quranm◉

Surah Al-Jinn transliteration

◉ ಸೂರಾ · ∞

72:1

قُلۡ أُوحِيَ إِلَيَّ أَنَّهُ ٱسۡتَمَعَ نَفَرٞ مِّنَ ٱلۡجِنِّ فَقَالُوٓاْ إِنَّا سَمِعۡنَا قُرۡءَانًا عَجَبٗا ﴿1﴾

Transliteration: Qul oohiya ilayya annahu istamaAAa nafarun mina aljinni faqaloo inna samiAAna quranan AAajaban

Translation: (ಪ್ರವಾದಿಯವರೇ) ಹೇಳಿರಿ: ನಿಶ್ಚಯವಾಗಿಯೂ ಜಿನ್ನ್‌ಗಳಲ್ಲಿ ಸೇರಿದ ಒಂದು ಗುಂಪು (ಕುರ್‌ಆನನ್ನು) ಕಿವಿಗೊಟ್ಟು ಕೇಳಿದರೆಂದು ನನಗೆ ದಿವ್ಯವಾಣಿ ನೀಡಲಾಗಿದೆ. ನಂತರ ಅವರು ಹೇಳಿದರು: “ನಿಶ್ಚಯವಾಗಿಯೂ ನಾವು ಅದ್ಭುತವಾದ ಕುರ್‌ಆನನ್ನು ಕೇಳಿದೆವು.

72:2

يَهۡدِيٓ إِلَى ٱلرُّشۡدِ فَـَٔامَنَّا بِهِۦۖ وَلَن نُّشۡرِكَ بِرَبِّنَآ أَحَدٗا ﴿2﴾

Transliteration: Yahdee ila alrrushdi faamanna bihi walan nushrika birabbina ahadan

Translation: ಅದು ಸನ್ಮಾರ್ಗಕ್ಕೆ ದಾರಿ ತೋರಿಸುತ್ತದೆ. ಆದ್ದರಿಂದ ನಾವು ಅದರಲ್ಲಿ ವಿಶ್ವಾಸವಿಟ್ಟೆವು. ನಾವು ನಮ್ಮ ಪರಿಪಾಲಕನೊಂದಿಗೆ (ಅಲ್ಲಾಹನೊಂದಿಗೆ) ಯಾರನ್ನೂ ಎಂದಿಗೂ ಸಹಭಾಗಿಯಾಗಿ ಮಾಡುವುದಿಲ್ಲ.

72:3

وَأَنَّهُۥ تَعَٰلَىٰ جَدُّ رَبِّنَا مَا ٱتَّخَذَ صَٰحِبَةٗ وَلَا وَلَدٗا ﴿3﴾

Transliteration: Waannahu taAAala jaddu rabbina ma ittakhatha sahibatan wala waladan

Translation: ನಿಶ್ಚಯವಾಗಿಯೂ ನಮ್ಮ ಪರಿಪಾಲಕನ (ಅಲ್ಲಾಹನ) ಮಹಿಮೆಯು ಸರ್ವೋನ್ನತವಾಗಿದೆ. ಅವನು ಯಾರನ್ನೂ ತನ್ನ ಮಡದಿ-ಮಕ್ಕಳಾಗಿ ಮಾಡಿಕೊಂಡಿಲ್ಲ.

72:4

وَأَنَّهُۥ كَانَ يَقُولُ سَفِيهُنَا عَلَى ٱللَّهِ شَطَطٗا ﴿4﴾

Transliteration: Waannahu kana yaqoolu safeehuna AAala Allahi shatatan

Translation: ನಮ್ಮಲ್ಲಿನ ಒಬ್ಬ ಅವಿವೇಕಿಯು (ಇಬ್ಲೀಸ್) ಅಲ್ಲಾಹನ ಬಗ್ಗೆ ಸತ್ಯಕ್ಕೆ ವಿರುದ್ಧವಾದ ಮಾತನ್ನು ಹೇಳುತ್ತಿದ್ದನು.

72:5

وَأَنَّا ظَنَنَّآ أَن لَّن تَقُولَ ٱلۡإِنسُ وَٱلۡجِنُّ عَلَى ٱللَّهِ كَذِبٗا ﴿5﴾

Transliteration: Waanna thananna an lan taqoola alinsu waaljinnu AAala Allahi kathiban

Translation: ಮನುಷ್ಯರು ಮತ್ತು ಜಿನ್ನ್‌ಗಳು ಅಲ್ಲಾಹನ ಬಗ್ಗೆ ಎಂದೂ ಸುಳ್ಳು ಹೇಳುವುದು ಸಾಧ್ಯವಿಲ್ಲವೆಂದು ನಾವು ಭಾವಿಸಿದ್ದೆವು.

72:6

وَأَنَّهُۥ كَانَ رِجَالٞ مِّنَ ٱلۡإِنسِ يَعُوذُونَ بِرِجَالٖ مِّنَ ٱلۡجِنِّ فَزَادُوهُمۡ رَهَقٗا ﴿6﴾

Transliteration: Waannahu kana rijalun mina alinsi yaAAoothoona birijalin mina aljinni fazadoohum rahaqan

Translation: ಮನುಷ್ಯರಲ್ಲಿ ಕೆಲವರು ಕೆಲವು ಜಿನ್ನ್‌ಗಳೊಡನೆ ಅಭಯ ಕೋರುತ್ತಿದ್ದರು. ಇದರಿಂದ ಅವರು (ಜಿನ್ನ್‌ಗಳು) ತಮ್ಮ ಅತಿರೇಕವನ್ನು ಹೆಚ್ಚಿಸಿಕೊಂಡರು.

72:7

وَأَنَّهُمۡ ظَنُّواْ كَمَا ظَنَنتُمۡ أَن لَّن يَبۡعَثَ ٱللَّهُ أَحَدٗا ﴿7﴾

Transliteration: Waannahum thannoo kama thanantum an lan yabAAatha Allahu ahadan

Translation: ಅಲ್ಲಾಹು ಯಾರನ್ನೂ ಪುನಃ ಜೀವ ನೀಡಿ ಎಬ್ಬಿಸುವುದಿಲ್ಲವೆಂದು ನೀವು ಭಾವಿಸಿದಂತೆಯೇ ಮನುಷ್ಯರೂ ಭಾವಿಸಿದ್ದರು.

72:8

وَأَنَّا لَمَسۡنَا ٱلسَّمَآءَ فَوَجَدۡنَٰهَا مُلِئَتۡ حَرَسٗا شَدِيدٗا وَشُهُبٗا ﴿8﴾

Transliteration: Waanna lamasna alssamaa fawajadnaha muliat harasan shadeedan washuhuban

Translation: ನಾವು ಆಕಾಶವನ್ನು ಮುಟ್ಟಿದೆವು. ಆಗ ಅದು ಪ್ರಬಲ ಕಾವಲುಗಾರರು ಮತ್ತು ಅಗ್ನಿಜ್ವಾಲೆಗಳಿಂದ ತುಂಬಿದ್ದಾಗಿ ಕಂಡೆವು.

72:9

وَأَنَّا كُنَّا نَقۡعُدُ مِنۡهَا مَقَٰعِدَ لِلسَّمۡعِۖ فَمَن يَسۡتَمِعِ ٱلۡأٓنَ يَجِدۡ لَهُۥ شِهَابٗا رَّصَدٗا ﴿9﴾

Transliteration: Waanna kunna naqAAudu minha maqaAAida lilssamAAi faman yastamiAAi alana yajid lahu shihaban rasadan

Translation: ನಾವು ಇದಕ್ಕಿಂತ ಮೊದಲು (ಆಕಾಶಲೋಕದ) ಮಾತುಗಳಿಗೆ ಕಿವಿಗೊಡಲು ಆಕಾಶದ ವಿವಿಧ ಸ್ಥಳಗಳಲ್ಲಿ ಕುಳಿತುಕೊಳ್ಳುತ್ತಿದ್ದೆವು. ಆದರೆ ಈಗ ಯಾರಾದರೂ ಕಿವಿಗೊಟ್ಟು ಕೇಳಿದರೆ, ಅವನಿಗೋಸ್ಕರ ಹೊಂಚು ಹಾಕುತ್ತಿರುವ ಒಂದು ಅಗ್ನಿಜ್ವಾಲೆಯನ್ನು ಕಾಣುವನು.

72:10

وَأَنَّا لَا نَدۡرِيٓ أَشَرٌّ أُرِيدَ بِمَن فِي ٱلۡأَرۡضِ أَمۡ أَرَادَ بِهِمۡ رَبُّهُمۡ رَشَدٗا ﴿10﴾

Transliteration: Waanna la nadree asharrun oreeda biman fee alardi am arada bihim rabbuhum rashadan

Translation: ಭೂಮಿಯಲ್ಲಿರುವವರಿಗೆ ಕೆಡುಕನ್ನು ಉದ್ದೇಶಿಸಲಾಗಿದೆಯೋ, ಅಥವಾ ಅವರ ಪರಿಪಾಲಕನು (ಅಲ್ಲಾಹು) ಅವರಿಗೆ ಒಳಿತನ್ನು ಉದ್ದೇಶಿಸಿದ್ದಾನೋ ಎಂದು ನಮಗೆ ತಿಳಿದಿಲ್ಲ.

72:11

وَأَنَّا مِنَّا ٱلصَّـٰلِحُونَ وَمِنَّا دُونَ ذَٰلِكَۖ كُنَّا طَرَآئِقَ قِدَدٗا ﴿11﴾

Transliteration: Waanna minna alssalihoona waminna doona thalika kunna taraiqa qidadan

Translation: ನಮ್ಮಲ್ಲಿ ನೀತಿವಂತರಿದ್ದಾರೆ ಮತ್ತು ನಮ್ಮಲ್ಲಿ ಅದಕ್ಕೆ ಹೊರತಾದವರೂ ಇದ್ದಾರೆ. ನಾವು ಹಲವಾರು ಭಿನ್ನ ಮಾರ್ಗಗಳಲ್ಲಿ ಹಂಚಿ ಹೋಗಿದ್ದೇವೆ.

72:12

وَأَنَّا ظَنَنَّآ أَن لَّن نُّعۡجِزَ ٱللَّهَ فِي ٱلۡأَرۡضِ وَلَن نُّعۡجِزَهُۥ هَرَبٗا ﴿12﴾

Transliteration: Wanna thananna an lan nuAAjiza Allaha fee alardi walan nuAAjizahu haraban

Translation: ಭೂಮಿಯಲ್ಲಿ ಎಂದಿಗೂ ಅಲ್ಲಾಹನನ್ನು ಅಸಮರ್ಥಗೊಳಿಸಲು ಸಾಧ್ಯವಿಲ್ಲ ಮತ್ತು ಪಲಾಯನ ಮಾಡುವ ಮೂಲಕವೂ ಅವನನ್ನು ಸೋಲಿಸಲು ಸಾಧ್ಯವಿಲ್ಲವೆಂದು ನಮಗೆ ಖಾತ್ರಿಯಾಗಿದೆ.

72:13

وَأَنَّا لَمَّا سَمِعۡنَا ٱلۡهُدَىٰٓ ءَامَنَّا بِهِۦۖ فَمَن يُؤۡمِنۢ بِرَبِّهِۦ فَلَا يَخَافُ بَخۡسٗا وَلَا رَهَقٗا ﴿13﴾

Transliteration: Waanna lamma samiAAna alhuda amanna bihi faman yumin birabbihi fala yakhafu bakhsan wala rahaqan

Translation: ನಾವು ಸನ್ಮಾರ್ಗವನ್ನು (ಕುರ್‌ಆನನ್ನು) ಆಲಿಸಿದಾಗ ಅದರಲ್ಲಿ ವಿಶ್ವಾಸವಿಟ್ಟೆವು. ಯಾರು ತನ್ನ ಪರಿಪಾಲಕನಲ್ಲಿ (ಅಲ್ಲಾಹನಲ್ಲಿ) ವಿಶ್ವಾಸವಿಡುತ್ತಾನೋ ಅವನು ನಷ್ಟವನ್ನು ಅಥವಾ ಅನ್ಯಾಯವನ್ನು ಭಯಪಡಬೇಕಾಗಿಲ್ಲ.

72:14

وَأَنَّا مِنَّا ٱلۡمُسۡلِمُونَ وَمِنَّا ٱلۡقَٰسِطُونَۖ فَمَنۡ أَسۡلَمَ فَأُوْلَـٰٓئِكَ تَحَرَّوۡاْ رَشَدٗا ﴿14﴾

Transliteration: Waanna minna almuslimoona waminna alqasitoona faman aslama faolaika taharraw rashadan

Translation: ನಮ್ಮಲ್ಲಿ ಮುಸ್ಲಿಮರಿದ್ದಾರೆ ಮತ್ತು ನಮ್ಮಲ್ಲಿ ಅನ್ಯಾಯ ಮಾಡುವವರೂ ಇದ್ದಾರೆ. ಯಾರು ಮುಸ್ಲಿಮನಾದನೋ ಅವನು ಸನ್ಮಾರ್ಗವನ್ನು ಗುರಿಯಾಗಿಸಿಕೊಂಡನು.

72:15

وَأَمَّا ٱلۡقَٰسِطُونَ فَكَانُواْ لِجَهَنَّمَ حَطَبٗا ﴿15﴾

Transliteration: Waama alqasitoona fakanoo lijahannama hataban

Translation: ಆದರೆ ಅನ್ಯಾಯ ಮಾಡಿದವರು ಯಾರೋ ಅವರು ನರಕಕ್ಕೆ ಸೌದೆಯಾಗುವರು.

72:16

وَأَلَّوِ ٱسۡتَقَٰمُواْ عَلَى ٱلطَّرِيقَةِ لَأَسۡقَيۡنَٰهُم مَّآءً غَدَقٗا ﴿16﴾

Transliteration: Waallawi istaqamoo AAala alttareeqati laasqaynahum maan ghadaqan

Translation: ಜನರು ನೇರಮಾರ್ಗದಲ್ಲಿ ದೃಢವಾಗಿ ನಿಂತರೆ, ನಾವು ಅವರಿಗೆ ಹೇರಳವಾಗಿ ನೀರನ್ನು ಕುಡಿಯಲು ಕೊಡುತ್ತಿದ್ದೆವು.

72:17

لِّنَفۡتِنَهُمۡ فِيهِۚ وَمَن يُعۡرِضۡ عَن ذِكۡرِ رَبِّهِۦ يَسۡلُكۡهُ عَذَابٗا صَعَدٗا ﴿17﴾

Transliteration: Linaftinahum feehi waman yuAArid AAan thikri rabbihi yaslukhu AAathaban saAAadan

Translation: ಅದರ ಮೂಲಕ ಅವರನ್ನು ಪರೀಕ್ಷಿಸುವುದಕ್ಕಾಗಿ. ಯಾರು ತನ್ನ ಪರಿಪಾಲಕನ (ಅಲ್ಲಾಹನ) ಸ್ಮರಣೆಯಿಂದ ವಿಮುಖನಾಗುತ್ತಾನೋ ಅವನಿಗೆ ಅಲ್ಲಾಹು ಅತಿಕಠೋರ ಶಿಕ್ಷೆಯನ್ನು ನೀಡುವನು.

72:18

وَأَنَّ ٱلۡمَسَٰجِدَ لِلَّهِ فَلَا تَدۡعُواْ مَعَ ٱللَّهِ أَحَدٗا ﴿18﴾

Transliteration: Waanna almasajida lillahi fala tadAAoo maAAa Allahi ahadan

Translation: ಮಸೀದಿಗಳೆಲ್ಲವೂ ಅಲ್ಲಾಹನಿಗೆ ಸೇರಿದ್ದು. ಆದ್ದರಿಂದ ನೀವು ಅಲ್ಲಾಹನ ಜೊತೆಗೆ ಯಾರನ್ನೂ ಕರೆದು ಪ್ರಾರ್ಥಿಸಬೇಡಿ.

72:19

وَأَنَّهُۥ لَمَّا قَامَ عَبۡدُ ٱللَّهِ يَدۡعُوهُ كَادُواْ يَكُونُونَ عَلَيۡهِ لِبَدٗا ﴿19﴾

Transliteration: Waannahu lamma qama AAabdu Allahi yadAAoohu kadoo yakoonoona AAalayhi libadan

Translation: ಅಲ್ಲಾಹನ ದಾಸನು (ಪ್ರವಾದಿ) ಅಲ್ಲಾಹನೊಡನೆ ಪ್ರಾರ್ಥಿಸಲು ನಿಂತಾಗ ಅವರು (ಜಿನ್ನ್‌ಗಳು) ಇನ್ನೇನು ಗುಂಪು ಗುಂಪಾಗಿ ಅವರ ಮೇಲೆ ಮುಗಿಬೀಳುವಂತಿದ್ದರು.”

72:20

قُلۡ إِنَّمَآ أَدۡعُواْ رَبِّي وَلَآ أُشۡرِكُ بِهِۦٓ أَحَدٗا ﴿20﴾

Transliteration: Qul innama adAAoo rabbee wala oshriku bihi ahadan

Translation: ಹೇಳಿರಿ: “ನಾನು ನನ್ನ ಪರಿಪಾಲಕನನ್ನು (ಅಲ್ಲಾಹನನ್ನು) ಮಾತ್ರ ಕರೆದು ಪ್ರಾರ್ಥಿಸುತ್ತೇನೆ. ನಾನು ಅವನೊಂದಿಗೆ ಯಾರನ್ನೂ ಸಹಭಾಗಿಯಾಗಿ ಮಾಡುವುದಿಲ್ಲ.”

72:21

قُلۡ إِنِّي لَآ أَمۡلِكُ لَكُمۡ ضَرّٗا وَلَا رَشَدٗا ﴿21﴾

Transliteration: Qul innee la amliku lakum darran wala rashadan

Translation: ಹೇಳಿರಿ: “ನಿಮಗೆ ಯಾವುದೇ ತೊಂದರೆ ಅಥವಾ ಉಪಕಾರ ಮಾಡುವುದು ನನ್ನ ಅಧೀನದಲ್ಲಿಲ್ಲ.”

72:22

قُلۡ إِنِّي لَن يُجِيرَنِي مِنَ ٱللَّهِ أَحَدٞ وَلَنۡ أَجِدَ مِن دُونِهِۦ مُلۡتَحَدًا ﴿22﴾

Transliteration: Qul innee lan yujeeranee mina Allahi ahadun walan ajida min doonihi multahadan

Translation: ಹೇಳಿರಿ: “ನಿಶ್ಚಯವಾಗಿಯೂ ನನ್ನನ್ನು ಯಾರೂ ಎಂದಿಗೂ ಅಲ್ಲಾಹನಿಂದ ರಕ್ಷಿಸಲಾರರು. ನಾನು ಅವನ ಹೊರತು ಎಲ್ಲಿಯೂ ಆಶ್ರಯವನ್ನು ಪಡೆಯಲಾರೆ.

72:23

إِلَّا بَلَٰغٗا مِّنَ ٱللَّهِ وَرِسَٰلَٰتِهِۦۚ وَمَن يَعۡصِ ٱللَّهَ وَرَسُولَهُۥ فَإِنَّ لَهُۥ نَارَ جَهَنَّمَ خَٰلِدِينَ فِيهَآ أَبَدًا ﴿23﴾

Transliteration: Illa balaghan mina Allahi warisalatihi waman yaAAsi Allaha warasoolahu fainna lahu nara jahannama khalideena feeha abadan

Translation: ಅಲ್ಲಾಹನ ವಚನಗಳು ಮತ್ತು ಅವನ ಸಂದೇಶಗಳನ್ನು (ಜನರಿಗೆ) ತಲುಪಿಸುವುದು ಮಾತ್ರ ನನ್ನ ಕರ್ತವ್ಯವಾಗಿದೆ.” ಯಾರು ಅಲ್ಲಾಹು ಮತ್ತು ಅವನ ಸಂದೇಶವಾಹಕರಿಗೆ ಅವಿಧೇಯತೆ ತೋರುತ್ತಾನೋ ನಿಶ್ಚಯವಾಗಿಯೂ ಅವನಿಗೆ ನರಕಾಗ್ನಿಯಿದೆ. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು.

72:24

حَتَّىٰٓ إِذَا رَأَوۡاْ مَا يُوعَدُونَ فَسَيَعۡلَمُونَ مَنۡ أَضۡعَفُ نَاصِرٗا وَأَقَلُّ عَدَدٗا ﴿24﴾

Transliteration: Hatta itha raaw ma yooAAadoona fasayaAAlamoona man adAAafu nasiran waaqallu AAadadan

Translation: ಎಲ್ಲಿಯವರೆಗೆಂದರೆ, ಅವರಿಗೆ ವಾಗ್ದಾನ ಮಾಡಲಾಗುವುದನ್ನು ಅವರು ಕಣ್ಣಾರೆ ನೋಡುವ ತನಕ (ಅವರ ಸತ್ಯವನ್ನು ಅಂಗೀಕರಿಸುವುದಿಲ್ಲ). ಆಗ ಅವರು ತಿಳಿದುಕೊಳ್ಳುವರು—ಯಾರ ಸಹಾಯಕ ಅತ್ಯಂತ ದುರ್ಬಲ ಮತ್ತು ಯಾರು ಅತಿ ಕಡಿಮೆ ಸಂಖ್ಯೆಯವರು ಎಂದು.

72:25

قُلۡ إِنۡ أَدۡرِيٓ أَقَرِيبٞ مَّا تُوعَدُونَ أَمۡ يَجۡعَلُ لَهُۥ رَبِّيٓ أَمَدًا ﴿25﴾

Transliteration: Qul in adree aqareebun ma tooAAadoona am yajAAalu lahu rabbee amadan

Translation: ಹೇಳಿರಿ: “ನಿಮಗೆ ವಾಗ್ದಾನ ಮಾಡಲಾಗುತ್ತಿರುವುದು ಹತ್ತಿರದಲ್ಲಿದೆಯೋ ಅಥವಾ ನನ್ನ ಪರಿಪಾಲಕನು (ಅಲ್ಲಾಹು) ಅದಕ್ಕೆ ದೂರದ ಒಂದು ಅವಧಿಯನ್ನು ನಿಶ್ಚಯಿಸುವನೋ ಎಂದು ನನಗೆ ತಿಳಿದಿಲ್ಲ.”

72:26

عَٰلِمُ ٱلۡغَيۡبِ فَلَا يُظۡهِرُ عَلَىٰ غَيۡبِهِۦٓ أَحَدًا ﴿26﴾

Transliteration: AAalimu alghaybi fala yuthhiru AAala ghaybihi ahadan

Translation: ಅವನು ಅದೃಶ್ಯವನ್ನು ತಿಳಿದವನು. ಅವನು ತನ್ನ ಅದೃಶ್ಯವನ್ನು ಯಾರಿಗೂ ಪ್ರಕಟಗೊಳಿಸುವುದಿಲ್ಲ.

72:27

إِلَّا مَنِ ٱرۡتَضَىٰ مِن رَّسُولٖ فَإِنَّهُۥ يَسۡلُكُ مِنۢ بَيۡنِ يَدَيۡهِ وَمِنۡ خَلۡفِهِۦ رَصَدٗا ﴿27﴾

Transliteration: Illa mani irtada min rasoolin fainnahu yasluku min bayni yadayhi wamin khalfihi rasadan

Translation: ಅವನು ಇಷ್ಟಪಡುವ ಸಂದೇಶವಾಹಕರಿಗೆ ಹೊರತು. ಆಗಲೂ ಅವನು ಆ ಸಂದೇಶವಾಹಕರ ಮುಂಭಾಗದಲ್ಲಿ ಮತ್ತು ಹಿಂಭಾಗದಲ್ಲಿ ಪಹರೆಗಾರರನ್ನು ನಿಶ್ಚಯಿಸುವನು.

72:28

لِّيَعۡلَمَ أَن قَدۡ أَبۡلَغُواْ رِسَٰلَٰتِ رَبِّهِمۡ وَأَحَاطَ بِمَا لَدَيۡهِمۡ وَأَحۡصَىٰ كُلَّ شَيۡءٍ عَدَدَۢا ﴿28﴾

Transliteration: LiyaAAlama an qad ablaghoo risalati rabbihim waahata bima ladayhim waahsa kulla shayin AAadadan

Translation: ಅವರು (ಸಂದೇಶವಾಹಕರು) ಅವರ ಪರಿಪಾಲಕನ (ಅಲ್ಲಾಹನ) ಸಂದೇಶಗಳನ್ನು ತಲುಪಿಸಿದ್ದಾರೆಂದು ಪ್ರವಾದಿಯವರು ತಿಳಿಯುವುದಕ್ಕಾಗಿ. ಅವನು ಅವರ ಬಳಿಯಿರುವುದನ್ನು ಆವರಿಸಿಕೊಂಡಿದ್ದಾನೆ ಮತ್ತು ಎಲ್ಲಾ ವಸ್ತುಗಳನ್ನು ಸರಿಯಾಗಿ ಎಣಿಸಿಟ್ಟಿದ್ದಾನೆ.

Transliteration source: English Transliteration by Tanzil. Used under Tanzil's non-commercial terms; see the source and latest updates at Tanzil. Tanzil translation download