quranm◉

Surah Al-Jumu'ah transliteration

◉ ಸೂರಾ · ∞

62:1

يُسَبِّحُ لِلَّهِ مَا فِي ٱلسَّمَٰوَٰتِ وَمَا فِي ٱلۡأَرۡضِ ٱلۡمَلِكِ ٱلۡقُدُّوسِ ٱلۡعَزِيزِ ٱلۡحَكِيمِ ﴿1﴾

Transliteration: Yusabbihu lillahi ma fee alssamawati wama fee alardi almaliki alquddoosi alAAazeezi alhakeemi

Translation: ಭೂಮ್ಯಾಕಾಶಗಳಲ್ಲಿರುವುದೆಲ್ಲವೂ ಅಲ್ಲಾಹನ ಪರಿಶುದ್ಧಿಯನ್ನು ಕೊಂಡಾಡುತ್ತಿವೆ. ಅವನು ಸಾಮ್ರಾಟನು, ಪರಮ ಪವಿತ್ರನು, ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ.

62:2

هُوَ ٱلَّذِي بَعَثَ فِي ٱلۡأُمِّيِّـۧنَ رَسُولٗا مِّنۡهُمۡ يَتۡلُواْ عَلَيۡهِمۡ ءَايَٰتِهِۦ وَيُزَكِّيهِمۡ وَيُعَلِّمُهُمُ ٱلۡكِتَٰبَ وَٱلۡحِكۡمَةَ وَإِن كَانُواْ مِن قَبۡلُ لَفِي ضَلَٰلٖ مُّبِينٖ ﴿2﴾

Transliteration: Huwa allathee baAAatha fee alommiyyeena rasoolan minhum yatloo AAalayhim ayatihi wayuzakkeehim wayuAAallimuhumu alkitaba waalhikmata wain kanoo min qablu lafee dalalin mubeenin

Translation: ಅವನೇ ಅನಕ್ಷರಸ್ಥ ಜನರಿಗೆ ಅವರಿಂದಲೇ ಒಬ್ಬ ಸಂದೇಶವಾಹಕರನ್ನು ಕಳುಹಿಸಿದವನು. ಆ ಸಂದೇಶವಾಹಕರು ಅವರಿಗೆ ಅಲ್ಲಾಹನ ವಚನಗಳನ್ನು ಓದಿಕೊಡುತ್ತಾರೆ, ಅವರನ್ನು ಶುದ್ಧೀಕರಿಸುತ್ತಾರೆ ಮತ್ತು ಅವರಿಗೆ ಗ್ರಂಥ ಹಾಗೂ ವಿವೇಕವನ್ನು ಕಲಿಸಿಕೊಡುತ್ತಾರೆ. ಇದಕ್ಕಿಂತ ಮೊದಲು ಅವರು ಸ್ಪಷ್ಟ ದುರ್ಮಾರ್ಗದಲ್ಲಿದ್ದರು.

62:3

وَءَاخَرِينَ مِنۡهُمۡ لَمَّا يَلۡحَقُواْ بِهِمۡۚ وَهُوَ ٱلۡعَزِيزُ ٱلۡحَكِيمُ ﴿3﴾

Transliteration: Waakhareena minhum lamma yalhaqoo bihim wahuwa alAAazeezu alhakeemu

Translation: ಅವರಲ್ಲಿ ಇನ್ನೂ ಅವರೊಡನೆ ಸೇರಿಕೊಳ್ಳದ ಜನರಿಗೂ ಕೂಡ (ಅವರು ಸಂದೇಶವಾಹಕರಾಗಿದ್ದಾರೆ). ಅಲ್ಲಾಹು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ.

62:4

ذَٰلِكَ فَضۡلُ ٱللَّهِ يُؤۡتِيهِ مَن يَشَآءُۚ وَٱللَّهُ ذُو ٱلۡفَضۡلِ ٱلۡعَظِيمِ ﴿4﴾

Transliteration: Thalika fadlu Allahi yuteehi man yashao waAllahu thoo alfadli alAAatheemi

Translation: ಅದು ಅಲ್ಲಾಹನ ಔದಾರ್ಯವಾಗಿದ್ದು ಅವನು ಇಚ್ಛಿಸುವವರಿಗೆ ಅದನ್ನು ದಯಪಾಲಿಸುತ್ತಾನೆ. ಅಲ್ಲಾಹು ಮಹಾ ಔದಾರ್ಯವಂತನಾಗಿದ್ದಾನೆ.

62:5

مَثَلُ ٱلَّذِينَ حُمِّلُواْ ٱلتَّوۡرَىٰةَ ثُمَّ لَمۡ يَحۡمِلُوهَا كَمَثَلِ ٱلۡحِمَارِ يَحۡمِلُ أَسۡفَارَۢاۚ بِئۡسَ مَثَلُ ٱلۡقَوۡمِ ٱلَّذِينَ كَذَّبُواْ بِـَٔايَٰتِ ٱللَّهِۚ وَٱللَّهُ لَا يَهۡدِي ٱلۡقَوۡمَ ٱلظَّـٰلِمِينَ ﴿5﴾

Transliteration: Mathalu allatheena hummiloo alttawrata thumma lam yahmilooha kamathali alhimari yahmilu asfaran bisa mathalu alqawmi allatheena kaththaboo biayati Allahi waAllahu la yahdee alqawma alththalimeena

Translation: ತೌರಾತ್‌ನಲ್ಲಿರುವಂತೆ ನಡೆದುಕೊಳ್ಳಲು ಆದೇಶಿಸಲಾಗಿಯೂ ಸಹ ಅದರಂತೆ ನಡೆದುಕೊಳ್ಳದವರು ಯಾರೋ ಅವರ ಉದಾಹರಣೆಯು ಗ್ರಂಥಗಳನ್ನು ಹೊರುವ ಕತ್ತೆಯಂತೆ. ಅಲ್ಲಾಹನ ದೃಷ್ಟಾಂತಗಳನ್ನು ನಿಷೇಧಿಸುವ ಜನರ ಉದಾಹರಣೆಯು ಬಹಳ ನಿಕೃಷ್ಟವಾಗಿದೆ. ಅಕ್ರಮಿಗಳಾದ ಜನರಿಗೆ ಅಲ್ಲಾಹು ಸನ್ಮಾರ್ಗವನ್ನು ತೋರಿಸುವುದಿಲ್ಲ.

62:6

قُلۡ يَـٰٓأَيُّهَا ٱلَّذِينَ هَادُوٓاْ إِن زَعَمۡتُمۡ أَنَّكُمۡ أَوۡلِيَآءُ لِلَّهِ مِن دُونِ ٱلنَّاسِ فَتَمَنَّوُاْ ٱلۡمَوۡتَ إِن كُنتُمۡ صَٰدِقِينَ ﴿6﴾

Transliteration: Qul ya ayyuha allatheena hadoo in zaAAamtum annakum awliyao lillahi min dooni alnnasi fatamannawoo almawta in kuntum sadiqeena

Translation: ಹೇಳಿರಿ: “ಓ ಯಹೂದಿಗಳೇ! ಇತರ ಜನರ ಹೊರತಾಗಿ ನೀವು ಮಾತ್ರ ಅಲ್ಲಾಹನ ಮಿತ್ರರು ಎಂಬ ನಿಮ್ಮ ದಾವೆಯು ಸತ್ಯವಾಗಿದ್ದರೆ ನೀವು ಸಾವನ್ನು ಬಯಸಿರಿ. ನೀವು ಸತ್ಯವಂತರಾಗಿದ್ದರೆ.”

62:7

وَلَا يَتَمَنَّوۡنَهُۥٓ أَبَدَۢا بِمَا قَدَّمَتۡ أَيۡدِيهِمۡۚ وَٱللَّهُ عَلِيمُۢ بِٱلظَّـٰلِمِينَ ﴿7﴾

Transliteration: Wala yatamannawnahu abadan bima qaddamat aydeehim waAllahu AAaleemun bialththalimeena

Translation: ಆದರೆ ಅವರ ಕೈಗಳು ಈಗಾಗಲೇ ಮಾಡಿಟ್ಟಿರುವ ದುಷ್ಕರ್ಮಗಳಿಂದಾಗಿ ಅವರೆಂದೂ ಸಾವನ್ನು ಬಯಸುವುದಿಲ್ಲ. ಅಲ್ಲಾಹು ಅಕ್ರಮಿಗಳ ಬಗ್ಗೆ ಬಹಳ ಚೆನ್ನಾಗಿ ತಿಳಿದಿದ್ದಾನೆ.

62:8

قُلۡ إِنَّ ٱلۡمَوۡتَ ٱلَّذِي تَفِرُّونَ مِنۡهُ فَإِنَّهُۥ مُلَٰقِيكُمۡۖ ثُمَّ تُرَدُّونَ إِلَىٰ عَٰلِمِ ٱلۡغَيۡبِ وَٱلشَّهَٰدَةِ فَيُنَبِّئُكُم بِمَا كُنتُمۡ تَعۡمَلُونَ ﴿8﴾

Transliteration: Qul inna almawta allathee tafirroona minhu fainnahu mulaqeekum thumma turaddoona ila AAalimi alghaybi waalshshahadati fayunabbiokum bima kuntum taAAmaloona

Translation: ಹೇಳಿರಿ: “ಯಾವ ಸಾವನ್ನು ಹೆದರಿ ನೀವು ಓಡಿ ಹೋಗುತ್ತಿದ್ದೀರೋ ಅದು ನಿಮ್ಮನ್ನು ಖಂಡಿತ ಭೇಟಿಯಾಗಲಿದೆ. ನಂತರ ನಿಮ್ಮನ್ನು ದೃಶ್ಯ-ಅದೃಶ್ಯಗಳನ್ನು ತಿಳಿದ ಅಲ್ಲಾಹನ ಬಳಿಗೆ ಮರಳಿಸಲಾಗುವುದು. ಆಗ ನೀವು ಮಾಡುತ್ತಿದ್ದ ಕರ್ಮಗಳ ಬಗ್ಗೆ ಅವನು ನಿಮಗೆ ತಿಳಿಸಿಕೊಡುವನು.”

62:9

يَـٰٓأَيُّهَا ٱلَّذِينَ ءَامَنُوٓاْ إِذَا نُودِيَ لِلصَّلَوٰةِ مِن يَوۡمِ ٱلۡجُمُعَةِ فَٱسۡعَوۡاْ إِلَىٰ ذِكۡرِ ٱللَّهِ وَذَرُواْ ٱلۡبَيۡعَۚ ذَٰلِكُمۡ خَيۡرٞ لَّكُمۡ إِن كُنتُمۡ تَعۡلَمُونَ ﴿9﴾

Transliteration: Ya ayyuha allatheena amanoo itha noodiya lilssalati min yawmi aljumuAAati faisAAaw ila thikri Allahi watharoo albayAAa thalikum khayrun lakum in kuntum taAAlamoona

Translation: ಓ ಸತ್ಯವಿಶ್ವಾಸಿಗಳೇ! ಶುಕ್ರವಾರ ನಮಾಝ್‍ಗಾಗಿ ಕರೆಯಲಾದರೆ (ಅಝಾನ್ ನೀಡಲಾದರೆ) ಅಲ್ಲಾಹನ ಸ್ಮರಣೆಯ ಕಡೆಗೆ ಧಾವಿಸಿರಿ ಮತ್ತು ವ್ಯಾಪಾರ-ವ್ಯವಹಾರಗಳನ್ನು ಬಿಟ್ಟುಬಿಡಿ. ಅದು ನಿಮಗೆ ಅತ್ಯುತ್ತಮವಾಗಿದೆ. ನೀವು ತಿಳಿದವರಾಗಿದ್ದರೆ.

62:10

فَإِذَا قُضِيَتِ ٱلصَّلَوٰةُ فَٱنتَشِرُواْ فِي ٱلۡأَرۡضِ وَٱبۡتَغُواْ مِن فَضۡلِ ٱللَّهِ وَٱذۡكُرُواْ ٱللَّهَ كَثِيرٗا لَّعَلَّكُمۡ تُفۡلِحُونَ ﴿10﴾

Transliteration: Faitha qudiyati alssalatu faintashiroo fee alardi waibtaghoo min fadli Allahi waothkuroo Allaha katheeran laAAallakum tuflihoona

Translation: ನಮಾಝ್ ಮುಗಿದ ನಂತರ ನೀವು ಭೂಮಿಯಲ್ಲಿ ಚದುರಿ ಹೋಗಿರಿ ಮತ್ತು ಅಲ್ಲಾಹನ ಔದಾರ್ಯವನ್ನು ಹುಡುಕಿರಿ. ಅಲ್ಲಾಹನನ್ನು ಅತ್ಯಧಿಕವಾಗಿ ಸ್ಮರಿಸಿರಿ. ನೀವು ಯಶಸ್ವಿಯಾಗುವುದಕ್ಕಾಗಿ.

62:11

وَإِذَا رَأَوۡاْ تِجَٰرَةً أَوۡ لَهۡوًا ٱنفَضُّوٓاْ إِلَيۡهَا وَتَرَكُوكَ قَآئِمٗاۚ قُلۡ مَا عِندَ ٱللَّهِ خَيۡرٞ مِّنَ ٱللَّهۡوِ وَمِنَ ٱلتِّجَٰرَةِۚ وَٱللَّهُ خَيۡرُ ٱلرَّـٰزِقِينَ ﴿11﴾

Transliteration: Waitha raaw tijaratan aw lahwan infaddoo ilayha watarakooka qaiman qul ma AAinda Allahi khayrun mina allahwi wamina alttijarati waAllahu khayru alrraziqeena

Translation: ಅವರು ವ್ಯಾಪಾರದ ಸರಕು ಮಾರಾಟವಾಗುವುದನ್ನು ಕಂಡರೆ ಅಥವಾ ಮನೋರಂಜನೆಯನ್ನು ಕಂಡರೆ ಅದರ ಕಡೆಗೆ ಓಡುತ್ತಾರೆ ಮತ್ತು ನಿಮ್ಮನ್ನು ನಿಂತ ಸ್ಥಿತಿಯಲ್ಲೇ ಬಿಟ್ಟುಬಿಡುತ್ತಾರೆ.[1] ಹೇಳಿರಿ: “ಅಲ್ಲಾಹನ ಬಳಿ ಏನಿದೆಯೋ ಅದು ವ್ಯಾಪಾರ ಮತ್ತು ಮನೋರಂಜನೆಗಿಂತಲೂ ಶ್ರೇಷ್ಠವಾಗಿದೆ. ಅಲ್ಲಾಹು ಉಪಜೀವನ ನೀಡುವುದರಲ್ಲಿ ಅತ್ಯುತ್ತಮನಾಗಿದ್ದಾನೆ.”

Transliteration source: English Transliteration by Tanzil. Used under Tanzil's non-commercial terms; see the source and latest updates at Tanzil. Tanzil translation download