quranm◉

Surah Al-Furqan transliteration

◉ ಸೂರಾ · ∞

25:1

تَبَارَكَ ٱلَّذِي نَزَّلَ ٱلۡفُرۡقَانَ عَلَىٰ عَبۡدِهِۦ لِيَكُونَ لِلۡعَٰلَمِينَ نَذِيرًا ﴿1﴾

Transliteration: Tabaraka allathee nazzala alfurqana AAala AAabdihi liyakoona lilAAalameena natheeran

Translation: ಸತ್ಯಾಸತ್ಯ ವಿವೇಚಕ ಗ್ರಂಥವನ್ನು (ಕುರ್‌ಆನನ್ನು) ತನ್ನ ದಾಸನಿಗೆ (ಪ್ರವಾದಿಗೆ)—ಅವರು ಸರ್ವಲೋಕದವರಿಗೆ ಒಬ್ಬ ಮುನ್ನೆಚ್ಚರಿಕೆಗಾರನಾಗಲೆಂದು—ಅವತೀರ್ಣಗೊಳಿಸಿದ ಅಲ್ಲಾಹು ಸಮೃದ್ಧಪೂರ್ಣನಾಗಿದ್ದಾನೆ.

25:2

ٱلَّذِي لَهُۥ مُلۡكُ ٱلسَّمَٰوَٰتِ وَٱلۡأَرۡضِ وَلَمۡ يَتَّخِذۡ وَلَدٗا وَلَمۡ يَكُن لَّهُۥ شَرِيكٞ فِي ٱلۡمُلۡكِ وَخَلَقَ كُلَّ شَيۡءٖ فَقَدَّرَهُۥ تَقۡدِيرٗا ﴿2﴾

Transliteration: Allathee lahu mulku alssamawati waalardi walam yattakhith waladan walam yakun lahu shareekun fee almulki wakhalaqa kulla shayin faqaddarahu taqdeeran

Translation: ಅಂದರೆ ಭೂಮ್ಯಾಕಾಶಗಳ ಸಾರ್ವಭೌಮತ್ವವು ಯಾರಿಗೆ ಸೇರಿದೆಯೋ ಅವನು. ಅವನಿಗೆ ಯಾವುದೇ ಮಕ್ಕಳಿಲ್ಲ. ಸಾರ್ವಭೌಮತ್ವದಲ್ಲಿ ಅವನೊಂದಿಗೆ ಯಾವುದೇ ಸಹಭಾಗಿಗಳಿಲ್ಲ. ಅವನು ಎಲ್ಲಾ ವಸ್ತುಗಳನ್ನೂ ಸೃಷ್ಟಿಸಿ ಅದಕ್ಕೆ ನಿಖರವಾದ ನಿರ್ಣಯವನ್ನು ನಿಶ್ಚಯಿಸಿದ್ದಾನೆ.

25:3

وَٱتَّخَذُواْ مِن دُونِهِۦٓ ءَالِهَةٗ لَّا يَخۡلُقُونَ شَيۡـٔٗا وَهُمۡ يُخۡلَقُونَ وَلَا يَمۡلِكُونَ لِأَنفُسِهِمۡ ضَرّٗا وَلَا نَفۡعٗا وَلَا يَمۡلِكُونَ مَوۡتٗا وَلَا حَيَوٰةٗ وَلَا نُشُورٗا ﴿3﴾

Transliteration: Waittakhathoo min doonihi alihatan la yakhluqoona shayan wahum yukhlaqoona wala yamlikoona lianfusihim darran wala nafAAan wala yamlikoona mawtan wala hayatan wala nushooran

Translation: ಅವರು ಅವನನ್ನು ಬಿಟ್ಟು ಬೇರೆ ದೇವರುಗಳನ್ನು ಸ್ವೀಕರಿಸಿದ್ದಾರೆ. ಆದರೆ, ಆ ದೇವರುಗಳು ಯಾವುದೇ ವಸ್ತುವನ್ನು ಸೃಷ್ಟಿಸುವುದಿಲ್ಲ. ವಾಸ್ತವವಾಗಿ ಅವರೇ ಸೃಷ್ಟಿಗಳು. ಸ್ವಯಂ ತಮಗೂ ಕೂಡ ಯಾವುದೇ ತೊಂದರೆ ಅಥವಾ ಉಪಕಾರವನ್ನು ಮಾಡುವ ಸಾಮರ್ಥ್ಯವನ್ನು ಅವರು ಹೊಂದಿಲ್ಲ. ಮರಣ, ಜೀವನ, ಪುನರುತ್ಥಾನ ಮುಂತಾದ ಯಾವುದೂ ಅವರ ವಶದಲ್ಲಿಲ್ಲ.

25:4

وَقَالَ ٱلَّذِينَ كَفَرُوٓاْ إِنۡ هَٰذَآ إِلَّآ إِفۡكٌ ٱفۡتَرَىٰهُ وَأَعَانَهُۥ عَلَيۡهِ قَوۡمٌ ءَاخَرُونَۖ فَقَدۡ جَآءُو ظُلۡمٗا وَزُورٗا ﴿4﴾

Transliteration: Waqala allatheena kafaroo in hatha illa ifkun iftarahu waaAAanahu AAalayhi qawmun akharoona faqad jaoo thulman wazooran

Translation: ಸತ್ಯನಿಷೇಧಿಗಳು ಹೇಳಿದರು: “ಈ ಕುರ್‌ಆನ್ ಸುಳ್ಳಿನ ಕಂತೆಯಾಗಿದೆ. ಅವನು (ಪ್ರವಾದಿ) ಇದನ್ನು ಸ್ವಯಂ ರಚಿಸಿದ್ದಾನೆ. ಬೇರೆ ಕೆಲವರು ಕೂಡ ಅದಕ್ಕೆ ಸಹಾಯ ಮಾಡಿದ್ದಾರೆ.” ಇವರು ಮಹಾ ಅನ್ಯಾಯವನ್ನು ಮತ್ತು ಸುಳ್ಳಾರೋಪವನ್ನು ಮಾಡಿದ್ದಾರೆ.

25:5

وَقَالُوٓاْ أَسَٰطِيرُ ٱلۡأَوَّلِينَ ٱكۡتَتَبَهَا فَهِيَ تُمۡلَىٰ عَلَيۡهِ بُكۡرَةٗ وَأَصِيلٗا ﴿5﴾

Transliteration: Waqaloo asateeru alawwaleena iktatabaha fahiya tumla AAalayhi bukratan waaseelan

Translation: ಅವರು ಹೇಳಿದರು: “ಇದು ಪ್ರಾಚೀನ ಕಾಲದ ಜನರ ಪುರಾಣಗಳು. ಅವನು (ಪ್ರವಾದಿ) ಇದನ್ನು ಸ್ವಯಂ ಬರೆಯುತ್ತಿದ್ದಾನೆ. ಮುಂಜಾನೆ ಮತ್ತು ಸಂಜೆ ಅವನಿಗೆ ಇದನ್ನು ಓದಿಕೊಡಲಾಗುತ್ತಿದೆ.”

25:6

قُلۡ أَنزَلَهُ ٱلَّذِي يَعۡلَمُ ٱلسِّرَّ فِي ٱلسَّمَٰوَٰتِ وَٱلۡأَرۡضِۚ إِنَّهُۥ كَانَ غَفُورٗا رَّحِيمٗا ﴿6﴾

Transliteration: Qul anzalahu allathee yaAAlamu alssirra fee alssamawati waalardi innahu kana ghafooran raheeman

Translation: ಹೇಳಿರಿ: “ಭೂಮ್ಯಾಕಾಶಗಳಲ್ಲಿರುವ ರಹಸ್ಯಗಳನ್ನು ತಿಳಿದವನೇ ಇದನ್ನು ಅವತೀರ್ಣಗೊಳಿಸಿದ್ದಾನೆ. ನಿಶ್ಚಯವಾಗಿಯೂ ಅವನು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.”

25:7

وَقَالُواْ مَالِ هَٰذَا ٱلرَّسُولِ يَأۡكُلُ ٱلطَّعَامَ وَيَمۡشِي فِي ٱلۡأَسۡوَاقِ لَوۡلَآ أُنزِلَ إِلَيۡهِ مَلَكٞ فَيَكُونَ مَعَهُۥ نَذِيرًا ﴿7﴾

Transliteration: Waqaloo mali hatha alrrasooli yakulu alttaAAama wayamshee fee alaswaqi lawla onzila ilayhi malakun fayakoona maAAahu natheeran

Translation: ಅವರು ಹೇಳುತ್ತಾರೆ: “ಇವನೆಂತಹ ಪ್ರವಾದಿ? ಇವನು ಆಹಾರ ಸೇವಿಸುತ್ತಾನೆ ಮತ್ತು ಪೇಟೆಗಳಲ್ಲಿ ಸಂಚರಿಸುತ್ತಾನೆ. ಇವನ ಜೊತೆಗೆ ಒಬ್ಬ ದೇವದೂತನನ್ನು ಏಕೆ ಕಳುಹಿಸಲಾಗಿಲ್ಲ? ಅವನು ಕೂಡ ಇವನ ಜೊತೆಗೆ ಸೇರಿ ಮುನ್ನೆಚ್ಚರಿಕೆ ನೀಡಬಹುದಿತ್ತಲ್ಲವೇ?

25:8

أَوۡ يُلۡقَىٰٓ إِلَيۡهِ كَنزٌ أَوۡ تَكُونُ لَهُۥ جَنَّةٞ يَأۡكُلُ مِنۡهَاۚ وَقَالَ ٱلظَّـٰلِمُونَ إِن تَتَّبِعُونَ إِلَّا رَجُلٗا مَّسۡحُورًا ﴿8﴾

Transliteration: Aw yulqa ilayhi kanzun aw takoonu lahu jannatun yakulu minha waqala alththalimoona in tattabiAAoona illa rajulan mashooran

Translation: ಅಥವಾ ಇವನ ಬಳಿ ಒಂದು ನಿಧಿಯನ್ನು ಏಕೆ ಹಾಕಿಲ್ಲ? ಅಥವಾ ಇವನಿಗೆ ಹಣ್ಣುಗಳನ್ನು ತಿನ್ನಲು ಒಂದು ತೋಟವನ್ನು ಏಕೆ ಕೊಡಲಾಗಿಲ್ಲ?” ಆ ಅಕ್ರಮಿಗಳು ಹೇಳಿದರು: “ನೀವು ಮಾಟ ಮಾಡಲಾದ ವ್ಯಕ್ತಿಯನ್ನೇ ಅನುಸರಿಸುತ್ತಿದ್ದೀರಿ.”

25:9

ٱنظُرۡ كَيۡفَ ضَرَبُواْ لَكَ ٱلۡأَمۡثَٰلَ فَضَلُّواْ فَلَا يَسۡتَطِيعُونَ سَبِيلٗا ﴿9﴾

Transliteration: Onthur kayfa daraboo laka alamthala fadalloo fala yastateeAAoona sabeelan

Translation: ನೋಡಿ! ಅವರು ನಿಮ್ಮ ಬಗ್ಗೆ ಹೇಗೆಲ್ಲಾ ಮಾತನಾಡುತ್ತಿದ್ದಾರೆಂದು. Fದರಿಂದ ಸ್ವತಃ ಅವರೇ ದಾರಿತಪ್ಪುತ್ತಿದ್ದಾರೆ. ಅವರಿಗೆ ಯಾವುದೇ ರೀತಿಯಲ್ಲೂ ಸರಿದಾರಿಗೆ ಬರಲು ಸಾಧ್ಯವಾಗುವುದಿಲ್ಲ.

25:10

تَبَارَكَ ٱلَّذِيٓ إِن شَآءَ جَعَلَ لَكَ خَيۡرٗا مِّن ذَٰلِكَ جَنَّـٰتٖ تَجۡرِي مِن تَحۡتِهَا ٱلۡأَنۡهَٰرُ وَيَجۡعَل لَّكَ قُصُورَۢا ﴿10﴾

Transliteration: Tabaraka allathee in shaa jaAAala laka khayran min thalika jannatin tajree min tahtiha alanharu wayajAAal laka qusooran

Translation: ಅಲ್ಲಾಹು ಸಮೃದ್ಧಪೂರ್ಣನು. ಅವನು ಇಚ್ಛಿಸಿದರೆ ನಿಮಗೆ ಅವರು ಹೇಳುವುದಕ್ಕಿಂತಲೂ ಶ್ರೇಷ್ಠವಾದುದನ್ನು, ಅಂದರೆ ತಳಭಾಗದಲ್ಲಿ ನದಿಗಳು ಹರಿಯುವ ತೋಟಗಳನ್ನು ದಯಪಾಲಿಸುವನು ಮತ್ತು ನಿಮಗೆ ಮಹಾ ಸೌಧಗಳನ್ನು ದಯಪಾಲಿಸುವನು.

25:11

بَلۡ كَذَّبُواْ بِٱلسَّاعَةِۖ وَأَعۡتَدۡنَا لِمَن كَذَّبَ بِٱلسَّاعَةِ سَعِيرًا ﴿11﴾

Transliteration: Bal kaththaboo bialssaAAati waaAAtadna liman kaththaba bialssaAAati saAAeeran

Translation: ಆದರೆ, ಅವರು ಅಂತ್ಯಸಮಯವನ್ನು ನಿಷೇಧಿಸಿದರು. ಅಂತ್ಯಸಮಯವನ್ನು ನಿಷೇಧಿಸಿದವರಿಗೆ ನಾವು ಧಗಧಗಿಸುವ ನರಕಾಗ್ನಿಯನ್ನು ಸಿದ್ಧಗೊಳಿಸಿದ್ದೇವೆ.

25:12

إِذَا رَأَتۡهُم مِّن مَّكَانِۭ بَعِيدٖ سَمِعُواْ لَهَا تَغَيُّظٗا وَزَفِيرٗا ﴿12﴾

Transliteration: Itha raathum min makanin baAAeedin samiAAoo laha taghayyuthan wazafeeran

Translation: ಅದು ಅವರನ್ನು ವಿದೂರ ಸ್ಥಳದಿಂದ ನೋಡುವಾಗಲೇ, ಅದು ರೋಷಾವೇಶದಿಂದ ಆರ್ಭಟಿಸುವುದನ್ನು ಅವರು ಕೇಳುವರು.

25:13

وَإِذَآ أُلۡقُواْ مِنۡهَا مَكَانٗا ضَيِّقٗا مُّقَرَّنِينَ دَعَوۡاْ هُنَالِكَ ثُبُورٗا ﴿13﴾

Transliteration: Waitha olqoo minha makanan dayyiqan muqarraneena daAAaw hunalika thubooran

Translation: ಅವರನ್ನು ಸಂಕೋಲೆಗಳಿಂದ ಬಂಧಿಸಿ ನರಕದ ಒಂದು ಇಕ್ಕಟ್ಟಾದ ಸ್ಥಳದಲ್ಲಿ ಎಸೆಯಲಾದರೆ ಅವರು ಅಲ್ಲಿ ವಿನಾಶವನ್ನು ಕೂಗಿ ಕರೆಯುವರು.

25:14

لَّا تَدۡعُواْ ٱلۡيَوۡمَ ثُبُورٗا وَٰحِدٗا وَٱدۡعُواْ ثُبُورٗا كَثِيرٗا ﴿14﴾

Transliteration: La tadAAoo alyawma thubooran wahidan waodAAoo thubooran katheeran

Translation: (ಅವರೊಡನೆ ಹೇಳಲಾಗುವುದು).“ಇಂದು ನೀವು ಒಂದು ವಿನಾಶವನ್ನು ಕೂಗಿ ಕರೆಯಬೇಡಿ. ಹಲವಾರು ವಿನಾಶಗಳನ್ನು ಕೂಗಿ ಕರೆಯಿರಿ.”

25:15

قُلۡ أَذَٰلِكَ خَيۡرٌ أَمۡ جَنَّةُ ٱلۡخُلۡدِ ٱلَّتِي وُعِدَ ٱلۡمُتَّقُونَۚ كَانَتۡ لَهُمۡ جَزَآءٗ وَمَصِيرٗا ﴿15﴾

Transliteration: Qul athalika khayrun am jannatu alkhuldi allatee wuAAida almuttaqoona kanat lahum jazaan wamaseeran

Translation: ಹೇಳಿರಿ: “ಅದು ಶ್ರೇಷ್ಠವೇ? ಅಥವಾ ದೇವಭಯವುಳ್ಳವರಿಗೆ ವಾಗ್ದಾನ ಮಾಡಲಾದ ಶಾಶ್ವತ ಸ್ವರ್ಗವು ಶ್ರೇಷ್ಠವೇ?” ಅದು ಅವರಿಗೆ ನೀಡಲಾಗುವ ಪ್ರತಿಫಲ ಮತ್ತು ಅವರ ಗಮ್ಯಸ್ಥಾನವಾಗಿದೆ.

25:16

لَّهُمۡ فِيهَا مَا يَشَآءُونَ خَٰلِدِينَۚ كَانَ عَلَىٰ رَبِّكَ وَعۡدٗا مَّسۡـُٔولٗا ﴿16﴾

Transliteration: Lahum feeha ma yashaoona khalideena kana AAala rabbika waAAdan masoolan

Translation: ಅವರಿಗೆ ಅಲ್ಲಿ ಅವರು ಇಚ್ಛಿಸುವುದೆಲ್ಲವೂ ದೊರೆಯುತ್ತದೆ. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುತ್ತಾರೆ. ಅದು ನಿಮ್ಮ ಪರಿಪಾಲಕನ (ಅಲ್ಲಾಹನ) ಉತ್ತರದಾಯಿತ್ವವಿರುವ ವಾಗ್ದಾನವಾಗಿದೆ.

25:17

وَيَوۡمَ يَحۡشُرُهُمۡ وَمَا يَعۡبُدُونَ مِن دُونِ ٱللَّهِ فَيَقُولُ ءَأَنتُمۡ أَضۡلَلۡتُمۡ عِبَادِي هَـٰٓؤُلَآءِ أَمۡ هُمۡ ضَلُّواْ ٱلسَّبِيلَ ﴿17﴾

Transliteration: Wayawma yahshuruhum wama yaAAbudoona min dooni Allahi fayaqoolu aantum adlaltum AAibadee haolai am hum dalloo alssabeela

Translation: ಅವನು ಅವರನ್ನು ಮತ್ತು ಅಲ್ಲಾಹನನ್ನು ಬಿಟ್ಟು ಅವರು ಆರಾಧಿಸುತ್ತಿದ್ದ ದೇವರುಗಳನ್ನು ಒಟ್ಟುಗೂಡಿಸುವ ದಿನ! ಅವನು (ಆ ದೇವರುಗಳೊಡನೆ) ಕೇಳುವನು: “ನನ್ನ ಈ ದಾಸರನ್ನು ದಾರಿತಪ್ಪಿಸಿದ್ದು ನೀವೋ? ಅಥವಾ ಸ್ವತಃ ಅವರೇ ದಾರಿತಪ್ಪಿದರೋ?”

25:18

قَالُواْ سُبۡحَٰنَكَ مَا كَانَ يَنۢبَغِي لَنَآ أَن نَّتَّخِذَ مِن دُونِكَ مِنۡ أَوۡلِيَآءَ وَلَٰكِن مَّتَّعۡتَهُمۡ وَءَابَآءَهُمۡ حَتَّىٰ نَسُواْ ٱلذِّكۡرَ وَكَانُواْ قَوۡمَۢا بُورٗا ﴿18﴾

Transliteration: Qaloo subhanaka ma kana yanbaghee lana an nattakhitha min doonika min awliyaa walakin mattaAAtahum waabaahum hatta nasoo alththikra wakanoo qawman booran

Translation: ಅವರು (ದೇವರುಗಳು) ಹೇಳುವರು: “ನೀನು ಪರಿಶುದ್ಧನು! ನಿನ್ನನ್ನು ಬಿಟ್ಟು ಬೇರೆಯವರನ್ನು ರಕ್ಷಕರಾಗಿ ಸ್ವೀಕರಿಸುವುದು ನಮಗೆ ಯೋಗ್ಯವಲ್ಲ. ಆದರೆ ನೀನು ಅವರಿಗೆ ಮತ್ತು ಅವರ ಪೂರ್ವಜರಿಗೆ ಸವಲತ್ತುಗಳನ್ನು ದಯಪಾಲಿಸಿದೆ. ಎಲ್ಲಿಯವರೆಗೆಂದರೆ ಅವರು ಉಪದೇಶವನ್ನು ಸಂಪೂರ್ಣ ಮರೆತು, ನಾಶವಾಗಿ ಹೋದ ಒಂದು ಜನತೆಯಾಗಿ ಮಾರ್ಪಡುವ ತನಕ.”

25:19

فَقَدۡ كَذَّبُوكُم بِمَا تَقُولُونَ فَمَا تَسۡتَطِيعُونَ صَرۡفٗا وَلَا نَصۡرٗاۚ وَمَن يَظۡلِم مِّنكُمۡ نُذِقۡهُ عَذَابٗا كَبِيرٗا ﴿19﴾

Transliteration: Faqad kaththabookum bima taqooloona fama tastateeAAoona sarfan wala nasran waman yathlim minkum nuthiqhu AAathaban kabeeran

Translation: (ಅಲ್ಲಾಹು ಬಹುದೇವಾರಾಧಕರೊಡನೆ ಹೇಳುವನು): “ನೀವು ಏನು ಹೇಳುತ್ತಿದ್ದಿರೋ ಅದನ್ನು ಅವರು (ದೇವರುಗಳು) ನಿಷೇಧಿಸಿದ್ದಾರೆ. ಇನ್ನು ಶಿಕ್ಷೆಯನ್ನು ದೂರೀಕರಿಸಲು ಅಥವಾ ಯಾವುದೇ ಸಹಾಯ ಪಡೆಯಲು ನಿಮಗೆ ಸಾಧ್ಯವಿಲ್ಲ. ನಿಮ್ಮಲ್ಲಿ ಅಕ್ರಮವೆಸಗಿದವನು[1] ಯಾರೋ ಅವನಿಗೆ ನಾವು ಮಹಾ ಶಿಕ್ಷೆಯ ರುಚಿಯನ್ನು ತೋರಿಸುವೆವು.”

25:20

وَمَآ أَرۡسَلۡنَا قَبۡلَكَ مِنَ ٱلۡمُرۡسَلِينَ إِلَّآ إِنَّهُمۡ لَيَأۡكُلُونَ ٱلطَّعَامَ وَيَمۡشُونَ فِي ٱلۡأَسۡوَاقِۗ وَجَعَلۡنَا بَعۡضَكُمۡ لِبَعۡضٖ فِتۡنَةً أَتَصۡبِرُونَۗ وَكَانَ رَبُّكَ بَصِيرٗا ﴿20﴾

Transliteration: Wama arsalna qablaka mina almursaleena illa innahum layakuloona alttaAAama wayamshoona fee alaswaqi wajaAAalna baAAdakum libaAAdin fitnatan atasbiroona wakana rabbuka baseeran

Translation: (ಪ್ರವಾದಿಯವರೇ) ನಾವು ನಿಮಗಿಂತ ಮೊದಲು ಕಳುಹಿಸಿದ ಸಂದೇಶವಾಹಕರೆಲ್ಲರೂ ಆಹಾರವನ್ನು ಸೇವಿಸುತ್ತಿದ್ದರು ಮತ್ತು ಪೇಟೆಗಳಲ್ಲಿ ಸಂಚರಿಸುತ್ತಿದ್ದರು. ನಾವು ನಿಮ್ಮಲ್ಲಿ ಒಬ್ಬರನ್ನು ಇನ್ನೊಬ್ಬರಿಗೆ ಪರೀಕ್ಷೆಯನ್ನಾಗಿ ಮಾಡಿದ್ದೇವೆ. ನೀವು ತಾಳ್ಮೆಯಿಂದಿರುತ್ತೀರೋ ಎಂದು ನೋಡಲು. ನಿಮ್ಮ ಪರಿಪಾಲಕನು ಎಲ್ಲವನ್ನೂ ನೋಡುವವನಾಗಿದ್ದಾನೆ.

25:21

وَقَالَ ٱلَّذِينَ لَا يَرۡجُونَ لِقَآءَنَا لَوۡلَآ أُنزِلَ عَلَيۡنَا ٱلۡمَلَـٰٓئِكَةُ أَوۡ نَرَىٰ رَبَّنَاۗ لَقَدِ ٱسۡتَكۡبَرُواْ فِيٓ أَنفُسِهِمۡ وَعَتَوۡ عُتُوّٗا كَبِيرٗا ﴿21﴾

Transliteration: Waqala allatheena la yarjoona liqaana lawla onzila AAalayna almalaikatu aw nara rabbana laqadi istakbaroo fee anfusihim waAAataw AAutuwwan kabeeran

Translation: ನಮ್ಮನ್ನು ಭೇಟಿಯಾಗುವ ನಿರೀಕ್ಷೆಯಿಲ್ಲದವರು ಹೇಳಿದರು: “ನಮ್ಮ ಮೇಲೆ ದೇವದೂತರುಗಳನ್ನು ಏಕೆ ಇಳಿಸಲಾಗುವುದಿಲ್ಲ? ಅಥವಾ ನಮಗೇಕೆ ನಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ನೇರವಾಗಿ ನೋಡಲಾಗುವುದಿಲ್ಲ?” ಅವರು ಸ್ವಯಂ ಅವರ ಬಗ್ಗೆಯೇ ಅಹಂಕಾರಪಡುತ್ತಿದ್ದಾರೆ ಮತ್ತು ಕಡು ಧಿಕ್ಕಾರದಿಂದ ವರ್ತಿಸುತ್ತಿದ್ದಾರೆ.

25:22

يَوۡمَ يَرَوۡنَ ٱلۡمَلَـٰٓئِكَةَ لَا بُشۡرَىٰ يَوۡمَئِذٖ لِّلۡمُجۡرِمِينَ وَيَقُولُونَ حِجۡرٗا مَّحۡجُورٗا ﴿22﴾

Transliteration: Yawma yarawna almalaikata la bushra yawmaithin lilmujrimeena wayaqooloona hijran mahjooran

Translation: ಅವರು ದೇವದೂತರುಗಳನ್ನು ನೋಡುವ ದಿನ![1] ಅಂದು ಅಪರಾಧಿಗಳಿಗೆ ಯಾವುದೇ ಸಿಹಿ ಸುದ್ದಿಯಿರುವುದಿಲ್ಲ. ಅವರು (ದೇವದೂತರುಗಳು) ಹೇಳುವರು: “ನಿಷಿದ್ಧವಾಗಿದೆ! ನಿಮಗೆ ಎಲ್ಲವನ್ನೂ ನಿಷೇಧಿಸಲಾಗಿದೆ!”[2]

25:23

وَقَدِمۡنَآ إِلَىٰ مَا عَمِلُواْ مِنۡ عَمَلٖ فَجَعَلۡنَٰهُ هَبَآءٗ مَّنثُورًا ﴿23﴾

Transliteration: Waqadimna ila ma AAamiloo min AAamalin fajaAAalnahu habaan manthooran

Translation: ಅವರು ಮಾಡಿದ ಕರ್ಮಗಳ ಬಳಿಗೆ ತೆರಳಿ ನಾವು ಅವುಗಳನ್ನು ಚದುರಿದ ಧೂಳಿಯಂತೆ ಮಾಡುವೆವು.

25:24

أَصۡحَٰبُ ٱلۡجَنَّةِ يَوۡمَئِذٍ خَيۡرٞ مُّسۡتَقَرّٗا وَأَحۡسَنُ مَقِيلٗا ﴿24﴾

Transliteration: Ashabu aljannati yawmaithin khayrun mustaqarran waahsanu maqeelan

Translation: ಅಂದು ಸ್ವರ್ಗವಾಸಿಗಳು ಅತ್ಯುತ್ತಮ ವಾಸಸ್ಥಳಗಳನ್ನು ಮತ್ತು ಅತ್ಯುತ್ತಮ ವಿಶ್ರಾಂತಿಧಾಮಗಳನ್ನು ಹೊಂದಿರುವರು.

25:25

وَيَوۡمَ تَشَقَّقُ ٱلسَّمَآءُ بِٱلۡغَمَٰمِ وَنُزِّلَ ٱلۡمَلَـٰٓئِكَةُ تَنزِيلًا ﴿25﴾

Transliteration: Wayawma tashaqqaqu alssamao bialghamami wanuzzila almalaikatu tanzeelan

Translation: ಆಕಾಶವು ಮೋಡಗಳ ಸಹಿತ ಒಡೆದು ಛಿದ್ರವಾಗುವ ಮತ್ತು ದೇವದೂತರುಗಳನ್ನು ನಿರಂತರವಾಗಿ ಇಳಿಸಲಾಗುವ ದಿನ!

25:26

ٱلۡمُلۡكُ يَوۡمَئِذٍ ٱلۡحَقُّ لِلرَّحۡمَٰنِۚ وَكَانَ يَوۡمًا عَلَى ٱلۡكَٰفِرِينَ عَسِيرٗا ﴿26﴾

Transliteration: Almulku yawmaithin alhaqqu lilrrahmani wakana yawman AAala alkafireena AAaseeran

Translation: ಅಂದು ನಿಜವಾದ ಸಾರ್ವಭೌಮತ್ವವು ಪರಮ ದಯಾಳುವಾದ ಅಲ್ಲಾಹನಿಗೆ ಮಾತ್ರ. ಅದು ಸತ್ಯನಿಷೇಧಿಗಳಿಗೆ ಸಂಬಂಧಿಸಿದಂತೆ ಅತ್ಯಂತ ದುಷ್ಕರ ದಿನವಾಗಿದೆ.

25:27

وَيَوۡمَ يَعَضُّ ٱلظَّالِمُ عَلَىٰ يَدَيۡهِ يَقُولُ يَٰلَيۡتَنِي ٱتَّخَذۡتُ مَعَ ٱلرَّسُولِ سَبِيلٗا ﴿27﴾

Transliteration: Wayawma yaAAaddu alththalimu AAala yadayhi yaqoolu ya laytanee ittakhathtu maAAa alrrasooli sabeelan

Translation: ಅಂದು ಅಕ್ರಮವೆಸಗಿದವನು ತನ್ನ ಕೈಗಳನ್ನು ಕಚ್ಚುತ್ತಾ ಹೇಳುವನು: “ನಾನು ಸಂದೇಶವಾಹಕರ ಮಾರ್ಗವನ್ನು ಆರಿಸುತ್ತಿದ್ದರೆ ಎಷ್ಟು ಚೆನ್ನಾಗಿತ್ತು!

25:28

يَٰوَيۡلَتَىٰ لَيۡتَنِي لَمۡ أَتَّخِذۡ فُلَانًا خَلِيلٗا ﴿28﴾

Transliteration: Ya waylata laytanee lam attakhith fulanan khaleelan

Translation: ಅಯ್ಯೋ ನನ್ನ ದುರ್ಗತಿಯೇ! ನಾನು ಇವನನ್ನು ಮಿತ್ರನಾಗಿ ಸ್ವೀಕರಿಸದಿದ್ದರೆ ಎಷ್ಟು ಚೆನ್ನಾಗಿತ್ತು!

25:29

لَّقَدۡ أَضَلَّنِي عَنِ ٱلذِّكۡرِ بَعۡدَ إِذۡ جَآءَنِيۗ وَكَانَ ٱلشَّيۡطَٰنُ لِلۡإِنسَٰنِ خَذُولٗا ﴿29﴾

Transliteration: Laqad adallanee AAani alththikri baAAda ith jaanee wakana alshshaytanu lilinsani khathoolan

Translation: ನನ್ನ ಬಳಿಗೆ ಉಪದೇಶವು ಬಂದ ಬಳಿಕವೂ ಅವನು ನನ್ನನ್ನು ಅದರಿಂದ ತಪ್ಪಿಸಿದನು.” ಶೈತಾನನು ಮಾನವನಿಗೆ ದ್ರೋಹವೆಸಗುವವನೇ ಆಗಿದ್ದಾನೆ.

25:30

وَقَالَ ٱلرَّسُولُ يَٰرَبِّ إِنَّ قَوۡمِي ٱتَّخَذُواْ هَٰذَا ٱلۡقُرۡءَانَ مَهۡجُورٗا ﴿30﴾

Transliteration: Waqala alrrasoolu ya rabbi inna qawmee ittakhathoo hatha alqurana mahjooran

Translation: ಸಂದೇಶವಾಹಕರು ಹೇಳುವರು: “ನನ್ನ ಪರಿಪಾಲಕನೇ, ನಿಶ್ಚಯವಾಗಿಯೂ ನನ್ನ ಸಮುದಾಯವು ಈ ಕುರ್‌ಆನನ್ನು ತೊರೆದು ಬಿಟ್ಟಿದೆ.”

25:31

وَكَذَٰلِكَ جَعَلۡنَا لِكُلِّ نَبِيٍّ عَدُوّٗا مِّنَ ٱلۡمُجۡرِمِينَۗ وَكَفَىٰ بِرَبِّكَ هَادِيٗا وَنَصِيرٗا ﴿31﴾

Transliteration: Wakathalika jaAAalna likulli nabiyyin AAaduwwan mina almujrimeena wakafa birabbika hadiyan wanaseeran

Translation: ಈ ರೀತಿ ನಾವುಎಲ್ಲಾ ಸಂದೇಶವಾಹಕರಿಗೂ ಕೆಲವು ಅಪರಾಧಿಗಳನ್ನು ಶತ್ರುಗಳಾಗಿ ಮಾಡಿದ್ದೇವೆ. ಸನ್ಮಾರ್ಗ ತೋರಿಸಲು ಮತ್ತು ಸಹಾಯ ಮಾಡಲು ನಿಮ್ಮ ಪರಿಪಾಲಕನೇ (ಅಲ್ಲಾಹನೇ) ಸಾಕು!

25:32

وَقَالَ ٱلَّذِينَ كَفَرُواْ لَوۡلَا نُزِّلَ عَلَيۡهِ ٱلۡقُرۡءَانُ جُمۡلَةٗ وَٰحِدَةٗۚ كَذَٰلِكَ لِنُثَبِّتَ بِهِۦ فُؤَادَكَۖ وَرَتَّلۡنَٰهُ تَرۡتِيلٗا ﴿32﴾

Transliteration: Waqala allatheena kafaroo lawla nuzzila AAalayhi alquranu jumlatan wahidatan kathalika linuthabbita bihi fuadaka warattalnahu tarteelan

Translation: ಸತ್ಯನಿಷೇಧಿಗಳು ಕೇಳಿದರು: “ಕುರ್‌ಆನನ್ನು ಒಮ್ಮೆಲೇ ಸಂಪೂರ್ಣವಾಗಿ ಏಕೆ ಇಳಿಸಲಾಗಿಲ್ಲ?” ನಾವು ಈ ರೀತಿಯಲ್ಲಿ (ಹಂತ ಹಂತವಾಗಿ ಇಳಿಸಿದ್ದು ಏಕೆಂದರೆ) ಅದರ ಮೂಲಕ ನಿಮ್ಮ ಹೃದಯವನ್ನು ದೃಢವಾಗಿ ನಿಲ್ಲಿಸಲು. ನಾವು ಅದನ್ನು ಸ್ವಲ್ಪ ಸ್ವಲ್ಪವಾಗಿಯೇ ಪಠಿಸಿಕೊಡುತ್ತೇವೆ.

25:33

وَلَا يَأۡتُونَكَ بِمَثَلٍ إِلَّا جِئۡنَٰكَ بِٱلۡحَقِّ وَأَحۡسَنَ تَفۡسِيرًا ﴿33﴾

Transliteration: Wala yatoonaka bimathalin illa jinaka bialhaqqi waahsana tafseeran

Translation: ಅವರು ನಿಮ್ಮ ಬಳಿಗೆ ಯಾವುದೇ ಉದಾಹರಣೆಯನ್ನು ತಂದರೂ, ನಾವು ಅದರ ನಿಜವಾದ ಉತ್ತರವನ್ನು ಮತ್ತು ಅತ್ಯುತ್ತಮ ವಿವರಣೆಯನ್ನು ಖಂಡಿತ ತರುವೆವು.[1]

25:34

ٱلَّذِينَ يُحۡشَرُونَ عَلَىٰ وُجُوهِهِمۡ إِلَىٰ جَهَنَّمَ أُوْلَـٰٓئِكَ شَرّٞ مَّكَانٗا وَأَضَلُّ سَبِيلٗا ﴿34﴾

Transliteration: Allatheena yuhsharoona AAala wujoohihim ila jahannama olaika sharrun makanan waadallu sabeelan

Translation: ಯಾರನ್ನು ಮುಖಗಳ ಮೇಲೆ ನರಕಕ್ಕೆ ಒಟ್ಟುಗೂಡಿಸಲಾಗುತ್ತದೋ ಅವರೇ ಅತಿ ನಿಕೃಷ್ಟ ಸ್ಥಳದಲ್ಲಿರುವವರು ಮತ್ತು ಅತ್ಯಧಿಕ ದಾರಿತಪ್ಪಿದವರು.

25:35

وَلَقَدۡ ءَاتَيۡنَا مُوسَى ٱلۡكِتَٰبَ وَجَعَلۡنَا مَعَهُۥٓ أَخَاهُ هَٰرُونَ وَزِيرٗا ﴿35﴾

Transliteration: Walaqad atayna moosa alkitaba wajaAAalna maAAahu akhahu haroona wazeeran

Translation: ನಾವು ಮೂಸಾರಿಗೆ ಗ್ರಂಥವನ್ನು ನೀಡಿದೆವು ಮತ್ತು ಅವರ ಸಹೋದರ ಹಾರೂನರನ್ನು ಅವರ ಸಹಾಯಕರನ್ನಾಗಿ ಮಾಡಿದೆವು.

25:36

فَقُلۡنَا ٱذۡهَبَآ إِلَى ٱلۡقَوۡمِ ٱلَّذِينَ كَذَّبُواْ بِـَٔايَٰتِنَا فَدَمَّرۡنَٰهُمۡ تَدۡمِيرٗا ﴿36﴾

Transliteration: Faqulna ithhaba ila alqawmi allatheena kaththaboo biayatina fadammarnahum tadmeeran

Translation: ನಂತರ ನಾವು ಹೇಳಿದೆವು: “ನಮ್ಮ ವಚನಗಳನ್ನು ನಿಷೇಧಿಸಿದ ಜನರ ಬಳಿಗೆ ಹೋಗಿರಿ.” ನಂತರ ನಾವು ಅವರನ್ನು ಸಂಪೂರ್ಣ ನಾಶ ಮಾಡಿದೆವು.

25:37

وَقَوۡمَ نُوحٖ لَّمَّا كَذَّبُواْ ٱلرُّسُلَ أَغۡرَقۡنَٰهُمۡ وَجَعَلۡنَٰهُمۡ لِلنَّاسِ ءَايَةٗۖ وَأَعۡتَدۡنَا لِلظَّـٰلِمِينَ عَذَابًا أَلِيمٗا ﴿37﴾

Transliteration: Waqawma noohin lamma kaththaboo alrrusula aghraqnahum wajaAAalnahum lilnnasi ayatan waaAAtadna lilththalimeena AAathaban aleeman

Translation: ನೂಹರ ಜನರನ್ನು ಕೂಡ. ಅವರು ಸಂದೇಶವಾಹಕರನ್ನು ನಿಷೇಧಿಸಿದಾಗ ನಾವು ಅವರನ್ನು ಮುಳುಗಿಸಿ ನಾಶ ಮಾಡಿದೆವು ಮತ್ತು ಅವರನ್ನು ಜನರಿಗೆ ದೃಷ್ಟಾಂತವನ್ನಾಗಿ ಮಾಡಿದೆವು. ನಾವು ಅಕ್ರಮಿಗಳಿಗೆ ಯಾತನಾಮಯ ಶಿಕ್ಷೆಯನ್ನು ಸಿದ್ಧಗೊಳಿಸಿದ್ದೇವೆ.

25:38

وَعَادٗا وَثَمُودَاْ وَأَصۡحَٰبَ ٱلرَّسِّ وَقُرُونَۢا بَيۡنَ ذَٰلِكَ كَثِيرٗا ﴿38﴾

Transliteration: WaAAadan wathamooda waashaba alrrassi waquroonan bayna thalika katheeran

Translation: ಆದ್ ಗೋತ್ರವನ್ನು, ಸಮೂದ್ ಗೋತ್ರವನ್ನು, ಬಾವಿಗಳ ಜನರನ್ನು[1] ಮತ್ತು ಅದರ ಮಧ್ಯೆ ಬದುಕಿದ ಅನೇಕ ತಲೆಮಾರುಗಳನ್ನು ಕೂಡ (ನಾಶ ಮಾಡಿದೆವು).

25:39

وَكُلّٗا ضَرَبۡنَا لَهُ ٱلۡأَمۡثَٰلَۖ وَكُلّٗا تَبَّرۡنَا تَتۡبِيرٗا ﴿39﴾

Transliteration: Wakullan darabna lahu alamthala wakullan tabbarna tatbeeran

Translation: ನಾವು ಅವರೆಲ್ಲರಿಗೂ ಉದಾಹರಣೆಗಳನ್ನು ವಿವರಿಸಿಕೊಟ್ಟಿದ್ದೆವು. ನಂತರ ಅವರೆಲ್ಲರನ್ನೂ ನಾವು ಸರ್ವನಾಶ ಮಾಡಿದೆವು.

25:40

وَلَقَدۡ أَتَوۡاْ عَلَى ٱلۡقَرۡيَةِ ٱلَّتِيٓ أُمۡطِرَتۡ مَطَرَ ٱلسَّوۡءِۚ أَفَلَمۡ يَكُونُواْ يَرَوۡنَهَاۚ بَلۡ كَانُواْ لَا يَرۡجُونَ نُشُورٗا ﴿40﴾

Transliteration: Walaqad ataw AAala alqaryati allatee omtirat matara alssawi afalam yakoonoo yarawnaha bal kanoo la yarjoona nushooran

Translation: ಕೆಟ್ಟ ಮಳೆಯನ್ನು ಸುರಿಸಲಾದ ಆ ಊರಿನ ಮೂಲಕ ಇವರು (ಮಕ್ಕಾದ ಬಹುದೇವಾರಾಧಕರು) ಹಾದುಹೋಗುತ್ತಿದ್ದಾರೆ.[1] ಆದರೂ ಅವರು ಅದನ್ನು ನೋಡುವುದಿಲ್ಲವೇ? ವಾಸ್ತವವೇನೆಂದರೆ, ಇವರಿಗೆ ಪುನರುತ್ಥಾನದಲ್ಲಿ ಭರವಸೆಯೇ ಇಲ್ಲ.

25:41

وَإِذَا رَأَوۡكَ إِن يَتَّخِذُونَكَ إِلَّا هُزُوًا أَهَٰذَا ٱلَّذِي بَعَثَ ٱللَّهُ رَسُولًا ﴿41﴾

Transliteration: Waitha raawka in yattakhithoonaka illa huzuwan ahatha allathee baAAatha Allahu rasoolan

Translation: ಅವರು ನಿಮ್ಮನ್ನು ಕಾಣುವಾಗ ನಿಮ್ಮನ್ನು ಒಂದು ತಮಾಷೆಯ ವಸ್ತುವನ್ನಾಗಿ ಮಾಡುತ್ತಾ ಕೇಳುತ್ತಾರೆ: “ಅಲ್ಲಾಹು ಸಂದೇಶವಾಹಕನಾಗಿ ಕಳುಹಿಸಿದ್ದು ಇವನನ್ನೋ?

25:42

إِن كَادَ لَيُضِلُّنَا عَنۡ ءَالِهَتِنَا لَوۡلَآ أَن صَبَرۡنَا عَلَيۡهَاۚ وَسَوۡفَ يَعۡلَمُونَ حِينَ يَرَوۡنَ ٱلۡعَذَابَ مَنۡ أَضَلُّ سَبِيلًا ﴿42﴾

Transliteration: In kada layudilluna AAan alihatina lawla an sabarna AAalayha wasawfa yaAAlamoona heena yarawna alAAathaba man adallu sabeelan

Translation: ನಾವು ನಮ್ಮ ದೇವರುಗಳ ವಿಷಯದಲ್ಲಿ ಮನಸ್ಸು ಗಟ್ಟಿ ಮಾಡಿ ನಿಲ್ಲದಿರುತ್ತಿದ್ದರೆ ಇವನು ನಮ್ಮನ್ನು ಅವುಗಳಿಂದ ತಪ್ಪಿಸಿಬಿಡುತ್ತಿದ್ದನು.” ಅವರು ಶಿಕ್ಷೆಯನ್ನು ನೋಡುವಾಗ ಯಾರು ಹೆಚ್ಚು ದಾರಿತಪ್ಪಿದವರೆಂದು ಸ್ಪಷ್ಟವಾಗಿ ತಿಳಿದುಕೊಳ್ಳುವರು.

25:43

أَرَءَيۡتَ مَنِ ٱتَّخَذَ إِلَٰهَهُۥ هَوَىٰهُ أَفَأَنتَ تَكُونُ عَلَيۡهِ وَكِيلًا ﴿43﴾

Transliteration: Araayta mani ittakhatha ilahahu hawahu afaanta takoonu AAalayhi wakeelan

Translation: ತನ್ನ ಸ್ವೇಚ್ಛೆಯನ್ನೇ ದೇವರಾಗಿ ಸ್ವೀಕರಿಸಿದವನನ್ನು[1] ನೀವು ನೋಡಿಲ್ಲವೇ? ನೀವೇನು ಅವನ ಹೊಣೆ ವಹಿಸುತ್ತೀರಾ?

25:44

أَمۡ تَحۡسَبُ أَنَّ أَكۡثَرَهُمۡ يَسۡمَعُونَ أَوۡ يَعۡقِلُونَۚ إِنۡ هُمۡ إِلَّا كَٱلۡأَنۡعَٰمِ بَلۡ هُمۡ أَضَلُّ سَبِيلًا ﴿44﴾

Transliteration: Am tahsabu anna aktharahum yasmaAAoona aw yaAAqiloona in hum illa kaalanAAami bal hum adallu sabeelan

Translation: ಅವರಲ್ಲಿ ಹೆಚ್ಚಿನವರು ಕಿವಿಗೊಡುತ್ತಾರೆ ಮತ್ತು ಆಲೋಚಿಸುತ್ತಾರೆಂದು ನೀವು ಭಾವಿಸಿದ್ದೀರಾ? ಅವರು ಕೇವಲ ಜಾನುವಾರುಗಳಂತೆ. ಅಲ್ಲ, ಅವರು ಅವುಗಳಿಗಿಂತಲೂ ಹೆಚ್ಚು ದಾರಿತಪ್ಪಿದ್ದಾರೆ.

25:45

أَلَمۡ تَرَ إِلَىٰ رَبِّكَ كَيۡفَ مَدَّ ٱلظِّلَّ وَلَوۡ شَآءَ لَجَعَلَهُۥ سَاكِنٗا ثُمَّ جَعَلۡنَا ٱلشَّمۡسَ عَلَيۡهِ دَلِيلٗا ﴿45﴾

Transliteration: Alam tara ila rabbika kayfa madda alththilla walaw shaa lajaAAalahu sakinan thumma jaAAalna alshshamsa AAalayhi daleelan

Translation: ನಿಮ್ಮ ಪರಿಪಾಲಕನು (ಅಲ್ಲಾಹು) ನೆರಳನ್ನು ಹೇಗೆ ವಿಸ್ತರಿಸುತ್ತಿದ್ದಾನೆಂದು ನೀವು ನೋಡಿಲ್ಲವೇ? ಅವನು ಇಚ್ಛಿಸುತ್ತಿದ್ದರೆ ಅದನ್ನು ನಿಶ್ಚಲಗೊಳಿಸುತ್ತಿದ್ದನು. ನಂತರ ನಾವು ಸೂರ್ಯನನ್ನು ಅದಕ್ಕೆ ಮಾರ್ಗದರ್ಶಿಯಾಗಿ ಮಾಡಿದೆವು.

25:46

ثُمَّ قَبَضۡنَٰهُ إِلَيۡنَا قَبۡضٗا يَسِيرٗا ﴿46﴾

Transliteration: Thumma qabadnahu ilayna qabdan yaseeran

Translation: ನಂತರ ನಾವು ಅದನ್ನು ಸ್ವಲ್ಪ ಸ್ವಲ್ಪವಾಗಿ ನಮ್ಮ ಕಡೆಗೆ ಎಳೆದೆವು.

25:47

وَهُوَ ٱلَّذِي جَعَلَ لَكُمُ ٱلَّيۡلَ لِبَاسٗا وَٱلنَّوۡمَ سُبَاتٗا وَجَعَلَ ٱلنَّهَارَ نُشُورٗا ﴿47﴾

Transliteration: Wahuwa allathee jaAAala lakumu allayla libasan waalnnawma subatan wajaAAala alnnahara nushooran

Translation: ಅವನೇ ನಿಮಗೆ ರಾತ್ರಿಯನ್ನು ಉಡುಪನ್ನಾಗಿ ಮತ್ತು ನಿದ್ದೆಯನ್ನು ವಿಶ್ರಾಂತಿಯನ್ನಾಗಿ ಮಾಡಿಕೊಟ್ಟವನು. ಅವನು ಹಗಲನ್ನು ಎಚ್ಚರವಾಗಿರುವ ಸಮಯವಾಗಿ ಮಾಡಿದನು.

25:48

وَهُوَ ٱلَّذِيٓ أَرۡسَلَ ٱلرِّيَٰحَ بُشۡرَۢا بَيۡنَ يَدَيۡ رَحۡمَتِهِۦۚ وَأَنزَلۡنَا مِنَ ٱلسَّمَآءِ مَآءٗ طَهُورٗا ﴿48﴾

Transliteration: Wahuwa allathee arsala alrriyaha bushran bayna yaday rahmatihi waanzalna mina alssamai maan tahooran

Translation: ತನ್ನ ದಯೆಗೆ (ಮಳೆಗೆ) ಮೊದಲು ಸುವಾರ್ತೆಯಾಗಿ ಗಾಳಿಗಳನ್ನು ಕಳುಹಿಸುವವನು ಅವನೇ. ನಾವು ಆಕಾಶದಿಂದ ಶುದ್ಧ ನೀರನ್ನು ಇಳಿಸುತ್ತೇವೆ.

25:49

لِّنُحۡـِۧيَ بِهِۦ بَلۡدَةٗ مَّيۡتٗا وَنُسۡقِيَهُۥ مِمَّا خَلَقۡنَآ أَنۡعَٰمٗا وَأَنَاسِيَّ كَثِيرٗا ﴿49﴾

Transliteration: Linuhyiya bihi baldatan maytan wanusqiyahu mimma khalaqna anAAaman waanasiyya katheeran

Translation: ನಿರ್ಜೀವ ಸ್ಥಿತಿಯಲ್ಲಿರುವ ಊರಿಗೆ ಅದರ ಮೂಲಕ ಜೀವ ನೀಡಲು. ನಾವು ಅದನ್ನು ನಮ್ಮ ಸೃಷ್ಟಿಗಳಲ್ಲಿ ಸೇರಿದ ಅಸಂಖ್ಯ ಜಾನುವಾರುಗಳು ಮತ್ತು ಮನುಷ್ಯರಿಗೆ ಕುಡಿಸುತ್ತೇವೆ.

25:50

وَلَقَدۡ صَرَّفۡنَٰهُ بَيۡنَهُمۡ لِيَذَّكَّرُواْ فَأَبَىٰٓ أَكۡثَرُ ٱلنَّاسِ إِلَّا كُفُورٗا ﴿50﴾

Transliteration: Walaqad sarrafnahu baynahum liyaththakkaroo faaba aktharu alnnasi illa kufooran

Translation: ಅವರು ಉಪದೇಶ ಪಡೆಯಲೆಂದು ನಾವು ಅದನ್ನು (ಮಳೆನೀರನ್ನು) ಅವರ ಮಧ್ಯೆ ವಿತರಣೆ ಮಾಡುತ್ತೇವೆ. ಆದರೆ ಜನರಲ್ಲಿ ಹೆಚ್ಚಿನವರು ನಿಷೇಧಿಸಲು ಮಾತ್ರ ಮುಂದಾಗುತ್ತಾರೆ.

25:51

وَلَوۡ شِئۡنَا لَبَعَثۡنَا فِي كُلِّ قَرۡيَةٖ نَّذِيرٗا ﴿51﴾

Transliteration: Walaw shina labaAAathna fee kulli qaryatin natheeran

Translation: ನಾವು ಇಚ್ಛಿಸುತ್ತಿದ್ದರೆ ಎಲ್ಲ ಊರುಗಳಿಗೂ ಒಬ್ಬೊಬ್ಬ ಮುನ್ನೆಚ್ಚರಿಕೆಗಾರನನ್ನು ಕಳುಹಿಸುತ್ತಿದ್ದೆವು.

25:52

فَلَا تُطِعِ ٱلۡكَٰفِرِينَ وَجَٰهِدۡهُم بِهِۦ جِهَادٗا كَبِيرٗا ﴿52﴾

Transliteration: Fala tutiAAi alkafireena wajahidhum bihi jihadan kabeeran

Translation: ಆದ್ದರಿಂದ ನೀವು ಸತ್ಯನಿಷೇಧಿಗಳನ್ನು ಅನುಸರಿಸಬೇಡಿ. ಇದರ (ಕುರ್‌ಆನ್‍ನ) ಮೂಲಕ ಅವರ ವಿರುದ್ಧ ಮಹಾ ಹೋರಾಟ ಮಾಡಿರಿ.

25:53

وَهُوَ ٱلَّذِي مَرَجَ ٱلۡبَحۡرَيۡنِ هَٰذَا عَذۡبٞ فُرَاتٞ وَهَٰذَا مِلۡحٌ أُجَاجٞ وَجَعَلَ بَيۡنَهُمَا بَرۡزَخٗا وَحِجۡرٗا مَّحۡجُورٗا ﴿53﴾

Transliteration: Wahuwa allathee maraja albahrayni hatha AAathbun furatun wahatha milhun ojajun wajaAAala baynahuma barzakhan wahijran mahjooran

Translation: ಅವನೇ ಎರಡು ಸಮುದ್ರಗಳನ್ನು ಬೆರೆಯಲು ಬಿಟ್ಟವನು. ಒಂದರಲ್ಲಿ ತಾಜಾ ಸಿಹಿನೀರು ಮತ್ತು ಇನ್ನೊಂದರಲ್ಲಿ ಕಹಿ ಉಪ್ಪು ನೀರು. ಅವನು ಅವೆರಡರ ಮಧ್ಯೆ ಒಂದು ಪರದೆಯನ್ನು ಮತ್ತು ಬಲಿಷ್ಠ ತಡೆಯನ್ನು ನಿರ್ಮಸಿದ್ದಾನೆ.

25:54

وَهُوَ ٱلَّذِي خَلَقَ مِنَ ٱلۡمَآءِ بَشَرٗا فَجَعَلَهُۥ نَسَبٗا وَصِهۡرٗاۗ وَكَانَ رَبُّكَ قَدِيرٗا ﴿54﴾

Transliteration: Wahuwa allathee khalaqa mina almai basharan fajaAAalahu nasaban wasihran wakana rabbuka qadeeran

Translation: ಅವನೇ ಮನುಷ್ಯನನ್ನು ನೀರಿನಿಂದ ಸೃಷ್ಟಿಸಿದವನು. ನಂತರ ಅವನಿಗೆ ವಂಶಾವಳಿಯನ್ನು ಮತ್ತು ವೈವಾಹಿಕ ಸಂಬಂಧಿಗಳನ್ನು ಮಾಡಿಕೊಟ್ಟನು. ನಿಮ್ಮ ಪರಿಪಾಲಕನು (ಅಲ್ಲಾಹು) ಸರ್ವಶಕ್ತನಾಗಿದ್ದಾನೆ.

25:55

وَيَعۡبُدُونَ مِن دُونِ ٱللَّهِ مَا لَا يَنفَعُهُمۡ وَلَا يَضُرُّهُمۡۗ وَكَانَ ٱلۡكَافِرُ عَلَىٰ رَبِّهِۦ ظَهِيرٗا ﴿55﴾

Transliteration: WayaAAbudoona min dooni Allahi ma la yanfaAAuhum wala yadurruhum wakana alkafiru AAala rabbihi thaheeran

Translation: ಅವರು ಅಲ್ಲಾಹನನ್ನು ಬಿಟ್ಟು ಅವರಿಗೆ ಉಪಕಾರ ಅಥವಾ ತೊಂದರೆ ಮಾಡದವರನ್ನು ಆರಾಧಿಸುತ್ತಿದ್ದಾರೆ. ಸತ್ಯನಿಷೇಧಿಯು ತನ್ನ ಪರಿಪಾಲಕನ ವಿರುದ್ಧ (ಶೈತಾನನಿಗೆ) ಬೆಂಬಲಿಗನಾಗಿದ್ದಾನೆ.

25:56

وَمَآ أَرۡسَلۡنَٰكَ إِلَّا مُبَشِّرٗا وَنَذِيرٗا ﴿56﴾

Transliteration: Wama arsalnaka illa mubashshiran wanatheeran

Translation: (ಪ್ರವಾದಿಯವರೇ) ನಾವು ನಿಮ್ಮನ್ನು ಸುವಾರ್ತೆ ತಿಳಿಸುವವರಾಗಿ ಮತ್ತು ಮುನ್ನೆಚ್ಚರಿಕೆ ನೀಡುವವರಾಗಿಯೇ ಕಳುಹಿಸಿದ್ದೇವೆ.

25:57

قُلۡ مَآ أَسۡـَٔلُكُمۡ عَلَيۡهِ مِنۡ أَجۡرٍ إِلَّا مَن شَآءَ أَن يَتَّخِذَ إِلَىٰ رَبِّهِۦ سَبِيلٗا ﴿57﴾

Transliteration: Qul ma asalukum AAalayhi min ajrin illa man shaa an yattakhitha ila rabbihi sabeelan

Translation: ಹೇಳಿರಿ: “ನಾನು ಇದಕ್ಕಾಗಿ ನಿಮ್ಮಿಂದ ಯಾವುದೇ ಪ್ರತಿಫಲವನ್ನು ಕೇಳುವುದಿಲ್ಲ. ಆದರೆ ಯಾರು ತನ್ನ ಪರಿಪಾಲಕನ (ಅಲ್ಲಾಹನ) ಕಡೆಗೆ ಮಾರ್ಗವನ್ನು ಸ್ವೀಕರಿಸಲು ಇಚ್ಛಿಸುತ್ತಾನೋ (ಅವನು ಅದನ್ನು ಸ್ವೀಕರಿಸಬೇಕು ಎಂಬುದರ) ಹೊರತು.”

25:58

وَتَوَكَّلۡ عَلَى ٱلۡحَيِّ ٱلَّذِي لَا يَمُوتُ وَسَبِّحۡ بِحَمۡدِهِۦۚ وَكَفَىٰ بِهِۦ بِذُنُوبِ عِبَادِهِۦ خَبِيرًا ﴿58﴾

Transliteration: Watawakkal AAala alhayyi allathee la yamootu wasabbih bihamdihi wakafa bihi bithunoobi AAibadihi khabeeran

Translation: ಎಂದಿಗೂ ಸಾಯದೆ ನಿರಂತರ ಬದುಕಿರುವವನಲ್ಲಿ (ಅಲ್ಲಾಹನಲ್ಲಿ) ಭರವಸೆಯಿಡಿ. ಅವನ ಸ್ತುತಿಯೊಂದಿಗೆ ಅವನ ಪರಿಶುದ್ಧಿಯನ್ನು ಕೊಂಡಾಡಿರಿ. ಅವನ ದಾಸರು ಮಾಡುವ ಪಾಪಗಳನ್ನು ಸೂಕ್ಷ್ಮವಾಗಿ ತಿಳಿಯಲು ಅವನೇ ಸಾಕು.

25:59

ٱلَّذِي خَلَقَ ٱلسَّمَٰوَٰتِ وَٱلۡأَرۡضَ وَمَا بَيۡنَهُمَا فِي سِتَّةِ أَيَّامٖ ثُمَّ ٱسۡتَوَىٰ عَلَى ٱلۡعَرۡشِۖ ٱلرَّحۡمَٰنُ فَسۡـَٔلۡ بِهِۦ خَبِيرٗا ﴿59﴾

Transliteration: Allathee khalaqa alssamawati waalarda wama baynahuma fee sittati ayyamin thumma istawa AAala alAAarshi alrrahmanu faisal bihi khabeeran

Translation: ಅವನು ಭೂಮ್ಯಾಕಾಶಗಳನ್ನು ಮತ್ತು ಅವುಗಳ ನಡುವೆಯಿರುವ ಎಲ್ಲಾ ವಸ್ತುಗಳನ್ನು ಆರು ದಿನಗಳಲ್ಲಿ ಸೃಷ್ಟಿಸಿದವನು. ನಂತರ ಅವನು ಸಿಂಹಾಸನದಲ್ಲಿ ಆರೂಢನಾದನು. ಅವನು ಪರಮ ದಯಾಳು. ನೀವು ಅವನ ಬಗ್ಗೆ ಸೂಕ್ಷ್ಮವಾಗಿ ತಿಳಿದವನೊಡನೆ (ಪ್ರವಾದಿಯೊಡನೆ) ಕೇಳಿರಿ.

25:60

وَإِذَا قِيلَ لَهُمُ ٱسۡجُدُواْۤ لِلرَّحۡمَٰنِ قَالُواْ وَمَا ٱلرَّحۡمَٰنُ أَنَسۡجُدُ لِمَا تَأۡمُرُنَا وَزَادَهُمۡ نُفُورٗا۩ ﴿60﴾

Transliteration: Waitha qeela lahumu osjudoo lilrrahmani qaloo wama alrrahmanu anasjudu lima tamuruna wazadahum nufooran

Translation: “ಪರಮ ದಯಾಳುವಿಗೆ (ಅಲ್ಲಾಹನಿಗೆ) ಸಾಷ್ಟಾಂಗ ಮಾಡಿರಿ” ಎಂದು ಅವರೊಡನೆ ಹೇಳಲಾದರೆ ಅವರು ಕೇಳುತ್ತಾರೆ: “ಪರಮ ದಯಾಳು ಎಂದರೇನು?[1] ನೀನು ಆಜ್ಞಾಪಿಸುವವನಿಗೆ ನಾವು ಸಾಷ್ಟಾಂಗ ಮಾಡಬೇಕೇ?” ಇದು ಅವರಿಗೆ ದ್ವೇಷವನ್ನು ಇನ್ನಷ್ಟು ಹೆಚ್ಚಿಸಿಬಿಟ್ಟಿತು.

25:61

تَبَارَكَ ٱلَّذِي جَعَلَ فِي ٱلسَّمَآءِ بُرُوجٗا وَجَعَلَ فِيهَا سِرَٰجٗا وَقَمَرٗا مُّنِيرٗا ﴿61﴾

Transliteration: Tabaraka allathee jaAAala fee alssamai buroojan wajaAAala feeha sirajan waqamaran muneeran

Translation: ಆಕಾಶದಲ್ಲಿ ನಕ್ಷತ್ರಪುಂಜಗಳನ್ನು ಸ್ಥಾಪಿಸಿದವನು (ಅಲ್ಲಾಹು) ಸಮೃದ್ಧಪೂರ್ಣನು. ಅವನು ಅದರಲ್ಲಿ ಒಂದು ದೀಪವನ್ನು (ಸೂರ್ಯನನ್ನು) ಮತ್ತು ಬೆಳಗುವ ಚಂದ್ರನನ್ನು ಉಂಟುಮಾಡಿದನು.

25:62

وَهُوَ ٱلَّذِي جَعَلَ ٱلَّيۡلَ وَٱلنَّهَارَ خِلۡفَةٗ لِّمَنۡ أَرَادَ أَن يَذَّكَّرَ أَوۡ أَرَادَ شُكُورٗا ﴿62﴾

Transliteration: Wahuwa allathee jaAAala allayla waalnnahara khilfatan liman arada an yaththakkara aw arada shukooran

Translation: ಅವನೇ ರಾತ್ರಿ-ಹಗಲುಗಳನ್ನು ಒಂದರ ಹಿಂದೆ ಇನ್ನೊಂದು ಬರುವಂತೆ ಮಾಡಿದವನು. ಉಪದೇಶ ಸ್ವೀಕರಿಸಲು ಬಯಸುವವರಿಗೆ ಅಥವಾ ಕೃತಜ್ಞರಾಗಲು ಬಯಸುವವರಿಗೆ (ಒಂದು ದೃಷ್ಟಾಂತವೆಂಬಂತೆ).

25:63

وَعِبَادُ ٱلرَّحۡمَٰنِ ٱلَّذِينَ يَمۡشُونَ عَلَى ٱلۡأَرۡضِ هَوۡنٗا وَإِذَا خَاطَبَهُمُ ٱلۡجَٰهِلُونَ قَالُواْ سَلَٰمٗا ﴿63﴾

Transliteration: WaAAibadu alrrahmani allatheena yamshoona AAala alardi hawnan waitha khatabahumu aljahiloona qaloo salaman

Translation: ಪರಮ ದಯಾಳುವಿನ (ಅಲ್ಲಾಹನ) ದಾಸರು ಭೂಮಿಯಲ್ಲಿ ವಿನಯದಿಂದ ನಡೆಯುವವರಾಗಿದ್ದಾರೆ. ಅವಿವೇಕಿಗಳು ಅವರೊಡನೆ ಮಾತನಾಡಿದರೆ ಅವರು ಶಾಂತಿ-ಸಮಾಧಾನದ ಮಾತುಗಳನ್ನು ಹೇಳುತ್ತಾರೆ.[1]

25:64

وَٱلَّذِينَ يَبِيتُونَ لِرَبِّهِمۡ سُجَّدٗا وَقِيَٰمٗا ﴿64﴾

Transliteration: Waallatheena yabeetoona lirabbihim sujjadan waqiyaman

Translation: ಅವರು (ಅಲ್ಲಾಹನ ದಾಸರು) ಯಾರೆಂದರೆ, ತಮ್ಮ ಪರಿಪಾಲಕನಿಗೆ (ಅಲ್ಲಾಹನಿಗೆ) ಸಾಷ್ಟಾಂಗ ಮಾಡುತ್ತಾ ಮತ್ತು ನಿಂತು ನಮಾಝ್ ಮಾಡುತ್ತಾ ರಾತ್ರಿಯನ್ನು ಕಳೆಯುವವರು.

25:65

وَٱلَّذِينَ يَقُولُونَ رَبَّنَا ٱصۡرِفۡ عَنَّا عَذَابَ جَهَنَّمَۖ إِنَّ عَذَابَهَا كَانَ غَرَامًا ﴿65﴾

Transliteration: Waallatheena yaqooloona rabbana isrif AAanna AAathaba jahannama inna AAathabaha kana gharaman

Translation: ಅವರು ಹೇಳುತ್ತಾರೆ: “ನಮ್ಮ ಪರಿಪಾಲಕನೇ! ನಮ್ಮಿಂದ ನರಕ ಶಿಕ್ಷೆಯನ್ನು ದೂರೀಕರಿಸು. ನಿಜಕ್ಕೂ ಅದರ ಶಿಕ್ಷೆಯು ಸದಾ ಅಂಟಿಕೊಂಡಿರುತ್ತದೆ.

25:66

إِنَّهَا سَآءَتۡ مُسۡتَقَرّٗا وَمُقَامٗا ﴿66﴾

Transliteration: Innaha saat mustaqarran wamuqaman

Translation: ನಿಶ್ಚಯವಾಗಿಯೂ ಅದು ಬಹಳ ನಿಕೃಷ್ಟ ವಾಸಸ್ಥಳ ಮತ್ತು ವಾಸ್ತವ್ಯವಾಗಿದೆ.”

25:67

وَٱلَّذِينَ إِذَآ أَنفَقُواْ لَمۡ يُسۡرِفُواْ وَلَمۡ يَقۡتُرُواْ وَكَانَ بَيۡنَ ذَٰلِكَ قَوَامٗا ﴿67﴾

Transliteration: Waallatheena itha anfaqoo lam yusrifoo walam yaqturoo wakana bayna thalika qawaman

Translation: ಅವರು ಖರ್ಚು ಮಾಡುವಾಗ ಅತಿಯಾಗಿ ಖರ್ಚು ಮಾಡುವುದಿಲ್ಲ ಮತ್ತು ಜಿಪುಣತನ ತೋರುವುದೂ ಇಲ್ಲ. ಬದಲಿಗೆ, ಅವೆರಡರ ನಡುವಿನ ಮಧ್ಯಮ ಮಾರ್ಗವನ್ನು ಸ್ವೀಕರಿಸುತ್ತಾರೆ.

25:68

وَٱلَّذِينَ لَا يَدۡعُونَ مَعَ ٱللَّهِ إِلَٰهًا ءَاخَرَ وَلَا يَقۡتُلُونَ ٱلنَّفۡسَ ٱلَّتِي حَرَّمَ ٱللَّهُ إِلَّا بِٱلۡحَقِّ وَلَا يَزۡنُونَۚ وَمَن يَفۡعَلۡ ذَٰلِكَ يَلۡقَ أَثَامٗا ﴿68﴾

Transliteration: Waallatheena la yadAAoona maAAa Allahi ilahan akhara wala yaqtuloona alnnafsa allatee harrama Allahu illa bialhaqqi wala yaznoona waman yafAAal thalika yalqa athaman

Translation: ಅವರು ಅಲ್ಲಾಹನ ಜೊತೆಗೆ ಬೇರೆ ದೇವರುಗಳನ್ನು ಕರೆದು ಪ್ರಾರ್ಥಿಸುವುದಿಲ್ಲ, ಕಾನೂನುಬದ್ಧ ರೀತಿಯಲ್ಲೇ ಹೊರತು ಅಲ್ಲಾಹು (ಕೊಲ್ಲುವುದನ್ನು) ನಿಷೇಧಿಸಿದ ಜೀವವನ್ನು ಕೊಲ್ಲುವುದಿಲ್ಲ ಮತ್ತು ವ್ಯಭಿಚಾರ ಮಾಡುವುದಿಲ್ಲ. ಯಾರು ಇವುಗಳನ್ನು ಮಾಡುತ್ತಾನೋ ಅವನು ಶಿಕ್ಷೆಯನ್ನು ಪಡೆಯುವನು.

25:69

يُضَٰعَفۡ لَهُ ٱلۡعَذَابُ يَوۡمَ ٱلۡقِيَٰمَةِ وَيَخۡلُدۡ فِيهِۦ مُهَانًا ﴿69﴾

Transliteration: YudaAAaf lahu alAAathabu yawma alqiyamati wayakhlud feehi muhanan

Translation: ಪುನರುತ್ಥಾನ ದಿನದಂದು ಅವನಿಗೆ ಇಮ್ಮಡಿ ಶಿಕ್ಷೆ ನೀಡಲಾಗುವುದು. ಅವನು ಅವಮಾನವನ್ನು ಸಹಿಸುತ್ತಾ ಸದಾಕಾಲ ಅದರಲ್ಲಿ ವಾಸಿಸುವನು.

25:70

إِلَّا مَن تَابَ وَءَامَنَ وَعَمِلَ عَمَلٗا صَٰلِحٗا فَأُوْلَـٰٓئِكَ يُبَدِّلُ ٱللَّهُ سَيِّـَٔاتِهِمۡ حَسَنَٰتٖۗ وَكَانَ ٱللَّهُ غَفُورٗا رَّحِيمٗا ﴿70﴾

Transliteration: Illa man taba waamana waAAamila AAamalan salihan faolaika yubaddilu Allahu sayyiatihim hasanatin wakana Allahu ghafooran raheeman

Translation: ಆದರೆ ಪಶ್ಚಾತ್ತಾಪಪಟ್ಟವರು, ಸತ್ಯವಿಶ್ವಾಸಿಗಳಾದವರು ಮತ್ತು ಸತ್ಕರ್ಮವೆಸಗಿದವರು ಇದಕ್ಕೆ ಹೊರತಾಗಿದ್ದಾರೆ. ಅಲ್ಲಾಹು ಅವರ ದುಷ್ಕೃತ್ಯಗಳನ್ನು ಸತ್ಕರ್ಮಗಳಾಗಿ ಬದಲಾಯಿಸುವನು. ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.

25:71

وَمَن تَابَ وَعَمِلَ صَٰلِحٗا فَإِنَّهُۥ يَتُوبُ إِلَى ٱللَّهِ مَتَابٗا ﴿71﴾

Transliteration: Waman taba waAAamila salihan fainnahu yatoobu ila Allahi mataban

Translation: ಯಾರು ಪಶ್ಚಾತ್ತಾಪಪಟ್ಟು ಸತ್ಕರ್ಮವೆಸಗುತ್ತಾನೋ ಅವನು ಅಲ್ಲಾಹನ ಕಡೆಗೆ ಪ್ರಾಮಾಣಿಕವಾಗಿ ಮರಳಿದ್ದಾನೆ.

25:72

وَٱلَّذِينَ لَا يَشۡهَدُونَ ٱلزُّورَ وَإِذَا مَرُّواْ بِٱللَّغۡوِ مَرُّواْ كِرَامٗا ﴿72﴾

Transliteration: Waallatheena la yashhadoona alzzoora waitha marroo biallaghwi marroo kiraman

Translation: ಅವರು ಸುಳ್ಳು ಸಾಕ್ಷ್ಯ ಹೇಳದವರು ಮತ್ತು ಅನಗತ್ಯ ಸಂಗತಿಗಳ ಬಳಿಯಿಂದ ನಡೆಯಬೇಕಾಗಿ ಬಂದರೆ ಸಭ್ಯತೆಯಿಂದ ನಡೆಯುವವರಾಗಿದ್ದಾರೆ.

25:73

وَٱلَّذِينَ إِذَا ذُكِّرُواْ بِـَٔايَٰتِ رَبِّهِمۡ لَمۡ يَخِرُّواْ عَلَيۡهَا صُمّٗا وَعُمۡيَانٗا ﴿73﴾

Transliteration: Waallatheena itha thukkiroo biayati rabbihim lam yakhirroo AAalayha summan waAAumyanan

Translation: ಅವರಿಗೆ ಅವರ ಪರಿಪಾಲಕನ (ಅಲ್ಲಾಹನ) ವಚನಗಳ ಮೂಲಕ ಉಪದೇಶ ನೀಡಲಾದರೆ ಅವರು ಕಿವುಡರು ಮತ್ತು ಕುರುಡರಾಗಿ ಬಿಡುವುದಿಲ್ಲ.

25:74

وَٱلَّذِينَ يَقُولُونَ رَبَّنَا هَبۡ لَنَا مِنۡ أَزۡوَٰجِنَا وَذُرِّيَّـٰتِنَا قُرَّةَ أَعۡيُنٖ وَٱجۡعَلۡنَا لِلۡمُتَّقِينَ إِمَامًا ﴿74﴾

Transliteration: Waallatheena yaqooloona rabbana hab lana min azwajina wathurriyyatina qurrata aAAyunin waijAAalna lilmuttaqeena imaman

Translation: ಅವರು ಪ್ರಾರ್ಥಿಸುತ್ತಾರೆ: “ನಮ್ಮ ಪರಿಪಾಲಕನೇ! ನಮ್ಮ ಪತ್ನಿಯರಲ್ಲಿ ಮತ್ತು ನಮ್ಮ ಮಕ್ಕಳಲ್ಲಿ ನಮಗೆ ಕಣ್ತಂಪನ್ನು ನೀಡು. ದೇವಭಯವುಳ್ಳವರಿಗೆ ನಮ್ಮನ್ನು ಮುಂದಾಳುಗಳನ್ನಾಗಿ ಮಾಡು.”

25:75

أُوْلَـٰٓئِكَ يُجۡزَوۡنَ ٱلۡغُرۡفَةَ بِمَا صَبَرُواْ وَيُلَقَّوۡنَ فِيهَا تَحِيَّةٗ وَسَلَٰمًا ﴿75﴾

Transliteration: Olaika yujzawna alghurfata bima sabaroo wayulaqqawna feeha tahiyyatan wasalaman

Translation: ಅವರು ತಾಳ್ಮೆ ತೋರಿದ್ದಕ್ಕೆ ಪ್ರತಿಫಲವಾಗಿ ಅವರಿಗೆ ಸ್ವರ್ಗದ ಉನ್ನತ ಮಹಲುಗಳನ್ನು ನೀಡಲಾಗುವುದು. ಅಲ್ಲಿ ಅವರು ಅಭಿವಂದನೆಗಳನ್ನು ಮತ್ತು ಶಾಂತಿಯ ಹಾರೈಕೆಗಳನ್ನು ಪಡೆಯುವರು.

25:76

خَٰلِدِينَ فِيهَاۚ حَسُنَتۡ مُسۡتَقَرّٗا وَمُقَامٗا ﴿76﴾

Transliteration: Khalideena feeha hasunat mustaqarran wamuqaman

Translation: ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು. ಆ ವಾಸಸ್ಥಳ ಮತ್ತು ಸ್ಥಾನಮಾನವು ಬಹಳ ಉತ್ತಮವಾಗಿದೆ.

25:77

قُلۡ مَا يَعۡبَؤُاْ بِكُمۡ رَبِّي لَوۡلَا دُعَآؤُكُمۡۖ فَقَدۡ كَذَّبۡتُمۡ فَسَوۡفَ يَكُونُ لِزَامَۢا ﴿77﴾

Transliteration: Qul ma yaAAbao bikum rabbee lawla duAAaokum faqad kaththabtum fasawfa yakoonu lizaman

Translation: ಹೇಳಿರಿ: “ನಿಮ್ಮ ಪ್ರಾರ್ಥನೆಗಳು ಇಲ್ಲದಿರುತ್ತಿದ್ದರೆ ನನ್ನ ಪರಿಪಾಲಕನು (ಅಲ್ಲಾಹು) ನಿಮ್ಮನ್ನು ಪರಿಗಣಿಸುತ್ತಲೇ ಇರಲಿಲ್ಲ.” ಆದರೆ ನೀವು ನಿಷೇಧಿಸಿದ್ದೀರಿ. ಆದ್ದರಿಂದ ಅದಕ್ಕಿರುವ ಶಿಕ್ಷೆಯು ಸದ್ಯವೇ ನಿಮ್ಮನ್ನು ಅಂಟಿಕೊಳ್ಳಲಿದೆ.

Transliteration source: English Transliteration by Tanzil. Used under Tanzil's non-commercial terms; see the source and latest updates at Tanzil. Tanzil translation download