quranm◉

Surah Ya-Sin transliteration

◉ ಸೂರಾ · ∞

36:1

يسٓ ﴿1﴾

Transliteration: Yaseen

Translation: ಯಾಸೀನ್.

36:2

وَٱلۡقُرۡءَانِ ٱلۡحَكِيمِ ﴿2﴾

Transliteration: Waalqurani alhakeemi

Translation: ವಿವೇಕಪೂರ್ಣವಾದ ಕುರ್‌ಆನಿನ ಮೇಲಾಣೆ.

36:3

إِنَّكَ لَمِنَ ٱلۡمُرۡسَلِينَ ﴿3﴾

Transliteration: Innaka lamina almursaleena

Translation: ನಿಶ್ಚಯವಾಗಿಯೂ ನೀವು ಸಂದೇಶವಾಹಕರುಗಳಲ್ಲಿ ಒಬ್ಬರಾಗಿದ್ದೀರಿ.

36:4

عَلَىٰ صِرَٰطٖ مُّسۡتَقِيمٖ ﴿4﴾

Transliteration: AAala siratin mustaqeemin

Translation: ನೀವು ನೇರ ಮಾರ್ಗದಲ್ಲಿದ್ದೀರಿ.

36:5

تَنزِيلَ ٱلۡعَزِيزِ ٱلرَّحِيمِ ﴿5﴾

Transliteration: Tanzeela alAAazeezi alrraheemi

Translation: ಈ ಕುರ್‌ಆನ್ ಪ್ರಬಲನು ಮತ್ತು ಕರುಣಾನಿಧಿಯಾದ ಅಲ್ಲಾಹನಿಂದ ಅವತೀರ್ಣವಾಗಿದೆ.

36:6

لِتُنذِرَ قَوۡمٗا مَّآ أُنذِرَ ءَابَآؤُهُمۡ فَهُمۡ غَٰفِلُونَ ﴿6﴾

Transliteration: Litunthira qawman ma onthira abaohum fahum ghafiloona

Translation: ನೀವು ಈ ಜನರಿಗೆ ಎಚ್ಚರಿಕೆ ನೀಡಲೆಂದು. ಅವರ ಪೂರ್ವಜರಿಗೆ ಯಾರೂ ಎಚ್ಚರಿಕೆ ನೀಡಿಲ್ಲ. ಆದ್ದರಿಂದ ಅವರು ನಿರ್ಲಕ್ಷ್ಯದಲ್ಲಿದ್ದಾರೆ.[1]

36:7

لَقَدۡ حَقَّ ٱلۡقَوۡلُ عَلَىٰٓ أَكۡثَرِهِمۡ فَهُمۡ لَا يُؤۡمِنُونَ ﴿7﴾

Transliteration: Laqad haqqa alqawlu AAala aktharihim fahum la yuminoona

Translation: ಅವರಲ್ಲಿ ಹೆಚ್ಚಿನವರ ಮೇಲೂ ಶಿಕ್ಷೆಯ ವಚನವು ಖಾತ್ರಿಯಾಗಿದೆ. ಆದ್ದರಿಂದ ಅವರು ವಿಶ್ವಾಸವಿಡುವುದಿಲ್ಲ.

36:8

إِنَّا جَعَلۡنَا فِيٓ أَعۡنَٰقِهِمۡ أَغۡلَٰلٗا فَهِيَ إِلَى ٱلۡأَذۡقَانِ فَهُم مُّقۡمَحُونَ ﴿8﴾

Transliteration: Inna jaAAalna fee aAAnaqihim aghlalan fahiya ila alathqani fahum muqmahoona

Translation: ನಾವು ಅವರ ಕೊರಳುಗಳಲ್ಲಿ ಸಂಕೋಲೆಗಳನ್ನು ಹಾಕಿದ್ದೇವೆ. ಅದು ಅವರ ಗಲ್ಲಗಳ ತನಕ ಇದೆ. ಆದ್ದರಿಂದ ಅವರು ತಲೆಯೆತ್ತಿಕೊಂಡೇ ಇರುತ್ತಾರೆ.

36:9

وَجَعَلۡنَا مِنۢ بَيۡنِ أَيۡدِيهِمۡ سَدّٗا وَمِنۡ خَلۡفِهِمۡ سَدّٗا فَأَغۡشَيۡنَٰهُمۡ فَهُمۡ لَا يُبۡصِرُونَ ﴿9﴾

Transliteration: WajaAAalna min bayni aydeehim saddan wamin khalfihim saddan faaghshaynahum fahum la yubsiroona

Translation: ನಾವು ಅವರ ಮುಂಭಾಗದಲ್ಲಿ ಒಂದು ಪರದೆಯನ್ನು ಮತ್ತು ಅವರ ಹಿಂಭಾಗದಲ್ಲಿ ಒಂದು ಪರದೆಯನ್ನು ಹಾಕಿ ಅವರನ್ನು ಮುಚ್ಚಿ ಬಿಟ್ಟಿದ್ದೇವೆ. ಆದ್ದರಿಂದ ಅವರಿಗೆ ನೋಡಲು ಸಾಧ್ಯವಾಗುವುದಿಲ್ಲ.

36:10

وَسَوَآءٌ عَلَيۡهِمۡ ءَأَنذَرۡتَهُمۡ أَمۡ لَمۡ تُنذِرۡهُمۡ لَا يُؤۡمِنُونَ ﴿10﴾

Transliteration: Wasawaon AAalayhim aanthartahum am lam tunthirhum la yuminoona

Translation: ನೀವು ಅವರಿಗೆ ಎಚ್ಚರಿಕೆ ನೀಡಿದರೂ ಅಥವಾ ಎಚ್ಚರಿಕೆ ನೀಡದಿದ್ದರೂ ಅವರ ಮಟ್ಟಿಗೆ ಅದು ಸಮಾನವಾಗಿದೆ. ಅವರು ವಿಶ್ವಾಸವಿಡುವುದಿಲ್ಲ.

36:11

إِنَّمَا تُنذِرُ مَنِ ٱتَّبَعَ ٱلذِّكۡرَ وَخَشِيَ ٱلرَّحۡمَٰنَ بِٱلۡغَيۡبِۖ فَبَشِّرۡهُ بِمَغۡفِرَةٖ وَأَجۡرٖ كَرِيمٍ ﴿11﴾

Transliteration: Innama tunthiru mani ittabaAAa alththikra wakhashiya alrrahmana bialghaybi fabashshirhu bimaghfiratin waajrin kareemin

Translation: ಯಾರು ನಿಮ್ಮ ಉಪದೇಶವನ್ನು ಅನುಸರಿಸುತ್ತಾನೋ ಮತ್ತು ಪರಮ ದಯಾಳುವಾದ ಅಲ್ಲಾಹನನ್ನು ಅದೃಶ್ಯ ಸ್ಥಿತಿಯಲ್ಲಿ ಭಯಪಡುತ್ತಾನೋ ಅವನಿಗೆ ಮಾತ್ರ ನಿಮ್ಮ ಎಚ್ಚರಿಕೆ ಪ್ರಯೋಜನ ನೀಡುತ್ತದೆ. ಆದ್ದರಿಂದ ಅವನಿಗೆ ಕ್ಷಮೆ ಮತ್ತು ಉದಾರ ಪ್ರತಿಫಲದ ಸುವಾರ್ತೆಯನ್ನು ತಿಳಿಸಿ.

36:12

إِنَّا نَحۡنُ نُحۡيِ ٱلۡمَوۡتَىٰ وَنَكۡتُبُ مَا قَدَّمُواْ وَءَاثَٰرَهُمۡۚ وَكُلَّ شَيۡءٍ أَحۡصَيۡنَٰهُ فِيٓ إِمَامٖ مُّبِينٖ ﴿12﴾

Transliteration: Inna nahnu nuhyee almawta wanaktubu ma qaddamoo waatharahum wakulla shayin ahsaynahu fee imamin mubeenin

Translation: ನಿಶ್ಚಯವಾಗಿಯೂ ನಾವು ಮೃತರಿಗೆ ಜೀವ ನೀಡುತ್ತೇವೆ. ಅವರು ಮುಂದಕ್ಕೆ ಕಳುಹಿಸಿದ ಕರ್ಮಗಳನ್ನು ಮತ್ತು ಅವರು ಹಿಂದೆಯೇ ಬಿಟ್ಟಿರುವ ಕರ್ಮಗಳನ್ನು ನಾವು ದಾಖಲಿಸಿಡುತ್ತೇವೆ. ನಾವು ಎಲ್ಲಾ ವಿಷಯಗಳನ್ನೂ ಒಂದು ಸ್ಪಷ್ಟ ಗ್ರಂಥದಲ್ಲಿ ದಾಖಲಿಸಿಟ್ಟಿದ್ದೇವೆ.

36:13

وَٱضۡرِبۡ لَهُم مَّثَلًا أَصۡحَٰبَ ٱلۡقَرۡيَةِ إِذۡ جَآءَهَا ٱلۡمُرۡسَلُونَ ﴿13﴾

Transliteration: Waidrib lahum mathalan ashaba alqaryati ith jaaha almursaloona

Translation: ಅವರಿಗೆ ಒಂದು ಊರಿನ ನಿವಾಸಿಗಳ ಉದಾಹರಣೆಯನ್ನು ತಿಳಿಸಿಕೊಡಿ. ಅಲ್ಲಿಗೆ ಸಂದೇಶವಾಹಕರುಗಳು ಬಂದ ಸಂದರ್ಭ!

36:14

إِذۡ أَرۡسَلۡنَآ إِلَيۡهِمُ ٱثۡنَيۡنِ فَكَذَّبُوهُمَا فَعَزَّزۡنَا بِثَالِثٖ فَقَالُوٓاْ إِنَّآ إِلَيۡكُم مُّرۡسَلُونَ ﴿14﴾

Transliteration: Ith arsalna ilayhimu ithnayni fakaththaboohuma faAAazzazna bithalithin faqaloo inna ilaykum mursaloona

Translation: ನಾವು ಅವರ ಬಳಿಗೆ ಇಬ್ಬರು ಸಂದೇಶವಾಹಕರುಗಳನ್ನು ಕಳುಹಿಸಿದ್ದೆವು. ಆದರೆ ಅವರು ಆ ಇಬ್ಬರು ಸಂದೇಶವಾಹಕರನ್ನೂ ನಿಷೇಧಿಸಿದರು. ಆಗ ಅವರಿಗೆ ಬಲ ನೀಡುವುದಕ್ಕಾಗಿ ನಾವು ಮೂರನೆಯವರನ್ನು ಕಳುಹಿಸಿದೆವು. ಅವರು ಹೇಳಿದರು: “ನಿಶ್ಚಯವಾಗಿಯೂ ನಮ್ಮನ್ನು ನಿಮ್ಮ ಬಳಿಗೆ ಕಳುಹಿಸಲಾಗಿದೆ.”

36:15

قَالُواْ مَآ أَنتُمۡ إِلَّا بَشَرٞ مِّثۡلُنَا وَمَآ أَنزَلَ ٱلرَّحۡمَٰنُ مِن شَيۡءٍ إِنۡ أَنتُمۡ إِلَّا تَكۡذِبُونَ ﴿15﴾

Transliteration: Qaloo ma antum illa basharun mithluna wama anzala alrrahmanu min shayin in antum illa takthiboona

Translation: ಜನರು ಹೇಳಿದರು: “ನೀವು ನಮ್ಮಂತೆಯೇ ಇರುವ ಮನುಷ್ಯರಾಗಿದ್ದೀರಿ. ಪರಮ ದಯಾಳು (ಅಲ್ಲಾಹು) ಏನನ್ನೂ ಅವತೀರ್ಣಗೊಳಿಸಿಲ್ಲ. ನೀವು ಕೇವಲ ಸುಳ್ಳು ಹೇಳುತ್ತಿದ್ದೀರಿ.”

36:16

قَالُواْ رَبُّنَا يَعۡلَمُ إِنَّآ إِلَيۡكُمۡ لَمُرۡسَلُونَ ﴿16﴾

Transliteration: Qaloo rabbuna yaAAlamu inna ilaykum lamursaloona

Translation: ಸಂದೇಶವಾಹಕರುಗಳು ಹೇಳಿದರು: “ನಮ್ಮನ್ನು ನಿಮ್ಮ ಬಳಿಗೆ ಕಳುಹಿಸಲಾಗಿದೆಯೆಂದು ನಮ್ಮ ಪರಿಪಾಲಕನಿಗೆ (ಅಲ್ಲಾಹನಿಗೆ) ತಿಳಿದಿದೆ.

36:17

وَمَا عَلَيۡنَآ إِلَّا ٱلۡبَلَٰغُ ٱلۡمُبِينُ ﴿17﴾

Transliteration: Wama AAalayna illa albalaghu almubeenu

Translation: ನಮ್ಮ ಕರ್ತವ್ಯವು ಸಂದೇಶವನ್ನು ಸ್ಪಷ್ಟವಾಗಿ ತಲುಪಿಸುವುದು ಮಾತ್ರವಾಗಿದೆ.”

36:18

قَالُوٓاْ إِنَّا تَطَيَّرۡنَا بِكُمۡۖ لَئِن لَّمۡ تَنتَهُواْ لَنَرۡجُمَنَّكُمۡ وَلَيَمَسَّنَّكُم مِّنَّا عَذَابٌ أَلِيمٞ ﴿18﴾

Transliteration: Qaloo inna tatayyarna bikum lain lam tantahoo lanarjumannakum walayamassannakum minna AAathabun aleemun

Translation: ಜನರು ಹೇಳಿದರು: “ನಾವು ನಿಮ್ಮನ್ನು ಅಪಶಕುನವೆಂದು ಭಾವಿಸಿದ್ದೇವೆ. ನೀವು (ನಿಮ್ಮ ಧರ್ಮಪ್ರಚಾರವನ್ನು) ನಿಲ್ಲಿಸದಿದ್ದರೆ ನಾವು ನಿಮ್ಮನ್ನು ಖಂಡಿತ ಕಲ್ಲೆಸೆದು ಸಾಯಿಸುವೆವು ಮತ್ತು ನಿಮಗೆ ನಮ್ಮ ಕಡೆಯ ಯಾತನಾಮಯ ಶಿಕ್ಷೆಯನ್ನು ಅನುಭವಿಸಬೇಕಾಗಿ ಬರುವುದು.”

36:19

قَالُواْ طَـٰٓئِرُكُم مَّعَكُمۡ أَئِن ذُكِّرۡتُمۚ بَلۡ أَنتُمۡ قَوۡمٞ مُّسۡرِفُونَ ﴿19﴾

Transliteration: Qaloo tairukum maAAakum ain thukkirtum bal antum qawmun musrifoona

Translation: ಸಂದೇಶವಾಹಕರುಗಳು ಹೇಳಿದರು: “ನಿಮ್ಮ ಅಪಶಕುನವು ನಿಮ್ಮ ಜೊತೆಯಲ್ಲೇ ಇದೆ. ನಿಮಗೆ ಉಪದೇಶ ನೀಡಿದರೆ ನೀವು ಅದನ್ನು ಅಪಶಕುನ ಎನ್ನುತ್ತೀರಾ? ಅಲ್ಲ, ವಾಸ್ತವವಾಗಿ ನೀವು ಎಲ್ಲೆ ಮೀರಿದ ಜನರಾಗಿದ್ದೀರಿ.”

36:20

وَجَآءَ مِنۡ أَقۡصَا ٱلۡمَدِينَةِ رَجُلٞ يَسۡعَىٰ قَالَ يَٰقَوۡمِ ٱتَّبِعُواْ ٱلۡمُرۡسَلِينَ ﴿20﴾

Transliteration: Wajaa min aqsa almadeenati rajulun yasAAa qala ya qawmi ittabiAAoo almursaleena

Translation: ನಗರದ ತುತ್ತತುದಿಯಿಂದ ಒಬ್ಬ ವ್ಯಕ್ತಿ ಓಡುತ್ತಾ ಬಂದನು. ಅವನು ಹೇಳಿದನು: “ಓ ನನ್ನ ಜನರೇ! ನೀವು ಸಂದೇಶವಾಹಕರುಗಳನ್ನು ಅನುಸರಿಸಿರಿ.

36:21

ٱتَّبِعُواْ مَن لَّا يَسۡـَٔلُكُمۡ أَجۡرٗا وَهُم مُّهۡتَدُونَ ﴿21﴾

Transliteration: IttabiAAoo man la yasalukum ajran wahum muhtadoona

Translation: ನಿಮ್ಮಿಂದ ಯಾವುದೇ ಪ್ರತಿಫಲವನ್ನು ಕೇಳದ ಮತ್ತು ಸನ್ಮಾರ್ಗದಲ್ಲಿರುವ ಇವರನ್ನು ಅನುಸರಿಸಿರಿ.

36:22

وَمَالِيَ لَآ أَعۡبُدُ ٱلَّذِي فَطَرَنِي وَإِلَيۡهِ تُرۡجَعُونَ ﴿22﴾

Transliteration: Wama liya la aAAbudu allathee fataranee wailayhi turjaAAoona

Translation: ನನ್ನನ್ನು ಸೃಷ್ಟಿಸಿದವನನ್ನು ಆರಾಧಿಸದಿರಲು ನನಗೇನು ಹಕ್ಕಿದೆ? ನಿಮ್ಮನ್ನು ಅವನ ಬಳಿಗೇ ಮರಳಿಸಲಾಗುವುದು.

36:23

ءَأَتَّخِذُ مِن دُونِهِۦٓ ءَالِهَةً إِن يُرِدۡنِ ٱلرَّحۡمَٰنُ بِضُرّٖ لَّا تُغۡنِ عَنِّي شَفَٰعَتُهُمۡ شَيۡـٔٗا وَلَا يُنقِذُونِ ﴿23﴾

Transliteration: Aattakhithu min doonihi alihatan in yuridni alrrahmanu bidurrin la tughni AAannee shafaAAatuhum shayan wala yunqithooni

Translation: ನಾನು ಅವನನ್ನು (ಅಲ್ಲಾಹನನ್ನು) ಬಿಟ್ಟು ಬೇರೆ ದೇವರುಗಳನ್ನು ಸ್ವೀಕರಿಸಬೇಕೇ? ಪರಮ ದಯಾಳು (ಅಲ್ಲಾಹು) ನನಗೇನಾದರೂ ತೊಂದರೆ ಕೊಡಲು ಬಯಸಿದರೆ ಅವರು (ಆ ದೇವರುಗಳು) ಮಾಡುವ ಶಿಫಾರಸು ನನಗೆ ಸ್ವಲ್ಪವೂ ಪ್ರಯೋಜನವಾಗುವುದಿಲ್ಲ. ಅವರು ನನ್ನನ್ನು ರಕ್ಷಿಸುವುದೂ ಇಲ್ಲ.

36:24

إِنِّيٓ إِذٗا لَّفِي ضَلَٰلٖ مُّبِينٍ ﴿24﴾

Transliteration: Innee ithan lafee dalalin mubeenin

Translation: ಹಾಗೇನಾದರೂ ಆದರೆ, ನಾನು ಸ್ಪಷ್ಟವಾಗಿ ದಾರಿತಪ್ಪುವುದು ನಿಶ್ಚಿತ.

36:25

إِنِّيٓ ءَامَنتُ بِرَبِّكُمۡ فَٱسۡمَعُونِ ﴿25﴾

Transliteration: Innee amantu birabbikum faismaAAooni

Translation: ನಿಶ್ಚಯವಾಗಿಯೂ ನಾನು ನಿಮ್ಮ ಪರಿಪಾಲಕನಲ್ಲಿ (ಅಲ್ಲಾಹನಲ್ಲಿ) ವಿಶ್ವಾಸವಿಟ್ಟಿದ್ದೇನೆ. ಆದ್ದರಿಂದ ನೀವು ನನ್ನ ಮಾತಿಗೆ ಕಿವಿಗೊಡಿ.”

36:26

قِيلَ ٱدۡخُلِ ٱلۡجَنَّةَۖ قَالَ يَٰلَيۡتَ قَوۡمِي يَعۡلَمُونَ ﴿26﴾

Transliteration: Qeela odkhuli aljannata qala ya layta qawmee yaAAlamoona

Translation: ಆ ವ್ಯಕ್ತಿಯೊಡನೆ ಹೇಳಲಾಯಿತು: “ಸ್ವರ್ಗವನ್ನು ಪ್ರವೇಶಿಸಿ.” ಆ ವ್ಯಕ್ತಿ ಹೇಳಿದರು: “ನನ್ನ ಜನರು ಇದನ್ನು ತಿಳಿಯುತ್ತಿದ್ದರೆ ಎಷ್ಟು ಚೆನ್ನಾಗಿತ್ತು!

36:27

بِمَا غَفَرَ لِي رَبِّي وَجَعَلَنِي مِنَ ٱلۡمُكۡرَمِينَ ﴿27﴾

Transliteration: Bima ghafara lee rabbee wajaAAalanee mina almukrameena

Translation: ಅಂದರೆ, ನನ್ನ ಪರಿಪಾಲಕ (ಅಲ್ಲಾಹು) ನನ್ನನ್ನು ಕ್ಷಮಿಸಿದ್ದಾನೆ ಮತ್ತು ನನ್ನನ್ನು ಗಣ್ಯರಲ್ಲಿ ಸೇರಿಸಿದ್ದಾನೆಂದು.”[1]

36:28

وَمَآ أَنزَلۡنَا عَلَىٰ قَوۡمِهِۦ مِنۢ بَعۡدِهِۦ مِن جُندٖ مِّنَ ٱلسَّمَآءِ وَمَا كُنَّا مُنزِلِينَ ﴿28﴾

Transliteration: Wama anzalna AAala qawmihi min baAAdihi min jundin mina alssamai wama kunna munzileena

Translation: ಅವರ ಬಳಿಕ ಅವರ ಜನರ ಮೇಲೆ ನಾವು ಆಕಾಶದಿಂದ ಯಾವುದೇ ಸೈನ್ಯವನ್ನು ಇಳಿಸಲಿಲ್ಲ. ನಾವು ಆ ರೀತಿ ಇಳಿಸುವವರೂ ಅಲ್ಲ.

36:29

إِن كَانَتۡ إِلَّا صَيۡحَةٗ وَٰحِدَةٗ فَإِذَا هُمۡ خَٰمِدُونَ ﴿29﴾

Transliteration: In kanat illa sayhatan wahidatan faitha hum khamidoona

Translation: ಅದು ಒಂದು ಮಹಾ ಚೀತ್ಕಾರ ಮಾತ್ರವಾಗಿತ್ತು. ಆಗ ಹಠಾತ್ತನೆ ಅವರೆಲ್ಲರೂ ಸರ್ವನಾಶವಾದರು.

36:30

يَٰحَسۡرَةً عَلَى ٱلۡعِبَادِۚ مَا يَأۡتِيهِم مِّن رَّسُولٍ إِلَّا كَانُواْ بِهِۦ يَسۡتَهۡزِءُونَ ﴿30﴾

Transliteration: Ya hasratan AAala alAAibadi ma yateehim min rasoolin illa kanoo bihi yastahzioona

Translation: ಅಯ್ಯೋ ನನ್ನ ದಾಸರೇ! ಅವರ ಬಳಿಗೆ ಸಂದೇಶವಾಹಕರು ಬಂದಾಗಲೆಲ್ಲಾ ಅವರು ಆ ಸಂದೇಶವಾಹಕರನ್ನು ತಮಾಷೆ ಮಾಡುತ್ತಲೇ ಇದ್ದರು.

36:31

أَلَمۡ يَرَوۡاْ كَمۡ أَهۡلَكۡنَا قَبۡلَهُم مِّنَ ٱلۡقُرُونِ أَنَّهُمۡ إِلَيۡهِمۡ لَا يَرۡجِعُونَ ﴿31﴾

Transliteration: Alam yaraw kam ahlakna qablahum mina alqurooni annahum ilayhim la yarjiAAoona

Translation: ಏನು ಅವರು ನೋಡಿಲ್ಲವೇ? ಅವರಿಗಿಂತ ಮೊದಲು ನಾವು ಎಷ್ಟೆಷ್ಟು ತಲೆಮಾರುಗಳನ್ನು ನಾಶ ಮಾಡಿದ್ದೇವೆ ಮತ್ತು ಅವರಲ್ಲಿ ಯಾರೂ ಇವರ ಬಳಿಗೆ ಮರಳಿ ಬರುವುದಿಲ್ಲವೆಂದು.

36:32

وَإِن كُلّٞ لَّمَّا جَمِيعٞ لَّدَيۡنَا مُحۡضَرُونَ ﴿32﴾

Transliteration: Wain kullun lamma jameeAAun ladayna muhdaroona

Translation: ನಿಶ್ಚಯವಾಗಿಯೂ ಅವರಲ್ಲಿ ಯಾರನ್ನೂ ಬಿಡದೆ ಎಲ್ಲರನ್ನೂ ನಮ್ಮ ಮುಂದೆ ಹಾಜರುಪಡಿಸಲಾಗುವುದು.

36:33

وَءَايَةٞ لَّهُمُ ٱلۡأَرۡضُ ٱلۡمَيۡتَةُ أَحۡيَيۡنَٰهَا وَأَخۡرَجۡنَا مِنۡهَا حَبّٗا فَمِنۡهُ يَأۡكُلُونَ ﴿33﴾

Transliteration: Waayatun lahumu alardu almaytatu ahyaynaha waakhrajna minha habban faminhu yakuloona

Translation: ಬರಡು ಭೂಮಿಯು ಅವರಿಗೊಂದು ದೃಷ್ಟಾಂತವಾಗಿದೆ. ನಾವು ಅದಕ್ಕೆ ಜೀವವನ್ನು ನೀಡಿದೆವು ಮತ್ತು ಅದರಿಂದ ಧಾನ್ಯವನ್ನು ಉತ್ಪಾದಿಸಿದೆವು. ಅವರು ಅದರಿಂದ ತಿನ್ನುತ್ತಿದ್ದಾರೆ.

36:34

وَجَعَلۡنَا فِيهَا جَنَّـٰتٖ مِّن نَّخِيلٖ وَأَعۡنَٰبٖ وَفَجَّرۡنَا فِيهَا مِنَ ٱلۡعُيُونِ ﴿34﴾

Transliteration: WajaAAalna feeha jannatin min nakheelin waaAAnabin wafajjarna feeha mina alAAuyooni

Translation: ನಾವು ಅಲ್ಲಿ ಖರ್ಜೂರ ಮತ್ತು ದ್ರಾಕ್ಷಿಗಳ ತೋಟಗಳನ್ನು ಮಾಡಿಕೊಟ್ಟೆವು. ನಾವು ಅದರಲ್ಲಿ ಚಿಲುಮೆಗಳನ್ನೂ ಹರಿಸಿದೆವು.

36:35

لِيَأۡكُلُواْ مِن ثَمَرِهِۦ وَمَا عَمِلَتۡهُ أَيۡدِيهِمۡۚ أَفَلَا يَشۡكُرُونَ ﴿35﴾

Transliteration: Liyakuloo min thamarihi wama AAamilathu aydeehim afala yashkuroona

Translation: ಅವರು ಅದರ ಹಣ್ಣುಗಳನ್ನು ತಿನ್ನಲೆಂದು. ಅದನ್ನು ಅವರ ಕೈಗಳು ಉತ್ಪಾದಿಸಿಲ್ಲ. ಆದರೂ ಅವರು ಕೃತಜ್ಞರಾಗುವುದಿಲ್ಲವೇ?

36:36

سُبۡحَٰنَ ٱلَّذِي خَلَقَ ٱلۡأَزۡوَٰجَ كُلَّهَا مِمَّا تُنۢبِتُ ٱلۡأَرۡضُ وَمِنۡ أَنفُسِهِمۡ وَمِمَّا لَا يَعۡلَمُونَ ﴿36﴾

Transliteration: Subhana allathee khalaqa alazwaja kullaha mimma tunbitu alardu wamin anfusihim wamimma la yaAAlamoona

Translation: ಭೂಮಿ ಉತ್ಪಾದಿಸುವ ಸಸ್ಯಲತಾದಿಗಳು, ಅವರ (ಮನುಷ್ಯರ) ವರ್ಗಗಳು ಮತ್ತು ಅವರಿಗೆ ತಿಳಿದಿಲ್ಲದ ವಸ್ತುಗಳು ಮುಂತಾದ ಎಲ್ಲದರಲ್ಲೂ ಜೋಡಿಗಳನ್ನು ಸೃಷ್ಟಿಸಿದ ಅಲ್ಲಾಹು ಪರಿಶುದ್ಧನಾಗಿದ್ದಾನೆ.

36:37

وَءَايَةٞ لَّهُمُ ٱلَّيۡلُ نَسۡلَخُ مِنۡهُ ٱلنَّهَارَ فَإِذَا هُم مُّظۡلِمُونَ ﴿37﴾

Transliteration: Waayatun lahumu allaylu naslakhu minhu alnnahara faitha hum muthlimoona

Translation: ರಾತ್ರಿ ಅವರಿಗೆ ಒಂದು ದೃಷ್ಟಾಂತವಾಗಿದೆ. ನಾವು ಅದರಿಂದ ಹಗಲನ್ನು ಎಳೆದು ತೆಗೆಯುತ್ತೇವೆ. ಆಗ ಅಗೋ! ಅವರು ಇರುಳಿನಲ್ಲಿರುತ್ತಾರೆ.

36:38

وَٱلشَّمۡسُ تَجۡرِي لِمُسۡتَقَرّٖ لَّهَاۚ ذَٰلِكَ تَقۡدِيرُ ٱلۡعَزِيزِ ٱلۡعَلِيمِ ﴿38﴾

Transliteration: Waalshshamsu tajree limustaqarrin laha thalika taqdeeru alAAazeezi alAAaleemi

Translation: ಸೂರ್ಯ ಅದರ ನಿಶ್ಚಿತ ಪಥದಲ್ಲಿ ಚಲಿಸುತ್ತಿದೆ. ಅದು ಪ್ರಬಲನು ಮತ್ತು ಸರ್ವಜ್ಞನಾದ ಅಲ್ಲಾಹನ ನಿರ್ಣಯವಾಗಿದೆ.

36:39

وَٱلۡقَمَرَ قَدَّرۡنَٰهُ مَنَازِلَ حَتَّىٰ عَادَ كَٱلۡعُرۡجُونِ ٱلۡقَدِيمِ ﴿39﴾

Transliteration: Waalqamara qaddarnahu manazila hatta AAada kaalAAurjooni alqadeemi

Translation: ನಾವು ಚಂದ್ರನಿಗೆ ಕೆಲವು ಹಂತಗಳನ್ನು ನಿರ್ಣಯಿಸಿದ್ದೇವೆ. ಎಲ್ಲಿಯವರೆಗೆಂದರೆ, ಅದು ಹಳೆಯ ಖರ್ಜೂರದ ದಿಂಡಿನ ರೂಪಕ್ಕೆ ಮರಳುತ್ತದೆ.

36:40

لَا ٱلشَّمۡسُ يَنۢبَغِي لَهَآ أَن تُدۡرِكَ ٱلۡقَمَرَ وَلَا ٱلَّيۡلُ سَابِقُ ٱلنَّهَارِۚ وَكُلّٞ فِي فَلَكٖ يَسۡبَحُونَ ﴿40﴾

Transliteration: La alshshamsu yanbaghee laha an tudrika alqamara wala allaylu sabiqu alnnahari wakullun fee falakin yasbahoona

Translation: ಸೂರ್ಯನಿಗೆ ಚಂದ್ರನನ್ನು ಮುಟ್ಟಲು ಸಾಧ್ಯವಿಲ್ಲ. ರಾತ್ರಿ ಹಗಲನ್ನು ದಾಟಿಹೋಗುವುದಿಲ್ಲ. ಎಲ್ಲವೂ ಅವುಗಳ ನಿಶ್ಚಿತ ಕಕ್ಷೆಗಳಲ್ಲಿ ಈಜುತ್ತಿವೆ.

36:41

وَءَايَةٞ لَّهُمۡ أَنَّا حَمَلۡنَا ذُرِّيَّتَهُمۡ فِي ٱلۡفُلۡكِ ٱلۡمَشۡحُونِ ﴿41﴾

Transliteration: Waayatun lahum anna hamalna thurriyyatahum fee alfulki almashhooni

Translation: ನಾವು ಅವರ ಸಂತಾನವನ್ನು ತುಂಬಿ ತುಳುಕುವ ನಾವೆಯಲ್ಲಿ ಹೊತ್ತು ಸಾಗಿಸಿದ್ದು ಅವರಿಗೊಂದು ದೃಷ್ಟಾಂತವಾಗಿದೆ.

36:42

وَخَلَقۡنَا لَهُم مِّن مِّثۡلِهِۦ مَا يَرۡكَبُونَ ﴿42﴾

Transliteration: Wakhalaqna lahum min mithlihi ma yarkaboona

Translation: ಅವರು ಸವಾರಿ ಮಾಡಲು ಬಳಸುವ ಇಂತಹ ಅನೇಕ ವಸ್ತುಗಳನ್ನು ನಾವು ಸೃಷ್ಟಿಸಿದ್ದೇವೆ.

36:43

وَإِن نَّشَأۡ نُغۡرِقۡهُمۡ فَلَا صَرِيخَ لَهُمۡ وَلَا هُمۡ يُنقَذُونَ ﴿43﴾

Transliteration: Wain nasha nughriqhum fala sareekha lahum wala hum yunqathoona

Translation: ನಾವು ಇಚ್ಛಿಸಿದರೆ ಅವರನ್ನು ಮುಳುಗಿಸಿ ಬಿಡುವೆವು. ಆಗ ಅವರ ಕೂಗನ್ನು ಕೇಳುವವರು ಯಾರೂ ಇರಲಾರರು. ಅವರು ಸ್ವತಃ ರಕ್ಷಣೆಯನ್ನೂ ಪಡೆಯಲಾರರು.

36:44

إِلَّا رَحۡمَةٗ مِّنَّا وَمَتَٰعًا إِلَىٰ حِينٖ ﴿44﴾

Transliteration: Illa rahmatan minna wamataAAan ila heenin

Translation: ಆದರೆ ನಾವು ನಮ್ಮ ಕಡೆಯ ದಯೆಯಿಂದ ಅವರನ್ನು ರಕ್ಷಿಸುತ್ತೇವೆ ಮತ್ತು ಒಂದು ನಿಶ್ಚಿತ ಕಾಲದವರೆಗೆ ಅವರಿಗೆ ಸವಲತ್ತುಗಳನ್ನು ನೀಡುತ್ತೇವೆ.

36:45

وَإِذَا قِيلَ لَهُمُ ٱتَّقُواْ مَا بَيۡنَ أَيۡدِيكُمۡ وَمَا خَلۡفَكُمۡ لَعَلَّكُمۡ تُرۡحَمُونَ ﴿45﴾

Transliteration: Waitha qeela lahumu ittaqoo ma bayna aydeekum wama khalfakum laAAallakum turhamoona

Translation: “ಮುಂದೆ ಉಂಟಾಗಲಿರುವ ಮತ್ತು ಈಗಾಗಲೇ ಉಂಟಾಗಿರುವ ಪಾಪಗಳ ಬಗ್ಗೆ ಎಚ್ಚರವಾಗಿರಿ; ನಿಮಗೆ ದಯೆ ತೋರಲಾಗುವುದಕ್ಕಾಗಿ” ಎಂದು ಅವರೊಡನೆ ಹೇಳಲಾದರೆ (ಅವರು ಅದನ್ನು ನಿರ್ಲಕ್ಷಿಸುತ್ತಾರೆ).

36:46

وَمَا تَأۡتِيهِم مِّنۡ ءَايَةٖ مِّنۡ ءَايَٰتِ رَبِّهِمۡ إِلَّا كَانُواْ عَنۡهَا مُعۡرِضِينَ ﴿46﴾

Transliteration: Wama tateehim min ayatin min ayati rabbihim illa kanoo AAanha muAArideena

Translation: ಅವರ ಪರಿಪಾಲಕನ (ಅಲ್ಲಾಹನ) ಕಡೆಯ ದೃಷ್ಟಾಂತಗಳಲ್ಲಿ ಯಾವುದೇ ದೃಷ್ಟಾಂತವು ಅವರ ಬಳಿಗೆ ಬಂದರೂ ಅವರು ಅದನ್ನು ನಿರ್ಲಕ್ಷಿಸಿ ವಿಮುಖರಾಗುತ್ತಿದ್ದರು.

36:47

وَإِذَا قِيلَ لَهُمۡ أَنفِقُواْ مِمَّا رَزَقَكُمُ ٱللَّهُ قَالَ ٱلَّذِينَ كَفَرُواْ لِلَّذِينَ ءَامَنُوٓاْ أَنُطۡعِمُ مَن لَّوۡ يَشَآءُ ٱللَّهُ أَطۡعَمَهُۥٓ إِنۡ أَنتُمۡ إِلَّا فِي ضَلَٰلٖ مُّبِينٖ ﴿47﴾

Transliteration: Waitha qeela lahum anfiqoo mimma razaqakumu Allahu qala allatheena kafaroo lillatheena amanoo anutAAimu man law yashao Allahu atAAamahu in antum illa fee dalalin mubeenin

Translation: “ಅಲ್ಲಾಹು ನಿಮಗೆ ಒದಗಿಸಿದ ಸಂಪತ್ತಿನಿಂದ ಖರ್ಚು ಮಾಡಿರಿ”[1] ಎಂದು ಅವರೊಡನೆ ಹೇಳಲಾದರೆ ಸತ್ಯನಿಷೇಧಿಗಳು ಸತ್ಯವಿಶ್ವಾಸಿಗಳೊಡನೆ ಹೇಳುತ್ತಾರೆ: “ಅಲ್ಲಾಹು ಇಚ್ಛಿಸಿದರೆ ಅವನೇ ಆಹಾರ ನೀಡಬಹುದಾದ ಈ ಜನರಿಗೆ ನಾವೇಕೆ ಆಹಾರ ನೀಡಬೇಕು? ನಿಜಕ್ಕೂ ನೀವು ಸ್ಪಷ್ಟ ದುರ್ಮಾರ್ಗದಲ್ಲಿದ್ದೀರಿ.”[2]

36:48

وَيَقُولُونَ مَتَىٰ هَٰذَا ٱلۡوَعۡدُ إِن كُنتُمۡ صَٰدِقِينَ ﴿48﴾

Transliteration: Wayaqooloona mata hatha alwaAAdu in kuntum sadiqeena

Translation: ಅವರು ಹೇಳುತ್ತಾರೆ: “ನೀವು ಸತ್ಯವಂತರಾಗಿದ್ದರೆ ಈ ವಾಗ್ದಾನವು ಯಾವಾಗ ನಿಜವಾಗುತ್ತದೆಂದು ಹೇಳಿರಿ.”

36:49

مَا يَنظُرُونَ إِلَّا صَيۡحَةٗ وَٰحِدَةٗ تَأۡخُذُهُمۡ وَهُمۡ يَخِصِّمُونَ ﴿49﴾

Transliteration: Ma yanthuroona illa sayhatan wahidatan takhuthuhum wahum yakhissimoona

Translation: ಅವರು ಒಂದು ಮಹಾ ಚೀತ್ಕಾರವನ್ನು ಮಾತ್ರ ಕಾಯುತ್ತಿದ್ದಾರೆ. ಅವರು ಪರಸ್ಪರ ತರ್ಕಿಸುತ್ತಿರುವಾಗಲೇ ಅದು ಅವರನ್ನು ಹಿಡಿಯುವುದು.

36:50

فَلَا يَسۡتَطِيعُونَ تَوۡصِيَةٗ وَلَآ إِلَىٰٓ أَهۡلِهِمۡ يَرۡجِعُونَ ﴿50﴾

Transliteration: Fala yastateeAAoona tawsiyatan wala ila ahlihim yarjiAAoona

Translation: ಆಗ ಯಾವುದೇ ಉಯಿಲು ಮಾಡಲು ಅವರಿಗೆ ಸಾಧ್ಯವಾಗುವುದಿಲ್ಲ. ತಮ್ಮ ಮನೆಯವರ ಬಳಿಗೆ ಮರಳಲೂ ಸಾಧ್ಯವಾಗುವುದಿಲ್ಲ.

36:51

وَنُفِخَ فِي ٱلصُّورِ فَإِذَا هُم مِّنَ ٱلۡأَجۡدَاثِ إِلَىٰ رَبِّهِمۡ يَنسِلُونَ ﴿51﴾

Transliteration: Wanufikha fee alssoori faitha hum mina alajdathi ila rabbihim yansiloona

Translation: ಕಹಳೆಯಲ್ಲಿ ಊದಲಾಗುವುದು. ಆಗ ಅಗೋ! ಅವರು ಸಮಾಧಿಗಳಿಂದ ಎದ್ದು ತಮ್ಮ ಪರಿಪಾಲಕನ (ಅಲ್ಲಾಹನ) ಬಳಿಗೆ ಧಾವಿಸುವರು.

36:52

قَالُواْ يَٰوَيۡلَنَا مَنۢ بَعَثَنَا مِن مَّرۡقَدِنَاۜۗ هَٰذَا مَا وَعَدَ ٱلرَّحۡمَٰنُ وَصَدَقَ ٱلۡمُرۡسَلُونَ ﴿52﴾

Transliteration: Qaloo ya waylana man baAAathana min marqadina hatha ma waAAada alrrahmanu wasadaqa almursaloona

Translation: ಅವರು ಹೇಳುವರು: “ಅಯ್ಯೋ! ನಮ್ಮ ದುರ್ಗತಿಯೇ! ನಮ್ಮನ್ನು ನಿದ್ದೆಯಿಂದ ಎಬ್ಬಿಸಿದ್ದು ಯಾರು?” (ಆಗ ಅವರಿಗೆ ಉತ್ತರ ನೀಡಲಾಗುವುದು): “ಇದು ಪರಮ ದಯಾಳು (ಅಲ್ಲಾಹು) ಮಾಡಿದ ವಾಗ್ದಾನವಾಗಿದೆ ಮತ್ತು ಸಂದೇಶವಾಹಕರುಗಳು ಈ ಸತ್ಯವನ್ನು ನಿಮಗೆ ತಿಳಿಸಿದ್ದರು.”

36:53

إِن كَانَتۡ إِلَّا صَيۡحَةٗ وَٰحِدَةٗ فَإِذَا هُمۡ جَمِيعٞ لَّدَيۡنَا مُحۡضَرُونَ ﴿53﴾

Transliteration: In kanat illa sayhatan wahidatan faitha hum jameeAAun ladayna muhdaroona

Translation: ಅದು ಕೇವಲ ಒಂದು ಚೀತ್ಕಾರ ಮಾತ್ರವಾಗಿರುತ್ತದೆ. ಆಗ ಅಗೋ! ಅವರೆಲ್ಲರನ್ನೂ ನಮ್ಮ ಮುಂದೆ ಹಾಜರುಪಡಿಸಲಾಗುತ್ತದೆ.

36:54

فَٱلۡيَوۡمَ لَا تُظۡلَمُ نَفۡسٞ شَيۡـٔٗا وَلَا تُجۡزَوۡنَ إِلَّا مَا كُنتُمۡ تَعۡمَلُونَ ﴿54﴾

Transliteration: Faalyawma la tuthlamu nafsun shayan wala tujzawna illa ma kuntum taAAmaloona

Translation: ಆ ದಿನ ಯಾರಿಗೂ ಸ್ವಲ್ಪವೂ ಅನ್ಯಾಯವಾಗುವುದಿಲ್ಲ. ನೀವು ಮಾಡಿದ ಕರ್ಮಗಳ ಪ್ರತಿಫಲವನ್ನೇ ಹೊರತು ಬೇರೇನೂ ನಿಮಗೆ ನೀಡಲಾಗುವುದಿಲ್ಲ.

36:55

إِنَّ أَصۡحَٰبَ ٱلۡجَنَّةِ ٱلۡيَوۡمَ فِي شُغُلٖ فَٰكِهُونَ ﴿55﴾

Transliteration: Inna ashaba aljannati alyawma fee shughulin fakihoona

Translation: ನಿಶ್ಚಯವಾಗಿಯೂ ಅಂದು ಸ್ವರ್ಗವಾಸಿಗಳು (ಆನಂದದಾಯಕ) ಕೆಲಸ-ಕಾರ್ಯಗಳಲ್ಲಿ ನಿರತರಾಗಿರುವರು.

36:56

هُمۡ وَأَزۡوَٰجُهُمۡ فِي ظِلَٰلٍ عَلَى ٱلۡأَرَآئِكِ مُتَّكِـُٔونَ ﴿56﴾

Transliteration: Hum waazwajuhum fee thilalin AAala alaraiki muttakioona

Translation: ಅವರು ಮತ್ತು ಅವರ ಮಡದಿಯರು ನೆರಳುಗಳಲ್ಲಿ ಮಂಚಗಳ ಮೇಲೆ ಒರಗಿ ಕುಳಿತಿರುವರು.

36:57

لَهُمۡ فِيهَا فَٰكِهَةٞ وَلَهُم مَّا يَدَّعُونَ ﴿57﴾

Transliteration: Lahum feeha fakihatun walahum ma yaddaAAoona

Translation: ಅಲ್ಲಿ ಅವರಿಗೆ ಅನೇಕ ತರಹದ ಹಣ್ಣು-ಹಂಪಲುಗಳಿರುವುವು. ಅವರು ಕೇಳುವುದೆಲ್ಲವೂ ಅಲ್ಲಿ ಅವರಿಗೆ ದೊರೆಯುವುದು.

36:58

سَلَٰمٞ قَوۡلٗا مِّن رَّبّٖ رَّحِيمٖ ﴿58﴾

Transliteration: Salamun qawlan min rabbin raheemin

Translation: ಕರುಣಾನಿಧಿಯಾದ ಪರಿಪಾಲಕನ (ಅಲ್ಲಾಹನ) ಕಡೆಯಿಂದ ಅವರಿಗೆ ಸಲಾಂ ಹೇಳಲಾಗುವುದು.

36:59

وَٱمۡتَٰزُواْ ٱلۡيَوۡمَ أَيُّهَا ٱلۡمُجۡرِمُونَ ﴿59﴾

Transliteration: Waimtazoo alyawma ayyuha almujrimoona

Translation: “ಅಪರಾಧಿಗಳೇ! ಇಂದು ನೀವು ಬೇರ್ಪಟ್ಟು ನಿಲ್ಲಿರಿ” (ಎಂದು ಘೋಷಿಸಲಾಗುವುದು).

36:60

أَلَمۡ أَعۡهَدۡ إِلَيۡكُمۡ يَٰبَنِيٓ ءَادَمَ أَن لَّا تَعۡبُدُواْ ٱلشَّيۡطَٰنَۖ إِنَّهُۥ لَكُمۡ عَدُوّٞ مُّبِينٞ ﴿60﴾

Transliteration: Alam aAAhad ilaykum ya banee adama an la taAAbudoo alshshaytana innahu lakum AAaduwwun mubeenun

Translation: ಓ ಆದಮ್ ಸಂತತಿಗಳೇ! ನೀವು ಶೈತಾನನನ್ನು ಆರಾಧಿಸಬೇಡಿ. ನಿಶ್ಚಯವಾಗಿಯೂ ಅವನು ನಿಮ್ಮ ಸ್ಪಷ್ಟ ವೈರಿಯಾಗಿದ್ದಾನೆ ಎಂದು ನಾನು ನಿಮಗೆ ಆದೇಶಿಸಿರಲಿಲ್ಲವೇ?

36:61

وَأَنِ ٱعۡبُدُونِيۚ هَٰذَا صِرَٰطٞ مُّسۡتَقِيمٞ ﴿61﴾

Transliteration: Waani oAAbudoonee hatha siratun mustaqeemun

Translation: ನನ್ನನ್ನು ಮಾತ್ರ ಆರಾಧಿಸಿರಿ. ಇದೇ ನೇರ ಮಾರ್ಗ ಎಂದು.

36:62

وَلَقَدۡ أَضَلَّ مِنكُمۡ جِبِلّٗا كَثِيرًاۖ أَفَلَمۡ تَكُونُواْ تَعۡقِلُونَ ﴿62﴾

Transliteration: Walaqad adalla minkum jibillan katheeran afalam takoonoo taAAqiloona

Translation: ನಿಶ್ಚಯವಾಗಿಯೂ ನಿಮ್ಮಲ್ಲಿ ಸೇರಿದ ಎಷ್ಟೋ ಜನರನ್ನು ಅವನು ದಾರಿತಪ್ಪಿಸಿದ್ದಾನೆ. ಆದರೂ ನೀವು ಅರ್ಥಮಾಡಿಕೊಳ್ಳುವುದಿಲ್ಲವೇ?

36:63

هَٰذِهِۦ جَهَنَّمُ ٱلَّتِي كُنتُمۡ تُوعَدُونَ ﴿63﴾

Transliteration: Hathihi jahannamu allatee kuntum tooAAadoona

Translation: ಇದೇ ನಿಮಗೆ ಎಚ್ಚರಿಕೆ ನೀಡಲಾದ ಆ ನರಕಾಗ್ನಿ!

36:64

ٱصۡلَوۡهَا ٱلۡيَوۡمَ بِمَا كُنتُمۡ تَكۡفُرُونَ ﴿64﴾

Transliteration: Islawha alyawma bima kuntum takfuroona

Translation: ನಿಮ್ಮ ಸತ್ಯನಿಷೇಧದ ಪ್ರತಿಫಲ ಪಡೆಯಲು ನೀವು ಇಂದು ಅದನ್ನು ಪ್ರವೇಶಿಸಿರಿ.

36:65

ٱلۡيَوۡمَ نَخۡتِمُ عَلَىٰٓ أَفۡوَٰهِهِمۡ وَتُكَلِّمُنَآ أَيۡدِيهِمۡ وَتَشۡهَدُ أَرۡجُلُهُم بِمَا كَانُواْ يَكۡسِبُونَ ﴿65﴾

Transliteration: Alyawma nakhtimu AAala afwahihim watukallimuna aydeehim watashhadu arjuluhum bima kanoo yaksiboona

Translation: ಇಂದು ನಾವು ಅವರ ಬಾಯಿಗಳಿಗೆ ಮೊಹರು ಹಾಕುವೆವು, ಅವರ ಕೈಗಳು ನಮ್ಮೊಡನೆ ಮಾತನಾಡುವುವು ಮತ್ತು ಅವರ ಕಾಲುಗಳು ಅವರು ಮಾಡಿದ ದುಷ್ಕರ್ಮಗಳಿಗೆ ಸಾಕ್ಷಿ ಹೇಳುವುವು.

36:66

وَلَوۡ نَشَآءُ لَطَمَسۡنَا عَلَىٰٓ أَعۡيُنِهِمۡ فَٱسۡتَبَقُواْ ٱلصِّرَٰطَ فَأَنَّىٰ يُبۡصِرُونَ ﴿66﴾

Transliteration: Walaw nashao latamasna AAala aAAyunihim faistabaqoo alssirata faanna yubsiroona

Translation: ನಾವು ಬಯಸಿದರೆ ಅವರ ಕಣ್ಣುಗಳನ್ನು ಕುರುಡಾಗಿಸುವೆವು. ಆದರೂ ಅವರು ಮಾರ್ಗದ ಕಡೆಗೆ ಧಾವಿಸುವರು. ಆದರೆ ಅವರಿಗೆ ನೋಡಲು ಸಾಧ್ಯವಾಗುವುದು ಹೇಗೆ?

36:67

وَلَوۡ نَشَآءُ لَمَسَخۡنَٰهُمۡ عَلَىٰ مَكَانَتِهِمۡ فَمَا ٱسۡتَطَٰعُواْ مُضِيّٗا وَلَا يَرۡجِعُونَ ﴿67﴾

Transliteration: Walaw nashao lamasakhnahum AAala makanatihim fama istataAAoo mudiyyan wala yarjiAAoona

Translation: ನಾವು ಬಯಸಿದರೆ ಅವರು ನಿಂತ ಸ್ಥಳದಲ್ಲಿಯೇ ಅವರ ರೂಪವನ್ನು ವಿರೂಪಗೊಳಿಸುವೆವು. ಆಗ ಅವರಿಗೆ ಮುಂದಕ್ಕೆ ಹೋಗಲು ಸಾಧ್ಯವಾಗುವುದಿಲ್ಲ. ಹಿಂದಕ್ಕೆ ಮರಳಲೂ ಸಾಧ್ಯವಾಗುವುದಿಲ್ಲ.

36:68

وَمَن نُّعَمِّرۡهُ نُنَكِّسۡهُ فِي ٱلۡخَلۡقِۚ أَفَلَا يَعۡقِلُونَ ﴿68﴾

Transliteration: Waman nuAAammirhu nunakkishu fee alkhalqi afala yaAAqiloona

Translation: ನಾವು ಯಾರಿಗೆ ದೀರ್ಘಾಯುಷ್ಯ ನೀಡುತ್ತೇವೆಯೋ ಅವನ ಸೃಷ್ಟಿಯನ್ನು ನಾವು ತಿರುಗುಮುರುಗು ಮಾಡುತ್ತೇವೆ. ಆದರೂ ಅವರು ಅರ್ಥಮಾಡಿಕೊಳ್ಳುವುದಿಲ್ಲವೇ?

36:69

وَمَا عَلَّمۡنَٰهُ ٱلشِّعۡرَ وَمَا يَنۢبَغِي لَهُۥٓۚ إِنۡ هُوَ إِلَّا ذِكۡرٞ وَقُرۡءَانٞ مُّبِينٞ ﴿69﴾

Transliteration: Wama AAallamnahu alshshiAAra wama yanbaghee lahu in huwa illa thikrun waquranun mubeenun

Translation: ನಾವು ಅವರಿಗೆ (ಪ್ರವಾದಿಗೆ) ಕಾವ್ಯವನ್ನು ಕಲಿಸಿಕೊಟ್ಟಿಲ್ಲ. ಅದು ಅವರಿಗೆ ಭೂಷಣವೂ ಅಲ್ಲ. ಇದು ಕೇವಲ ಒಂದು ಉಪದೇಶ ಮತ್ತು ಸ್ಪಷ್ಟ ಕುರ್‌ಆನ್ ಆಗಿದೆ.

36:70

لِّيُنذِرَ مَن كَانَ حَيّٗا وَيَحِقَّ ٱلۡقَوۡلُ عَلَى ٱلۡكَٰفِرِينَ ﴿70﴾

Transliteration: Liyunthira man kana hayyan wayahiqqa alqawlu AAala alkafireena

Translation: ಇದು ಜೀವಂತವಿರುವವರಿಗೆ ಎಚ್ಚರಿಕೆ ನೀಡುವುದಕ್ಕಾಗಿ ಮತ್ತು ಸತ್ಯನಿಷೇಧಿಗಳ ಮೇಲೆ (ಶಿಕ್ಷೆಯ) ವಚನವು ಖಾತ್ರಿಯಾಗುವುದಕ್ಕಾಗಿದೆ.

36:71

أَوَلَمۡ يَرَوۡاْ أَنَّا خَلَقۡنَا لَهُم مِّمَّا عَمِلَتۡ أَيۡدِينَآ أَنۡعَٰمٗا فَهُمۡ لَهَا مَٰلِكُونَ ﴿71﴾

Transliteration: Awalam yaraw anna khalaqna lahum mimma AAamilat aydeena anAAaman fahum laha malikoona

Translation: ನಮ್ಮ ಕೈಗಳು ನಿರ್ಮಿಸಿದ ವಸ್ತುಗಳಲ್ಲಿ ಸೇರಿದ ಜಾನುವಾರುಗಳನ್ನು ನಾವು ಅವರಿಗೋಸ್ಕರ ಸೃಷ್ಟಿಸಿದ್ದೇವೆಂದು ಅವರು ನೋಡಿಲ್ಲವೇ? ಅವರು ಅವುಗಳ ಮಾಲಿಕರಾಗಿದ್ದಾರೆ.

36:72

وَذَلَّلۡنَٰهَا لَهُمۡ فَمِنۡهَا رَكُوبُهُمۡ وَمِنۡهَا يَأۡكُلُونَ ﴿72﴾

Transliteration: Wathallalnaha lahum faminha rakoobuhum waminha yakuloona

Translation: ನಾವು ಅವುಗಳನ್ನು ಅವರಿಗೆ ಪಳಗಿಸಿಕೊಟ್ಟಿದ್ದೇವೆ. ಅವುಗಳಲ್ಲಿ ಕೆಲವು ಪ್ರಾಣಿಗಳ ಮೇಲೆ ಅವರ ಸವಾರಿ ಮಾಡುತ್ತಾರೆ ಮತ್ತು ಕೆಲವು ಪ್ರಾಣಿಗಳ ಮಾಂಸವನ್ನು ತಿನ್ನುತ್ತಾರೆ.

36:73

وَلَهُمۡ فِيهَا مَنَٰفِعُ وَمَشَارِبُۚ أَفَلَا يَشۡكُرُونَ ﴿73﴾

Transliteration: Walahum feeha manafiAAu wamasharibu afala yashkuroona

Translation: ಅವುಗಳಲ್ಲಿ ಅವರಿಗೆ ಅನೇಕ ಪ್ರಯೋಜನಗಳಿವೆ; ಪಾನೀಯವೂ ಇದೆ. ಆದರೂ ಅವರು ಕೃತಜ್ಞರಾಗುವುದಿಲ್ಲವೇ?

36:74

وَٱتَّخَذُواْ مِن دُونِ ٱللَّهِ ءَالِهَةٗ لَّعَلَّهُمۡ يُنصَرُونَ ﴿74﴾

Transliteration: Waittakhathoo min dooni Allahi alihatan laAAallahum yunsaroona

Translation: ಅವರು ಅಲ್ಲಾಹನನ್ನು ಬಿಟ್ಟು ಬೇರೆ ದೇವರುಗಳನ್ನು ಸ್ವೀಕರಿಸಿದ್ದಾರೆ. ಆ ದೇವರುಗಳು ಅವರಿಗೆ ಸಹಾಯ ಮಾಡುವುದಕ್ಕಾಗಿ.

36:75

لَا يَسۡتَطِيعُونَ نَصۡرَهُمۡ وَهُمۡ لَهُمۡ جُندٞ مُّحۡضَرُونَ ﴿75﴾

Transliteration: La yastateeAAoona nasrahum wahum lahum jundun muhdaroona

Translation: ಆದರೆ ಅವರಿಗೆ ಸಹಾಯ ಮಾಡಲು ಆ ದೇವರುಗಳಿಗೆ ಸಾಧ್ಯವಿಲ್ಲ. (ಆದರೂ) ಅವರು ಆ ದೇವರುಗಳಿಗಿರುವ ಸನ್ನದ್ಧ ಸೈನ್ಯವಾಗಿ ಬಿಟ್ಟಿದ್ದಾರೆ.

36:76

فَلَا يَحۡزُنكَ قَوۡلُهُمۡۘ إِنَّا نَعۡلَمُ مَا يُسِرُّونَ وَمَا يُعۡلِنُونَ ﴿76﴾

Transliteration: Fala yahzunka qawluhum inna naAAlamu ma yusirroona wama yuAAlinoona

Translation: ಆದ್ದರಿಂದ ಅವರು ಹೇಳುವ ಮಾತುಗಳು ನಿಮ್ಮನ್ನು ಬೇಸರಗೊಳಿಸದಿರಲಿ. ಅವರು ರಹಸ್ಯವಾಗಿಡುವುದನ್ನು ಮತ್ತು ಬಹಿರಂಗಪಡಿಸುವುದನ್ನು ನಾವು ಖಂಡಿತ ತಿಳಿಯುತ್ತೇವೆ.

36:77

أَوَلَمۡ يَرَ ٱلۡإِنسَٰنُ أَنَّا خَلَقۡنَٰهُ مِن نُّطۡفَةٖ فَإِذَا هُوَ خَصِيمٞ مُّبِينٞ ﴿77﴾

Transliteration: Awalam yara alinsanu anna khalaqnahu min nutfatin faitha huwa khaseemun mubeenun

Translation: ಮನುಷ್ಯನು ನೋಡಿಲ್ಲವೇ? ನಾವು ಅವನನ್ನು ಒಂದು ವೀರ್ಯದಿಂದ ಸೃಷ್ಟಿಸಿದ್ದೇವೆಂದು? ನಂತರ ಇದ್ದಕ್ಕಿದ್ದಂತೆ ಅವನು ಸ್ಪಷ್ಟ ಎದುರಾಳಿಯಾಗಿ ಬಿಟ್ಟಿದ್ದಾನೆ.

36:78

وَضَرَبَ لَنَا مَثَلٗا وَنَسِيَ خَلۡقَهُۥۖ قَالَ مَن يُحۡيِ ٱلۡعِظَٰمَ وَهِيَ رَمِيمٞ ﴿78﴾

Transliteration: Wadaraba lana mathalan wanasiya khalqahu qala man yuhyee alAAithama wahiya rameemun

Translation: ಅವನು ನಮಗೆ ಒಂದು ಉದಾಹರಣೆಯನ್ನು ತಿಳಿಸುತ್ತಾನೆ. ಆದರೆ ಸ್ವತಃ ತನ್ನ ಸೃಷ್ಟಿಯನ್ನೇ ಅವನು ಮರೆತು ಬಿಟ್ಟಿದ್ದಾನೆ. ಅವನು ಕೇಳುತ್ತಾನೆ: “ಕೊಳೆತ ಮೂಳೆಗಳಿಗೆ ಜೀವ ನೀಡುವುದು ಯಾರು?”

36:79

قُلۡ يُحۡيِيهَا ٱلَّذِيٓ أَنشَأَهَآ أَوَّلَ مَرَّةٖۖ وَهُوَ بِكُلِّ خَلۡقٍ عَلِيمٌ ﴿79﴾

Transliteration: Qul yuhyeeha allathee anshaaha awwala marratin wahuwa bikulli khalqin AAaleemun

Translation: ಹೇಳಿರಿ: “ಅದನ್ನು ಪ್ರಥಮ ಬಾರಿ ಸೃಷ್ಟಿಸಿದವನೇ ಅದಕ್ಕೆ ಜೀವವನ್ನು ನೀಡುತ್ತಾನೆ. ಅವನು ಎಲ್ಲಾ ಸೃಷ್ಟಿಗಳ ಬಗ್ಗೆ ಸ್ಪಷ್ಟ ಜ್ಞಾನವುಳ್ಳವನಾಗಿದ್ದಾನೆ.”

36:80

ٱلَّذِي جَعَلَ لَكُم مِّنَ ٱلشَّجَرِ ٱلۡأَخۡضَرِ نَارٗا فَإِذَآ أَنتُم مِّنۡهُ تُوقِدُونَ ﴿80﴾

Transliteration: Allathee jaAAala lakum mina alshshajari alakhdari naran faitha antum minhu tooqidoona

Translation: ಅವನು ಯಾರೆಂದರೆ, ನಿಮಗೆ ಹಸಿರು ಮರದಿಂದ ಬೆಂಕಿಯನ್ನು ನಿರ್ಮಿಸಿ ಕೊಟ್ಟವನು. ಆಗ ಅಗೋ! ನೀವು ಅದರಿಂದ ಬೆಂಕಿ ಉರಿಸುತ್ತೀರಿ.

36:81

أَوَلَيۡسَ ٱلَّذِي خَلَقَ ٱلسَّمَٰوَٰتِ وَٱلۡأَرۡضَ بِقَٰدِرٍ عَلَىٰٓ أَن يَخۡلُقَ مِثۡلَهُمۚ بَلَىٰ وَهُوَ ٱلۡخَلَّـٰقُ ٱلۡعَلِيمُ ﴿81﴾

Transliteration: Awalaysa allathee khalaqa alssamawati waalarda biqadirin AAala an yakhluqa mithlahum bala wahuwa alkhallaqu alAAaleemu

Translation: ಭೂಮ್ಯಾಕಾಶಗಳನ್ನು ಸೃಷ್ಟಿಸಿದವನಿಗೆ ಅವರಂತಿರುವ ಮನುಷ್ಯರನ್ನು ಸೃಷ್ಟಿಸುವ ಸಾಮರ್ಥ್ಯವಿಲ್ಲವೇ? ಹೌದು (ಖಂಡಿತ ಸಾಮರ್ಥ್ಯವಿದೆ)! ಅವನು ಎಲ್ಲವನ್ನು ಸೃಷ್ಟಿಸುವವನು ಮತ್ತು ಸರ್ವಜ್ಞನಾಗಿದ್ದಾನೆ.

36:82

إِنَّمَآ أَمۡرُهُۥٓ إِذَآ أَرَادَ شَيۡـًٔا أَن يَقُولَ لَهُۥ كُن فَيَكُونُ ﴿82﴾

Transliteration: Innama amruhu itha arada shayan an yaqoola lahu kun fayakoonu

Translation: ಅವನು ಯಾವುದೇ ವಸ್ತುವನ್ನು ಬಯಸಿದರೆ, ಅದಕ್ಕೆ “ಉಂಟಾಗು” ಎಂಬ ಆಜ್ಞೆಯನ್ನು ಮಾತ್ರ ನೀಡುತ್ತಾನೆ. ತಕ್ಷಣ ಅದು ಉಂಟಾಗುತ್ತದೆ!

36:83

فَسُبۡحَٰنَ ٱلَّذِي بِيَدِهِۦ مَلَكُوتُ كُلِّ شَيۡءٖ وَإِلَيۡهِ تُرۡجَعُونَ ﴿83﴾

Transliteration: Fasubhana allathee biyadihi malakootu kulli shayin wailayhi turjaAAoona

Translation: ಎಲ್ಲ ವಸ್ತುಗಳ ಸಾರ್ವಭೌಮತ್ವವು ಯಾರ ಕೈಯ್ಯಲ್ಲಿದೆಯೋ ಅವನು ಪರಮ ಪರಿಶುದ್ಧನು. ನಿಮ್ಮನ್ನು ಅವನ ಬಳಿಗೇ ಮರಳಿಸಲಾಗುವುದು.

Transliteration source: English Transliteration by Tanzil. Used under Tanzil's non-commercial terms; see the source and latest updates at Tanzil. Tanzil translation download