نٓۚ وَٱلۡقَلَمِ وَمَا يَسۡطُرُونَ ﴿1﴾نٓۚ وَٱلۡقَلَمِ وَمَا يَسۡطُرُونَ
Transliteration: Noon waalqalami wama yasturoona
Translation: ನೂನ್. ಲೇಖನಿ ಮತ್ತು ಅವರು (ದೇವದೂತರುಗಳು) ಬರೆಯುವುದರ ಮೇಲಾಣೆ!
نٓۚ وَٱلۡقَلَمِ وَمَا يَسۡطُرُونَ ﴿1﴾نٓۚ وَٱلۡقَلَمِ وَمَا يَسۡطُرُونَ
Transliteration: Noon waalqalami wama yasturoona
Translation: ನೂನ್. ಲೇಖನಿ ಮತ್ತು ಅವರು (ದೇವದೂತರುಗಳು) ಬರೆಯುವುದರ ಮೇಲಾಣೆ!
مَآ أَنتَ بِنِعۡمَةِ رَبِّكَ بِمَجۡنُونٖ ﴿2﴾مَآ أَنتَ بِنِعۡمَةِ رَبِّكَ بِمَجۡنُونٖ
Transliteration: Ma anta biniAAmati rabbika bimajnoonin
Translation: ನಿಮ್ಮ ಪರಿಪಾಲಕನ (ಅಲ್ಲಾಹನ) ಅನುಗ್ರಹದಿಂದಾಗಿ ನೀವು ಮಾನಸಿಕ ಅಸ್ವಸ್ಥರಲ್ಲ.
وَإِنَّ لَكَ لَأَجۡرًا غَيۡرَ مَمۡنُونٖ ﴿3﴾وَإِنَّ لَكَ لَأَجۡرًا غَيۡرَ مَمۡنُونٖ
Transliteration: Wainna laka laajran ghayra mamnoonin
Translation: ನಿಶ್ಚಯವಾಗಿಯೂ ನಿಮಗೆ ಎಂದೂ ಮುಗಿಯದ ಪ್ರತಿಫಲವಿದೆ.
وَإِنَّكَ لَعَلَىٰ خُلُقٍ عَظِيمٖ ﴿4﴾وَإِنَّكَ لَعَلَىٰ خُلُقٍ عَظِيمٖ
Transliteration: Wainnaka laAAala khuluqin AAatheemin
Translation: ನಿಶ್ಚಯವಾಗಿಯೂ ನೀವು ಶ್ರೇಷ್ಠ ಗುಣ ನಡವಳಿಕೆಯಲ್ಲಿದ್ದೀರಿ.
فَسَتُبۡصِرُ وَيُبۡصِرُونَ ﴿5﴾فَسَتُبۡصِرُ وَيُبۡصِرُونَ
Transliteration: Fasatubsiru wayubsiroona
Translation: ಆದ್ದರಿಂದ ನೀವು ನೋಡುವಿರಿ ಮತ್ತು ಅವರು ಕೂಡ ನೋಡುವರು.
بِأَييِّكُمُ ٱلۡمَفۡتُونُ ﴿6﴾بِأَييِّكُمُ ٱلۡمَفۡتُونُ
Transliteration: Biayyikumu almaftoonu
Translation: ನಿಮ್ಮಲ್ಲಿ ಕ್ಷೋಭೆಗೆ ಬಲಿಯಾದವರು ಯಾರೆಂದು.
إِنَّ رَبَّكَ هُوَ أَعۡلَمُ بِمَن ضَلَّ عَن سَبِيلِهِۦ وَهُوَ أَعۡلَمُ بِٱلۡمُهۡتَدِينَ ﴿7﴾إِنَّ رَبَّكَ هُوَ أَعۡلَمُ بِمَن ضَلَّ عَن سَبِيلِهِۦ وَهُوَ أَعۡلَمُ بِٱلۡمُهۡتَدِينَ
Transliteration: Inna rabbaka huwa aAAlamu biman dalla AAan sabeelihi wahuwa aAAlamu bialmuhtadeena
Translation: ನಿಶ್ಚಯವಾಗಿಯೂ ತನ್ನ ಮಾರ್ಗದಿಂದ ತಪ್ಪಿಹೋದವರ ಬಗ್ಗೆ ನಿಮ್ಮ ಪರಿಪಾಲಕನಿಗೆ (ಅಲ್ಲಾಹನಿಗೆ) ಬಹಳ ಚೆನ್ನಾಗಿ ತಿಳಿದಿದೆ. ಸನ್ಮಾರ್ಗ ಪಡೆದವರ ಬಗ್ಗೆಯೂ ಅವನಿಗೆ ಬಹಳ ಚೆನ್ನಾಗಿ ತಿಳಿದಿದೆ.
فَلَا تُطِعِ ٱلۡمُكَذِّبِينَ ﴿8﴾فَلَا تُطِعِ ٱلۡمُكَذِّبِينَ
Transliteration: Fala tutiAAi almukaththibeena
Translation: ಆದ್ದರಿಂದ ನೀವು ಸತ್ಯನಿಷೇಧಿಗಳ ಮಾತನ್ನು ಕೇಳಬೇಡಿ.
وَدُّواْ لَوۡ تُدۡهِنُ فَيُدۡهِنُونَ ﴿9﴾وَدُّواْ لَوۡ تُدۡهِنُ فَيُدۡهِنُونَ
Transliteration: Waddoo law tudhinu fayudhinoona
Translation: ನೀವು ಸ್ವಲ್ಪ ಮೃದುವಾದರೆ ಅವರು ಕೂಡ ಮೃದುವಾಗುತ್ತಾರೆ ಎಂದು ಅವರು ಬಯಸುತ್ತಾರೆ.[1]
وَلَا تُطِعۡ كُلَّ حَلَّافٖ مَّهِينٍ ﴿10﴾وَلَا تُطِعۡ كُلَّ حَلَّافٖ مَّهِينٍ
Transliteration: Wala tutiAA kulla hallafin maheenin
Translation: ನೀವು ಎಲ್ಲಾ ಪದೇ ಪದೇ ಆಣೆ ಮಾಡುವ ನೀಚರ ಮಾತನ್ನು ಕೇಳಬೇಡಿ.
هَمَّازٖ مَّشَّآءِۭ بِنَمِيمٖ ﴿11﴾هَمَّازٖ مَّشَّآءِۭ بِنَمِيمٖ
Transliteration: Hammazin mashshain binameemin
Translation: (ಅಂದರೆ) ಚುಚ್ಚಿ ಮಾತನಾಡುವವನು ಮತ್ತು ಚಾಡಿಯೊಂದಿಗೆ ನಡೆಯುವವನು.
مَّنَّاعٖ لِّلۡخَيۡرِ مُعۡتَدٍ أَثِيمٍ ﴿12﴾مَّنَّاعٖ لِّلۡخَيۡرِ مُعۡتَدٍ أَثِيمٍ
Transliteration: MannaAAin lilkhayri muAAtadin atheemin
Translation: ಒಳಿತಿಗೆ ಅಡ್ಡಿಪಡಿಸುವವನು, ಎಲ್ಲೆ ಮೀರಿದವನು ಮತ್ತು ಕಡುಪಾಪಿಯಾಗಿರುವವನು.
عُتُلِّۭ بَعۡدَ ذَٰلِكَ زَنِيمٍ ﴿13﴾عُتُلِّۭ بَعۡدَ ذَٰلِكَ زَنِيمٍ
Transliteration: AAutullin baAAda thalika zaneemin
Translation: ಒರಟನು, ಮಾತ್ರವಲ್ಲದೆ ಕುಲಕ್ಕೆ ಸೇರದವನು.[1]
أَن كَانَ ذَا مَالٖ وَبَنِينَ ﴿14﴾أَن كَانَ ذَا مَالٖ وَبَنِينَ
Transliteration: An kana tha malin wabaneena
Translation: ಅವನಿಗೆ ಆಸ್ತಿ ಮತ್ತು ಗಂಡು ಮಕ್ಕಳಿರುವುದೇ ಅವನ (ಈ ದುರ್ನಡತೆಗೆ) ಕಾರಣವಾಗಿದೆ.
إِذَا تُتۡلَىٰ عَلَيۡهِ ءَايَٰتُنَا قَالَ أَسَٰطِيرُ ٱلۡأَوَّلِينَ ﴿15﴾إِذَا تُتۡلَىٰ عَلَيۡهِ ءَايَٰتُنَا قَالَ أَسَٰطِيرُ ٱلۡأَوَّلِينَ
Transliteration: Itha tutla AAalayhi ayatuna qala asateeru alawwaleena
Translation: ಅವನಿಗೆ ನಮ್ಮ ವಚನಗಳನ್ನು ಓದಿಕೊಡಲಾದರೆ, ಅದನ್ನು ಪ್ರಾಚೀನ ಕಾಲದವರ ಪುರಾಣಗಳು ಎಂದು ಹೇಳುತ್ತಾನೆ.
سَنَسِمُهُۥ عَلَى ٱلۡخُرۡطُومِ ﴿16﴾سَنَسِمُهُۥ عَلَى ٱلۡخُرۡطُومِ
Transliteration: Sanasimuhu AAala alkhurtoomi
Translation: ನಾವು ಅವನ ಮೂಗಿನ ಮೇಲೆ ಬರೆ ಹಾಕುವೆವು.
إِنَّا بَلَوۡنَٰهُمۡ كَمَا بَلَوۡنَآ أَصۡحَٰبَ ٱلۡجَنَّةِ إِذۡ أَقۡسَمُواْ لَيَصۡرِمُنَّهَا مُصۡبِحِينَ ﴿17﴾إِنَّا بَلَوۡنَٰهُمۡ كَمَا بَلَوۡنَآ أَصۡحَٰبَ ٱلۡجَنَّةِ إِذۡ أَقۡسَمُواْ لَيَصۡرِمُنَّهَا مُصۡبِحِينَ
Transliteration: Inna balawnahum kama balawna ashaba aljannati ith aqsamoo layasrimunnaha musbiheena
Translation: ನಿಶ್ಚಯವಾಗಿಯೂ ಆ ತೋಟದ ಜನರನ್ನು ಪರೀಕ್ಷಿಸಿದಂತೆ ನಾವು ಅವರನ್ನೂ ಪರೀಕ್ಷಿಸಿದೆವು. ಬೆಳಗಾಗುತ್ತಿದ್ದಂತೆ ತೋಟದ ಹಣ್ಣುಗಳನ್ನು ನಾವು ಖಂಡಿತ ಕೊಯ್ಯುವೆವು ಎಂದು ಅವರು ಆಣೆ ಮಾಡಿ ಹೇಳಿದ ಸಂದರ್ಭ.
وَلَا يَسۡتَثۡنُونَ ﴿18﴾وَلَا يَسۡتَثۡنُونَ
Transliteration: Wala yastathnoona
Translation: ಆದರೆ ಅವರು ಇನ್‌ಶಾ ಅಲ್ಲಾಹ್ (ಅಲ್ಲಾಹು ಇಚ್ಛಿಸಿದರೆ) ಎಂದು ಹೇಳಲಿಲ್ಲ.
فَطَافَ عَلَيۡهَا طَآئِفٞ مِّن رَّبِّكَ وَهُمۡ نَآئِمُونَ ﴿19﴾فَطَافَ عَلَيۡهَا طَآئِفٞ مِّن رَّبِّكَ وَهُمۡ نَآئِمُونَ
Transliteration: Fatafa AAalayha taifun min rabbika wahum naimoona
Translation: ಆದ್ದರಿಂದ, ಅವರು ನಿದ್ದೆಯಲ್ಲಿದ್ದಾಗಲೇ (ರಾತ್ರೋರಾತ್ರಿ) ನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಯ ಒಂದು ಶಿಕ್ಷೆಯು ಆ ತೋಟವನ್ನು ನಾಲ್ಕೂ ಕಡೆಯಿಂದ ಸುತ್ತಿತು.
فَأَصۡبَحَتۡ كَٱلصَّرِيمِ ﴿20﴾فَأَصۡبَحَتۡ كَٱلصَّرِيمِ
Transliteration: Faasbahat kaalssareemi
Translation: ಆಗ ಆ ತೋಟವು ಕಟಾವು ಮಾಡಿದ ಹೊಲದಂತಾಯಿತು.
فَتَنَادَوۡاْ مُصۡبِحِينَ ﴿21﴾فَتَنَادَوۡاْ مُصۡبِحِينَ
Transliteration: Fatanadaw musbiheena
Translation: ಬೆಳಗಾಗುತ್ತಿದ್ದಂತೆ ಅವರು ಒಬ್ಬರನ್ನೊಬ್ಬರು ಕೂಗಿ ಕರೆದು ಹೇಳಿದರು:
أَنِ ٱغۡدُواْ عَلَىٰ حَرۡثِكُمۡ إِن كُنتُمۡ صَٰرِمِينَ ﴿22﴾أَنِ ٱغۡدُواْ عَلَىٰ حَرۡثِكُمۡ إِن كُنتُمۡ صَٰرِمِينَ
Transliteration: Ani ighdoo AAala harthikum in kuntum sarimeena
Translation: “ನಿಮಗೆ ಹಣ್ಣು ಕೊಯ್ಯಬೇಕೆಂದಿದ್ದರೆ ಬೆಳಿಗ್ಗೆಯೇ ನಿಮ್ಮ ತೋಟಕ್ಕೆ ಹೊರಡಿ.”
فَٱنطَلَقُواْ وَهُمۡ يَتَخَٰفَتُونَ ﴿23﴾فَٱنطَلَقُواْ وَهُمۡ يَتَخَٰفَتُونَ
Transliteration: Faintalaqoo wahum yatakhafatoona
Translation: ನಂತರ ಅವರು ಪರಸ್ಪರ ಗುಟ್ಟಾಗಿ ಈ ಮಾತುಗಳನ್ನು ಹೇಳುತ್ತಾ ಹೊರಟರು:
أَن لَّا يَدۡخُلَنَّهَا ٱلۡيَوۡمَ عَلَيۡكُم مِّسۡكِينٞ ﴿24﴾أَن لَّا يَدۡخُلَنَّهَا ٱلۡيَوۡمَ عَلَيۡكُم مِّسۡكِينٞ
Transliteration: An la yadkhulannaha alyawma AAalaykum miskeenun
Translation: “ಇಂದು ನಿಮ್ಮ ಬಳಿಗೆ ಯಾವುದೇ ಬಡವ ಬರುವಂತಾಗಬಾರದು.”
وَغَدَوۡاْ عَلَىٰ حَرۡدٖ قَٰدِرِينَ ﴿25﴾وَغَدَوۡاْ عَلَىٰ حَرۡدٖ قَٰدِرِينَ
Transliteration: Waghadaw AAala hardin qadireena
Translation: ಅವರು ಒಂದು ನಿರ್ಧಾರದೊಂದಿಗೆ (ಅದನ್ನು ಜಾರಿಗೊಳಿಸುವ) ಪೂರ್ಣ ಸಾಮರ್ಥ್ಯವಿದೆಯೆಂದು ಪರಿಗಣಿಸಿ ಬೆಳಗ್ಗೆಯೇ ಹೊರಟರು.
فَلَمَّا رَأَوۡهَا قَالُوٓاْ إِنَّا لَضَآلُّونَ ﴿26﴾فَلَمَّا رَأَوۡهَا قَالُوٓاْ إِنَّا لَضَآلُّونَ
Transliteration: Falamma raawha qaloo inna ladalloona
Translation: ಆದರೆ ಅವರು ಆ ತೋಟವನ್ನು ನೋಡಿದಾಗ ಅವರು ಹೇಳಿದರು: “ನಿಶ್ಚಯವಾಗಿಯೂ ನಮಗೆ ದಾರಿ ತಪ್ಪಿದೆ.
بَلۡ نَحۡنُ مَحۡرُومُونَ ﴿27﴾بَلۡ نَحۡنُ مَحۡرُومُونَ
Transliteration: Bal nahnu mahroomoona
Translation: ಅಲ್ಲ, ನಮಗೆ ಅದೃಷ್ಟ ಕೈಕೊಟ್ಟಿದೆ.”
قَالَ أَوۡسَطُهُمۡ أَلَمۡ أَقُل لَّكُمۡ لَوۡلَا تُسَبِّحُونَ ﴿28﴾قَالَ أَوۡسَطُهُمۡ أَلَمۡ أَقُل لَّكُمۡ لَوۡلَا تُسَبِّحُونَ
Transliteration: Qala awsatuhum alam aqul lakum lawla tusabbihoona
Translation: ಅವರಲ್ಲಿದ್ದ ಉತ್ತಮ ವ್ಯಕ್ತಿ ಹೇಳಿದನು: “ನೀವೇಕೆ ಅಲ್ಲಾಹನ ಪರಿಶುದ್ಧಿಯನ್ನು ಕೊಂಡಾಡುವುದಿಲ್ಲ ಎಂದು ನಾನು ನಿಮ್ಮೊಡನೆ ಕೇಳಲಿಲ್ಲವೇ?”
قَالُواْ سُبۡحَٰنَ رَبِّنَآ إِنَّا كُنَّا ظَٰلِمِينَ ﴿29﴾قَالُواْ سُبۡحَٰنَ رَبِّنَآ إِنَّا كُنَّا ظَٰلِمِينَ
Transliteration: Qaloo subhana rabbina inna kunna thalimeena
Translation: ಅವರು ಹೇಳಿದರು: “ನಮ್ಮ ಪರಿಪಾಲಕನ (ಅಲ್ಲಾಹನ) ಪರಿಶುದ್ಧಿಯನ್ನು ನಾವು ಕೊಂಡಾಡುತ್ತೇವೆ. ನಿಶ್ಚಯವಾಗಿಯೂ ನಾವು ಅಕ್ರಮಿಗಳಾಗಿದ್ದೇವೆ.”
فَأَقۡبَلَ بَعۡضُهُمۡ عَلَىٰ بَعۡضٖ يَتَلَٰوَمُونَ ﴿30﴾فَأَقۡبَلَ بَعۡضُهُمۡ عَلَىٰ بَعۡضٖ يَتَلَٰوَمُونَ
Transliteration: Faaqbala baAAduhum AAala baAAdin yatalawamoona
Translation: ನಂತರ ಅವರು ಒಬ್ಬರಿಗೊಬ್ಬರು ಮುಖ ಮಾಡಿ ಪರಸ್ಪರ ಆರೋಪ ಹೊರಿಸತೊಡಗಿದರು.
قَالُواْ يَٰوَيۡلَنَآ إِنَّا كُنَّا طَٰغِينَ ﴿31﴾قَالُواْ يَٰوَيۡلَنَآ إِنَّا كُنَّا طَٰغِينَ
Transliteration: Qaloo ya waylana inna kunna tagheena
Translation: ಅವರು ಹೇಳಿದರು: “ಓ ನಮ್ಮ ದುರ್ಗತಿಯೇ! ನಿಶ್ಚಯವಾಗಿಯೂ ನಾವು ಅತಿರೇಕಿಗಳಾಗಿದ್ದೆವು.
عَسَىٰ رَبُّنَآ أَن يُبۡدِلَنَا خَيۡرٗا مِّنۡهَآ إِنَّآ إِلَىٰ رَبِّنَا رَٰغِبُونَ ﴿32﴾عَسَىٰ رَبُّنَآ أَن يُبۡدِلَنَا خَيۡرٗا مِّنۡهَآ إِنَّآ إِلَىٰ رَبِّنَا رَٰغِبُونَ
Transliteration: AAasa rabbuna an yubdilana khayran minha inna ila rabbina raghiboona
Translation: ನಮ್ಮ ಪರಿಪಾಲಕನು (ಅಲ್ಲಾಹು) ನಮಗೆ ಇದಕ್ಕಿಂತಲೂ ಉತ್ತಮವಾದುದನ್ನು ಬದಲಿಯಾಗಿ ನೀಡಬಹುದು. ನಿಶ್ಚಯವಾಗಿಯೂ ನಾವು ನಮ್ಮ ಪರಿಪಾಲಕನ (ಅಲ್ಲಾಹನ) ಬಗ್ಗೆ ಆಶಾವಾದಿಗಳಾಗಿದ್ದೇವೆ.”
كَذَٰلِكَ ٱلۡعَذَابُۖ وَلَعَذَابُ ٱلۡأٓخِرَةِ أَكۡبَرُۚ لَوۡ كَانُواْ يَعۡلَمُونَ ﴿33﴾كَذَٰلِكَ ٱلۡعَذَابُۖ وَلَعَذَابُ ٱلۡأٓخِرَةِ أَكۡبَرُۚ لَوۡ كَانُواْ يَعۡلَمُونَ
Transliteration: Kathalika alAAathabu walaAAathabu alakhirati akbaru law kanoo yaAAlamoona
Translation: ಶಿಕ್ಷೆಯು ಹೀಗೆಯೇ ಆಗಿದೆ. ಪರಲೋಕದ ಶಿಕ್ಷೆಯು ಅತಿದೊಡ್ಡದಾಗಿದೆ. ಅವರು ಅದನ್ನು ತಿಳಿಯುತ್ತಿದ್ದರೆ!
إِنَّ لِلۡمُتَّقِينَ عِندَ رَبِّهِمۡ جَنَّـٰتِ ٱلنَّعِيمِ ﴿34﴾إِنَّ لِلۡمُتَّقِينَ عِندَ رَبِّهِمۡ جَنَّـٰتِ ٱلنَّعِيمِ
Transliteration: Inna lilmuttaqeena AAinda rabbihim jannati alnnaAAeemi
Translation: ನಿಶ್ಚಯವಾಗಿಯೂ, ದೇವಭಯವುಳ್ಳವರಿಗೆ ಅವರ ಪರಿಪಾಲಕನ (ಅಲ್ಲಾಹನ) ಬಳಿ ಸುಖಾಡಂಬರಗಳಿಂದ ಕೂಡಿದ ಸ್ವರ್ಗೋದ್ಯಾನಗಳಿವೆ.
أَفَنَجۡعَلُ ٱلۡمُسۡلِمِينَ كَٱلۡمُجۡرِمِينَ ﴿35﴾أَفَنَجۡعَلُ ٱلۡمُسۡلِمِينَ كَٱلۡمُجۡرِمِينَ
Transliteration: AfanajAAalu almuslimeena kaalmujrimeena
Translation: ಹಾಗಾದರೆ ನಾವು ಮುಸ್ಲಿಮರನ್ನು ಅಪರಾಧಿಗಳಂತೆ ನಡೆಸಿಕೊಳ್ಳುವೆವೇ?
مَا لَكُمۡ كَيۡفَ تَحۡكُمُونَ ﴿36﴾مَا لَكُمۡ كَيۡفَ تَحۡكُمُونَ
Transliteration: Ma lakum kayfa tahkumoona
Translation: ನಿಮಗೇನಾಗಿದೆ? ನೀವು ಹೇಗೆ ತೀರ್ಪು ನೀಡುತ್ತೀರಿ?
أَمۡ لَكُمۡ كِتَٰبٞ فِيهِ تَدۡرُسُونَ ﴿37﴾أَمۡ لَكُمۡ كِتَٰبٞ فِيهِ تَدۡرُسُونَ
Transliteration: Am lakum kitabun feehi tadrusoona
Translation: ನಿಮ್ಮಲ್ಲಿ ಒಂದು ಗ್ರಂಥವಿದ್ದು ನೀವು ಅದರಿಂದ ಓದುತ್ತಿದ್ದೀರಾ?
إِنَّ لَكُمۡ فِيهِ لَمَا تَخَيَّرُونَ ﴿38﴾إِنَّ لَكُمۡ فِيهِ لَمَا تَخَيَّرُونَ
Transliteration: Inna lakum feehi lama takhayyaroona
Translation: ಅದರಲ್ಲಿ ನಿಮ್ಮ ಮನಸ್ಸಿಗೆ ಒಪ್ಪಿಗೆಯಾಗುವ ವಿಷಯಗಳಿವೆಯೇ?
أَمۡ لَكُمۡ أَيۡمَٰنٌ عَلَيۡنَا بَٰلِغَةٌ إِلَىٰ يَوۡمِ ٱلۡقِيَٰمَةِ إِنَّ لَكُمۡ لَمَا تَحۡكُمُونَ ﴿39﴾أَمۡ لَكُمۡ أَيۡمَٰنٌ عَلَيۡنَا بَٰلِغَةٌ إِلَىٰ يَوۡمِ ٱلۡقِيَٰمَةِ إِنَّ لَكُمۡ لَمَا تَحۡكُمُونَ
Transliteration: Am lakum aymanun AAalayna balighatun ila yawmi alqiyamati inna lakum lama tahkumoona
Translation: ಅಥವಾ, ನೀವು ಸ್ವಯಂ ನಿಶ್ಚಯಿಸುವುದೆಲ್ಲವೂ ನಿಮಗಿದೆಯೆಂದು ಪುನರುತ್ಥಾನ ದಿನದ ತನಕ ತಲುಪುವ ಯಾವುದಾದರೂ ಪ್ರತಿಜ್ಞೆಗಳನ್ನು ನೀವು ನಮ್ಮಿಂದ ಪಡೆದಿದ್ದೀರಾ?
سَلۡهُمۡ أَيُّهُم بِذَٰلِكَ زَعِيمٌ ﴿40﴾سَلۡهُمۡ أَيُّهُم بِذَٰلِكَ زَعِيمٌ
Transliteration: Salhum ayyuhum bithalika zaAAeemun
Translation: ಅವರಲ್ಲಿ ಯಾರು ಇದರ ಹೊಣೆಯನ್ನು ವಹಿಸಿಕೊಳ್ಳುತ್ತಾರೆಂದು ಅವರೊಡನೆ ಕೇಳಿರಿ.
أَمۡ لَهُمۡ شُرَكَآءُ فَلۡيَأۡتُواْ بِشُرَكَآئِهِمۡ إِن كَانُواْ صَٰدِقِينَ ﴿41﴾أَمۡ لَهُمۡ شُرَكَآءُ فَلۡيَأۡتُواْ بِشُرَكَآئِهِمۡ إِن كَانُواْ صَٰدِقِينَ
Transliteration: Am lahum shurakao falyatoo bishurakaihim in kanoo sadiqeena
Translation: ಅವರಿಗೆ ಯಾರಾದರೂ ಸಹಭಾಗಿಗಳು ಇದ್ದಾರೆಯೇ? ಅವರು ಸತ್ಯವಂತರಾಗಿದ್ದರೆ ಅವರ ಸಹಭಾಗಿಗಳನ್ನು ಕರೆದುಕೊಂಡು ಬರಲಿ.
يَوۡمَ يُكۡشَفُ عَن سَاقٖ وَيُدۡعَوۡنَ إِلَى ٱلسُّجُودِ فَلَا يَسۡتَطِيعُونَ ﴿42﴾يَوۡمَ يُكۡشَفُ عَن سَاقٖ وَيُدۡعَوۡنَ إِلَى ٱلسُّجُودِ فَلَا يَسۡتَطِيعُونَ
Transliteration: Yawma yukshafu AAan saqin wayudAAawna ila alssujoodi fala yastateeAAoona
Translation: ಕಣಕಾಲನ್ನು ಪ್ರದರ್ಶಿಸಲಾಗುವ ದಿನ. ಆಗ ಅವರನ್ನು ಸಾಷ್ಟಾಂಗ ಮಾಡಲು ಕರೆಯಲಾಗುವುದು. ಆದರೆ ಅವರಿಗೆ (ಸಾಷ್ಟಾಂಗ ಮಾಡಲು) ಸಾಧ್ಯವಾಗುವುದಿಲ್ಲ.[1]
خَٰشِعَةً أَبۡصَٰرُهُمۡ تَرۡهَقُهُمۡ ذِلَّةٞۖ وَقَدۡ كَانُواْ يُدۡعَوۡنَ إِلَى ٱلسُّجُودِ وَهُمۡ سَٰلِمُونَ ﴿43﴾خَٰشِعَةً أَبۡصَٰرُهُمۡ تَرۡهَقُهُمۡ ذِلَّةٞۖ وَقَدۡ كَانُواْ يُدۡعَوۡنَ إِلَى ٱلسُّجُودِ وَهُمۡ سَٰلِمُونَ
Transliteration: KhashiAAatan absaruhum tarhaquhum thillatun waqad kanoo yudAAawna ila alssujoodi wahum salimoona
Translation: ಅವರ ಕಣ್ಣುಗಳು ತಗ್ಗಿಕೊಂಡಿರುವುವು ಮತ್ತು ಅವಮಾನವು ಅವರನ್ನು ಆವರಿಸಿಕೊಂಡಿರುವುದು. ವಾಸ್ತವದಲ್ಲಿ ಅವರು ಇಹಲೋಕದಲ್ಲಿ ಸುಸ್ಥಿತಿಯಲ್ಲಿದ್ದಾಗಲೂ ಅವರನ್ನು ಸಾಷ್ಟಾಂಗ ಮಾಡಲು ಕರೆಯಲಾಗುತ್ತಿತ್ತು.
فَذَرۡنِي وَمَن يُكَذِّبُ بِهَٰذَا ٱلۡحَدِيثِۖ سَنَسۡتَدۡرِجُهُم مِّنۡ حَيۡثُ لَا يَعۡلَمُونَ ﴿44﴾فَذَرۡنِي وَمَن يُكَذِّبُ بِهَٰذَا ٱلۡحَدِيثِۖ سَنَسۡتَدۡرِجُهُم مِّنۡ حَيۡثُ لَا يَعۡلَمُونَ
Transliteration: Fatharnee waman yukaththibu bihatha alhadeethi sanastadrijuhum min haythu la yaAAlamoona
Translation: ಆದ್ದರಿಂದ ನನ್ನನ್ನು ಮತ್ತು ಈ ಮಾತನ್ನು (ಕುರ್‌ಆನನ್ನು) ನಿಷೇಧಿಸುವವನನ್ನು ಬಿಟ್ಟುಬಿಡಿ.[1] ಅವರು ತಿಳಿಯದ ರೀತಿಯಲ್ಲಿ ನಾವು ಅವರನ್ನು ಹಂತ ಹಂತವಾಗಿ ಹಿಡಿಯುವೆವು.
وَأُمۡلِي لَهُمۡۚ إِنَّ كَيۡدِي مَتِينٌ ﴿45﴾وَأُمۡلِي لَهُمۡۚ إِنَّ كَيۡدِي مَتِينٌ
Transliteration: Waomlee lahum inna kaydee mateenun
Translation: ನಾನು ಅವರಿಗೆ ಕಾಲಾವಕಾಶ ನೀಡುವೆನು. ನಿಶ್ಚಯವಾಗಿಯೂ ನನ್ನ ತಂತ್ರವು ಬಲಿಷ್ಠವಾಗಿದೆ.
أَمۡ تَسۡـَٔلُهُمۡ أَجۡرٗا فَهُم مِّن مَّغۡرَمٖ مُّثۡقَلُونَ ﴿46﴾أَمۡ تَسۡـَٔلُهُمۡ أَجۡرٗا فَهُم مِّن مَّغۡرَمٖ مُّثۡقَلُونَ
Transliteration: Am tasaluhum ajran fahum min maghramin muthqaloona
Translation: ನೀವು ಅವರೊಡನೆ ಪ್ರತಿಫಲವನ್ನು ಕೇಳಿ ಅವರು (ಅದನ್ನು ನೀಡಲು ಸಾಧ್ಯವಾಗದೆ) ಸಾಲದ ಹೊರೆಯನ್ನು ಹೊರುತ್ತಿದ್ದಾರೆಯೇ?
أَمۡ عِندَهُمُ ٱلۡغَيۡبُ فَهُمۡ يَكۡتُبُونَ ﴿47﴾أَمۡ عِندَهُمُ ٱلۡغَيۡبُ فَهُمۡ يَكۡتُبُونَ
Transliteration: Am AAindahumu alghaybu fahum yaktuboona
Translation: ಅವರ ಬಳಿ ಅದೃಶ್ಯ ಜ್ಞಾನವಿದ್ದು ಅವರು ಅದನ್ನು ಬರೆಯುತ್ತಿದ್ದಾರೆಯೇ?
فَٱصۡبِرۡ لِحُكۡمِ رَبِّكَ وَلَا تَكُن كَصَاحِبِ ٱلۡحُوتِ إِذۡ نَادَىٰ وَهُوَ مَكۡظُومٞ ﴿48﴾فَٱصۡبِرۡ لِحُكۡمِ رَبِّكَ وَلَا تَكُن كَصَاحِبِ ٱلۡحُوتِ إِذۡ نَادَىٰ وَهُوَ مَكۡظُومٞ
Transliteration: Faisbir lihukmi rabbika wala takun kasahibi alhooti ith nada wahuwa makthoomun
Translation: ಆದ್ದರಿಂದ, ನಿಮ್ಮ ಪರಿಪಾಲಕನ (ಅಲ್ಲಾಹನ) ತೀರ್ಮಾನಕ್ಕಾಗಿ ತಾಳ್ಮೆಯಿಂದಿರಿ. ನೀವು ಮೀನಿನ ಸಂಗಡಿಗನಂತೆ (ಯೂನುಸರಂತೆ) ಆಗಬೇಡಿ. ತೀವ್ರ ದುಃಖಿತನಾಗಿದ್ದ ಸ್ಥಿತಿಯಲ್ಲಿ ಅವರು ಕರೆದು ಪ್ರಾರ್ಥಿಸಿದ ಸಂದರ್ಭ.
لَّوۡلَآ أَن تَدَٰرَكَهُۥ نِعۡمَةٞ مِّن رَّبِّهِۦ لَنُبِذَ بِٱلۡعَرَآءِ وَهُوَ مَذۡمُومٞ ﴿49﴾لَّوۡلَآ أَن تَدَٰرَكَهُۥ نِعۡمَةٞ مِّن رَّبِّهِۦ لَنُبِذَ بِٱلۡعَرَآءِ وَهُوَ مَذۡمُومٞ
Transliteration: Lawla an tadarakahu niAAmatun min rabbihi lanubitha bialAAarai wahuwa mathmoomun
Translation: ಅವರ ಪರಿಪಾಲಕನ (ಅಲ್ಲಾಹನ) ಅನುಗ್ರಹವು ಅವರನ್ನು ತಲುಪದಿರುತ್ತಿದ್ದರೆ, ಅವರನ್ನು ಆಕ್ಷೇಪಿತ ಸ್ಥಿತಿಯಲ್ಲಿ ಬಯಲು ತೀರಕ್ಕೆ ಎಸೆಯಲಾಗುತ್ತಿತ್ತು.
فَٱجۡتَبَٰهُ رَبُّهُۥ فَجَعَلَهُۥ مِنَ ٱلصَّـٰلِحِينَ ﴿50﴾فَٱجۡتَبَٰهُ رَبُّهُۥ فَجَعَلَهُۥ مِنَ ٱلصَّـٰلِحِينَ
Transliteration: Faijtabahu rabbuhu fajaAAalahu mina alssaliheena
Translation: ಅವರ ಪರಿಪಾಲಕ (ಅಲ್ಲಾಹು) ಅವರನ್ನು ಆರಿಸಿದನು ಮತ್ತು ಅವರನ್ನು ನೀತಿವಂತರಲ್ಲಿ ಸೇರಿಸಿದನು.
وَإِن يَكَادُ ٱلَّذِينَ كَفَرُواْ لَيُزۡلِقُونَكَ بِأَبۡصَٰرِهِمۡ لَمَّا سَمِعُواْ ٱلذِّكۡرَ وَيَقُولُونَ إِنَّهُۥ لَمَجۡنُونٞ ﴿51﴾وَإِن يَكَادُ ٱلَّذِينَ كَفَرُواْ لَيُزۡلِقُونَكَ بِأَبۡصَٰرِهِمۡ لَمَّا سَمِعُواْ ٱلذِّكۡرَ وَيَقُولُونَ إِنَّهُۥ لَمَجۡنُونٞ
Transliteration: Wain yakadu allatheena kafaroo layuzliqoonaka biabsarihim lamma samiAAoo alththikra wayaqooloona innahu lamajnoonun
Translation: ಸತ್ಯನಿಷೇಧಿಗಳು ಈ ಉಪದೇಶವನ್ನು (ಕುರ್‌ಆನನ್ನು) ಕೇಳಿದಾಗ, ತಮ್ಮ ಕೆಟ್ಟದೃಷ್ಟಿಗಳಿಂದ ನಿಮ್ಮನ್ನು ಇನ್ನೇನು ಜಾರುವಂತೆ ಮಾಡುವುದರಲ್ಲಿದ್ದರು.[1] ಅವರು ಹೇಳುತ್ತಿದ್ದರು: “ನಿಶ್ಚಯವಾಗಿಯೂ ಅವನೊಬ್ಬ ಮಾನಸಿಕ ಅಸ್ವಸ್ಥ.”
وَمَا هُوَ إِلَّا ذِكۡرٞ لِّلۡعَٰلَمِينَ ﴿52﴾وَمَا هُوَ إِلَّا ذِكۡرٞ لِّلۡعَٰلَمِينَ
Transliteration: Wama huwa illa thikrun lilAAalameena
Translation: ಇದು (ಕುರ್‌ಆನ್) ಸರ್ವಲೋಕಗಳ ಜನರಿಗೆ ಒಂದು ಉಪದೇಶವಲ್ಲದೆ ಇನ್ನೇನೂ ಅಲ್ಲ.
Transliteration source: English Transliteration by Tanzil. Used under Tanzil's non-commercial terms; see the source and latest updates at Tanzil. Tanzil translation download