊರಟುಹೋದರೆ, ಸ್ವೀಕಾರಾರ್ಹ ರೀತಿಯಲ್ಲಿ ಅವರೇನು ಮಾಡುತ್ತಾರೋ ಅದರಲ್ಲಿ ನಿಮಗೆ ದೋಷವಿಲ್ಲ. ಅಲ್ಲಾಹು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ.

2:241

وَلِلۡمُطَلَّقَٰتِ مَتَٰعُۢ بِٱلۡمَعۡرُوفِۖ حَقًّا عَلَى ٱلۡمُتَّقِينَ ﴿241﴾

Transliteration: Walilmutallaqati mataAAun bialmaAAroofi haqqan AAala almuttaqeena

Translation: ವಿಚ್ಛೇದಿತ ಮಹಿಳೆಯರಿಗೆ ಸ್ವೀಕಾರಾರ್ಹ ರೀತಿಯಲ್ಲಿ ಏನಾದರೂ ಪರಿಹಾರವನ್ನು ಕೊಡಬೇಕಾಗಿದೆ. ಇದು ದೇವಭಯವುಳ್ಳವರ ಕರ್ತವ್ಯವಾಗಿದೆ.

2:242

كَذَٰلِكَ يُبَيِّنُ ٱللَّهُ لَكُمۡ ءَايَٰتِهِۦ لَعَلَّكُمۡ تَعۡقِلُونَ ﴿242﴾

Transliteration: Kathalika yubayyinu Allahu lakum ayatihi laAAallakum taAAqiloona

Translation: ಈ ರೀತಿ ಅಲ್ಲಾಹು ತನ್ನ ನಿಯಮಗಳನ್ನು ನಿಮಗೆ ಸ್ಪಷ್ಟವಾಗಿ ವಿವರಿಸಿಕೊಡುತ್ತಾನೆ. ನೀವು ಅರ್ಥಮಾಡಿಕೊಳ್ಳುವುದಕ್ಕಾಗಿ.

2:243

أَلَمۡ تَرَ إِلَى ٱلَّذِينَ خَرَجُواْ مِن دِيَٰرِهِمۡ وَهُمۡ أُلُوفٌ حَذَرَ ٱلۡمَوۡتِ فَقَالَ لَهُمُ ٱللَّهُ مُوتُواْ ثُمَّ أَحۡيَٰهُمۡۚ إِنَّ ٱللَّهَ لَذُو فَضۡلٍ عَلَى ٱلنَّاسِ وَلَٰكِنَّ أَكۡثَرَ ٱلنَّاسِ لَا يَشۡكُرُونَ ﴿243﴾

Transliteration: Alam tara ila allatheena kharajoo min diyarihim wahum oloofun hathara almawti faqala lahumu Allahu mootoo thumma ahyahum inna Allaha lathoo fadlin AAala alnnasi walakinna akthara alnnasi la yashkuroona

Translation: ಸಹಸ್ರಾರು ಸಂಖ್ಯೆಯ ಜನರು ಸಾವಿನ ಭಯದಿಂದ ತಮ್ಮ ಮನೆಗಳನ್ನು ಬಿಟ್ಟು ಓಡಿದ್ದನ್ನು ನೀವು ನೋಡಿಲ್ಲವೇ?[1] ಆಗ ಅಲ್ಲಾಹು ಅವರೊಡನೆ, "ಸಾಯಿರಿ" ಎಂದು ಹೇಳಿದನು. ನಂತರ ಅವನು ಅವರಿಗೆ ಜೀವ ನೀಡಿದನು. ನಿಶ್ಚಯವಾಗಿಯೂ ಅಲ್ಲಾಹನಿಗೆ ಜನರ ಮೇಲೆ ಬಹಳ ಔದಾರ್ಯವಿದೆ. ಆದರೆ ಜನರಲ್ಲಿ ಹೆಚ್ಚಿನವರು ಕೃತಜ್ಞರಾಗುವುದಿಲ್ಲ.

2:244

وَقَٰتِلُواْ فِي سَبِيلِ ٱللَّهِ وَٱعۡلَمُوٓاْ أَنَّ ٱللَّهَ سَمِيعٌ عَلِيمٞ ﴿244﴾

Transliteration: Waqatiloo fee sabeeli Allahi waiAAlamoo anna Allaha sameeAAun AAaleemun

Translation: ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡಿರಿ. ತಿಳಿಯಿರಿ! ನಿಶ್ಚಯವಾಗಿಯೂ ಅಲ್ಲಾಹು ಎಲ್ಲವನ್ನೂ ಕೇಳುವವನು ಮತ್ತು ತಿಳಿದವನಾಗಿದ್ದಾನೆ.

2:245

مَّن ذَا ٱلَّذِي يُقۡرِضُ ٱللَّهَ قَرۡضًا حَسَنٗا فَيُضَٰعِفَهُۥ لَهُۥٓ أَضۡعَافٗا كَثِيرَةٗۚ وَٱللَّهُ يَقۡبِضُ وَيَبۡصُۜطُ وَإِلَيۡهِ تُرۡجَعُونَ ﴿245﴾

Transliteration: Man tha allathee yuqridu Allaha qardan hasanan fayudaAAifahu lahu adAAafan katheeratan waAllahu yaqbidu wayabsutu wailayhi turjaAAoona

Translation: ಅಲ್ಲಾಹನಿಗೆ ಒಳ್ಳೆಯ ಸಾಲವನ್ನು ಕೊಡುವವರು ಯಾರು?[1] ಹಾಗಾದರೆ, ಅಲ್ಲಾಹು ಅವನಿಗೆ ಅದನ್ನು ಹಲವಾರು ಪಟ್ಟು ಹೆಚ್ಚಿಸಿಕೊಡುವನು. ಅಲ್ಲಾಹನೇ ಇಕ್ಕಟ್ಟು ಮತ್ತು ವಿಶಾಲತೆಯನ್ನು ನೀಡುವವನು. ನಿಮ್ಮನ್ನು ಅವನ ಬಳಿಗೇ ಮರಳಿಸಲಾಗುತ್ತದೆ.

2:246

أَلَمۡ تَرَ إِلَى ٱلۡمَلَإِ مِنۢ بَنِيٓ إِسۡرَـٰٓءِيلَ مِنۢ بَعۡدِ مُوسَىٰٓ إِذۡ قَالُواْ لِنَبِيّٖ لَّهُمُ ٱبۡعَثۡ لَنَا مَلِكٗا نُّقَٰتِلۡ فِي سَبِيلِ ٱللَّهِۖ قَالَ هَلۡ عَسَيۡتُمۡ إِن كُتِبَ عَلَيۡكُمُ ٱلۡقِتَالُ أَلَّا تُقَٰتِلُواْۖ قَالُواْ وَمَا لَنَآ أَلَّا نُقَٰتِلَ فِي سَبِيلِ ٱللَّهِ وَقَدۡ أُخۡرِجۡنَا مِن دِيَٰرِنَا وَأَبۡنَآئِنَاۖ فَلَمَّا كُتِبَ عَلَيۡهِمُ ٱلۡقِتَالُ تَوَلَّوۡاْ إِلَّا قَلِيلٗا مِّنۡهُمۡۚ وَٱللَّهُ عَلِيمُۢ بِٱلظَّـٰلِمِينَ ﴿246﴾

Transliteration: Alam tara ila almalai min banee israeela min baAAdi moosa ith qaloo linabiyyin lahumu ibAAath lana malikan nuqatil fee sabeeli Allahi qala hal AAasaytum in kutiba AAalaykumu alqitalu alla tuqatiloo qaloo wama lana alla nuqatila fee sabeeli Allahi waqad okhrijna min diyarina waabnaina falamma kutiba AAalayhimu alqitalu tawallaw illa qaleelan minhum waAllahu AAaleemun bialththalimeena

Translation: ಮೂಸಾರ ಕಾಲಾನಂತರ ಇಸ್ರಾಯೇಲ್ ಮಕ್ಕಳಲ್ಲಿ ಸೇರಿದ ಕೆಲವು ಮುಖಂಡರನ್ನು ನೀವು ನೋಡಿಲ್ಲವೇ? ಅವರು ತಮ್ಮ ಪ್ರವಾದಿಯೊಂದಿಗೆ, "ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡಲು ನಮಗೆ ಒಬ್ಬ ರಾಜನನ್ನು ನೇಮಿಸಿಕೊಡಿ" ಎಂದು ಹೇಳಿದ ಸಂದರ್ಭ. ಅವರು (ಪ್ರವಾದಿ) ಹೇಳಿದರು: "ನಿಮ್ಮ ಮೇಲೆ ಯುದ್ಧವು ಕಡ್ಡಾಯವಾದ ನಂತರ ನೀವೇನಾದರೂ ಯುದ್ಧ ಮಾಡದವರಾಗಿ ಬಿಟ್ಟರೆ?" ಅವರು ಹೇಳಿದರು: "ನಮ್ಮನ್ನು ನಮ್ಮ ಮನೆಗಳಿಂದ ಓಡಿಸಲಾಗಿರುವ ಮತ್ತು ನಮ್ಮಿಂದ ನಮ್ಮ ಮಕ್ಕಳನ್ನು ಬೇರ್ಪಡಿಸಲಾಗಿರುವ ಈ ಸ್ಥಿತಿಯಲ್ಲಿ ನಾವು ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡದಿರಲು ಸಾಧ್ಯವೇ?" ಆದರೆ ಅವರ ಮೇಲೆ ಯುದ್ಧವು ಕಡ್ಡಾಯವಾದಾಗ ಅವರಲ್ಲಿ ಕೆಲವರ ಹೊರತು ಉಳಿದವರೆಲ್ಲರೂ ಮುಖ ತಿರುಗಿಸಿ ನಡೆದರು. ಅಲ್ಲಾಹನಿಗೆ ಅಕ್ರಮಿಗಳ ಬಗ್ಗೆ ಬಹಳ ಚೆನ್ನಾಗಿ ತಿಳಿದಿದೆ.

2:247

وَقَالَ لَهُمۡ نَبِيُّهُمۡ إِنَّ ٱللَّهَ قَدۡ بَعَثَ لَكُمۡ طَالُوتَ مَلِكٗاۚ قَالُوٓاْ أَنَّىٰ يَكُونُ لَهُ ٱلۡمُلۡكُ عَلَيۡنَا وَنَحۡنُ أَحَقُّ بِٱلۡمُلۡكِ مِنۡهُ وَلَمۡ يُؤۡتَ سَعَةٗ مِّنَ ٱلۡمَالِۚ قَالَ إِنَّ ٱللَّهَ ٱصۡطَفَىٰهُ عَلَيۡكُمۡ وَزَادَهُۥ بَسۡطَةٗ فِي ٱلۡعِلۡمِ وَٱلۡجِسۡمِۖ وَٱللَّهُ يُؤۡتِي مُلۡكَهُۥ مَن يَشَآءُۚ وَٱللَّهُ وَٰسِعٌ عَلِيمٞ ﴿247﴾

Transliteration: Waqala lahum nabiyyuhum inna Allaha qad baAAatha lakum taloota malikan qaloo anna yakoonu lahu almulku AAalayna wanahnu ahaqqu bialmulki minhu walam yuta saAAatan mina almali qala inna Allaha istafahu AAalaykum wazadahu bastatan fee alAAilmi waaljismi waAllahu yutee mulkahu man yashao waAllahu wasiAAun AAaleemun

Translation: ಅವರೊಡನೆ ಅವರ ಪ್ರವಾದಿ ಹೇಳಿದರು: "ಅಲ್ಲಾಹು ನಿಮಗೆ ತಾಲೂತ‌ರನ್ನು (ಸೌಲ್) ರಾಜನಾಗಿ ನೇಮಿಸಿದ್ದಾನೆ." ಅವರು ಹೇಳಿದರು: "ಅವರು ನಮಗೆ ರಾಜನಾಗಲು ಹೇಗೆ ಸಾಧ್ಯ? ರಾಜ ಪದವಿಗೆ ಅವರಿಗಿಂತಲೂ ಹೆಚ್ಚು ಅರ್ಹತೆ ನಮಗಿದೆ. ಅವರಿಗೆ ಹೇರಳ ಆಸ್ತಿಪಾಸ್ತಿಯನ್ನೂ ನೀಡಲಾಗಿಲ್ಲ." ಅವರು (ಪ್ರವಾದಿ) ಹೇಳಿದರು: "ಅಲ್ಲಾಹು ನಿಮಗಿಂತ ಅವರನ್ನೇ ಆಯ್ಕೆ ಮಾಡಿದ್ದಾನೆ ಮತ್ತು ಅವರಿಗೆ ಬೌದ್ಧಿಕ ಹಾಗೂ ದೈಹಿಕ ಶ್ರೇಷ್ಠತೆಯನ್ನು ನೀಡಿದ್ದಾನೆ. ಅಲ್ಲಾಹು ಅವನು ಇಚ್ಛಿಸುವವರಿಗೆ ಅವನ ರಾಜ ಪದವಿ ನೀಡುತ್ತಾನೆ. ಅಲ್ಲಾಹು ವಿಶಾಲನು ಮತ್ತು ಸರ್ವಜ್ಞನಾಗಿದ್ದಾನೆ.”

2:248

وَقَالَ لَهُمۡ نَبِيُّهُمۡ إِنَّ ءَايَةَ مُلۡكِهِۦٓ أَن يَأۡتِيَكُمُ ٱلتَّابُوتُ فِيهِ سَكِينَةٞ مِّن رَّبِّكُمۡ وَبَقِيَّةٞ مِّمَّا تَرَكَ ءَالُ مُوسَىٰ وَءَالُ هَٰرُونَ تَحۡمِلُهُ ٱلۡمَلَـٰٓئِكَةُۚ إِنَّ فِي ذَٰلِكَ لَأٓيَةٗ لَّكُمۡ إِن كُنتُم مُّؤۡمِنِينَ ﴿248﴾

Transliteration: Waqala lahum nabiyyuhum inna ayata mulkihi an yatiyakumu alttabootu feehi sakeenatun min rabbikum wabaqiyyatun mimma taraka alu moosa waalu haroona tahmiluhu almalaikatu inna fee thalika laayatan lakum in kuntum mumineena

Translation: ಅವರೊಡನೆ ಅವರ ಪ್ರವಾದಿ ಹೇಳಿದರು: "ಆ ಪೆಟ್ಟಿಗೆ ನಿಮ್ಮ ಬಳಿಗೆ ಬರುವುದು ಅವರ ರಾಜ ಪದವಿಯ ಸಂಕೇತವಾಗಿದೆ. ಅದರಲ್ಲಿ ನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಯ ಮನಃಶಾಂತಿ ಮತ್ತು ಮೂಸಾ ಹಾಗೂ ಹಾರೂನರ ಕುಟುಂಬಗಳು ಬಿಟ್ಟು ಹೋದ ಅವಶೇಷಗಳಿವೆ. ಅದನ್ನು ದೇವದೂತರು ವಹಿಸಿಕೊಂಡು ಬರುತ್ತಾರೆ. ನೀವು ಸತ್ಯವಿಶ್ವಾಸಿಗಳಾಗಿದ್ದರೆ ನಿಶ್ಚಯವಾಗಿಯೂ ನಿಮಗೆ ಅದರಲ್ಲಿ ಸ್ಪಷ್ಟ ದೃಷ್ಟಾಂತವಿದೆ."

2:249

فَلَمَّا فَصَلَ طَالُوتُ بِٱلۡجُنُودِ قَالَ إِنَّ ٱللَّهَ مُبۡتَلِيكُم بِنَهَرٖ فَمَن شَرِبَ مِنۡهُ فَلَيۡسَ مِنِّي وَمَن لَّمۡ يَطۡعَمۡهُ فَإِنَّهُۥ مِنِّيٓ إِلَّا مَنِ ٱغۡتَرَفَ غُرۡفَةَۢ بِيَدِهِۦۚ فَشَرِبُواْ مِنۡهُ إِلَّا قَلِيلٗا مِّنۡهُمۡۚ فَلَمَّا جَاوَزَهُۥ هُوَ وَٱلَّذِينَ ءَامَنُواْ مَعَهُۥ قَالُواْ لَا طَاقَةَ لَنَا ٱلۡيَوۡمَ بِجَالُوتَ وَجُنُودِهِۦۚ قَالَ ٱلَّذِينَ يَظُنُّونَ أَنَّهُم مُّلَٰقُواْ ٱللَّهِ كَم مِّن فِئَةٖ قَلِيلَةٍ غَلَبَتۡ فِئَةٗ كَثِيرَةَۢ بِإِذۡنِ ٱللَّهِۗ وَٱللَّهُ مَعَ ٱلصَّـٰبِرِينَ ﴿249﴾

Transliteration: Falamma fasala talootu bialjunoodi qala inna Allaha mubtaleekum binaharin faman shariba minhu falaysa minnee waman lam yatAAamhu fainnahu minnee illa mani ightarafa ghurfatan biyadihi fashariboo minhu illa qaleelan minhum falamma jawazahu huwa waallatheena amanoo maAAahu qaloo la taqata lana alyawma bijaloota wajunoodihi qala allatheena yathunnoona annahum mulaqoo Allahi kam min fiatin qaleelatin ghalabat fiatan katheeratan biithni Allahi waAllahu maAAa alssabireena

Translation: ನಂತರ ತಾಲೂತ್ (ಸೌಲ್) ಸೈನ್ಯದೊಂದಿಗೆ ಹೊರಟಾಗ ಹೇಳಿದರು: "ನಿಶ್ಚಯವಾಗಿಯೂ ಅಲ್ಲಾಹು ಒಂದು ನದಿಯ ಮೂಲಕ ನಿಮ್ಮನ್ನು ಪರೀಕ್ಷಿಸುವನು. ಯಾರು ಅದರ ನೀರನ್ನು ಕುಡಿಯುತ್ತಾನೋ ಅವನು ನನ್ನವನಲ್ಲ. ಯಾರು ಅದರ ರುಚಿ ನೋಡುವುದಿಲ್ಲವೋ ಅವನು ನನ್ನವನು; ಆದರೆ ತನ್ನ ಕೈಯಿಂದ ಒಂದು ಬೊಗಸೆ ಮಾತ್ರ ತೆಗೆದುಕೊಂಡವನ ಹೊರತು." ಆದರೆ ಅವರಲ್ಲಿ ಕೆಲವರ ಹೊರತು ಉಳಿದವರೆಲ್ಲರೂ ಅದರ ನೀರನ್ನು ಕುಡಿದರು. ನಂತರ ತಾಲೂತ್ ಮತ್ತು ಅವರ ಜೊತೆಗಿರುವ ಸತ್ಯವಿಶ್ವಾಸಿಗಳು ಆ ನದಿಯನ್ನು ದಾಟಿದಾಗ ಅವರು ಹೇಳಿದರು: "ಇಂದು ನಮಗೆ ಜಾಲೂತ್ (ಗೋಲಿಯತ್) ಮತ್ತು ಅವನ ಸೈನ್ಯದೊಡನೆ ಹೋರಾಡುವ ಶಕ್ತಿಯಿಲ್ಲ." ಆದರೆ ನಾವು ಅಲ್ಲಾಹನನ್ನು ಭೇಟಿಯಾಗಲಿದ್ದೇವೆ ಎಂಬ ದೃಢವಿಶ್ವಾಸವಿದ್ದವರು ಹೇಳಿದರು: "ಎಷ್ಟೆಷ್ಟು ಚಿಕ್ಕ ಸೈನ್ಯಗಳು ಅಲ್ಲಾಹನ ಅಪ್ಪಣೆಯೊಂದಿಗೆ ಎಷ್ಟೆಷ್ಟು ದೊಡ್ಡ ಸೈನ್ಯಗಳನ್ನು ಸೋಲಿಸಿವೆ! ಅಲ್ಲಾಹು ತಾಳ್ಮೆಯುಳ್ಳವರ ಜೊತೆಗಿದ್ದಾನೆ."

2:250

وَلَمَّا بَرَزُواْ لِجَالُوتَ وَجُنُودِهِۦ قَالُواْ رَبَّنَآ أَفۡرِغۡ عَلَيۡنَا صَبۡرٗا وَثَبِّتۡ أَقۡدَامَنَا وَٱنصُرۡنَا عَلَى ٱلۡقَوۡمِ ٱلۡكَٰفِرِينَ ﴿250﴾

Transliteration: Walamma barazoo lijaloota wajunoodihi qaloo rabbana afrigh AAalayna sabran wathabbit aqdamana waonsurna AAala alqawmi alkafireena

Translation: ನಂತರ ಜಾಲೂತ್ (ಗೋಲಿಯತ್) ಮತ್ತು ಅವನ ಸೈನ್ಯಕ್ಕೆ ಮುಖಾಮುಖಿಯಾಗಿ ನಿಂತಾಗ ಅವರು ಹೀಗೆ ಪ್ರಾರ್ಥಿಸಿದರು: "ಓ ನಮ್ಮ ಪರಿಪಾಲಕನೇ! ನಮಗೆ ಸ್ಥೈರ್ಯವನ್ನು ದಯಪಾಲಿಸು, ನಮ್ಮ ಪಾದಗಳನ್ನು ದೃಢವಾಗಿ ನಿಲ್ಲಿಸು ಮತ್ತು ಸತ್ಯನಿಷೇಧಿಗಳಾದ ಜನರ ವಿರುದ್ಧ ನಮಗೆ ಸಹಾಯ ಮಾಡು."

2:251

فَهَزَمُوهُم بِإِذۡنِ ٱللَّهِ وَقَتَلَ دَاوُۥدُ جَالُوتَ وَءَاتَىٰهُ ٱللَّهُ ٱلۡمُلۡكَ وَٱلۡحِكۡمَةَ وَعَلَّمَهُۥ مِمَّا يَشَآءُۗ وَلَوۡلَا دَفۡعُ ٱللَّهِ ٱلنَّاسَ بَعۡضَهُم بِبَعۡضٖ لَّفَسَدَتِ ٱلۡأَرۡضُ وَلَٰكِنَّ ٱللَّهَ ذُو فَضۡلٍ عَلَى ٱلۡعَٰلَمِينَ ﴿251﴾

Transliteration: Fahazamoohum biithni Allahi waqatala dawoodu jaloota waatahu Allahu almulka waalhikmata waAAallamahu mimma yashao walawla dafAAu Allahi alnnasa baAAdahum bibaAAdin lafasadati alardu walakinna Allaha thoo fadlin AAala alAAalameena

Translation: ನಂತರ ಅಲ್ಲಾಹನ ಅಪ್ಪಣೆಯಿಂದ ಅವರು ಅವರನ್ನು (ವೈರಿಗಳನ್ನು) ಸೋಲಿಸಿದರು. ದಾವೂದ್ ಜಾಲೂತನನ್ನು ಕೊಂದರು. ಅಲ್ಲಾಹು ಅವರಿಗೆ (ದಾವೂದರಿಗೆ) ಸಾಮ್ರಾಜ್ಯವನ್ನು ಮತ್ತು ವಿವೇಕವನ್ನು ದಯಪಾಲಿಸಿದನು ಹಾಗೂ ಅವನು ಇಚ್ಛಿಸಿದಷ್ಟು ವಿಷಯಗಳನ್ನು ಅವರಿಗೆ ಕಲಿಸಿಕೊಟ್ಟನು. ಅಲ್ಲಾಹು ಕೆಲವು ಜನರಿಗೆ ಇತರ ಕೆಲವರ ಮೂಲಕ ತಡೆಯೊಡ್ಡದಿರುತ್ತಿದ್ದರೆ ಭೂಲೋಕದಲ್ಲಿ ಅರಾಜಕತೆ ತಾಂಡವವಾಡುತ್ತಿತ್ತು. ಅದರೆ ಅಲ್ಲಾಹು ಸರ್ವಲೋಕದವರ ಮೇಲೆ ಬಹಳ ಔದಾರ್ಯವುಳ್ಳವನಾಗಿದ್ದಾನೆ.

2:252

تِلۡكَ ءَايَٰتُ ٱللَّهِ نَتۡلُوهَا عَلَيۡكَ بِٱلۡحَقِّۚ وَإِنَّكَ لَمِنَ ٱلۡمُرۡسَلِينَ ﴿252﴾

Transliteration: Tilka ayatu Allahi natlooha AAalayka bialhaqqi wainnaka lamina almursaleena

Translation: ಇವೆಲ್ಲವೂ ಅಲ್ಲಾಹನ ವಚನಗಳಾಗಿವೆ. ನಾವು ಇವುಗಳನ್ನು ಸತ್ಯ ಸಮೇತ ನಿಮಗೆ ಓದಿಕೊಡುತ್ತಿದ್ದೇವೆ. ನಿಶ್ಚಯವಾಗಿಯೂ ನೀವು ಸಂದೇಶವಾಹಕರಲ್ಲಿ ಒಬ್ಬರಾಗಿದ್ದೀರಿ.

2:253

تِلۡكَ ٱلرُّسُلُ فَضَّلۡنَا بَعۡضَهُمۡ عَلَىٰ بَعۡضٖۘ مِّنۡهُم مَّن كَلَّمَ ٱللَّهُۖ وَرَفَعَ بَعۡضَهُمۡ دَرَجَٰتٖۚ وَءَاتَيۡنَا عِيسَى ٱبۡنَ مَرۡيَمَ ٱلۡبَيِّنَٰتِ وَأَيَّدۡنَٰهُ بِرُوحِ ٱلۡقُدُسِۗ وَلَوۡ شَآءَ ٱللَّهُ مَا ٱقۡتَتَلَ ٱلَّذِينَ مِنۢ بَعۡدِهِم مِّنۢ بَعۡدِ مَا جَآءَتۡهُمُ ٱلۡبَيِّنَٰتُ وَلَٰكِنِ ٱخۡتَلَفُواْ فَمِنۡهُم مَّنۡ ءَامَنَ وَمِنۡهُم مَّن كَفَرَۚ وَلَوۡ شَآءَ ٱللَّهُ مَا ٱقۡتَتَلُواْ وَلَٰكِنَّ ٱللَّهَ يَفۡعَلُ مَا يُرِيدُ ﴿253﴾

Transliteration: Tilka alrrusulu faddalna baAAdahum AAala baAAdin minhum man kallama Allahu warafaAAa baAAdahum darajatin waatayna AAeesa ibna maryama albayyinati waayyadnahu biroohi alqudusi walaw shaa Allahu ma iqtatala allatheena min baAAdihim min baAAdi ma jaathumu albayyinatu walakini ikhtalafoo faminhum man amana waminhum man kafara walaw shaa Allahu ma iqtataloo walakinna Allaha yafAAalu ma yureedu

Translation: ಆ ಸಂದೇಶವಾಹಕರಲ್ಲಿ ಕೆಲವರನ್ನು ನಾವು ಇತರ ಕೆಲವರಿಗಿಂತ ಶ್ರೇಷ್ಠಗೊಳಿಸಿದ್ದೇವೆ. ಅವರಲ್ಲಿ ಅಲ್ಲಾಹು (ನೇರವಾಗಿ) ಮಾತನಾಡಿದವರಿದ್ದಾರೆ. ಅವರಲ್ಲಿ ಕೆಲವರ ಪದವಿಗಳನ್ನು ಅವನು ಎತ್ತರಿಸಿದ್ದಾನೆ. ಮರ್ಯಮರ ಮಗ ಈಸಾರಿಗೆ ನಾವು ಪವಾಡಗಳನ್ನು ನೀಡಿದ್ದೇವೆ ಮತ್ತು ಪವಿತ್ರಾತ್ಮನ ಮೂಲಕ ಅವರನ್ನು ಬೆಂಬಲಿಸಿದ್ದೇವೆ. ಅಲ್ಲಾಹು ಇಚ್ಛಿಸುತ್ತಿದ್ದರೆ ಅವರ ನಂತರದವರು ಅವರಿಗೆ ಸ್ಪಷ್ಟ ಸಾಕ್ಷ್ಯಾಧಾರಗಳು ಬಂದ ಬಳಿಕವೂ ಪರಸ್ಪರ ಹೊಡೆದಾಡುತ್ತಿರಲಿಲ್ಲ. ಆದರೆ ಅವರು ಭಿನ್ನಮತ ತಳೆದರು. ಅವರಲ್ಲಿ ಕೆಲವರು ಸತ್ಯವಿಶ್ವಾಸಿಗಳಾದರು ಮತ್ತು ಕೆಲವರು ಸತ್ಯನಿಷೇಧಿಗಳಾದರು. ಅಲ್ಲಾಹು ಇಚ್ಛಿಸುತ್ತಿದ್ದರೆ ಅವರು ಪರಸ್ಪರ ಹೊಡೆದಾಡುತ್ತಿರಲಿಲ್ಲ. ಆದರೆ ಅಲ್ಲಾಹು ಅವನು ಬಯಸುವುದನ್ನು ಮಾಡುತ್ತಾನೆ.

2:254

يَـٰٓأَيُّهَا ٱلَّذِينَ ءَامَنُوٓاْ أَنفِقُواْ مِمَّا رَزَقۡنَٰكُم مِّن قَبۡلِ أَن يَأۡتِيَ يَوۡمٞ لَّا بَيۡعٞ فِيهِ وَلَا خُلَّةٞ وَلَا شَفَٰعَةٞۗ وَٱلۡكَٰفِرُونَ هُمُ ٱلظَّـٰلِمُونَ ﴿254﴾

Transliteration: Ya ayyuha allatheena amanoo anfiqoo mimma razaqnakum min qabli an yatiya yawmun la bayAAun feehi wala khullatun wala shafaAAatun waalkafiroona humu alththalimoona

Translation: ಓ ಸತ್ಯವಿಶ್ವಾಸಿಗಳೇ! ಯಾವುದೇ ವ್ಯವಹಾರ, ಗೆಳೆತನ ಅಥವಾ ಶಿಫಾರಸು ಇಲ್ಲದ ಒಂದು ದಿನ ಬರುವುದಕ್ಕೆ ಮೊದಲೇ ನಾವು ನಿಮಗೆ ಒದಗಿಸಿದ ಧನದಿಂದ ಖರ್ಚು ಮಾಡಿರಿ. ಸತ್ಯನಿಷೇಧಿಗಳೇ ಅಕ್ರಮಿಗಳು.

2:255

ٱللَّهُ لَآ إِلَٰهَ إِلَّا هُوَ ٱلۡحَيُّ ٱلۡقَيُّومُۚ لَا تَأۡخُذُهُۥ سِنَةٞ وَلَا نَوۡمٞۚ لَّهُۥ مَا فِي ٱلسَّمَٰوَٰتِ وَمَا فِي ٱلۡأَرۡضِۗ مَن ذَا ٱلَّذِي يَشۡفَعُ عِندَهُۥٓ إِلَّا بِإِذۡنِهِۦۚ يَعۡلَمُ مَا بَيۡنَ أَيۡدِيهِمۡ وَمَا خَلۡفَهُمۡۖ وَلَا يُحِيطُونَ بِشَيۡءٖ مِّنۡ عِلۡمِهِۦٓ إِلَّا بِمَا شَآءَۚ وَسِعَ كُرۡسِيُّهُ ٱلسَّمَٰوَٰتِ وَٱلۡأَرۡضَۖ وَلَا يَـُٔودُهُۥ حِفۡظُهُمَاۚ وَهُوَ ٱلۡعَلِيُّ ٱلۡعَظِيمُ ﴿255﴾

Transliteration: Allahu la ilaha illa huwa alhayyu alqayyoomu la takhuthuhu sinatun wala nawmun lahu ma fee alssamawati wama fee alardi man tha allathee yashfaAAu AAindahu illa biithnihi yaAAlamu ma bayna aydeehim wama khalfahum wala yuheetoona bishayin min AAilmihi illa bima shaa wasiAAa kursiyyuhu alssamawati waalarda wala yaooduhu hifthuhuma wahuwa alAAaliyyu alAAatheemu

Translation: ಅಲ್ಲಾಹು! ಅವನ ಹೊರತು ಆರಾಧನೆಗೆ ಅರ್ಹರಾದ ಅನ್ಯ ದೇವರಿಲ್ಲ. ಅವನು ನಿರಂತರ ಜೀವಿಸುವವನು ಮತ್ತು ಎಲ್ಲರನ್ನೂ ಸಂರಕ್ಷಿಸಿ ನಿಯಂತ್ರಿಸುವವನಾಗಿದ್ದಾನೆ. ತೂಕಡಿಕೆ ಅಥವಾ ನಿದ್ದೆ ಅವನನ್ನು ವಶಪಡಿಸುವುದಿಲ್ಲ. ಭೂಮ್ಯಾಕಾಶಗಳಲ್ಲಿರುವ ಎಲ್ಲವೂ ಅವನಿಗೆ ಸೇರಿದ್ದು. ಅವನ ಅಪ್ಪಣೆಯಿಲ್ಲದೆ ಅವನ ಬಳಿ ಶಿಫಾರಸು ಮಾಡುವವನು ಯಾರು? ಅವರ ಮುಂದಿರುವುದನ್ನು ಮತ್ತು ಅವರ ಹಿಂದಿರುವುದನ್ನು ಅವನು ತಿಳಿಯುತ್ತಾನೆ. ಅವನ ಜ್ಞಾನದಿಂದ ಅವನು ಇಚ್ಛಿಸುವಷ್ಟನ್ನಲ್ಲದೆ (ಬೇರೇನನ್ನೂ) ತಿಳಿದುಕೊಳ್ಳಲು ಅವರಿಗೆ ಸಾಧ್ಯವಿಲ್ಲ. ಅವನ ಕುರ್ಸೀ ಭೂಮ್ಯಾಕಾಶಗಳನ್ನು ವ್ಯಾಪಿಸಿಕೊಂಡಿದೆ. ಅವುಗಳ ಸಂರಕ್ಷಣೆಯು ಅವನನ್ನು ಆಯಾಸಗೊಳಿಸುವುದಿಲ್ಲ. ಅವನು ಅತ್ಯುನ್ನತನು ಮತ್ತು ಮಹಾನನಾಗಿದ್ದಾನೆ .[1]

2:256

لَآ إِكۡرَاهَ فِي ٱلدِّينِۖ قَد تَّبَيَّنَ ٱلرُّشۡدُ مِنَ ٱلۡغَيِّۚ فَمَن يَكۡفُرۡ بِٱلطَّـٰغُوتِ وَيُؤۡمِنۢ بِٱللَّهِ فَقَدِ ٱسۡتَمۡسَكَ بِٱلۡعُرۡوَةِ ٱلۡوُثۡقَىٰ لَا ٱنفِصَامَ لَهَاۗ وَٱللَّهُ سَمِيعٌ عَلِيمٌ ﴿256﴾

Transliteration: La ikraha fee alddeeni qad tabayyana alrrushdu mina alghayyi faman yakfur bialttaghooti wayumin biAllahi faqadi istamsaka bialAAurwati alwuthqa la infisama laha waAllahu sameeAAun AAaleemun

Translation: ಧರ್ಮದ ವಿಷಯದಲ್ಲಿ ಯಾವುದೇ ಬಲಾತ್ಕಾರವಿಲ್ಲ. ಸನ್ಮಾರ್ಗವು ದುರ್ಮಾರ್ಗದಿಂದ ಸ್ಪಷ್ಟವಾಗಿ ಬೇರ್ಪಟ್ಟಿದೆ. ಆದ್ದರಿಂದ ಯಾರು ಅಲ್ಲಾಹನ ಹೊರತಾದ ದೇವರುಗಳನ್ನು ನಿಷೇಧಿಸಿ ಅಲ್ಲಾಹನಲ್ಲಿ ಮಾತ್ರ ವಿಶ್ವಾಸವಿಡುತ್ತಾನೋ ಅವನು ಅತ್ಯಂತ ಬಲಿಷ್ಠ ಹಗ್ಗವನ್ನು ಹಿಡಿದುಕೊಂಡನು. ಅದು ಎಂದಿಗೂ ಕಡಿದು ಹೋಗುವುದಿಲ್ಲ. ಅಲ್ಲಾಹು ಎಲ್ಲವನ್ನು ಕೇಳುವವನು ಮತ್ತು ತಿಳಿದವನಾಗಿದ್ದಾನೆ.

2:257

ٱللَّهُ وَلِيُّ ٱلَّذِينَ ءَامَنُواْ يُخۡرِجُهُم مِّنَ ٱلظُّلُمَٰتِ إِلَى ٱلنُّورِۖ وَٱلَّذِينَ كَفَرُوٓاْ أَوۡلِيَآؤُهُمُ ٱلطَّـٰغُوتُ يُخۡرِجُونَهُم مِّنَ ٱلنُّورِ إِلَى ٱلظُّلُمَٰتِۗ أُوْلَـٰٓئِكَ أَصۡحَٰبُ ٱلنَّارِۖ هُمۡ فِيهَا خَٰلِدُونَ ﴿257﴾

Transliteration: Allahu waliyyu allatheena amanoo yukhrijuhum mina alththulumati ila alnnoori waallatheena kafaroo awliyaohumu alttaghootu yukhrijoonahum mina alnnoori ila alththulumati olaika ashabu alnnari hum feeha khalidoona

Translation: ಅಲ್ಲಾಹು ಸತ್ಯವಿಶ್ವಾಸಿಗಳ ರಕ್ಷಕನು. ಅವನು ಅವರನ್ನು ಅಂಧಕಾರಗಳಿಂದ ಬೆಳಕಿಗೆ ತರುತ್ತಾನೆ. ಅಲ್ಲಾಹನ ಹೊರತಾದ ದೇವರುಗಳು ಸತ್ಯನಿಷೇಧಿಗಳ ಸಂರಕ್ಷಕರಾಗಿದ್ದಾರೆ. ಅವರು ಅವರನ್ನು ಬೆಳಕಿನಿಂದ ಅಂಧಕಾರಗಳಿಗೆ ಸಾಗಿಸುತ್ತಾರೆ. ಅವರೇ ನರಕವಾಸಿಗಳು. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು.

2:258

أَلَمۡ تَرَ إِلَى ٱلَّذِي حَآجَّ إِبۡرَٰهِـۧمَ فِي رَبِّهِۦٓ أَنۡ ءَاتَىٰهُ ٱللَّهُ ٱلۡمُلۡكَ إِذۡ قَالَ إِبۡرَٰهِـۧمُ رَبِّيَ ٱلَّذِي يُحۡيِۦ وَيُمِيتُ قَالَ أَنَا۠ أُحۡيِۦ وَأُمِيتُۖ قَالَ إِبۡرَٰهِـۧمُ فَإِنَّ ٱللَّهَ يَأۡتِي بِٱلشَّمۡسِ مِنَ ٱلۡمَشۡرِقِ فَأۡتِ بِهَا مِنَ ٱلۡمَغۡرِبِ فَبُهِتَ ٱلَّذِي كَفَرَۗ وَٱللَّهُ لَا يَهۡدِي ٱلۡقَوۡمَ ٱلظَّـٰلِمِينَ ﴿258﴾

Transliteration: Alam tara ila allathee hajja ibraheema fee rabbihi an atahu Allahu almulka ith qala ibraheemu rabbiya allathee yuhyee wayumeetu qala ana ohyee waomeetu qala ibraheemu fainna Allaha yatee bialshshamsi mina almashriqi fati biha mina almaghribi fabuhita allathee kafara waAllahu la yahdee alqawma alththalimeena

Translation: ಇಬ್ರಾಹೀಮರೊಡನೆ ಅವರ ಪರಿಪಾಲಕನ (ಅಲ್ಲಾಹನ) ವಿಷಯದಲ್ಲಿ ತರ್ಕಿಸಿದವನನ್ನು ನೀವು ನೋಡಿಲ್ಲವೇ? ಅಲ್ಲಾಹು ಅವನಿಗೆ ಸಾಮ್ರಾಜ್ಯವನ್ನು ದಯಪಾಲಿಸಿದ್ದನು. "ನನ್ನ ಪರಿಪಾಲಕನು (ಅಲ್ಲಾಹು) ಜೀವ ಮತ್ತು ಮರಣವನ್ನು ನೀಡುತ್ತಾನೆ" ಎಂದು ಇಬ್ರಾಹೀಂ ಹೇಳಿದಾಗ, "ನಾನು ಕೂಡ ಜೀವ ಮತ್ತು ಮರಣವನ್ನು ನೀಡುತ್ತೇನೆ" ಎಂದು ಅವನು ಹೇಳಿದನು. ಇಬ್ರಾಹೀಂ ಹೇಳಿದರು: "ಅಲ್ಲಾಹು ಸೂರ್ಯನನ್ನು ಪೂರ್ವದಿಂದ ತರುತ್ತಾನೆ; ನೀವು ಅದನ್ನು ಪಶ್ಚಿಮದಿಂದ ತನ್ನಿರಿ!" ಆಗ ಆ ಸತ್ಯನಿಷೇಧಿ ಮೂಕವಿಸ್ಮಿತನಾದನು. ಅಕ್ರಮವೆಸಗುವ ಜನರಿಗೆ ಅಲ್ಲಾಹು ಸನ್ಮಾರ್ಗವನ್ನು ತೋರಿಸುವುದಿಲ್ಲ.

2:259

أَوۡ كَٱلَّذِي مَرَّ عَلَىٰ قَرۡيَةٖ وَهِيَ خَاوِيَةٌ عَلَىٰ عُرُوشِهَا قَالَ أَنَّىٰ يُحۡيِۦ هَٰذِهِ ٱللَّهُ بَعۡدَ مَوۡتِهَاۖ فَأَمَاتَهُ ٱللَّهُ مِاْئَةَ عَامٖ ثُمَّ بَعَثَهُۥۖ قَالَ كَمۡ لَبِثۡتَۖ قَالَ لَبِثۡتُ يَوۡمًا أَوۡ بَعۡضَ يَوۡمٖۖ قَالَ بَل لَّبِثۡتَ مِاْئَةَ عَامٖ فَٱنظُرۡ إِلَىٰ طَعَامِكَ وَشَرَابِكَ لَمۡ يَتَسَنَّهۡۖ وَٱنظُرۡ إِلَىٰ حِمَارِكَ وَلِنَجۡعَلَكَ ءَايَةٗ لِّلنَّاسِۖ وَٱنظُرۡ إِلَى ٱلۡعِظَامِ كَيۡفَ نُنشِزُهَا ثُمَّ نَكۡسُوهَا لَحۡمٗاۚ فَلَمَّا تَبَيَّنَ لَهُۥ قَالَ أَعۡلَمُ أَنَّ ٱللَّهَ عَلَىٰ كُلِّ شَيۡءٖ قَدِيرٞ ﴿259﴾

Transliteration: Aw kaallathee marra AAala qaryatin wahiya khawiyatun AAala AAurooshiha qala anna yuhyee hathihi Allahu baAAda mawtiha faamatahu Allahu miata AAamin thumma baAAathahu qala kam labithta qala labithtu yawman aw baAAda yawmin qala bal labithta miata AAamin faonthur ila taAAamika washarabika lam yatasannah waonthur ila himarika walinajAAalaka ayatan lilnnasi waonthur ila alAAithami kayfa nunshizuha thumma naksooha lahman falamma tabayyana lahu qala aAAlamu anna Allaha AAala kulli shayin qadeerun

Translation: ಅಥವಾ ಛಾವಣಿಗಳೊಂದಿಗೆ ಕುಸಿದುಬಿದ್ದ ಒಂದು ಊರಿನ ಬಳಿಯಿಂದ ಸಂಚರಿಸುತ್ತಿದ್ದ ಒಬ್ಬ ವ್ಯಕ್ತಿಯಂತೆ. ಅವರು ಕೇಳಿದರು: “ನಿರ್ಜೀವವಾದ ಬಳಿಕ ಅಲ್ಲಾಹು ಇದಕ್ಕೆ ಜೀವ ನೀಡುವುದು ಹೇಗೆ?” ಆಗ ಅಲ್ಲಾಹು ಅವರನ್ನು ನೂರು ವರ್ಷಗಳ ಕಾಲ ಮೃತ್ಯುವಶಗೊಳಿಸಿದನು. ನಂತರ ಅವರಿಗೆ ಜೀವ ನೀಡಿ ಎಬ್ಬಿಸಿ ಕೇಳಿದನು: “ನೀವು ಎಷ್ಟು ವರ್ಷ ಕಳೆದಿರಿ?” ಅವರು ಉತ್ತರಿಸಿದರು: “ಒಂದು ದಿನ ಅಥವಾ ದಿನದ ಕೆಲವು ತಾಸುಗಳು.” ಅಲ್ಲಾಹು ಹೇಳಿದನು: “ಅಲ್ಲ, ವಾಸ್ತವವಾಗಿ ನೀವು ನೂರು ವರ್ಷ ಕಳೆದಿದ್ದೀರಿ. ನೀವು ನಿಮ್ಮ ಆಹಾರ-ಪಾನೀಯಗಳನ್ನು ನೋಡಿರಿ. ಅವು ಹಾಳಾಗಿಲ್ಲ. ನಿಮ್ಮ ಕತ್ತೆಯನ್ನು ನೋಡಿರಿ. ನಾವು ನಿಮ್ಮನ್ನು ಜನರಿಗೊಂದು ದೃಷ್ಟಾಂತವಾಗಿ ಮಾಡುತ್ತೇವೆ. ನಾವು ಆ ಮೂಳೆಗಳನ್ನು ಹೇಗೆ ಜೋಡಿಸುತ್ತೇವೆ ಮತ್ತು ಅವುಗಳಿಗೆ ಹೇಗೆ ಮಾಂಸವನ್ನು ಹೊದಿಯುತ್ತೇವೆಂದು ನೋಡಿರಿ.” ಅವರಿಗೆ ವಿಷಯವು ಸ್ಪಷ್ಟವಾದಾಗ ಅವರು ಹೇಳಿದರು: “ನಿಶ್ಚಯವಾಗಿಯೂ ಅಲ್ಲಾಹನಿಗೆ ಎಲ್ಲಾ ವಿಷಯಗಳಲ್ಲೂ ಸಾಮರ್ಥ್ಯವಿದೆಯೆಂದು ನನಗೆ ತಿಳಿದಿದೆ.”

2:260

وَإِذۡ قَالَ إِبۡرَٰهِـۧمُ رَبِّ أَرِنِي كَيۡفَ تُحۡيِ ٱلۡمَوۡتَىٰۖ قَالَ أَوَلَمۡ تُؤۡمِنۖ قَالَ بَلَىٰ وَلَٰكِن لِّيَطۡمَئِنَّ قَلۡبِيۖ قَالَ فَخُذۡ أَرۡبَعَةٗ مِّنَ ٱلطَّيۡرِ فَصُرۡهُنَّ إِلَيۡكَ ثُمَّ ٱجۡعَلۡ عَلَىٰ كُلِّ جَبَلٖ مِّنۡهُنَّ جُزۡءٗا ثُمَّ ٱدۡعُهُنَّ يَأۡتِينَكَ سَعۡيٗاۚ وَٱعۡلَمۡ أَنَّ ٱللَّهَ عَزِيزٌ حَكِيمٞ ﴿260﴾

Transliteration: Waith qala ibraheemu rabbi arinee kayfa tuhyee almawta qala awalam tumin qala bala walakin liyatmainna qalbee qala fakhuth arbaAAatan mina alttayri fasurhunna ilayka thumma ijAAal AAala kulli jabalin minhunna juzan thumma odAAuhunna yateenaka saAAyan waiAAlam anna Allaha AAazeezun hakeemun

Translation: ಇಬ್ರಾಹೀಮ್ ಹೇಳಿದ ಸಂದರ್ಭ: "ಓ ನನ್ನ ಪರಿಪಾಲಕನೇ! ನೀನು ಸತ್ತವರಿಗೆ ಹೇಗೆ ಜೀವ ನೀಡುತ್ತೀ ಎಂದು ನನಗೆ ತೋರಿಸಿಕೊಡು." ಅಲ್ಲಾಹು ಕೇಳಿದನು: "ನಿಮಗೆ ನಂಬಿಕೆಯಿಲ್ಲವೇ?" ಅವರು ಹೇಳಿದರು: "ನಂಬಿಕೆಯಿದೆ. ಆದರೆ ನನ್ನ ಹೃದಯದ ಸಮಾಧಾನಕ್ಕಾಗಿ." ಅಲ್ಲಾಹು ಹೇಳಿದನು: "ನೀವು ನಾಲ್ಕು ಹಕ್ಕಿಗಳನ್ನು ಹಿಡಿದು ಅವುಗಳನ್ನು ನಿಮ್ಮ ಬಳಿಗೆ ಸೇರಿಸಿಕೊಳ್ಳಿ. ನಂತರ ಅವುಗಳನ್ನು (ತುಂಡುಗಳಾಗಿ ಕತ್ತರಿಸಿ) ಒಂದೊಂದು ಭಾಗವನ್ನು ಒಂದೊಂದು ಬೆಟ್ಟದ ಮೇಲಿಡಿ. ನಂತರ ಅವುಗಳನ್ನು ಕೂಗಿ ಕರೆಯಿರಿ. ಅವು ತಕ್ಷಣ ನಿಮ್ಮ ಬಳಿಗೆ ಓಡಿ ಬರುವುವು. ತಿಳಿಯಿರಿ! ನಿಶ್ಚಯವಾಗಿಯೂ ಅಲ್ಲಾಹು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ.

2:261

مَّثَلُ ٱلَّذِينَ يُنفِقُونَ أَمۡوَٰلَهُمۡ فِي سَبِيلِ ٱللَّهِ كَمَثَلِ حَبَّةٍ أَنۢبَتَتۡ سَبۡعَ سَنَابِلَ فِي كُلِّ سُنۢبُلَةٖ مِّاْئَةُ حَبَّةٖۗ وَٱللَّهُ يُضَٰعِفُ لِمَن يَشَآءُۚ وَٱللَّهُ وَٰسِعٌ عَلِيمٌ ﴿261﴾

Transliteration: Mathalu allatheena yunfiqoona amwalahum fee sabeeli Allahi kamathali habbatin anbatat sabAAa sanabila fee kulli sunbulatin miatu habbatin waAllahu yudaAAifu liman yashao waAllahu wasiAAun AAaleemun

Translation: ಅಲ್ಲಾಹನ ಮಾರ್ಗದಲ್ಲಿ ತಮ್ಮ ಧನವನ್ನು ಖರ್ಚು ಮಾಡುವವರ ಉದಾಹರಣೆಯು ಒಂದು ಧಾನ್ಯದಂತೆ. ಅದು ಏಳು ತೆನೆಗಳನ್ನು ಉತ್ಪಾದಿಸಿತು. ಪ್ರತಿಯೊಂದು ತೆನೆಯಲ್ಲೂ ನೂರು ಧಾನ್ಯಗಳಿವೆ. ಅಲ್ಲಾಹು ಅವನು ಇಚ್ಛಿಸುವವರಿಗೆ ಇಮ್ಮಡಿಗೊಳಿಸಿಕೊಡುತ್ತಾನೆ. ಅಲ್ಲಾಹು ವಿಶಾಲನು ಮತ್ತು ಸರ್ವಜ್ಞನಾಗಿದ್ದಾನೆ.

2:262

ٱلَّذِينَ يُنفِقُونَ أَمۡوَٰلَهُمۡ فِي سَبِيلِ ٱللَّهِ ثُمَّ لَا يُتۡبِعُونَ مَآ أَنفَقُواْ مَنّٗا وَلَآ أَذٗى لَّهُمۡ أَجۡرُهُمۡ عِندَ رَبِّهِمۡ وَلَا خَوۡفٌ عَلَيۡهِمۡ وَلَا هُمۡ يَحۡزَنُونَ ﴿262﴾

Transliteration: Allatheena yunfiqoona amwalahum fee sabeeli Allahi thumma la yutbiAAoona ma anfaqoo mannan wala athan lahum ajruhum AAinda rabbihim wala khawfun AAalayhim wala hum yahzanoona

Translation: ಅಲ್ಲಾಹನ ಮಾರ್ಗದಲ್ಲಿ ತಮ್ಮ ಧನವನ್ನು ಖರ್ಚು ಮಾಡುವವರು ಮತ್ತು ನಂತರ ತಾವು ಖರ್ಚು ಮಾಡಿದ್ದಕ್ಕಾಗಿ ಉಪಕಾರ ಸ್ಮರಣೆ ಬಯಸದವರು ಮತ್ತು ತೊಂದರೆ ಕೊಡದವರು ಯಾರೋ—ಅವರಿಗೆ ಅವರ ಪರಿಪಾಲಕನ (ಅಲ್ಲಾಹನ) ಬಳಿ ಅವರ ಪ್ರತಿಫಲವಿದೆ. ಅವರಿಗೆ ಯಾವುದೇ ಭಯವಿಲ್ಲ; ಅವರು ದುಃಖಿಸುವುದೂ ಇಲ್ಲ.

2:263

قَوۡلٞ مَّعۡرُوفٞ وَمَغۡفِرَةٌ خَيۡرٞ مِّن صَدَقَةٖ يَتۡبَعُهَآ أَذٗىۗ وَٱللَّهُ غَنِيٌّ حَلِيمٞ ﴿263﴾

Transliteration: Qawlun maAAroofun wamaghfiratun khayrun min sadaqatin yatbaAAuha athan waAllahu ghaniyyun haleemun

Translation: ಕೊಟ್ಟ ನಂತರ ತೊಂದರೆ ನೀಡುವ ದಾನಕ್ಕಿಂತ ಉತ್ತಮವಾದ ಮಾತು ಮತ್ತು ಕ್ಷಮೆಯು ಶ್ರೇಷ್ಠವಾಗಿದೆ. ಅಲ್ಲಾಹು ನಿರಪೇಕ್ಷನು ಮತ್ತು ಸಹಿಷ್ಣುತೆಯುಳ್ಳವನಾಗಿದ್ದಾನೆ.

2:264

يَـٰٓأَيُّهَا ٱلَّذِينَ ءَامَنُواْ لَا تُبۡطِلُواْ صَدَقَٰتِكُم بِٱلۡمَنِّ وَٱلۡأَذَىٰ كَٱلَّذِي يُنفِقُ مَالَهُۥ رِئَآءَ ٱلنَّاسِ وَلَا يُؤۡمِنُ بِٱللَّهِ وَٱلۡيَوۡمِ ٱلۡأٓخِرِۖ فَمَثَلُهُۥ كَمَثَلِ صَفۡوَانٍ عَلَيۡهِ تُرَابٞ فَأَصَابَهُۥ وَابِلٞ فَتَرَكَهُۥ صَلۡدٗاۖ لَّا يَقۡدِرُونَ عَلَىٰ شَيۡءٖ مِّمَّا كَسَبُواْۗ وَٱللَّهُ لَا يَهۡدِي ٱلۡقَوۡمَ ٱلۡكَٰفِرِينَ ﴿264﴾

Transliteration: Ya ayyuha allatheena amanoo la tubtiloo sadaqatikum bialmanni waalatha kaallathee yunfiqu malahu riaa alnnasi wala yuminu biAllahi waalyawmi alakhiri famathaluhu kamathali safwanin AAalayhi turabun faasabahu wabilun fatarakahu saldan la yaqdiroona AAala shayin mimma kasaboo waAllahu la yahdee alqawma alkafireena

Translation: ಓ ಸತ್ಯವಿಶ್ವಾಸಿಗಳೇ! ಉಪಕಾರ ಸ್ಮರಣೆ ಬಯಸುವ ಮೂಲಕ ಮತ್ತು ತೊಂದರೆ ಕೊಡುವ ಮೂಲಕ ನಿಮ್ಮ ದಾನಗಳನ್ನು ವ್ಯರ್ಥಗೊಳಿಸಬೇಡಿ. ಅಲ್ಲಾಹನಲ್ಲಿ ಮತ್ತು ಪರಲೋಕದಲ್ಲಿ ವಿಶ್ವಾಸವಿಡದೆ ಕೇವಲ ಜನರು ನೋಡುವುದಕ್ಕಾಗಿ ಖರ್ಚು ಮಾಡುವ ವ್ಯಕ್ತಿಯಂತೆ ನೀವಾಗಬೇಡಿ. ಅವನ ಉದಾಹರಣೆಯು ನುಣುಪಾದ ಒಂದು ಬಂಡೆಯಂತೆ. ಅದರ ಮೇಲೆ ಸ್ವಲ್ಪ ಮಣ್ಣಿದೆ. ಅದಕ್ಕೆ ಜಡಿಮಳೆ ಸುರಿದು ಅದು ಅದನ್ನು ಬೋಳು ಮಾಡಿಬಿಟ್ಟಿತು. ಅವರಿಗೆ ಅವರು ಸಂಪಾದಿಸಿದ ಯಾವುದನ್ನೂ ವಶದಲ್ಲಿಟ್ಟುಕೊಳ್ಳಲು ಸಾಧ್ಯವಾಗುವುದಿಲ್ಲ. ಸತ್ಯನಿಷೇಧಿಗಳಾದ ಜನರಿಗೆ ಅಲ್ಲಾಹು ಸನ್ಮಾರ್ಗವನ್ನು ತೋರಿಸುವುದಿಲ್ಲ.

2:265

وَمَثَلُ ٱلَّذِينَ يُنفِقُونَ أَمۡوَٰلَهُمُ ٱبۡتِغَآءَ مَرۡضَاتِ ٱللَّهِ وَتَثۡبِيتٗا مِّنۡ أَنفُسِهِمۡ كَمَثَلِ جَنَّةِۭ بِرَبۡوَةٍ أَصَابَهَا وَابِلٞ فَـَٔاتَتۡ أُكُلَهَا ضِعۡفَيۡنِ فَإِن لَّمۡ يُصِبۡهَا وَابِلٞ فَطَلّٞۗ وَٱللَّهُ بِمَا تَعۡمَلُونَ بَصِيرٌ ﴿265﴾

Transliteration: Wamathalu allatheena yunfiqoona amwalahumu ibtighaa mardati Allahi watathbeetan min anfusihim kamathali jannatin birabwatin asabaha wabilun faatat okulaha diAAfayni fain lam yusibha wabilun fatallun waAllahu bima taAAmaloona baseerun

Translation: ಅಲ್ಲಾಹನ ಸಂಪ್ರೀತಿಯನ್ನು ಹುಡುಕುತ್ತಾ ದೃಢಮನಸ್ಸಿನಿಂದ ಮತ್ತು ಮನಸ್ಸಂತೃಪ್ತಿಯಿಂದ ತಮ್ಮ ಧನವನ್ನು ಖರ್ಚು ಮಾಡುವವರ ಉದಾಹರಣೆಯು ಎತ್ತರದ ಸ್ಥಳದಲ್ಲಿರುವ ಒಂದು ತೋಟದಂತೆ. ಅದಕ್ಕೆ ಜಡಿಮಳೆಯು ಸುರಿದಾಗ ಅದು ಇಮ್ಮಡಿ ಫಲವನ್ನು ನೀಡುತ್ತದೆ. ಅದಕ್ಕೆ ಜಡಿಮಳೆ ಸುರಿಯದಿದ್ದರೂ ತುಂತುರು ಮಳೆ ಸಾಕಾಗುತ್ತದೆ. ಅಲ್ಲಾಹು ನೀವು ಮಾಡುತ್ತಿರುವ ಕರ್ಮಗಳನ್ನು ನೋಡುತ್ತಿದ್ದಾನೆ.

2:266

أَيَوَدُّ أَحَدُكُمۡ أَن تَكُونَ لَهُۥ جَنَّةٞ مِّن نَّخِيلٖ وَأَعۡنَابٖ تَجۡرِي مِن تَحۡتِهَا ٱلۡأَنۡهَٰرُ لَهُۥ فِيهَا مِن كُلِّ ٱلثَّمَرَٰتِ وَأَصَابَهُ ٱلۡكِبَرُ وَلَهُۥ ذُرِّيَّةٞ ضُعَفَآءُ فَأَصَابَهَآ إِعۡصَارٞ فِيهِ نَارٞ فَٱحۡتَرَقَتۡۗ كَذَٰلِكَ يُبَيِّنُ ٱللَّهُ لَكُمُ ٱلۡأٓيَٰتِ لَعَلَّكُمۡ تَتَفَكَّرُونَ ﴿266﴾

Transliteration: Ayawaddu ahadukum an takoona lahu jannatun min nakheelin waaAAnabin tajree min tahtiha alanharu lahu feeha min kulli alththamarati waasabahu alkibaru walahu thurriyyatun duAAafao faasabaha iAAsarun feehi narun faihtaraqat kathalika yubayyinu Allahu lakumu alayati laAAallakum tatafakkaroona

Translation: ನಿಮ್ಮಲ್ಲೊಬ್ಬನಿಗೆ ತಳಭಾಗದಿಂದ ನದಿಗಳು ಹರಿಯುವ, ಖರ್ಜೂರ ಮತ್ತು ದ್ರಾಕ್ಷಿಯ ಹಾಗೂ ಎಲ್ಲಾ ರೀತಿಯ ಹಣ್ಣು-ಹಂಪಲುಗಳಿರುವ ಒಂದು ತೋಟವಿದ್ದು, ಅವನು ವೃದ್ಧನಾಗಿದ್ದು ಬಲಹೀನರಾದ ಮಕ್ಕಳೂ ಇರುವ ಸ್ಥಿತಿಯಲ್ಲಿ ಆ ತೋಟಕ್ಕೆ ಬೆಂಕಿಯ ಬಿರುಗಾಳಿ ಬೀಸಿ ಅದರಿಂದ ಆ ತೋಟವು ಸುಟ್ಟು ಕರಕಲಾಗುವುದನ್ನು ನೀವು ಬಯಸುತ್ತೀರಾ? ಈ ರೀತಿ ಅಲ್ಲಾಹು ತನ್ನ ವಚನಗಳನ್ನು ನಿಮಗೆ ಸ್ಪಷ್ಟವಾಗಿ ವಿವರಿಸಿಕೊಡುತ್ತಾನೆ. ನೀವು ಆಲೋಚಿಸುವುದಕ್ಕಾಗಿ.

2:267

يَـٰٓأَيُّهَا ٱلَّذِينَ ءَامَنُوٓاْ أَنفِقُواْ مِن طَيِّبَٰتِ مَا كَسَبۡتُمۡ وَمِمَّآ أَخۡرَجۡنَا لَكُم مِّنَ ٱلۡأَرۡضِۖ وَلَا تَيَمَّمُواْ ٱلۡخَبِيثَ مِنۡهُ تُنفِقُونَ وَلَسۡتُم بِـَٔاخِذِيهِ إِلَّآ أَن تُغۡمِضُواْ فِيهِۚ وَٱعۡلَمُوٓاْ أَنَّ ٱللَّهَ غَنِيٌّ حَمِيدٌ ﴿267﴾

Transliteration: Ya ayyuha allatheena amanoo anfiqoo min tayyibati ma kasabtum wamimma akhrajna lakum mina alardi wala tayammamoo alkhabeetha minhu tunfiqoona walastum biakhitheehi illa an tughmidoo feehi waiAAlamoo anna Allaha ghaniyyun hameedun

Translation: ಓ ಸತ್ಯವಿಶ್ವಾಸಿಗಳೇ! ನೀವು ಸಂಪಾದಿಸಿದ ಉತ್ತಮ ವಸ್ತುಗಳಿಂದ ಮತ್ತು ನಾವು ನಿಮಗೆ ಭೂಮಿಯಿಂದ ಉತ್ಪಾದಿಸಿಕೊಟ್ಟ ವಸ್ತುಗಳಿಂದ ಖರ್ಚು (ದಾನ) ಮಾಡಿರಿ. ನೀವು ಕಣ್ಣು ಮುಚ್ಚಿಕೊಂಡಲ್ಲದೆ ಸ್ವೀಕರಿಸದ ಕೆಟ್ಟ ವಸ್ತುಗಳನ್ನು ಖರ್ಚು (ದಾನ) ಮಾಡಲು ಮುಂದಾಗಬೇಡಿ. ತಿಳಿಯಿರಿ! ನಿಶ್ಚಯವಾಗಿಯೂ ಅಲ್ಲಾಹು ನಿರಪೇಕ್ಷನು ಮತ್ತು ಸ್ತುತ್ಯರ್ಹನಾಗಿದ್ದಾನೆ.

2:268

ٱلشَّيۡطَٰنُ يَعِدُكُمُ ٱلۡفَقۡرَ وَيَأۡمُرُكُم بِٱلۡفَحۡشَآءِۖ وَٱللَّهُ يَعِدُكُم مَّغۡفِرَةٗ مِّنۡهُ وَفَضۡلٗاۗ وَٱللَّهُ وَٰسِعٌ عَلِيمٞ ﴿268﴾

Transliteration: Alshshaytanu yaAAidukumu alfaqra wayamurukum bialfahshai waAllahu yaAAidukum maghfiratan minhu wafadlan waAllahu wasiAAun AAaleemun

Translation: ಶೈತಾನನು ನಿಮಗೆ ಬಡತನದ ಬಗ್ಗೆ ಬೆದರಿಸುತ್ತಾನೆ ಮತ್ತು ಅಶ್ಲೀಲತೆಯನ್ನು ಆದೇಶಿಸುತ್ತಾನೆ. ಅಲ್ಲಾಹು ನಿಮಗೆ ಅವನ ಕ್ಷಮೆ ಮತ್ತು ಔದಾರ್ಯದ ಬಗ್ಗೆ ವಾಗ್ದಾನ ಮಾಡುತ್ತಾನೆ. ಅಲ್ಲಾಹು ವಿಶಾಲನು ಮತ್ತು ಸರ್ವಜ್ಞನಾಗಿದ್ದಾನೆ.

2:269

يُؤۡتِي ٱلۡحِكۡمَةَ مَن يَشَآءُۚ وَمَن يُؤۡتَ ٱلۡحِكۡمَةَ فَقَدۡ أُوتِيَ خَيۡرٗا كَثِيرٗاۗ وَمَا يَذَّكَّرُ إِلَّآ أُوْلُواْ ٱلۡأَلۡبَٰبِ ﴿269﴾

Transliteration: Yutee alhikmata man yashao waman yuta alhikmata faqad ootiya khayran katheeran wama yaththakkaru illa oloo alalbabi

Translation: ಅವನು ಇಚ್ಛಿಸುವವರಿಗೆ ಅವನು ವಿವೇಕವನ್ನು ದಯಪಾಲಿಸುತ್ತಾನೆ. ಯಾರಿಗೆ ವಿವೇಕವನ್ನು ದಯಪಾಲಿಸಲಾಗಿದೆಯೋ ಅವನಿಗೆ ಅತ್ಯಧಿಕ ಒಳಿತುಗಳನ್ನು ದಯಪಾಲಿಸಲಾಗಿದೆ. ಬುದ್ಧಿವಂತರ ಹೊರತು ಇನ್ನಾರೂ ಉಪದೇಶವನ್ನು ಸ್ವೀಕರಿಸುವುದಿಲ್ಲ.

2:270

وَمَآ أَنفَقۡتُم مِّن نَّفَقَةٍ أَوۡ نَذَرۡتُم مِّن نَّذۡرٖ فَإِنَّ ٱللَّهَ يَعۡلَمُهُۥۗ وَمَا لِلظَّـٰلِمِينَ مِنۡ أَنصَارٍ ﴿270﴾

Transliteration: Wama anfaqtum min nafaqatin aw nathartum min nathrin fainna Allaha yaAAlamuhu wama lilththalimeena min ansarin

Translation: ನೀವು ಯಾವುದೇ ವಸ್ತುವನ್ನು ಖರ್ಚು (ದಾನ) ಮಾಡಿದರೂ ಅಥವಾ ಹರಕೆ ಮಾಡಿದರೂ ನಿಶ್ಚಯವಾಗಿಯೂ ಅಲ್ಲಾಹು ಅದನ್ನು ತಿಳಿಯುತ್ತಾನೆ. ಅಕ್ರಮಿಗಳಿಗೆ ಸಹಾಯ ಮಾಡುವವರು ಯಾರೂ ಇಲ್ಲ.

2:271

إِن تُبۡدُواْ ٱلصَّدَقَٰتِ فَنِعِمَّا هِيَۖ وَإِن تُخۡفُوهَا وَتُؤۡتُوهَا ٱلۡفُقَرَآءَ فَهُوَ خَيۡرٞ لَّكُمۡۚ وَيُكَفِّرُ عَنكُم مِّن سَيِّـَٔاتِكُمۡۗ وَٱللَّهُ بِمَا تَعۡمَلُونَ خَبِيرٞ ﴿271﴾

Transliteration: In tubdoo alssadaqati faniAAimma hiya wain tukhfooha watutooha alfuqaraa fahuwa khayrun lakum wayukaffiru AAankum min sayyiatikum waAllahu bima taAAmaloona khabeerun

Translation: ನೀವು ದಾನ ಮಾಡಿದ್ದನ್ನು ಬಹಿರಂಗಪಡಿಸಿದರೆ ಅದು ಒಳ್ಳೆಯದೇ. ಆದರೆ ನೀವು ಅದನ್ನು ಗೋಪ್ಯವಾಗಿಟ್ಟು ಬಡವರಿಗೆ ನೀಡಿದರೆ ಅದು ನಿಮಗೆ ಶ್ರೇಷ್ಠವಾಗಿದೆ. ಅಲ್ಲಾಹು ನಿಮ್ಮ ಪಾಪಗಳನ್ನು ಅಳಿಸುವನು. ನೀವು ಮಾಡುವ ಕರ್ಮಗಳ ಬಗ್ಗೆ ಅಲ್ಲಾಹು ಸೂಕ್ಷ್ಮವಾಗಿ ತಿಳಿದಿದ್ದಾನೆ.

2:272

لَّيۡسَ عَلَيۡكَ هُدَىٰهُمۡ وَلَٰكِنَّ ٱللَّهَ يَهۡدِي مَن يَشَآءُۗ وَمَا تُنفِقُواْ مِنۡ خَيۡرٖ فَلِأَنفُسِكُمۡۚ وَمَا تُنفِقُونَ إِلَّا ٱبۡتِغَآءَ وَجۡهِ ٱللَّهِۚ وَمَا تُنفِقُواْ مِنۡ خَيۡرٖ يُوَفَّ إِلَيۡكُمۡ وَأَنتُمۡ لَا تُظۡلَمُونَ ﴿272﴾

Transliteration: Laysa AAalayka hudahum walakinna Allaha yahdee man yashao wama tunfiqoo min khayrin falianfusikum wama tunfiqoona illa ibtighaa wajhi Allahi wama tunfiqoo min khayrin yuwaffa ilaykum waantum la tuthlamoona

Translation: ನಿಮಗೆ ಅವರನ್ನು ಸನ್ಮಾರ್ಗದಲ್ಲಿ ಸೇರಿಸುವ ಹೊಣೆಗಾರಿಕೆಯಿಲ್ಲ. ಬದಲಿಗೆ, ಅಲ್ಲಾಹು ಅವನು ಇಚ್ಛಿಸುವವರನ್ನು ಸನ್ಮಾರ್ಗದಲ್ಲಿ ಸೇರಿಸುತ್ತಾನೆ. ನೀವು ಏನು ಖರ್ಚು (ದಾನ) ಮಾಡಿದರೂ ಅದರ ಲಾಭವು ನಿಮಗೇ ಆಗಿದೆ. ಅಲ್ಲಾಹನ ಸಂಪ್ರೀತಿಯನ್ನು ಬಯಸಿಯೇ ವಿನಾ ನೀವು ಖರ್ಚು (ದಾನ) ಮಾಡಬಾರದು. ನೀವು ಏನು ಖರ್ಚು (ದಾನ) ಮಾಡಿದರೂ ಅದರ ಪೂರ್ಣ ಪ್ರತಿಫಲವನ್ನು ನಿಮಗೆ ನೀಡಲಾಗುವುದು. ನಿಮಗೆ ಸ್ವಲ್ಪವೂ ಅನ್ಯಾಯವಾಗುವುದಿಲ್ಲ.

2:273

لِلۡفُقَرَآءِ ٱلَّذِينَ أُحۡصِرُواْ فِي سَبِيلِ ٱللَّهِ لَا يَسۡتَطِيعُونَ ضَرۡبٗا فِي ٱلۡأَرۡضِ يَحۡسَبُهُمُ ٱلۡجَاهِلُ أَغۡنِيَآءَ مِنَ ٱلتَّعَفُّفِ تَعۡرِفُهُم بِسِيمَٰهُمۡ لَا يَسۡـَٔلُونَ ٱلنَّاسَ إِلۡحَافٗاۗ وَمَا تُنفِقُواْ مِنۡ خَيۡرٖ فَإِنَّ ٱللَّهَ بِهِۦ عَلِيمٌ ﴿273﴾

Transliteration: Lilfuqarai allatheena ohsiroo fee sabeeli Allahi la yastateeAAoona darban fee alardi yahsabuhumu aljahilu aghniyaa mina alttaAAaffufi taAArifuhum biseemahum la yasaloona alnnasa ilhafan wama tunfiqoo min khayrin fainna Allaha bihi AAaleemun

Translation: ಭೂಮಿಯಲ್ಲಿ ಓಡಾಡಲು ಸಾಧ್ಯವಾಗದಂತೆ ಅಲ್ಲಾಹನ ಮಾರ್ಗದಲ್ಲಿ ಬಂಧನದಲ್ಲಿರುವ ಬಡವರಿಗೆ (ಖರ್ಚು ಮಾಡಿರಿ).[1] ಅವರಿಗೆ ಆತ್ಮಸಂಯಮವಿರುವ ಕಾರಣ (ಇತರರ ಮುಂದೆ ಕೈ ಚಾಚಿ ಬೇಡದ ಕಾರಣ) ಅವಿವೇಕಿಗಳು ಅವರನ್ನು ಶ್ರೀಮಂತರೆಂದು ಭಾವಿಸುತ್ತಾರೆ. ನಿಮಗೆ ಅವರನ್ನು ಅವರ ಹಾವಭಾವಗಳಿಂದ ಗುರುತಿಸಬಹುದು. ಅವರು ಜನರೊಡನೆ ಕಾಡಿ ಬೇಡುವುದಿಲ್ಲ. ನೀವು (ಅಲ್ಲಾಹನ ಮಾರ್ಗದಲ್ಲಿ) ಯಾವುದೇ ಸಂಪತ್ತನ್ನು ಖರ್ಚು (ದಾನ) ಮಾಡಿದರೂ ನಿಶ್ಚಯವಾಗಿಯೂ ಅಲ್ಲಾಹು ಅದನ್ನು ತಿಳಿಯುತ್ತಾನೆ.

2:274

ٱلَّذِينَ يُنفِقُونَ أَمۡوَٰلَهُم بِٱلَّيۡلِ وَٱلنَّهَارِ سِرّٗا وَعَلَانِيَةٗ فَلَهُمۡ أَجۡرُهُمۡ عِندَ رَبِّهِمۡ وَلَا خَوۡفٌ عَلَيۡهِمۡ وَلَا هُمۡ يَحۡزَنُونَ ﴿274﴾

Transliteration: Allatheena yunfiqoona amwalahum biallayli waalnnahari sirran waAAalaniyatan falahum ajruhum AAinda rabbihim wala khawfun AAalayhim wala hum yahzanoona

Translation: ರಾತ್ರಿ ಮತ್ತು ಹಗಲು ರಹಸ್ಯವಾಗಿ ಮತ್ತು ಬಹಿರಂಗವಾಗಿ ತಮ್ಮ ಧನವನ್ನು ಖರ್ಚು ಮಾಡುವವರು ಯಾರೋ—ಅವರಿಗೆ ಅವರ ಪರಿಪಾಲಕನ (ಅಲ್ಲಾಹನ) ಬಳಿ ಅವರ ಪ್ರತಿಫಲವಿದೆ. ಅವರಿಗೆ ಯಾವುದೇ ಭಯವಿಲ್ಲ; ಅವರು ದುಃಖಿಸುವುದೂ ಇಲ್ಲ.

2:275

ٱلَّذِينَ يَأۡكُلُونَ ٱلرِّبَوٰاْ لَا يَقُومُونَ إِلَّا كَمَا يَقُومُ ٱلَّذِي يَتَخَبَّطُهُ ٱلشَّيۡطَٰنُ مِنَ ٱلۡمَسِّۚ ذَٰلِكَ بِأَنَّهُمۡ قَالُوٓاْ إِنَّمَا ٱلۡبَيۡعُ مِثۡلُ ٱلرِّبَوٰاْۗ وَأَحَلَّ ٱللَّهُ ٱلۡبَيۡعَ وَحَرَّمَ ٱلرِّبَوٰاْۚ فَمَن جَآءَهُۥ مَوۡعِظَةٞ مِّن رَّبِّهِۦ فَٱنتَهَىٰ فَلَهُۥ مَا سَلَفَ وَأَمۡرُهُۥٓ إِلَى ٱللَّهِۖ وَمَنۡ عَادَ فَأُوْلَـٰٓئِكَ أَصۡحَٰبُ ٱلنَّارِۖ هُمۡ فِيهَا خَٰلِدُونَ ﴿275﴾

Transliteration: Allatheena yakuloona alrriba la yaqoomoona illa kama yaqoomu allathee yatakhabbatuhu alshshaytanu mina almassi thalika biannahum qaloo innama albayAAu mithlu alrriba waahalla Allahu albayAAa waharrama alrriba faman jaahu mawAAithatun min rabbihi faintaha falahu ma salafa waamruhu ila Allahi waman AAada faolaika ashabu alnnari hum feeha khalidoona

Translation: ಬಡ್ಡಿ ತಿನ್ನುವವರು ಯಾರೋ ಅವರು ಶೈತಾನನ ಸ್ಪರ್ಶದಿಂದ ಹುಚ್ಚು ಹಿಡಿದವನು ಎದ್ದೇಳುವಂತೆಯೇ ವಿನಾ ಎದ್ದೇಳುವುದಿಲ್ಲ. ನಿಶ್ಚಯವಾಗಿಯೂ ವ್ಯಾಪಾರವು ಬಡ್ಡಿಯಂತೆ ಎಂದು ಅವರು ಹೇಳಿದ್ದೇ ಅದಕ್ಕೆ ಕಾರಣ. ಆದರೆ ಅಲ್ಲಾಹು ವ್ಯಾಪಾರವನ್ನು ಅನುಮತಿಸಿದ್ದಾನೆ ಮತ್ತು ಬಡ್ಡಿಯನ್ನು ನಿಷೇಧಿಸಿದ್ದಾನೆ. ಆದ್ದರಿಂದ, ಯಾರು ಅಲ್ಲಾಹನ ಕಡೆಯಿಂದ ಬಂದ ಉಪದೇಶವನ್ನು ಕೇಳಿದ ನಂತರ ಬಡ್ಡಿ ವ್ಯವಹಾರವನ್ನು ನಿಲ್ಲಿಸುತ್ತಾನೋ ಅವನಿಗೆ ಹಿಂದೆ ಪಡೆದುದರಲ್ಲಿ ದೋಷವಿಲ್ಲ; ಅವನ ವಿಚಾರಣೆಯು ಅಲ್ಲಾಹನಿಗೆ ಬಿಟ್ಟದ್ದು. ಆದರೆ ಯಾರು ಪುನಃ ಬಡ್ಡಿ ವ್ಯವಹಾರಕ್ಕೆ ಮರಳುತ್ತಾರೋ ಅವರೇ ನರಕವಾಸಿಗಳು. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು.

2:276

يَمۡحَقُ ٱللَّهُ ٱلرِّبَوٰاْ وَيُرۡبِي ٱلصَّدَقَٰتِۗ وَٱللَّهُ لَا يُحِبُّ كُلَّ كَفَّارٍ أَثِيمٍ ﴿276﴾

Transliteration: Yamhaqu Allahu alrriba wayurbee alssadaqati waAllahu la yuhibbu kulla kaffarin atheemin

Translation: ಅಲ್ಲಾಹು ಬಡ್ಡಿಯನ್ನು ಅಳಿಸುತ್ತಾನೆ ಮತ್ತು ದಾನ ಧರ್ಮಗಳನ್ನು ಪೋಷಿಸುತ್ತಾನೆ. ಕೃತಘ್ನ ಮತ್ತು ಪಾಪಿಯಾದ ಯಾರನ್ನೂ ಅಲ್ಲಾಹು ಇಷ್ಟಪಡುವುದಿಲ್ಲ.

2:277

إِنَّ ٱلَّذِينَ ءَامَنُواْ وَعَمِلُواْ ٱلصَّـٰلِحَٰتِ وَأَقَامُواْ ٱلصَّلَوٰةَ وَءَاتَوُاْ ٱلزَّكَوٰةَ لَهُمۡ أَجۡرُهُمۡ عِندَ رَبِّهِمۡ وَلَا خَوۡفٌ عَلَيۡهِمۡ وَلَا هُمۡ يَحۡزَنُونَ ﴿277﴾

Transliteration: Inna allatheena amanoo waAAamiloo alssalihati waaqamoo alssalata waatawoo alzzakata lahum ajruhum AAinda rabbihim wala khawfun AAalayhim wala hum yahzanoona

Translation: ನಿಶ್ಚಯವಾಗಿಯೂ ಸತ್ಯವಿಶ್ವಾಸಿಗಳು, ಸತ್ಕರ್ಮವೆಸಗುವವರು, ನಮಾಝ್ ಸಂಸ್ಥಾಪಿಸುವವರು ಮತ್ತು ಝಕಾತ್ ನೀಡುವವರು ಯಾರೋ—ಅವರಿಗೆ ಅವರ ಪರಿಪಾಲಕನ (ಅಲ್ಲಾಹನ) ಬಳಿ ಅವರ ಪ್ರತಿಫಲವಿದೆ. ಅವರಿಗೆ ಯಾವುದೇ ಭಯವಿಲ್ಲ; ಅವರು ದುಃಖಿಸುವುದೂ ಇಲ್ಲ.

2:278

يَـٰٓأَيُّهَا ٱلَّذِينَ ءَامَنُواْ ٱتَّقُواْ ٱللَّهَ وَذَرُواْ مَا بَقِيَ مِنَ ٱلرِّبَوٰٓاْ إِن كُنتُم مُّؤۡمِنِينَ ﴿278﴾

Transliteration: Ya ayyuha allatheena amanoo ittaqoo Allaha watharoo ma baqiya mina alrriba in kuntum mumineena

Translation: ಓ ಸತ್ಯವಿಶ್ವಾಸಿಗಳೇ! ಅಲ್ಲಾಹನನ್ನು ಭಯಪಡಿರಿ ಮತ್ತು ಬಡ್ಡಿಯಲ್ಲಿ ಬರಲು ಬಾಕಿಯಿರುವುದನ್ನು ಬಿಟ್ಟುಬಿಡಿ. ನೀವು ಸತ್ಯವಿಶ್ವಾಸಿಗಳಾಗಿದ್ದರೆ.

2:279

فَإِن لَّمۡ تَفۡعَلُواْ فَأۡذَنُواْ بِحَرۡبٖ مِّنَ ٱللَّهِ وَرَسُولِهِۦۖ وَإِن تُبۡتُمۡ فَلَكُمۡ رُءُوسُ أَمۡوَٰلِكُمۡ لَا تَظۡلِمُونَ وَلَا تُظۡلَمُونَ ﴿279﴾

Transliteration: Fain lam tafAAaloo fathanoo biharbin mina Allahi warasoolihi wain tubtum falakum ruoosu amwalikum la tathlimoona wala tuthlamoona

Translation: ನೀವು ಅದನ್ನು ಮಾಡದಿದ್ದರೆ, ಅಲ್ಲಾಹನೊಡನೆ ಮತ್ತು ಅವನ ಸಂದೇಶವಾಹಕರೊಡನೆ ಹೋರಾಡಲು ಸಿದ್ಧರಾಗಿರಿ. ನೀವು ಪಶ್ಚಾತ್ತಾಪಪಟ್ಟರೆ ನಿಮ್ಮ ಬಂಡವಾಳವನ್ನು ನೀವಿಟ್ಟುಕೊಳ್ಳಬಹುದು. ನೀವು ಅನ್ಯಾಯ ಮಾಡಬಾರದು ಮತ್ತು ನಿಮಗೂ ಅನ್ಯಾಯವಾಗಬಾರದು.

2:280

وَإِن كَانَ ذُو عُسۡرَةٖ فَنَظِرَةٌ إِلَىٰ مَيۡسَرَةٖۚ وَأَن تَصَدَّقُواْ خَيۡرٞ لَّكُمۡ إِن كُنتُمۡ تَعۡلَمُونَ ﴿280﴾

Transliteration: Wain kana thoo AAusratin fanathiratun ila maysaratin waan tasaddaqoo khayrun lakum in kuntum taAAlamoona

Translation: (ಸಾಲ ಪಡೆದವನು) ಕಷ್ಟದಲ್ಲಿದ್ದರೆ (ಅವನಿಗೆ) ನಿರಾಳತೆ ದೊರಕುವ ತನಕ ಕಾಲಾವಕಾಶ ನೀಡಿ. ನೀವು ಅದನ್ನು ದಾನವಾಗಿ ಬಿಟ್ಟುಬಿಟ್ಟರೆ ಅದು ನಿಮಗೆ ಅತ್ಯುತ್ತಮವಾಗಿದೆ. ನೀವು ತಿಳಿದವರಾಗಿದ್ದರೆ.

2:281

وَٱتَّقُواْ يَوۡمٗا تُرۡجَعُونَ فِيهِ إِلَى ٱللَّهِۖ ثُمَّ تُوَفَّىٰ كُلُّ نَفۡسٖ مَّا كَسَبَتۡ وَهُمۡ لَا يُظۡلَمُونَ ﴿281﴾

Transliteration: Waittaqoo yawman turjaAAoona feehi ila Allahi thumma tuwaffa kullu nafsin ma kasabat wahum la yuthlamoona

Translation: ನಿಮ್ಮನ್ನು ಅಲ್ಲಾಹನ ಬಳಿಗೆ ಮರಳಿಸಲಾಗುವ ಒಂದು ದಿನವನ್ನು ಭಯಪಡಿರಿ. ನಂತರ ಪ್ರತಿಯೊಬ್ಬರಿಗೂ ಅವರು ಮಾಡಿದ ಕರ್ಮಗಳ ಪ್ರತಿಫಲವನ್ನು ಪೂರ್ಣವಾಗಿ ನೀಡಲಾಗುವುದು. ಅವರಿಗೆ ಯಾವುದೇ ಅನ್ಯಾಯವಾಗುವುದಿಲ್ಲ.

2:282

يَـٰٓأَيُّهَا ٱلَّذِينَ ءَامَنُوٓاْ إِذَا تَدَايَنتُم بِدَيۡنٍ إِلَىٰٓ أَجَلٖ مُّسَمّٗى فَٱكۡتُبُوهُۚ وَلۡيَكۡتُب بَّيۡنَكُمۡ كَاتِبُۢ بِٱلۡعَدۡلِۚ وَلَا يَأۡبَ كَاتِبٌ أَن يَكۡتُبَ كَمَا عَلَّمَهُ ٱللَّهُۚ فَلۡيَكۡتُبۡ وَلۡيُمۡلِلِ ٱلَّذِي عَلَيۡهِ ٱلۡحَقُّ وَلۡيَتَّقِ ٱللَّهَ رَبَّهُۥ وَلَا يَبۡخَسۡ مِنۡهُ شَيۡـٔٗاۚ فَإِن كَانَ ٱلَّذِي عَلَيۡهِ ٱلۡحَقُّ سَفِيهًا أَوۡ ضَعِيفًا أَوۡ لَا يَسۡتَطِيعُ أَن يُمِلَّ هُوَ فَلۡيُمۡلِلۡ وَلِيُّهُۥ بِٱلۡعَدۡلِۚ وَٱسۡتَشۡهِدُواْ شَهِيدَيۡنِ مِن رِّجَالِكُمۡۖ فَإِن لَّمۡ يَكُونَا رَجُلَيۡنِ فَرَجُلٞ وَٱمۡرَأَتَانِ مِمَّن تَرۡضَوۡنَ مِنَ ٱلشُّهَدَآءِ أَن تَضِلَّ إِحۡدَىٰهُمَا فَتُذَكِّرَ إِحۡدَىٰهُمَا ٱلۡأُخۡرَىٰۚ وَلَا يَأۡبَ ٱلشُّهَدَآءُ إِذَا مَا دُعُواْۚ وَلَا تَسۡـَٔمُوٓاْ أَن تَكۡتُبُوهُ صَغِيرًا أَوۡ كَبِيرًا إِلَىٰٓ أَجَلِهِۦۚ ذَٰلِكُمۡ أَقۡسَطُ عِندَ ٱللَّهِ وَأَقۡوَمُ لِلشَّهَٰدَةِ وَأَدۡنَىٰٓ أَلَّا تَرۡتَابُوٓاْ إِلَّآ أَن تَكُونَ تِجَٰرَةً حَاضِرَةٗ تُدِيرُونَهَا بَيۡنَكُمۡ فَلَيۡسَ عَلَيۡكُمۡ جُنَاحٌ أَلَّا تَكۡتُبُوهَاۗ وَأَشۡهِدُوٓاْ إِذَا تَبَايَعۡتُمۡۚ وَلَا يُضَآرَّ كَاتِبٞ وَلَا شَهِيدٞۚ وَإِن تَفۡعَلُواْ فَإِنَّهُۥ فُسُوقُۢ بِكُمۡۗ وَٱتَّقُواْ ٱللَّهَۖ وَيُعَلِّمُكُمُ ٱللَّهُۗ وَٱللَّهُ بِكُلِّ شَيۡءٍ عَلِيمٞ ﴿282﴾

Transliteration: Ya ayyuha allatheena amanoo itha tadayantum bidaynin ila ajalin musamman faoktuboohu walyaktub baynakum katibun bialAAadli wala yaba katibun an yaktuba kama AAallamahu Allahu falyaktub walyumlili allathee AAalayhi alhaqqu walyattaqi Allaha rabbahu wala yabkhas minhu shayan fain kana allathee AAalayhi alhaqqu safeehan aw daAAeefan aw la yastateeAAu an yumilla huwa falyumlil waliyyuhu bialAAadli waistashhidoo shaheedayni min rijalikum fain lam yakoona rajulayni farajulun waimraatani mimman tardawna mina alshshuhadai an tadilla ihdahuma fatuthakkira ihdahuma alokhra wala yaba alshshuhadao itha ma duAAoo wala tasamoo an taktuboohu sagheeran aw kabeeran ila ajalihi thalikum aqsatu AAinda Allahi waaqwamu lilshshahadati waadna alla tartaboo illa an takoona tijaratan hadiratan tudeeroonaha baynakum falaysa AAalaykum junahun alla taktubooha waashhidoo itha tabayaAAtum wala yudarra katibun wala shaheedun wain tafAAaloo fainnahu fusooqun bikum waittaqoo Allaha wayuAAallimukumu Allahu waAllahu bikulli shayin AAaleemun

Translation: ಓ ಸತ್ಯವಿಶ್ವಾಸಿಗಳೇ! ನೀವು ಪರಸ್ಪರ ಅವಧಿಯನ್ನು ನಿಶ್ಚಯಿಸಿ ಸಾಲ ವ್ಯವಹಾರ ಮಾಡುವುದಾದರೆ ಅದನ್ನು ಬರೆದಿಟ್ಟುಕೊಳ್ಳಿ. ನಿಮ್ಮ ನಡುವೆ ಒಬ್ಬ ಬರಹಗಾರನು ನ್ಯಾಯಯುತವಾಗಿ ಬರೆಯಲಿ. ಅಲ್ಲಾಹು ಕಲಿಸಿಕೊಟ್ಟ ರೀತಿಯಲ್ಲಿ ಬರೆಯಲು ಬರಹಗಾರನು ನಿರಾಕರಿಸಬಾರದು. ಆದ್ದರಿಂದ ಅವನು ಬರೆಯಲಿ ಮತ್ತು ಸಾಲದ ಹೊಣೆ ಹೊತ್ತವನು ಏನು ಬರೆಯಬೇಕೆಂದು ಹೇಳಿಕೊಡಲಿ. ಅವನು ತನ್ನ ಪರಿಪಾಲಕನಾದ ಅಲ್ಲಾಹನನ್ನು ಭಯಪಡಲಿ ಮತ್ತು ಹೊಣೆಯಿಂದ ಏನೂ ಕಡಿಮೆಗೊಳಿಸದಿರಲಿ. ಸಾಲದ ಹೊಣೆ ಹೊತ್ತವನು ಅವಿವೇಕಿಯಾಗಿದ್ದರೆ, ಅಥವಾ ಬಲಹೀನನಾಗಿದ್ದರೆ, ಅಥವಾ ಹೇಳಿಕೊಡಲು ಅಸಮರ್ಥನಾಗಿದ್ದರೆ ಅವನ ಪೋಷಕರು ನ್ಯಾಯಯುತವಾಗಿ ಹೇಳಿಕೊಡಲಿ. ನಿಮ್ಮ ಪೈಕಿ ಇಬ್ಬರು ಪುರುಷರನ್ನು ಸಾಕ್ಷಿ ನಿಲ್ಲಿಸಿರಿ. ಇಬ್ಬರು ಪುರುಷರಿಲ್ಲದಿದ್ದರೆ ಸಾಕ್ಷಿ ನಿಲ್ಲುವವರ ಪೈಕಿ ನಿಮಗೆ ತೃಪ್ತಿಯಾಗುವ ಒಬ್ಬ ಪುರುಷ ಮತ್ತು ಇಬ್ಬರು ಮಹಿಳೆಯರು ಸಾಕ್ಷಿ ನಿಲ್ಲಲಿ. ಅವರಲ್ಲಿ ಒಬ್ಬಳು ಮರೆತುಬಿಟ್ಟರೆ ಇನ್ನೊಬ್ಬಳು ನೆನಪಿಸುವುದಕ್ಕಾಗಿ. ಸಾಕ್ಷಿಗಳನ್ನು ಕರೆದಾಗ ಅವರು ಬರಲು ಅಸಮ್ಮತಿ ಸೂಚಿಸಬಾರದು. ಸಾಲವನ್ನು ಅದು ಚಿಕ್ಕದಾಗಿರಲಿ ಅಥವಾ ದೊಡ್ಡದಾಗಿರಲಿ ಅದರ ನಿಶ್ಚಿತ ಅವಧಿಗೆ ಬರೆಯಲು ಆಲಸ್ಯ ಮಾಡಬೇಡಿ. ಇದು ಅಲ್ಲಾಹನ ಬಳಿ ಅತ್ಯಂತ ನ್ಯಾಯಸಮ್ಮತವಾಗಿದೆ, ಸಾಕ್ಷಿಯನ್ನು ಹೆಚ್ಚು ಸರಿಯಾಗಿಡುತ್ತದೆ ಮತ್ತು ನೀವು ಸಂಶಯಪಡದಂತೆ ಮಾಡುತ್ತದೆ. ಆದರೆ ಅದು ನೀವು ಪರಸ್ಪರ ನಡೆಸುವ ನಗದು ವ್ಯಾಪಾರದ ರೂಪದಲ್ಲಿದ್ದರೆ ಅದನ್ನು ಬರೆಯದಿದ್ದರೆ ನಿಮಗೆ ದೋಷವಿಲ್ಲ. ಆದರೆ ನೀವು ಕ್ರಯ-ವಿಕ್ರಯ ಮಾಡುವಾಗ ಸಾಕ್ಷಿಗಳನ್ನು ನಿಲ್ಲಿಸಿರಿ. ಬರಹಗಾರನಿಗೆ ಅಥವಾ ಸಾಕ್ಷಿಗೆ ತೊಂದರೆಯಾಗದಂತೆ ನೋಡಿಕೊಳ್ಳಿ. ನೀವೇನಾದರೂ ತೊಂದರೆಯಾಗುವಂತೆ ಮಾಡಿದರೆ ಅದು ನಿಮ್ಮ ದುಷ್ಕರ್ಮವೆಂದು ಪರಿಗಣಿಸಲಾಗುವುದು. ಅಲ್ಲಾಹನನ್ನು ಭಯಪಡಿರಿ. ಅಲ್ಲಾಹು ನಿಮಗೆ ಕಲಿಸಿಕೊಡುತ್ತಿದ್ದಾನೆ. ಅಲ್ಲಾಹು ಎಲ್ಲಾ ವಿಷಯಗಳನ್ನೂ ತಿಳಿದವನಾಗಿದ್ದಾನೆ.

2:283

وَإِن كُنتُمۡ عَلَىٰ سَفَرٖ وَلَمۡ تَجِدُواْ كَاتِبٗا فَرِهَٰنٞ مَّقۡبُوضَةٞۖ فَإِنۡ أَمِنَ بَعۡضُكُم بَعۡضٗا فَلۡيُؤَدِّ ٱلَّذِي ٱؤۡتُمِنَ أَمَٰنَتَهُۥ وَلۡيَتَّقِ ٱللَّهَ رَبَّهُۥۗ وَلَا تَكۡتُمُواْ ٱلشَّهَٰدَةَۚ وَمَن يَكۡتُمۡهَا فَإِنَّهُۥٓ ءَاثِمٞ قَلۡبُهُۥۗ وَٱللَّهُ بِمَا تَعۡمَلُونَ عَلِيمٞ ﴿283﴾

Transliteration: Wain kuntum AAala safarin walam tajidoo katiban farihanun maqboodatun fain amina baAAdukum baAAdan falyuaddi allathee itumina amanatahu walyattaqi Allaha rabbahu wala taktumoo alshshahadata waman yaktumha fainnahu athimun qalbuhu waAllahu bima taAAmaloona AAaleemun

Translation: ನೀವು ಪ್ರಯಾಣದಲ್ಲಿದ್ದು ನಿಮಗೆ ಬರಹಗಾರನು ಸಿಗದಿದ್ದರೆ, ಅಡಮಾನವನ್ನು ಸ್ವಾಧೀನದಲ್ಲಿರಿಸಿಕೊಳ್ಳಿರಿ. ನೀವು ಪರಸ್ಪರ ವಿಶ್ವಾಸವನ್ನು ಹೊಂದಿದ್ದರೆ ವಿಶ್ವಾಸವಿಡಲಾದವನು (ಸಾಲ ಪಡೆದವನು) ತನ್ನ ವಿಶ್ವಸ್ತತೆಯನ್ನು ನೆರವೇರಿಸಲಿ ಮತ್ತು ತನ್ನ ಪರಿಪಾಲಕನಾದ ಅಲ್ಲಾಹನನ್ನು ಭಯಪಡಲಿ.[1] ನೀವು ಸಾಕ್ಷ್ಯವನ್ನು ಬಚ್ಚಿಡಬೇಡಿ. ಯಾರು ಅದನ್ನು ಬಚ್ಚಿಡುತ್ತಾನೋ ಅವನು ಪಾಪಭರಿತ ಹೃದಯದವನಾಗಿದ್ದಾನೆ. ಅಲ್ಲಾಹು ನೀವು ಮಾಡುತ್ತಿರುವ ಕರ್ಮಗಳನ್ನು ನೋಡುತ್ತಿದ್ದಾನೆ.

2:284

لِّلَّهِ مَا فِي ٱلسَّمَٰوَٰتِ وَمَا فِي ٱلۡأَرۡضِۗ وَإِن تُبۡدُواْ مَا فِيٓ أَنفُسِكُمۡ أَوۡ تُخۡفُوهُ يُحَاسِبۡكُم بِهِ ٱللَّهُۖ فَيَغۡفِرُ لِمَن يَشَآءُ وَيُعَذِّبُ مَن يَشَآءُۗ وَٱللَّهُ عَلَىٰ كُلِّ شَيۡءٖ قَدِيرٌ ﴿284﴾

Transliteration: Lillahi ma fee alssamawati wama fee alardi wain tubdoo ma fee anfusikum aw tukhfoohu yuhasibkum bihi Allahu fayaghfiru liman yashao wayuAAaththibu man yashao waAllahu AAala kulli shayin qadeerun

Translation: ಭೂಮ್ಯಾಕಾಶಗಳಲ್ಲಿರುವುದೆಲ್ಲವೂ ಅಲ್ಲಾಹನಿಗೆ ಸೇರಿದ್ದು. ನೀವು ನಿಮ್ಮ ಮನಸ್ಸಿನಲ್ಲಿರುವುದನ್ನು ಬಹಿರಂಗಪಡಿಸಿದರೂ ಅಥವಾ ಮುಚ್ಚಿಟ್ಟರೂ ಅಲ್ಲಾಹು ಅದರ ಬಗ್ಗೆ ನಿಮ್ಮನ್ನು ವಿಚಾರಣೆ ಮಾಡುವನು. ನಂತರ ಅವನು ಇಚ್ಛಿಸಿದವರಿಗೆ ಅವನು ಕ್ಷಮಿಸುವನು ಮತ್ತು ಅವನು ಇಚ್ಛಿಸಿದವರನ್ನು ಶಿಕ್ಷಿಸುವನು. ಅಲ್ಲಾಹು ಎಲ್ಲಾ ವಿಷಯಗಳಲ್ಲೂ ಸಾಮರ್ಥ್ಯವುಳ್ಳವನಾಗಿದ್ದಾನೆ.

2:285

ءَامَنَ ٱلرَّسُولُ بِمَآ أُنزِلَ إِلَيۡهِ مِن رَّبِّهِۦ وَٱلۡمُؤۡمِنُونَۚ كُلٌّ ءَامَنَ بِٱللَّهِ وَمَلَـٰٓئِكَتِهِۦ وَكُتُبِهِۦ وَرُسُلِهِۦ لَا نُفَرِّقُ بَيۡنَ أَحَدٖ مِّن رُّسُلِهِۦۚ وَقَالُواْ سَمِعۡنَا وَأَطَعۡنَاۖ غُفۡرَانَكَ رَبَّنَا وَإِلَيۡكَ ٱلۡمَصِيرُ ﴿285﴾

Transliteration: Amana alrrasoolu bima onzila ilayhi min rabbihi waalmuminoona kullun amana biAllahi wamalaikatihi wakutubihi warusulihi la nufarriqu bayna ahadin min rusulihi waqaloo samiAAna waataAAna ghufranaka rabbana wailayka almaseeru

Translation: ತಮ್ಮ ಪರಿಪಾಲಕನಿಂದ (ಅಲ್ಲಾಹನಿಂದ) ಅವತೀರ್ಣವಾದ ಸಂದೇಶದಲ್ಲಿ ಸಂದೇಶವಾಹಕರು ವಿಶ್ವಾಸವಿಟ್ಟಿದ್ದಾರೆ; ಸತ್ಯವಿಶ್ವಾಸಿಗಳು ಕೂಡ ವಿಶ್ವಾಸವಿಟ್ಟಿದ್ದಾರೆ. ಅವರೆಲ್ಲರೂ ಅಲ್ಲಾಹನಲ್ಲಿ, ಅವನ ದೇವದೂತರುಗಳಲ್ಲಿ, ಅವನ ಗ್ರಂಥಗಳಲ್ಲಿ ಮತ್ತು ಅವನ ಸಂದೇಶವಾಹಕರುಗಳಲ್ಲಿ ವಿಶ್ವಾಸವಿಟ್ಟಿದ್ದಾರೆ. ಅವನ ಸಂದೇಶವಾಹಕರುಗಳಲ್ಲಿ ಯಾರ ನಡುವೆಯೂ ನಾವು ಬೇಧ ಮಾಡುವುದಿಲ್ಲ. ಅವರು ಹೇಳುತ್ತಾರೆ: "ನಾವು ಕೇಳಿದ್ದೇವೆ ಮತ್ತು ವಿಧೇಯರಾಗಿದ್ದೇವೆ. ಓ ನಮ್ಮ ಪರಿಪಾಲಕನೇ! ನಮ್ಮನ್ನು ಕ್ಷಮಿಸು. ನಮಗೆ ನಿನ್ನ ಬಳಿಗೇ ಮರಳಬೇಕಾಗಿದೆ."

2:286

لَا يُكَلِّفُ ٱللَّهُ نَفۡسًا إِلَّا وُسۡعَهَاۚ لَهَا مَا كَسَبَتۡ وَعَلَيۡهَا مَا ٱكۡتَسَبَتۡۗ رَبَّنَا لَا تُؤَاخِذۡنَآ إِن نَّسِينَآ أَوۡ أَخۡطَأۡنَاۚ رَبَّنَا وَلَا تَحۡمِلۡ عَلَيۡنَآ إِصۡرٗا كَمَا حَمَلۡتَهُۥ عَلَى ٱلَّذِينَ مِن قَبۡلِنَاۚ رَبَّنَا وَلَا تُحَمِّلۡنَا مَا لَا طَاقَةَ لَنَا بِهِۦۖ وَٱعۡفُ عَنَّا وَٱغۡفِرۡ لَنَا وَٱرۡحَمۡنَآۚ أَنتَ مَوۡلَىٰنَا فَٱنصُرۡنَا عَلَى ٱلۡقَوۡمِ ٱلۡكَٰفِرِينَ ﴿286﴾

Transliteration: La yukallifu Allahu nafsan illa wusAAaha laha ma kasabat waAAalayha ma iktasabat rabbana la tuakhithna in naseena aw akhtana rabbana wala tahmil AAalayna isran kama hamaltahu AAala allatheena min qablina rabbana wala tuhammilna ma la taqata lana bihi waoAAfu AAanna waighfir lana wairhamna anta mawlana faonsurna AAala alqawmi alkafireena

Translation: ಅಲ್ಲಾಹು ಯಾವುದೇ ವ್ಯಕ್ತಿಯ ಮೇಲೂ ಅವನ ಸಾಮರ್ಥ್ಯಕ್ಕೆ ಮೀರಿದ್ದನ್ನು ಹೊರಿಸುವುದಿಲ್ಲ. ಅವನು ಮಾಡಿದ ಒಳಿತು ಅವನಿಗೆ ಮತ್ತು ಅವನು ಮಾಡಿದ ಕೆಡುಕು ಅವನಿಗೆ. “ಓ ನಮ್ಮ ಪರಿಪಾಲಕನೇ! ನಾವು ಮರೆತುಬಿಟ್ಟರೆ ಅಥವಾ ತಪ್ಪು ಮಾಡಿದರೆ ನಮ್ಮನ್ನು ಹಿಡಿದು ಶಿಕ್ಷಿಸಬೇಡ. ಓ ನಮ್ಮ ಪರಿಪಾಲಕನೇ! ನಮಗಿಂತ ಮೊದಲಿನವರ ಮೇಲೆ ನೀನು ಹೊರಿಸಿದಂತಹ ಹೊರೆಯನ್ನು ನಮ್ಮ ಮೇಲೆ ಹೊರಿಸಬೇಡ. ಓ ನಮ್ಮ ಪರಿಪಾಲಕನೇ! ನಮಗೆ ಹೊರಲು ಸಾಮರ್ಥ್ಯವಿಲ್ಲದ್ದನ್ನು ನಮ್ಮ ಮೇಲೆ ಹೊರಿಸಬೇಡ. ನಮ್ಮನ್ನು ಮನ್ನಿಸು, ನಮ್ಮನ್ನು ಕ್ಷಮಿಸು ಮತ್ತು ನಮಗೆ ದಯೆ ತೋರು. ನೀನೇ ನಮ್ಮ ಸಂರಕ್ಷಕ. ಸತ್ಯನಿಷೇಧಿಗಳಾದ ಜನರ ಮೇಲೆ ನಮಗೆ ಜಯವನ್ನು ದಯಪಾಲಿಸು.”

Transliteration source: English Transliteration by Tanzil. Used under Tanzil's non-commercial terms; see the source and latest updates at Tanzil. Tanzil translation download