quranm◉

Surah At-Taghabun transliteration

◉ ಸೂರಾ · ∞

64:1

يُسَبِّحُ لِلَّهِ مَا فِي ٱلسَّمَٰوَٰتِ وَمَا فِي ٱلۡأَرۡضِۖ لَهُ ٱلۡمُلۡكُ وَلَهُ ٱلۡحَمۡدُۖ وَهُوَ عَلَىٰ كُلِّ شَيۡءٖ قَدِيرٌ ﴿1﴾

Transliteration: Yusabbihu lillahi ma fee alssamawati wama fee alardi lahu almulku walahu alhamdu wahuwa AAala kulli shayin qadeerun

Translation: ಭೂಮ್ಯಾಕಾಶಗಳಲ್ಲಿರುವುದೆಲ್ಲವೂ ಅಲ್ಲಾಹನ ಪರಿಶುದ್ಧಿಯನ್ನು ಕೊಂಡಾಡುತ್ತಿವೆ. ಸಾರ್ವಭೌಮತ್ವವು ಅವನಿಗೆ ಸೇರಿದ್ದು ಮತ್ತು ಸರ್ವಸ್ತುತಿಯು ಅವನಿಗೆ ಮೀಸಲು. ಅವನು ಎಲ್ಲ ವಿಷಯಗಳಲ್ಲೂ ಸಾಮರ್ಥ್ಯವುಳ್ಳವನಾಗಿದ್ದಾನೆ.

64:2

هُوَ ٱلَّذِي خَلَقَكُمۡ فَمِنكُمۡ كَافِرٞ وَمِنكُم مُّؤۡمِنٞۚ وَٱللَّهُ بِمَا تَعۡمَلُونَ بَصِيرٌ ﴿2﴾

Transliteration: Huwa allathee khalaqakum faminkum kafirun waminkum muminun waAllahu bima taAAmaloona baseerun

Translation: ಅವನೇ ನಿಮ್ಮನ್ನು ಸೃಷ್ಟಿಸಿದವನು. ನಿಮ್ಮಲ್ಲಿ ಸತ್ಯನಿಷೇಧಿಗಳಿದ್ದಾರೆ ಮತ್ತು ಸತ್ಯವಿಶ್ವಾಸಿಗಳೂ ಇದ್ದಾರೆ. ಅಲ್ಲಾಹು ನೀವು ಮಾಡುತ್ತಿರುವ ಕರ್ಮಗಳನ್ನು ನೋಡುತ್ತಿದ್ದಾನೆ.

64:3

خَلَقَ ٱلسَّمَٰوَٰتِ وَٱلۡأَرۡضَ بِٱلۡحَقِّ وَصَوَّرَكُمۡ فَأَحۡسَنَ صُوَرَكُمۡۖ وَإِلَيۡهِ ٱلۡمَصِيرُ ﴿3﴾

Transliteration: Khalaqa alssamawati waalarda bialhaqqi wasawwarakum faahsana suwarakum wailayhi almaseeru

Translation: ಅವನು ಭೂಮ್ಯಾಕಾಶಗಳನ್ನು ಸತ್ಯದೊಂದಿಗೆ ಸೃಷ್ಟಿಸಿದ್ದಾನೆ. ಅವನು ನಿಮಗೆ ರೂಪವನ್ನು ನೀಡಿದ್ದಾನೆ ಮತ್ತು ನಿಮ್ಮ ರೂಪಗಳನ್ನು ಅತ್ಯುತ್ತಮಗೊಳಿಸಿದ್ದಾನೆ. ಗಮ್ಯಸ್ಥಾನವು ಅವನ ಬಳಿಯಲ್ಲೇ ಆಗಿದೆ.

64:4

يَعۡلَمُ مَا فِي ٱلسَّمَٰوَٰتِ وَٱلۡأَرۡضِ وَيَعۡلَمُ مَا تُسِرُّونَ وَمَا تُعۡلِنُونَۚ وَٱللَّهُ عَلِيمُۢ بِذَاتِ ٱلصُّدُورِ ﴿4﴾

Transliteration: YaAAlamu ma fee alssamawati waalardi wayaAAlamu ma tusirroona wama tuAAlinoona waAllahu AAaleemun bithati alssudoori

Translation: ಭೂಮ್ಯಾಕಾಶಗಳಲ್ಲಿರುವುದೆಲ್ಲವನ್ನೂ ಅವನು ತಿಳಿದಿದ್ದಾನೆ. ನೀವು ಮುಚ್ಚಿಡುವುದನ್ನು ಮತ್ತು ಬಹಿರಂಗಪಡಿಸುವುದನ್ನು ಅವನು ತಿಳಿಯುತ್ತಾನೆ. ಅಲ್ಲಾಹು ಎದೆಗಳ ಒಳಗಿರುವುದನ್ನು ತಿಳಿಯುತ್ತಾನೆ.

64:5

أَلَمۡ يَأۡتِكُمۡ نَبَؤُاْ ٱلَّذِينَ كَفَرُواْ مِن قَبۡلُ فَذَاقُواْ وَبَالَ أَمۡرِهِمۡ وَلَهُمۡ عَذَابٌ أَلِيمٞ ﴿5﴾

Transliteration: Alam yatikum nabao allatheena kafaroo min qablu fathaqoo wabala amrihim walahum AAathabun aleemun

Translation: ಇದಕ್ಕಿಂತ ಮೊದಲು ಸತ್ಯವನ್ನು ನಿಷೇಧಿಸಿದವರ ಸಮಾಚಾರವು ನಿಮಗೆ ತಲುಪಿಲ್ಲವೇ? ಅವರು ಅವರ ದುಷ್ಕರ್ಮಗಳ ರುಚಿಯನ್ನು ನೋಡಿದರು. ಅವರಿಗೆ (ಪರಲೋಕದಲ್ಲಿ) ಯಾತನಾಮಯ ಶಿಕ್ಷೆಯಿದೆ.

64:6

ذَٰلِكَ بِأَنَّهُۥ كَانَت تَّأۡتِيهِمۡ رُسُلُهُم بِٱلۡبَيِّنَٰتِ فَقَالُوٓاْ أَبَشَرٞ يَهۡدُونَنَا فَكَفَرُواْ وَتَوَلَّواْۖ وَّٱسۡتَغۡنَى ٱللَّهُۚ وَٱللَّهُ غَنِيٌّ حَمِيدٞ ﴿6﴾

Transliteration: Thalika biannahu kanat tateehim rusuluhum bialbayyinati faqaloo abasharun yahdoonana fakafaroo watawallaw waistaghna Allahu waAllahu ghaniyyun hameedun

Translation: ಅದೇಕೆಂದರೆ, ಅವರ ಬಳಿಗೆ ಸಂದೇಶವಾಹಕರು ಸ್ಪಷ್ಟ ಸಾಕ್ಷ್ಯಾಧಾರಗಳೊಂದಿಗೆ ಬರುತ್ತಿದ್ದರು. ಆದರೆ ಅವರು ಕೇಳಿದರು: “ಒಬ್ಬ ಮನುಷ್ಯ ನಮಗೆ ದಾರಿ ತೋರಿಸುವುದೇ?” ಅವರು ನಿಷೇಧಿಸಿದರು ಮತ್ತು ಮುಖ ತಿರುಗಿಸಿ ನಡೆದರು. ಅಲ್ಲಾಹು ಅವರ ಬಗ್ಗೆ ನಿರಪೇಕ್ಷನಾದನು. ಅಲ್ಲಾಹು ನಿರಪೇಕ್ಷನು ಮತ್ತು ಸ್ತುತ್ಯರ್ಹನಾಗಿದ್ದಾನೆ.

64:7

زَعَمَ ٱلَّذِينَ كَفَرُوٓاْ أَن لَّن يُبۡعَثُواْۚ قُلۡ بَلَىٰ وَرَبِّي لَتُبۡعَثُنَّ ثُمَّ لَتُنَبَّؤُنَّ بِمَا عَمِلۡتُمۡۚ وَذَٰلِكَ عَلَى ٱللَّهِ يَسِيرٞ ﴿7﴾

Transliteration: ZaAAama allatheena kafaroo an lan yubAAathoo qul bala warabbee latubAAathunna thumma latunabbaonna bima AAamiltum wathalika AAala Allahi yaseerun

Translation: ತಮ್ಮನ್ನು ಪುನಃ ಜೀವ ನೀಡಿ ಎಬ್ಬಿಸಲಾಗುವುದಿಲ್ಲ ಎಂದು ಸತ್ಯನಿಷೇಧಿಗಳು ವಾದಿಸಿದರು. ಹೇಳಿರಿ: “ಹೌದು! ನನ್ನ ಪರಿಪಾಲಕನ ಮೇಲಾಣೆ! ಖಂಡಿತವಾಗಿಯೂ ನಿಮಗೆ ಜೀವ ನೀಡಿ ಎಬ್ಬಿಸಲಾಗುವುದು. ನಂತರ ನೀವು ಮಾಡಿದ ಕರ್ಮಗಳ ಬಗ್ಗೆ ನಿಮಗೆ ಖಂಡಿತ ತಿಳಿಸಲಾಗುವುದು. ಅದು ಅಲ್ಲಾಹನಿಗೆ ಬಹಳ ಸುಲಭವಾಗಿದೆ.”

64:8

فَـَٔامِنُواْ بِٱللَّهِ وَرَسُولِهِۦ وَٱلنُّورِ ٱلَّذِيٓ أَنزَلۡنَاۚ وَٱللَّهُ بِمَا تَعۡمَلُونَ خَبِيرٞ ﴿8﴾

Transliteration: Faaminoo biAllahi warasoolihi waalnnoori allathee anzalna waAllahu bima taAAmaloona khabeerun

Translation: ಆದ್ದರಿಂದ ನೀವು ಅಲ್ಲಾಹನಲ್ಲಿ, ಅವನ ಸಂದೇಶವಾಹಕರಲ್ಲಿ ಮತ್ತು ನಾವು ಅವತೀರ್ಣಗೊಳಿಸಿದ ಬೆಳಕಿನಲ್ಲಿ (ಕುರ್‌ಆನಿನಲ್ಲಿ) ವಿಶ್ವಾಸವಿಡಿ. ಅಲ್ಲಾಹು ನೀವು ಮಾಡುತ್ತಿರುವ ಕರ್ಮಗಳ ಬಗ್ಗೆ ಸೂಕ್ಷ್ಮಜ್ಞಾನವುಳ್ಳವನಾಗಿದ್ದಾನೆ.

64:9

يَوۡمَ يَجۡمَعُكُمۡ لِيَوۡمِ ٱلۡجَمۡعِۖ ذَٰلِكَ يَوۡمُ ٱلتَّغَابُنِۗ وَمَن يُؤۡمِنۢ بِٱللَّهِ وَيَعۡمَلۡ صَٰلِحٗا يُكَفِّرۡ عَنۡهُ سَيِّـَٔاتِهِۦ وَيُدۡخِلۡهُ جَنَّـٰتٖ تَجۡرِي مِن تَحۡتِهَا ٱلۡأَنۡهَٰرُ خَٰلِدِينَ فِيهَآ أَبَدٗاۚ ذَٰلِكَ ٱلۡفَوۡزُ ٱلۡعَظِيمُ ﴿9﴾

Transliteration: Yawma yajmaAAukum liyawmi aljamAAi thalika yawmu alttaghabuni waman yumin biAllahi wayaAAmal salihan yukaffir AAanhu sayyiatihi wayudkhilhu jannatin tajree min tahtiha alanharu khalideena feeha abadan thalika alfawzu alAAatheemu

Translation: ಒಟ್ಟುಗೂಡಿಸುವ ಆ ದಿನಕ್ಕಾಗಿ (ಪುನರುತ್ಥಾನ ದಿನಕ್ಕಾಗಿ) ಅವನು ನಿಮ್ಮೆಲ್ಲರನ್ನು ಒಟ್ಟುಗೂಡಿಸುವ ದಿನ! ಅದು ಸೋಲು-ಗೆಲುವಿನ ದಿನವಾಗಿದೆ. ಯಾರು ಅಲ್ಲಾಹನಲ್ಲಿ ವಿಶ್ವಾಸವಿಡುತ್ತಾನೋ ಮತ್ತು ಸತ್ಕರ್ಮವೆಸಗುತ್ತಾನೋ ಅವನ ಪಾಪಗಳನ್ನು ಅಲ್ಲಾಹು ಅಳಿಸುತ್ತಾನೆ ಮತ್ತು ಅವನನ್ನು ತಳಭಾಗದಿಂದ ನದಿಗಳು ಹರಿಯುವ ಸ್ವರ್ಗೋದ್ಯಾನಗಳಿಗೆ ಪ್ರವೇಶ ಮಾಡಿಸುತ್ತಾನೆ. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುತ್ತಾರೆ. ಅದೇ ಮಹಾ ವಿಜಯ.

64:10

وَٱلَّذِينَ كَفَرُواْ وَكَذَّبُواْ بِـَٔايَٰتِنَآ أُوْلَـٰٓئِكَ أَصۡحَٰبُ ٱلنَّارِ خَٰلِدِينَ فِيهَاۖ وَبِئۡسَ ٱلۡمَصِيرُ ﴿10﴾

Transliteration: Waallatheena kafaroo wakaththaboo biayatina olaika ashabu alnnari khalideena feeha wabisa almaseeru

Translation: ಸತ್ಯವನ್ನು ನಿಷೇಧಿಸಿದವರು ಮತ್ತು ನಮ್ಮ ವಚನಗಳನ್ನು ನಿಷೇಧಿಸಿದವರು ಯಾರೋ ಅವರೇ ನರಕವಾಸಿಗಳು. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು. ಆ ಗಮ್ಯಸ್ಥಾನವು ಬಹಳ ನಿಕೃಷ್ಟವಾಗಿದೆ.

64:11

مَآ أَصَابَ مِن مُّصِيبَةٍ إِلَّا بِإِذۡنِ ٱللَّهِۗ وَمَن يُؤۡمِنۢ بِٱللَّهِ يَهۡدِ قَلۡبَهُۥۚ وَٱللَّهُ بِكُلِّ شَيۡءٍ عَلِيمٞ ﴿11﴾

Transliteration: Ma asaba min museebatin illa biithni Allahi waman yumin biAllahi yahdi qalbahu waAllahu bikulli shayin AAaleemun

Translation: ಯಾವುದೇ ವಿಪತ್ತು ಅಲ್ಲಾಹನ ಅಪ್ಪಣೆಯಿಂದಲ್ಲದೆ ಸಂಭವಿಸುವುದಿಲ್ಲ. ಯಾರು ಅಲ್ಲಾಹನಲ್ಲಿ ವಿಶ್ವಾಸವಿಡುತ್ತಾನೋ ಅವನ ಹೃದಯವನ್ನು ಅಲ್ಲಾಹು ಸನ್ಮಾರ್ಗದಲ್ಲಿ ಮುನ್ನಡೆಸುತ್ತಾನೆ. ಅಲ್ಲಾಹು ಎಲ್ಲಾ ವಿಷಯಗಳ ಬಗ್ಗೆ ತಿಳಿದವನಾಗಿದ್ದಾನೆ.

64:12

وَأَطِيعُواْ ٱللَّهَ وَأَطِيعُواْ ٱلرَّسُولَۚ فَإِن تَوَلَّيۡتُمۡ فَإِنَّمَا عَلَىٰ رَسُولِنَا ٱلۡبَلَٰغُ ٱلۡمُبِينُ ﴿12﴾

Transliteration: WaateeAAoo Allaha waateeAAoo alrrasoola fain tawallaytum fainnama AAala rasoolina albalaghu almubeenu

Translation: ನೀವು ಅಲ್ಲಾಹು ಅವನ ಮತ್ತು ಸಂದೇಶವಾಹಕರ ಆಜ್ಞಾಪಾಲನೆ ಮಾಡಿರಿ. ನೀವೇನಾದರೂ ವಿಮುಖರಾಗುವುದಾದರೆ, ನಮ್ಮ ಸಂದೇಶವಾಹಕರ ಕರ್ತವ್ಯವು ಸಂದೇಶವನ್ನು ಸ್ಪಷ್ಟವಾಗಿ ತಲುಪಿಸುವುದು ಮಾತ್ರವಾಗಿದೆ.

64:13

ٱللَّهُ لَآ إِلَٰهَ إِلَّا هُوَۚ وَعَلَى ٱللَّهِ فَلۡيَتَوَكَّلِ ٱلۡمُؤۡمِنُونَ ﴿13﴾

Transliteration: Allahu la ilaha illa huwa waAAala Allahi falyatawakkali almuminoona

Translation: ಅಲ್ಲಾಹು. ಅವನ ಹೊರತು ಆರಾಧನೆಗೆ ಅರ್ಹರಾದ ಅನ್ಯ ದೇವರಿಲ್ಲ. ಸತ್ಯವಿಶ್ವಾಸಿಗಳು ಅಲ್ಲಾಹನಲ್ಲಿಯೇ ಭರವಸೆಯಿಡಲಿ.

64:14

يَـٰٓأَيُّهَا ٱلَّذِينَ ءَامَنُوٓاْ إِنَّ مِنۡ أَزۡوَٰجِكُمۡ وَأَوۡلَٰدِكُمۡ عَدُوّٗا لَّكُمۡ فَٱحۡذَرُوهُمۡۚ وَإِن تَعۡفُواْ وَتَصۡفَحُواْ وَتَغۡفِرُواْ فَإِنَّ ٱللَّهَ غَفُورٞ رَّحِيمٌ ﴿14﴾

Transliteration: Ya ayyuha allatheena amanoo inna min azwajikum waawladikum AAaduwwan lakum faihtharoohum wain taAAfoo watasfahoo wataghfiroo fainna Allaha ghafoorun raheemun

Translation: ಓ ಸತ್ಯವಿಶ್ವಾಸಿಗಳೇ! ನಿಶ್ಚಯವಾಗಿಯೂ ನಿಮ್ಮ ಪತ್ನಿಯರಲ್ಲಿ ಮತ್ತು ನಿಮ್ಮ ಮಕ್ಕಳಲ್ಲಿ ನಿಮಗೆ ವೈರಿಗಳಿದ್ದಾರೆ. ಆದ್ದರಿಂದ ಅವರ ಬಗ್ಗೆ ಜಾಗರೂಕರಾಗಿರಿ. ನೀವು ಮನ್ನಿಸುವುದಾದರೆ, (ಅವರ ತಪ್ಪುಗಳನ್ನು) ನಿರ್ಲಕ್ಷಿಸುವುದಾದರೆ ಮತ್ತು ಅವರಿಗೆ ಕ್ಷಮಿಸುವುದಾದರೆ ನಿಶ್ಚಯವಾಗಿಯೂ ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.[1]

64:15

إِنَّمَآ أَمۡوَٰلُكُمۡ وَأَوۡلَٰدُكُمۡ فِتۡنَةٞۚ وَٱللَّهُ عِندَهُۥٓ أَجۡرٌ عَظِيمٞ ﴿15﴾

Transliteration: Innama amwalukum waawladukum fitnatun waAllahu AAindahu ajrun AAatheemun

Translation: ನಿಮ್ಮ ಆಸ್ತಿ ಮತ್ತು ಮಕ್ಕಳು ಒಂದು ಪರೀಕ್ಷೆಯಾಗಿದೆ. ಅಲ್ಲಾಹನ ಬಳಿ ಮಹಾ ಪ್ರತಿಫಲವಿದೆ.

64:16

فَٱتَّقُواْ ٱللَّهَ مَا ٱسۡتَطَعۡتُمۡ وَٱسۡمَعُواْ وَأَطِيعُواْ وَأَنفِقُواْ خَيۡرٗا لِّأَنفُسِكُمۡۗ وَمَن يُوقَ شُحَّ نَفۡسِهِۦ فَأُوْلَـٰٓئِكَ هُمُ ٱلۡمُفۡلِحُونَ ﴿16﴾

Transliteration: Faittaqoo Allaha ma istataAAtum waismaAAoo waateeAAoo waanfiqoo khayran lianfusikum waman yooqa shuhha nafsihi faolaika humu almuflihoona

Translation: ಆದ್ದರಿಂದ ನಿಮಗೆ ಸಾಧ್ಯವಾಗುವಷ್ಟರ ಮಟ್ಟಿಗೆ ನೀವು ಅಲ್ಲಾಹನನ್ನು ಭಯಪಡಿರಿ. ಕಿವಿಗೊಟ್ಟು ಕೇಳಿರಿ ಮತ್ತು ಅನುಸರಿಸಿರಿ. ನಿಮಗೆ ಒಳಿತಾಗಿರುವ ವಿಧದಲ್ಲಿ ಅಲ್ಲಾಹನ ಮಾರ್ಗದಲ್ಲಿ ಖರ್ಚು ಮಾಡಿರಿ. ಯಾರನ್ನು ಅವರ ಮನಸ್ಸಿನ ಆಸೆಬುರುಕತನದಿಂದ ಕಾಪಾಡಲಾಗಿದೆಯೋ ಅವರು ಯಶಸ್ವಿಯಾದವರು.

64:17

إِن تُقۡرِضُواْ ٱللَّهَ قَرۡضًا حَسَنٗا يُضَٰعِفۡهُ لَكُمۡ وَيَغۡفِرۡ لَكُمۡۚ وَٱللَّهُ شَكُورٌ حَلِيمٌ ﴿17﴾

Transliteration: In tuqridoo Allaha qardan hasanan yudaAAifhu lakum wayaghfir lakum waAllahu shakoorun haleemun

Translation: ನೀವು ಅಲ್ಲಾಹನಿಗೆ ಉತ್ತಮ ಸಾಲವನ್ನು ನೀಡುವುದಾದರೆ ಅವನು ಅದನ್ನು ನಿಮಗೆ ಹಲವು ಪಟ್ಟು ದ್ವಿಗುಣಗೊಳಿಸುವನು ಮತ್ತು ನಿಮ್ಮನ್ನು ಕ್ಷಮಿಸುವನು. ಅಲ್ಲಾಹು ಕೃತಜ್ಞನು ಮತ್ತು ಸಹಿಷ್ಣುತೆಯುಳ್ಳವನಾಗಿದ್ದಾನೆ.

64:18

عَٰلِمُ ٱلۡغَيۡبِ وَٱلشَّهَٰدَةِ ٱلۡعَزِيزُ ٱلۡحَكِيمُ ﴿18﴾

Transliteration: AAalimu alghaybi waalshshahadati alAAazeezu alhakeemu

Translation: ಅವನು ದೃಶ್ಯ-ಅದೃಶ್ಯಗಳನ್ನು ತಿಳಿದವನಾಗಿದ್ದಾನೆ ಮತ್ತು ಪ್ರಬಲನು ಹಾಗೂ ವಿವೇಕಪೂರ್ಣನಾಗಿದ್ದಾನೆ.

Transliteration source: English Transliteration by Tanzil. Used under Tanzil's non-commercial terms; see the source and latest updates at Tanzil. Tanzil translation download